Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಇದು ಇಸ್ಕಾನ್ ಮಾಡಿದ ನೀಚ ಕೆಲಸ | ISKCON
    Viral

    ಇದು ಇಸ್ಕಾನ್ ಮಾಡಿದ ನೀಚ ಕೆಲಸ | ISKCON

    vartha chakraBy vartha chakraಸೆಪ್ಟೆಂಬರ್ 27, 2023Updated:ಸೆಪ್ಟೆಂಬರ್ 28, 2023ಯಾವುದೇ ಟಿಪ್ಪಣಿಗಳಿಲ್ಲ2 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp

    ನವದೆಹಲಿ – ಅಂತರರಾಷ್ಟ್ರೀಯ ಕೃಷ್ಣ ಪ್ರಜ್ಞೆ ಇಸ್ಕಾನ್ ‌ನ (ISKCON) ಜನ್ಮ ಜಾಲಾಡಿದ್ದಾರೆ ಕೇಂದ್ರದ ಮಾಜಿ ಸಚಿವೆ ಹಾಗೂ ಬಿಜೆಪಿ ನಾಯಕಿ ಮನೇಕಾ ಗಾಂಧಿ.
    ಜನಸಮುದಾಯದಲ್ಲಿ ಕೃಷ್ಣಪ್ರಜ್ಞೆ ಮೂಡಿಸುವ ಮೂಲಕ ಹಲವಾರು ಧಾರ್ಮಿಕ ಕೈಂಕರ್ಯಗಳಲ್ಲಿ ನಿರತವಾಗಿರುವ ಇಸ್ಕಾನ್ ಸಂಸ್ಥೆ ಅನೇಕ ಸಮಾಜ ಸೇವಾ ಕಾರ್ಯಗಳನ್ನು ಕೈಗೊಂಡಿದೆ ಅದರಲ್ಲಿ ಪ್ರಮುಖವಾಗಿ ಕೇಳಿ ಬರುತ್ತಿರುವುದು ಇಸ್ಕಾನ್ ಗೋಶಾಲೆ ಮತ್ತು ಬಿಸಿಯೂಟ ಯೋಜನೆ.

    ಎರಡು ಯೋಜನೆಗಳ ಮೂಲಕ ಜನಪ್ರಿಯತೆಯನ್ನು ಗಳಿಸಿರುವ ಇಸ್ಕಾನ್ ಸಂಸ್ಥೆ ಈ ಯೋಜನೆ ಅನುಷ್ಠಾನಕ್ಕಾಗಿ ರಾಷ್ಟ್ರೀಯ ಮತ್ತು ಅಂತರಾಷ್ಟ್ರೀಯ ಮಟ್ಟದಲ್ಲಿ ಅಪಾರ ಪ್ರಮಾಣದ ದೇಣಿಗೆಯನ್ನು ಸಂಗ್ರಹಿಸುತ್ತದೆ ಜೊತೆಗೆ ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಕೂಡ ನೆರವು ನೀಡುತ್ತಿವೆ.
    ಇಂತಹ ನೆರವು ಪಡೆದು ಗೋಶಾಲೆ ನಡೆಸುತ್ತಿರುವ ಇಸ್ಕಾನ್ ಅದನ್ನು ದುರುಪಯೋಗ ಮಾಡಿಕೊಳ್ಳುತ್ತಿದೆ ಎಂಬ ಆರೋಪಗಳು ಕೇಳಿ ಬರುತ್ತಿವೆ ಅದರಲ್ಲೂ ಇಸ್ಕಾನ್ ನಡೆಸುತ್ತಿರುವ ಗೋಶಾಲೆಯಲ್ಲಿ ಕೇವಲ ಹಾಲು ಕರೆಯುವ ಹಸುಗಳು ಮಾತ್ರ ಇವೆ ಗಂಡು ಕರಗಳು ವಯಸ್ಸಾದ ಗೋವುಗಗಳು ಇಸ್ಕಾನ್ ನಡೆಸುತ್ತಿರುವ ಯಾವುದೇ ಗೋಶಾಲೆಯಲ್ಲಿ ಕಾಣಸಿಗುವುದಿಲ್ಲ ಎಂಬ ಆರೋಪಗಳು ಕೇಳಿ ಬಂದಿವೆ.

    ಇಂತಹ ಆರೋಪಗಳ ಬೆನ್ನಲ್ಲೇ ಬಿಜೆಪಿ ನಾಯಕಿ ಮನೆ ಕಾ ಗಾಂಧಿ ಇಸ್ಕಾನ್  (ISKCON) ಸಂಸ್ಥೆಯ ವಿರುದ್ಧ ಗಂಭೀರ ಆರೋಪ ಮಾಡಿದ್ದಾರೆ ಇಸ್ಕಾನ್ ತನ್ನ ಗೋಶಾಲೆಗಳ ಮೂಲಕ ದನದ ಮಾಂಸ ಮಾರುಕಟ್ಟೆಗೆ ಉತ್ತೇಜನ ನೀಡುತ್ತಿದೆ ಎಂಬ ಆರೋಪ ಮಾಡಿದ್ದಾರೆ ಈ ಕುರಿತಾಗಿ ಅವರು ನೀಡಿರುವ ಹೇಳಿಕೆ ಜಾಲತಾಣಗಳಲ್ಲಿ ಇದೀಗ ವೈರಲ್ ಆಗಿದೆ
    ನಾನು ಇತ್ತೀಚೆಗೆ ಆಂಧ್ರಪ್ರದೇಶದ ಅನಂತಪುರದಲ್ಲಿರುವ ಇಸ್ಕಾನ್ ಗೋಶಾಲೆಗೆ ಇತ್ತೀಚೆಗೆ ಭೇಟಿ ನೀಡಿದ್ದೆ. ಅಲ್ಲಿ ಹಾಲು ನೀಡುವ ಹಸುಗಳಾಗಲೀ ಅಥವಾ ಕರುಗಳಾಗಲಿ ಇರಲಿಲ್ಲ.
    ಹಾಲು ನೀಡದ ಹಸು ಹಾಗೂ ಕರುಗಳನ್ನು ಮಾರಾಟ ಮಾಡಲಾಗಿದೆ ಎಂಬ ಮಾಹಿತಿ ಲಭ್ಯವಾಯಿತು. ಅಲ್ಲಿದ್ದ ಹಾಲು ನೀಡದ ಎಲ್ಲಾ ಹಸು, ಕರುಗಳನ್ನು ಕಸಾಯಿಖಾನೆಗೆ ಇಸ್ಕಾನ್ ಮಾರಾಟ ಮಾಡಿತ್ತು. ಇವರು ಹೀಗೆ ಮಾಡಿದಷ್ಟು ಬೇರೆ ಯಾರೂ ಈವರೆಗೂ ಮಾಡಿಲ್ಲ ಎಂದು ಮನೇಕಾ ಆರೋಪಿಸಿದ್ದಾರೆ.

    ಇಸ್ಕಾನ್ (ISKCON) ಕಾರ್ಯಕರ್ತರು ರಸ್ತೆಯಲ್ಲಿ ಹರೇ ರಾಮ ಹರೇ ಕೃಷ್ಣ ಎಂದು ಹಾಡುತ್ತಾರೆ. ತಮ್ಮ ಬದುಕೇ ಹಸುಗಳ ಹಾಲಿನ ಮೇಲೆ ಅವಲಂಬಿತವಾಗಿದೆ ಎನ್ನುತ್ತಾರೆ. ಆದರೆ ಕಸಾಯಿಖಾನೆಗೆ ಇವರಷ್ಟು ಹಸುಗಳನ್ನು ಯಾರೂ ಮಾರಾಟ ಮಾಡಿಲ್ಲ’ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.
    ಈ ಮಾತುಗಳು ಜಾಲತಾಣಗಳಲ್ಲಿ ವ್ಯಾಪಕ ಪ್ರಚಾರ ಪಡೆಯುತ್ತಿದ್ದಂತೆ ಎಚ್ಚೆತ್ತುಕೊಂಡಿರುವ ಇಸ್ಕಾನ್ ಸಂಸ್ಥೆ ಇದೀಗ ಮನೇಕಾ ಗಾಂಧಿ ಅವರ ಈ ಆರೋಪ ಸುಳ್ಳು ಹಾಗೂ ಆಧಾರ ರಹಿತವಾಗಿದೆ. ಕೇಂದ್ರದ ಮಾಜಿ ಸಚಿವರ ಇಂಥ ಹೇಳಿಕೆ ಅಚ್ಚರಿ ಮೂಡಿಸಿದೆ ಎಂದು ಹೇಳಿದೆ ಎಲ್ಲಿ ದನದ ಮಾಂಸವೇ ಪ್ರಮುಖ ಆಹಾರವಾಗಿದೆಯೋ ಅಂತಹ ಭಾಗಗಳಲ್ಲಿ ಗೋ ಸಂರಕ್ಷಣಾ ಕಾರ್ಯವನ್ನು ಇಸ್ಕಾನ್ ನಡೆಸುತ್ತಿದೆ. ಅನಾಥವಾಗಿರುವ, ಗಾಯಗೊಂಡಿರುವ ಹಾಗೂ ರಕ್ಷಿಸಲಾದ ಗೋವುಗಳನ್ನು ಇಸ್ಕಾನ್‌ನ ಗೋ ಶಾಲೆಗೆ ಸೇರಿಸುವ ಪದ್ಧತಿ ಈಗಲೂ ಇದೆ ಎಂದು ಇಸ್ಕಾನ್ ರಾಷ್ಟ್ರೀಯ ವಕ್ತಾರ ಯುದಿಷ್ಟಿರ ಗೋವಿಂದ ದಾಸ್ ಹೇಳಿದ್ದಾರೆ.
    ಇಸ್ಕಾನ್ ಸಂಸ್ಥೆ ತಮ್ಮ ಗೋಶಾಲೆಗಳಲ್ಲಿರುವ ಯಾವುದೇ ಕರು ಮತ್ತು ಹಾಲು ಕೊಡದ ಹಸುಗಳನ್ನು ಕಸಾಯಿಖಾನೆಗೆ ಮಾರಾಟ ಮಾಡಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.

    crime ISKCON Karnataka News Trending ಧಾರ್ಮಿಕ ವೈರಲ್ ಶಾಲೆ
    Share. Facebook Twitter Pinterest LinkedIn Tumblr Email WhatsApp
    Previous Articleಮಾನವೀಯತೆ ಮೆರೆದ ಸಚಿವ ಕೆಜೆ ಚಾರ್ಜ್ | KJ George
    Next Article ಹಾಲು ಉತ್ಪಾದಕರ ಚುನಾವಣೆ ಬ್ಯಾಲೆಟ್ ಪೇಪರ್ ಗಳ ಅಪಹರಣ
    vartha chakra
    • Website

    Related Posts

    ಕೋಗಿಲು ಘಟನೆ ಬಗ್ಗೆ ಮಂತ್ರಿ ಕೃಷ್ಣ ಭೈರೇಗೌಡ ನಿಲುವೇನು?

    ಜನವರಿ 7, 2026

    ಭಾರತೀಯ ಸೇನೆಯ ‘ಭೈರವ’ ಗೊತ್ತಾ..?

    ಜನವರಿ 7, 2026

    ಸಿನಿಮಾ ಥಿಯೇಟರ್ Toilet ಬಗ್ಗೆ ಹುಷಾರ್!

    ಜನವರಿ 6, 2026

    Leave A Reply Cancel Reply

    ವಿಭಾಗಗಳು
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಕೋಗಿಲು ಘಟನೆ ಬಗ್ಗೆ ಮಂತ್ರಿ ಕೃಷ್ಣ ಭೈರೇಗೌಡ ನಿಲುವೇನು?

    ಭಾರತೀಯ ಸೇನೆಯ ‘ಭೈರವ’ ಗೊತ್ತಾ..?

    ಸಿನಿಮಾ ಥಿಯೇಟರ್ Toilet ಬಗ್ಗೆ ಹುಷಾರ್!

    ಬಳ್ಳಾರಿ ಎಸ್. ಪಿ. Suspend ಆಗಿದ್ದು ಯಾಕೆ ಗೊತ್ತಾ?

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Juwa_edKi ರಲ್ಲಿ ರೈಲುಗಳ ಮೇಲೂ ಚುನಾವಣಾ ಆಯೋಗದ ಹದ್ದಿನ ಕಣ್ಣು | Election Commission
    • stailer dyson_siSt ರಲ್ಲಿ May 3, 2023 51st Year Free Mass Marriage at Sri Kshetra Dharmasthala
    • Juwa_peKi ರಲ್ಲಿ CBI – ED ಗೆ BJP ಅಕ್ರಮ ಕಾಣುವುದಿಲ್ಲವೆ?
    Latest Kannada News

    ಕೋಗಿಲು ಘಟನೆ ಬಗ್ಗೆ ಮಂತ್ರಿ ಕೃಷ್ಣ ಭೈರೇಗೌಡ ನಿಲುವೇನು?

    ಜನವರಿ 7, 2026

    ಭಾರತೀಯ ಸೇನೆಯ ‘ಭೈರವ’ ಗೊತ್ತಾ..?

    ಜನವರಿ 7, 2026

    ಸಿನಿಮಾ ಥಿಯೇಟರ್ Toilet ಬಗ್ಗೆ ಹುಷಾರ್!

    ಜನವರಿ 6, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.