ಪ್ರತಿಭಾನ್ವಿತ ತಂಡವೇ ಸೇರಿ ತಯಾರಿಸುವ ತೂತು ಮಡಿಕೆಯ ಟ್ರೈಲರ್. ಆನಂದ್ ಆಡಿಯೋ ಯೂಟ್ಯೂಬ್ ನಲ್ಲಿ ಇಂದು ಬಿಡುಗಡೆಯಾಗಿದೆ. ಚಂದ್ರ ಕೀರ್ತಿ ನಾಯಕನಾಗಿರುವ ಚೊಚ್ಚಲ ಚಿತ್ರ ಇದು. ಕಿರುಚಿತ್ರಗಳ ಮೂಲಕ ಬಣ್ಣದ ಲೋಕಕ್ಕೆ ಎಂಟ್ರಿ ಕೊಟ್ಟಿದ್ದ ಚಂದ್ರ ಕೀರ್ತಿ ಮೂಕವಿಸ್ಮಿತ, ಸಿಲಿಕಾನ್ ಸಿಟಿ, ಕಿಸ್ ಸಿನಿಮಾಗಳಲ್ಲಿ ಸಪೋರ್ಟಿಂಗ್ ರೋಲ್ ನಲ್ಲಿ ಕಾಣಿಸಿಕೊಂಡಿದ್ದರು. ಇನ್ನು ಸಿನಿಮಾದ ಕಥೆ ಹಾಗು ನಿರ್ದೇಶನದ ಜವಾಬ್ದಾರಿ ಕೂಡ ಅವರದ್ದೇ ಆಗಿದೆ. ನಾಯಕಿಯಾಗಿ ಪಾವನಾ ಗೌಡ ನಟಿಸಿದ್ದು, ಪ್ರಮೋದ್ ಶೆಟ್ಟಿ, ಉಗ್ರಂ ಮಂಜು ಮುಂತಾದ ಕಲಾಬಳಗ ಸಿನಿಮಾದಲ್ಲಿದೆ.
ಕಾಮಿಡಿ ಥ್ರಿಲ್ಲರ್ ಸಸ್ಪೆನ್ಸ್ ಕಥಾಹೂರಣದ ತೂತುಮಡಿಕೆ ಸಿನಿಮಾಗೆ ಸರ್ವತಾ ಸಿನಿ ಗ್ಯಾರೇಜ್ ಬ್ಯಾನರ್ ನಡಿ ಮಧುಸೂಧನ್ ರಾವ್ ಹಾಗು ಶಿವಕುಮಾರ್ ಬಂಡವಾಳ ಹೂಡಿದ್ದು, ನವೀನ್ ಚಲ್ಲ ಛಾಯಾಗ್ರಾಹಣ, ಉಜ್ವಲ್ ಚಂದ್ರ ಸಂಕಲನ ಸಿನಿಮಾಕ್ಕಿದೆ.
ಮೋಷನ್ ಪೋಸ್ಟರ್ ಹಾಗೂ ಯಾಮಾರಿದೆ ಹೃದಯ ಹಾಡಿನ ಮೂಲಕ ನಿರೀಕ್ಷೆ ಹೆಚ್ಚಿಸಿರುವ ಚಿತ್ರ ನೂರಕ್ಕೆ ನೂರು ಮನರಂಜನೆ ನೀಡುವ ನಿರೀಕ್ಷೆ ಇದೆ.
Previous Articleರೋಪ್ ವೇನಲ್ಲಿ ಸಿಲುಕಿದ ಕೇಬಲ್ ಕಾರು: 9 ಪ್ರವಾಸಿಗರು ಅಪಾಯದಲ್ಲಿ
Next Article ಮೈಸೂರಲ್ಲಿ ಮೋದಿ ಯೋಗಾಯೋಗ