ಬೆಂಗಳೂರು – ರಾಜಕೀಯ ಕಾರಣಕ್ಕಾಗಿ ಸಾರ್ವಜನಿಕ ಸ್ಥಳದಲ್ಲಿ ಪ್ರತಿಭಟನೆ ನಡೆಸುವ ಮೂಲಕ ಜನಸಾಮಾನ್ಯರಿಗೆ ತೊಂದರೆ ಮಾಡಿದ ಆರೋಪದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಸೇರಿದಂತೆ ಕಾಂಗ್ರೆಸ್ನ ನಾಲ್ವರು ಹಿರಿಯ ನಾಯಕರಿಗೆ ರಾಜ್ಯ ಹೈಕೋರ್ಟ್ 10 ಸಾವಿರ ರೂಪಾಯಿ ದಂಡ ವಿಧಿಸಿದೆ.
ತಮ್ಮ ವಿರುದ್ಧ ಸಲ್ಲಿಕೆಯಾಗಿರುವ ಪ್ರಕರಣ ರದ್ದುಗೊಳಿಸುವಂತೆ ಕೋರಿ ಮುಖ್ಯಮಂತ್ರಿಯ ಸಿದ್ದರಾಮಯ್ಯ ಸಾರಿಗೆ ಸಚಿವ ರಾಮಲಿಂಗ ರೆಡ್ಡಿ ಬೃಹತ್ ಕೈಗಾರಿಕೆ ಸಚಿವ ಎಂ ಬಿ ಪಾಟೀಲ್ ಮತ್ತು ರಾಜ್ಯ ಕಾಂಗ್ರೆಸ್ ಉಸ್ತುವಾರಿ ನಾಯಕ ಸುರ್ ಜಯವಾಲಾ ಸಲ್ಲಿಸಿದ ಅರ್ಜಿ ವಿಚಾರಣೆ ನಡೆಸಿದ ನ್ಯಾಯಾಲಯ ಈ ಆದೇಶ ಹೊರಡಿಸಿದೆ.
ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಹಾಗೂ ಉಳಿದ ಮೂವರು ಮುಂದಿನ ವಿಚಾರಣೆ ವೇಳೆ ನ್ಯಾಯ ಪೀಠದ ಮುಂದೆ ಖುದ್ದು ಹಾಜರಾಗಿ ಹೇಳಿಕೆ ನೀಡಬೇಕು ಎಂದು ಸೂಚಿಸಿರುವ ನ್ಯಾಯಮೂರ್ತಿ ಕೃಷ್ಣ ದೀಕ್ಷಿತ್ ಮಾರ್ಚ್ 6 ರಂದು ಮುಖ್ಯಮಂತ್ರಿ ಸಿದ್ದರಾಮಯ್ಯ, ಮಾ.7ರಂದು ರಾಮಲಿಂಗಾರೆಡ್ಡಿ, ಮಾ.11 ಸುರ್ಜೆವಾಲಾ, ಮಾ.15ರಂದು ಎಂ.ಬಿ. ಪಾಟೀಲ್ ಅವರಿಗೆ ಖುದ್ದು ಹಾಜರಾಗಲು ಸೂಚಿಸಿದ್ದಾರೆ.
ಈ ಹಿಂದಿನ ಬಿಜೆಪಿ ಸರ್ಕಾರದ ಅವಧಿಯಲ್ಲಿ ಪಂಚಾಯಿತಿ ರಾಜ್ ಸಚಿವರಾಗಿದ್ದ ಕೆ ಎಸ್ ಈಶ್ವರಪ್ಪ ಅವರ ಕಿರುಕುಳದಿಂದ ಬೇಸತ್ತು ಬೆಳಗಾವಿಯ ಗುತ್ತಿಗೆದಾರ ಸಂತೋಷ್ ಆತ್ಮಹತ್ಯೆ ಮಾಡಿಕೊಂಡಿದ್ದರು ಎನ್ನಲಾದ ಪ್ರಕರಣದ ಕುರಿತಂತೆ ಅಂದು ಸಿದ್ದರಾಮಯ್ಯ ನೇತೃತ್ವದಲ್ಲಿ ಕಾಂಗ್ರೆಸ್ ಪ್ರತಿಭಟನೆ ನಡೆಸಿತ್ತು.
ಈಶ್ವರಪ್ಪ ರಾಜೀನಾಮೆಗೆ ಆಗ್ರಹಿಸಿ ನಡೆದ ಪ್ರತಿಭಟನೆ ವೇಳೆ ಸಿಎಂ ನಿವಾಸಕ್ಕೆ ಮುತ್ತಿಗೆ ಹಾಕಲು ಯತ್ನಿಸಲಾಗಿತ್ತು. ಬೆಂಗಳೂರಿನಲ್ಲಿ ಫ್ರೀಡಂ ಪಾರ್ಕ್ ನಲ್ಲಿ ಮಾತ್ರ ಪ್ರತಿಭಟನೆಗೆ ಅವಕಾಶವಿದೆ. ಆದರೆ ಅಂದು ಇವರು ರೇಸ್ ಕೋರ್ಸ್ ರಸ್ತೆಯಲ್ಲಿನ ಕಾಂಗ್ರೆಸ್ ಕಚೇರಿ ಮುಂದೆ ಪ್ರತಿಭಟನೆ ನಡೆಸಿ ಮುಖ್ಯಮಂತ್ರಿಗಳ ನಿವಾಸಕ್ಕೆ ಮುತ್ತಿಗೆ ಹಾಕಲು ಮೆರವಣಿಗೆಯಲ್ಲಿ ತೆರಳಿದ್ದರು. ಅದಕ್ಕೆ ಅಂದು ಪೊಲೀಸರು ಅವಕಾಶ ನೀಡದ ಹಿನ್ನೆಲೆಯಲ್ಲಿ ರಸ್ತೆ ತಡೆ ನಡೆಸಿ ತಮ್ಮ ಆಕ್ರೋಶ ಹೊರಹಾಕಿದ್ದರು ಈ ಹಿನ್ನೆಲೆಯಲ್ಲಿ ಪೊಲೀಸರು ರಸ್ತೆ ತಡೆ ನಡೆಸಿ ಸಾರ್ವಜನಿಕರಿಗೆ ತೊಂದರೆ ಕೊಟ್ಟಿದ್ದು, ಕಾನೂನು ಸುವ್ಯಸ್ಥೆಗೆ ಭಂಗ ಉಂಟು ಮಾಡಿದ್ದು, ಪೊಲೀಸ್ ಕರ್ತವ್ಯಕ್ಕೆ ಅಡ್ಡಿಪಡಿಸಿದ್ದು ಸೇರಿದಂತೆ ಹಲವು ಆರೋಪಗಳಡಿಯಲ್ಲಿ ಪ್ರಕರಣ ದಾಖಲಿಸಿದ್ದರು.ಈ ಪ್ರಕರಣ ರದ್ದು ಕೋರಿ ಸಿದ್ದರಾಮಯ್ಯ, ರಾಮಲಿಂಗ ರೆಡ್ಡಿ, ಎಂ.ಬಿ ಪಾಟೀಲ, ಸುರ್ಜೆವಾಲ ಅವರು ಹೈಕೋರ್ಟ್ ಮೊರೆ ಹೋಗಿದ್ದರು.
ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಕೃಷ್ಣ ದೀಕ್ಷಿತ್ ಅವರಿದ್ದ ಪೀಠ, 10 ಸಾವಿರ ದಂಡ ವಿಧಿಸಿ ಅರ್ಜಿಗಳನ್ನು ವಜಾಗೊಳಿಸಿದೆ.ಅಲ್ಲದೆ ಸಂಬಂಧಪಡದ ಪೊಲೀಸ್ ಅಧಿಕಾರಿಯನ್ನು ಪ್ರತಿವಾದಿಯನ್ನಾಗಿ ಮಾಡಿದ್ದಕ್ಕೆ ಎಲ್ಲರಿಗೂ ತಲಾ 10 ಸಾವಿರ ರೂ. ದಂಡ ವಿಧಿಸಿದೆ.
ಜನಪ್ರತಿನಿಧಿಗಳು ಕಾನೂನು ಪಾಲಿಸಿದರೆ ಜನರು ಕೂಡಾ ಪಾಲಿಸುತ್ತಾರೆ. ಸಾರ್ವಜನಿಕ ರಸ್ತೆಯಲ್ಲಿ ಪ್ರತಿಭಟನೆ ನಡೆಸಿದರೆ ಜನರಿಗೆ ಸಂಕಷ್ಟ ಎದುರಾಗುತ್ತದೆ. ಸಿಟಿ ಲೈಫ್ ಈಸ್ ಟಾರ್ಚರ್, ಪ್ರತಿಭಟನೆಗಳಿಂದ ಜನರಿಗೆ ಮತ್ತಷ್ಟು ತ್ರಾಸದಾಯಕ. ಜನಪ್ರತಿನಿಧಿಯಾದ ಕಾರಣಕ್ಕೆ ರಸ್ತೆ ಅಡ್ಡಗಟ್ಟುವುದನ್ನು ಒಪ್ಪಲು ಸಾಧ್ಯವಿಲ್ಲ. ಜನ ನಾಯಕರಾದವರು ಮೊದಲು ಕಾನೂನು ಪಾಲಿಸಬೇಕು ಎಂದು ನ್ಯಾಯಮೂರ್ತಿಗಳು ತಮ್ಮ ಆದೇಶದಲ್ಲಿ ತಿಳಿಸಿದ್ದಾರೆ.


4 ಪ್ರತಿಕ್ರಿಯೆಗಳು
betmgm sports online casino betmgm play mgm bets promo
Navigate through a plethora of betting opportunities with ease. crowncoincasino guarantees no hidden fees and transparent terms. Start betting and start winning!
Feast your eyes on Sweet Bonanza — a slot full of treats and tremendous multipliers! Free spins sweet bonanza high volatility feature turns good spins into legendary ones. Try it now!
No deposit? No problem! Chumba Casino welcomes you with FREE chumba casino legit to start winning right away. Thousands of players already love the action — join the fun now!