ಬೆಂಗಳೂರು, ಜು.23-
ಬಿಜೆಪಿಯೇತರ ಆಡಳಿತವಿರುವ ರಾಜ್ಯಗಳಲ್ಲಿ ರಾಜ್ಯಪಾಲರು ಮತ್ತು ಚುನಾಯಿತ ರಾಜ್ಯ ಸರ್ಕಾರದ ನಡುವಿನ ಸಂಘರ್ಷ ಹೊಸ ಸುದ್ದಿಯೇನಲ್ಲ.ಇದೀಗ ಕರ್ನಾಟಕದಲ್ಲೂ ಅದು ಆರಂಭಗೊಳ್ಳುವ ಲಕ್ಷಣಗಳು ಗೋಚರಿಸಿವೆ.
ಇದರ ಮೊದಲ ಹೆಜ್ಜೆಯಾಗಿ ಪ್ರತಿಪಕ್ಷ ನಾಯಕರ ಸಭೆಗೆ ಐಎಎಸ್ ಅಧಿಕಾರಿಗಳ ದುರ್ಬಳಕೆ ಆರೋಪದ ಬಗ್ಗೆ ವರದಿ ನೀಡುವಂತೆ ರಾಜ್ಯಪಾಲರು ಸೂಚಿಸಿದ್ದಾರೆ.
ಬಿಜೆಪಿ ವಿರುದ್ಧ ಸಂಘಟಿತ ಹೋರಾಟಕ್ಕೆ ವೇದಿಕೆ ಸಿದ್ದಪಡಿಸಲು ಬೆಂಗಳೂರಿನಲ್ಲಿ ಇತ್ತೀಚೆಗೆ ನಡೆದ ಪ್ರತಿಪಕ್ಷಗಳ ಸಭೆಗೆ ರಾಜ್ಯ ಸರ್ಕಾರ ಐಎಎಸ್ ಅಧಿಕಾರಿಗಳನ್ನು ಬಳಕೆ ಮಾಡಿಕೊಂಡಿದೆ ಎಂಬ ಆರೋಪದ ಕುರಿತು ವರದಿ ನೀಡುವಂತೆ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ಮುಖ್ಯ ಕಾರ್ಯದರ್ಶಿ ವಂದಿತಾ ಶರ್ಮಾ ಅವರಿಂದ ವರದಿ ಕೇಳಿದ್ದಾರೆ.
ಬೆಂಗಳೂರಿನಲ್ಲಿ ನಡೆದ ಪ್ರತಿಪಕ್ಷಗಳ ಮುಖಂಡರ ಸಭೆಗೆ ಹಾಜರಾದ ಜನ ಪ್ರತಿನಿಧಿಗಳಲ್ಲದವರಿಗೂ ಶಿಷ್ಟಾಚಾರದ ಹೆಸರಲ್ಲಿ ಆತಿಥ್ಯದ ಜವಾಬ್ದಾರಿಯನ್ನು ಹಿರಿಯ ಅಧಿಕಾರಿಗಳಿಗೆ ವಹಿಸಲಾಗಿತ್ತು. ರಾಜಕೀಯ ಸಭೆ,ಸಮಾರಂಭಗಳಿಗೆ ಸರ್ಕಾರದ ಅಧಿಕಾರಿಗಳನ್ನು ನಿಯೋಜಿಸಬಾರದು ಎಂಬ ಸ್ಪಷ್ಟ ನಿಯಮವಿದ್ದರೂ ಸರ್ಕಾರ ಇದನ್ನು ಉಲ್ಲಂಘನೆ ಮಾಡಿದೆ ಎಂದು ಆರೋಪಿಸಿ ಬಿಜೆಪಿ ಮತ್ತು ಜೆಡಿಎಸ್ ರಾಜ್ಯಪಾಲರಿಗೆ ದೂರು ನೀಡಿದ್ದವು.
ಈ ದೂರಿನ ಹಿನ್ನೆಲೆಯಲ್ಲಿ ಇದೀಗ ರಾಜ್ಯಪಾಲರು ಸಮಗ್ರ ವರದಿ ನೀಡುವಂತೆ ಸರ್ಕಾರದ ಮುಖ್ಯ ಕಾರ್ಯದರ್ಶಿಗೆ ಸೂಚನೆ ನೀಡಿದ್ದಾರೆ.
1 ಟಿಪ್ಪಣಿ
врач нарколог на дом платный врач нарколог на дом платный .