ಬೆಂಗಳೂರು,ಫೆ.9 – ಲೋಕಸಭೆ ಚುನಾವಣೆಯಲ್ಲಿ ಅತ್ಯಧಿಕ ಸ್ಥಾನ ಗೆಲ್ಲಬೇಕು ಎಂದು ಬಿಜೆಪಿ ಜಾತ್ಯಾತೀತ ಜನತಾದಳದೊಂದಿಗೆ ಮೈತ್ರಿ ಮಾಡಿಕೊಂಡಿರುವ ಕ್ರಮದ ವಿರುದ್ಧ ಜೆಡಿಎಸ್ ನಲ್ಲಿ ಅಸಮಾಧಾನ ತೀವ್ರಗೊಂಡಿದೆ.
ಹೈಕಮಾಂಡ್ ಮಟ್ಟದಲ್ಲಿ ತೆಗೆದುಕೊಂಡಿರುವ ಈ ನಿರ್ಧಾರ ವಿರೋಧಿಸಿ ಕೋಲಾರ ಜಿಲ್ಲೆಯಿಂದ ವಿಧಾನಸಭೆಗೆ ಆಯ್ಕೆಯಾಗಿರುವ ಇಬ್ಬರು ಶಾಸಕರು ಇದೀಗ ಜೆಡಿಎಸ್ ಗೆ ಗುಡ್ ಬೈ ಹೇಳಲು ಸಜ್ಜಾಗಿದ್ದಾರೆ.
ಲೋಕಸಭೆ ಚುನಾವಣೆ ವೇಳಾಪಟ್ಟಿ ಘೋಷಣೆ ಸಮಯದಲ್ಲಿ ಶ್ರೀನಿವಾಸಪುರ ಕ್ಷೇತ್ರದಿಂದ ಆಯ್ಕೆಯಾಗಿರುವ ಜೆಡಿಎಸ್ ಶಾಸಕ ವೆಂಕಟಶಿವಾ ರೆಡ್ಡಿ, ಮುಳಬಾಗಿಲು ಕ್ಷೇತ್ರದ ಶಾಸಕ ಸಮೃದ್ಧಿ ಮಂಜುನಾಥ್ ಅವರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡುವ ಸಾಧ್ಯತೆ ಇದೆ.
ಕೋಲಾರ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಶಾಸಕ ಕೊತ್ತೂರು ಮಂಜುನಾಥ್, ವಿಧಾನ ಪರಿಷತ್ ಸದಸ್ಯ ಅನಿಲ್ ಕುಮಾರ್ ಅವರು ಈ ನಾಯಕರೊಂದಿಗೆ ಮಾತುಕತೆ ನಡೆಸುತ್ತಿದ್ದು ಲೋಕಸಭೆ ಚುನಾವಣೆಯಲ್ಲಿ ಈ ಇಬ್ಬರು ಕಾಂಗ್ರೆಸ್ ಅಭ್ಯರ್ಥಿಯ ಪರವಾಗಿ ಕೆಲಸ ಮಾಡಲಿದ್ದಾರೆ.
ಕೋಲಾರದಲ್ಲಿ ಸುದ್ದಿಗಾರರಿಗೆ ಈ ವಿಷಯ ತಿಳಿಸಿರುವ ಶಾಸಕ ಕೊತ್ತೂರು ಮಂಜುನಾಥ ಅವರು ಜೆಡಿಎಸ್ ನ ಕಾರ್ಯವೈಖರಿಯಿಂದ ಬೇಸರಗೊಂಡಿರುವ ಈ ಇಬ್ಬರು ಸದ್ಯದಲ್ಲೇ ಪಕ್ಷಕ್ಕೆ ರಾಜೀನಾಮೆ ನೀಡುವ ಸಾಧ್ಯತೆ ಇದೆ ಎಂದು ತಿಳಿಸಿದರು.
ಲೋಕಸಭೆ ಚುನಾವಣೆಯಲ್ಲಿ ಕೋಲಾರ ಕ್ಷೇತ್ರವನ್ನು ಕಾಂಗ್ರೆಸ್ ಕೈವಶ ಮಾಡಿಕೊಳ್ಳಲು ರಣತಂತ್ರ ರೂಪಿಸುತ್ತಿದೆ ಹೀಗಾಗಿ ಇವರ ಸೇರ್ಪಡೆ ಪಕ್ಷಕ್ಕೆ ಹೆಚ್ಚಿನ ಬಲತಂದು ಕೊಡಲಿದೆ. ಈ ಹಿನ್ನೆಲೆಯಲ್ಲಿ ಈ ಇಬ್ಬರನ್ನು ಸೇರ್ಪಡೆ ಮಾಡಿಕೊಳ್ಳುವ ಕುರಿತಂತೆ ಸ್ಥಳೀಯ ಕಾಂಗ್ರೆಸ್ ನಾಯಕರೊಂದಿಗೆ ಮಾತುಕತೆ ನಡೆಸಲಾಗುತ್ತಿದೆ ಎಂದು ಹೇಳಿದರು.
ಈ ವಿಷಯವಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸ್ಥಳೀಯ ಮಟ್ಟದಲ್ಲಿ ಮಾತುಕತೆ ನಡೆಸುವಂತೆ ತಮಗೆ ಸಲಹೆ ಮಾಡಿದ್ದು ಅದರಂತೆ ತಾವು ಮಾಜಿ ಮಂತ್ರಿ ರಮೇಶ್ ಕುಮಾರ್ ಸೇರಿದಂತೆ ಸಮಾಲೋಚನೆ ನಡೆಸುತ್ತಿರುವುದಾಗಿ ತಿಳಿಸಿದರು.


2 ಪ್ರತಿಕ್ರಿಯೆಗಳು
https://miamifightcard.com/
In the context of MediaFightCard, the wagering lines highlight a fascinating dynamic with belt-holders being the betting underdogs and aspirants boasting favorite status. In the featured bout for the vacant light heavyweight title, former champion Jiri Prochazka debuted as a slight -143 favorite over the surging Carlos Ulberg, who is listed as a +116 underdog despite his nine-fight winning streak.
https://ufc327odds.com/
This Miami-held light heavyweight title fight at UFC 327 shapes up as a legitimate pick’em for those placing wagers, as former titleholder Jiri Prochazka (-142) and surging knockout artist Carlos Ulberg (+120) prepare to throw down for the open belt. The razor-thin odds are a testament to how comparable these two stand-up fighters truly are, setting up a matchup where a investment on any side is simply a matter of which devastating approach you believe will emerge victorious.