Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2023
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಹಂತಕರ ಬೆನ್ನು ಹತ್ತಿದ ಉಡುಪಿ ಪೊಲೀಸ್ | Murder
    Trending

    ಹಂತಕರ ಬೆನ್ನು ಹತ್ತಿದ ಉಡುಪಿ ಪೊಲೀಸ್ | Murder

    vartha chakraBy vartha chakraನವೆಂಬರ್ 14, 2023ಯಾವುದೇ ಟಿಪ್ಪಣಿಗಳಿಲ್ಲ2 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp

    ಬೆಂಗಳೂರು, ನ.13- ಉಡುಪಿಯ ಕೆಮ್ಮಣ್ಣಿನ ನೇಜಾರಿನಲ್ಲಿ ಒಂದೇ ಕುಟುಂಬದ ನಾಲ್ವರನ್ನು ಅತ್ಯಂತ ಬರ್ಬರವಾಗಿ ಕೊಲೆ ಮಾಡಿದ ಭಯಾನಕ ಕೃತ್ಯದ ಹಂತಕನ ಪತ್ತೆಗೆ ಐದು ವಿಶೇಷ ಪೊಲೀಸ್ ತಂಡಗಳನ್ನು ರಚಿಸಲಾಗಿದೆ.  ಹಂತಕನ ಪತ್ತೆಯ ಕಾರ್ಯಾಚರಣೆ ಕೈಗೊಂಡಿರುವ ಐದು ತಂಡಗಳಲ್ಲಿ ಮಂಗಳೂರು, ಶಿವಮೊಗ್ಗ, ಕಾರವಾರಕ್ಕೆ ತಲಾ ಒಂದೊಂದು ತಂಡವನ್ನು ಕಳುಹಿಸಿದ್ದರೆ ಎರಡು ತಂಡಗಳು ಉಡುಪಿಯಲ್ಲಿ ಬೀಡು ಬಿಟ್ಟು ಶೋಧ ಕೈಗೊಂಡಿವೆ.
    ಸುಮಾರು 45 ವರ್ಷದ ಬೋಳು ತಲೆ, ಬಿಳಿ ಮಾಸ್ಕ್‌ ಹಾಕಿಕೊಂಡಿರುವ ಹಂತಕನ ಕೆಲವೊಂದು ವಿಡಿಯೋ ಫೂಟೇಜ್‌ಗಳು ಲಭ್ಯವಾಗಿದ್ದು, ಆತನ ಪತ್ತೆಗೆ ಪೊಲೀಸರು ಯತ್ನಿಸುತ್ತಿದ್ದಾರೆ. ಹಂತಕ ಬೆಂಗಳೂರು ಕನ್ನಡ ಮಾತನಾಡುತ್ತಿದ್ದ ಎಂಬ ರಿಕ್ಷಾ ಚಾಲಕ ಶ್ಯಾಮ್‌ ಹೇಳಿಕೆಯ ಆಧಾರದಲ್ಲಿಯೂ ತನಿಖೆ ನಡೆಯುತ್ತಿದೆ. ಕೊಲೆಯಾದ ಯುವತಿಯರಲ್ಲಿ ಒಬ್ಬಾಕೆ ಬೆಂಗಳೂರಿನಲ್ಲಿ ಗಗನ ಸಖಿ ( ಏರ್‌ ಹೋಸ್ಟೆಸ್‌ )ಆಗಿ ಕೆಲಸ ಮಾಡುತ್ತಿದ್ದಾಳೆ. ಈ ಘಟನೆ ಆಕೆಯ ಮೇಲಿನ ದ್ವೇಷ ಸಾಧನೆಯೇ ಎಂಬ ಬಗ್ಗೆ ಚರ್ಚೆ ನಡೆಯುತ್ತಿದೆ. ಇನ್ನೊಂದು ಕಡೆ ಮನೆಯ ಹಿರಿ ಮಗನೂ ಇರುವುದು ಬೆಂಗಳೂರಿನಲ್ಲಿ. ಅವನಿಗೂ ಹಂತಕನಿಗೂ ಏನಾದರೂ ಸಂಬಂಧವಿದೆಯಾ ಎನ್ನುವುದು ಕೂಡಾ ತನಿಖೆಗೆ ಒಳಗಾಗುತ್ತಿದೆ.

    ಮನೆಯ ಯಜಮಾನ‌ ನೂರ್‌ ಮಹಮ್ಮದ್‌ ಅವರು ದುಬೈಯಲ್ಲಿ ಉದ್ಯೋಗ ಮಾಡುತ್ತಿದ್ದಾರೆ. ಅವರ ಪತ್ನಿ ಹಸೀನಾ (45), ಪುತ್ರಿಯರಾದ ಅಫ್ನಾನ್‌ (23), ಆಝ್ನಾನ್‌ (21) ಮತ್ತು ಅಸೀಮ್‌ (14) ಅವರನ್ನು ಆಗಂತುಕನೊಬ್ಬ ನಿನ್ನೆ ಬೆಳಗ್ಗೆ ಕೊಲೆ ಮಾಡಿದ್ದಾನೆ. ಈ ಕುಟುಂಬದ ಹಿರಿಯ ಮಗ ಅಸಾದ್‌ ಬೆಂಗಳೂರಿನಲ್ಲಿ ಇಂಡಿಗೋ ಏರ್‌ಲೈನ್ಸ್‌ನಲ್ಲಿ ಕೆಲಸ ಮಾಡುತ್ತಿದ್ದಾನೆ. ಅಫ್ನಾನ್‌ ಏರ್‌ಹೋಸ್ಟೆಸ್‌ ಆಗಿ ಕೆಲಸ ಮಾಡುತ್ತಿದ್ದು, ಎರಡು ದಿನಗಳ ಹಿಂದಷ್ಟೇ ಬೆಂಗಳೂರಿನಿಂದ ಮನೆಗೆ ಬಂದಿದ್ದಳು.
    ನಿನ್ನೆ ಬೆಳಿಗ್ಗೆ 8.20ರ ಸುಮಾರಿಗೆ 45ರ ಆಸುಪಾಸಿನ ದೃಢಕಾಯ, ಕಂದು ಬಣ್ಣದ ಷರ್ಟು ಮತ್ತು ಬಿಳಿ ಬಣ್ಣದ ಮಾಸ್ಕ್‌ ಹಾಕಿಕೊಂಡ ವ್ಯಕ್ತಿ ನಗರದ ಸಂತೆಕಟ್ಟೆ ರಿಕ್ಷಾ ಸ್ಟಾಂಡ್‌ಗೆ ಬಂದಿದ್ದಾನೆ. ಅಲ್ಲಿಂದ ತೃಪ್ತಿ ನಗರಕ್ಕೆ ಕರೆದುಕೊಂಡು ಹೋಗುವಂತೆ ಕೇಳಿಕೊಂಡಿದ್ದಾನೆ. ಮನೆಯ ವಿಳಾಸವನ್ನು ಸ್ಪಷ್ಟವಾಗಿ ಹೇಳಿದ್ದ ಆ ವ್ಯಕ್ತಿ ಆಟೊ ಚಾಲಕ ಶ್ಯಾಮ್‌ ಅವರಿಗೆ ದಾರಿ ತಪ್ಪಿದಾಗಲೂ ಮತ್ತೆ ಸರಿ ದಾರಿ ತೋರಿಸಿದ್ದಾನೆ.
    ಶ್ಯಾಮ್‌ ಅವರು ಆತನನ್ನು ತೃಪ್ತಿ ನಗರದಲ್ಲಿ ಬಿಟ್ಟು ಬಂದ ಕೇವಲ 15 ನಿಮಿಷದಲ್ಲಿ ಅಂದರೆ 8.48ರ ಹೊತ್ತಿಗೆ ಆತ ಯಾರದೋ ಬೈಕ್‌ನಲ್ಲಿ ಲಿಫ್ಟ್‌ ಪಡೆದುಕೊಂಡು ಮರಳಿ ಸಂತೆಕಟ್ಟೆಗೆ ಬಂದಿದ್ದಾನೆ. ಅಲ್ಲಿಂದ ಎಲ್ಲಿ ಹೋಗಿದ್ದಾನೆ ಎನ್ನುವುದು ಸ್ಪಷ್ಟವಾಗಿಲ್ಲ.

    ಚೂರಿಯಿಂದ ಕೊಲೆ:
    ಚೂರಿಯನ್ನು ಕೈಯಲ್ಲೇ ಹಿಡಿದುಕೊಂಡು ಮನೆಯೊಳಗೆ ನುಗ್ಗಿರುವ ಆರೋಪಿ ಕ್ಷಣ ಮಾತ್ರದಲ್ಲಿ ಕೊಲೆಗಳನ್ನು ಮಾಡಿದ್ದಾನೆ. ನಾಲ್ವರನ್ನು ನಾಲ್ವರನ್ನು ನಾಲ್ಕು ಕಡೆಗಳಲ್ಲಿ ಕೊಂದು ಮುಗಿಸಿದ್ದಾನೆ. ಹಸೀನಾ, ಅಫ್ನಾನ್‌, ಅಝ್ನಾನ್‌ ಮತ್ತು ಅಸೀಮ್‌ ಅವರನ್ನು ಕಿಚನ್‌, ಬೆಡ್‌ರೂಂ, ಬಾತ್‌ ರೂಂ ಬಳಿ ಮತ್ತು ಹಾಲ್‌ನಲ್ಲಿ ಇರಿದು ಕೊಲೆ ಮಾಡಿದ್ದಾನೆ. ಈ ಕೊಲೆಗಳನ್ನು ತಡೆಯಲು ಬಂದ ಹಸೀನಾ ಅವರ ಅತ್ತೆಯನ್ನು ಹಂತಕ ಬೆದರಿಸಿದ್ದಾನೆ. ಅವರು ಬಾತ್‌ ರೂಂನ ಒಳಗೆ ಹೋಗಿ ಬಾಗಿಲು ಹಾಕಿಕೊಂಡಿದ್ದರಿಂದ ಜೀವ ಉಳಿಸಿಕೊಂಡಿದ್ದಾರೆ.

    ಚೂರಿಗೆ ಸಿಲುಕಿದ ಅಸೀಮ್‌:
    ಹಂತಕ ಮನೆ ಪ್ರವೇಶಿಸುವ ಹೊತ್ತಿಗೆ 14 ವರ್ಷದ ಬಾಲಕ ಅಸೀಮ್‌ (ಬ್ರಹ್ಮಾವರ ಖಾಸಗಿ ಶಾಲೆಯ 8 ತರಗತಿ ವಿದ್ಯಾರ್ಥಿ) ಮನೆಯಲ್ಲಿ ಇರಲಿಲ್ಲ. ಆತ ಸ್ನೇಹಿತರ ಜತೆ ಸೈಕಲ್‌ ತೆಗೆದುಕೊಂಡು ಹೋಗಿದ್ದ ಆತ ಬೆಳಗಿನ ತಿಂಡಿ ತಿನ್ನಲೆಂದು ಮನೆಗೆ ಬಂದಿದ್ದ. ಅಂಗಳ ಪ್ರವೇಶಿಸುತ್ತಿದ್ದಂತೆಯೇ ಮನೆಯೊಳಗೆ ಜೋರಾಗಿ ಕೂಗಿಕೊಳ್ಳುವ ಸದ್ದು ಕೇಳುತಿದ್ದಂತೆಯೇ ಸೈಕಲನ್ನು ಅಂಗಳದಲ್ಲಿ ಬಿಟ್ಟು ಒಂದೇ ಜಿಗಿತಕ್ಕೆ ಮನೆಯೊಳಗೆ ನುಗ್ಗಿದ್ದ. ಆದರೆ ಅವನು ಹಾಲ್‌ಗೆ ಬರುತ್ತಿದ್ದಂತೆಯೇ ಹಂತಕ ಎದುರೇ ನಿಂತಿದ್ದ. ಅಲ್ಲೇ ಆತನ ಹೊಟ್ಟೆಗೆ ಚೂರಿಯಿಂದ ಇರಿದಿದ್ದ. ಹೀಗೆ ಸಾಲು ಸಾಲು ಕೊಲೆಗಳನ್ನು ಮಾಡಿದ ಬಳಿಕ ಹಂತಕ ಅಲ್ಲಿಂದ ಪರಾರಿಯಾಗಿದ್ದ.
    ಈಗಾಗಲೇ ಕೃತ್ಯಕ್ಕೆ ಸಂಬಂಧಿಸಿದಂತೆ ಇಬ್ಬರನ್ನು ಪೊಲೀಸರು ವಶಕ್ಕೆ ಪಡೆದಿದ್ದರಾದರೂ ಅವರಿಂದ ಯಾವುದೇ ಮಾಹಿತಿ ಸಿಗದ ಹಿನ್ನೆಲೆಯಲ್ಲಿ ಬಿಡುಗಡೆ ಮಾಡಲಾಗಿದೆ.

    crime Entertainment Government Karnataka m murder News ಉಡುಪಿ ಕೊಲೆ ಬೈಕ್ ವಿದ್ಯಾರ್ಥಿ ಶಾಲೆ
    Share. Facebook Twitter Pinterest LinkedIn Tumblr Email WhatsApp
    Previous Articleವಿಜಯೇಂದ್ರನಿಗೆ ದೇವೇಗೌಡರು ಹೇಳಿದ ಗುಟ್ಟು | Vijayendra
    Next Article ಪಟಾಕಿ‌ ಸಿಡಿಸುವಾಗ ಅವಘಡ | Fire Crackers
    vartha chakra
    • Website

    Related Posts

    ಚೈನಾ ವೈರಸ್ ಬಗ್ಗೆ ಆತಂಕ ಬೇಡವಂತೆ | China Virus

    ಡಿಸೆಂಬರ್ 5, 2023

    ವಿಜಯೇಂದ್ರ ಭಾವಮೈದ ಸೇರಿ ಹಲವು ಅಧಿಕಾರಿಗಳಿಗೆ ಲೋಕಾಯುಕ್ತ ಶಾಕ್ | Vijayendra

    ಡಿಸೆಂಬರ್ 5, 2023

    ಚೈತ್ರಾ ಕುಂದಾಪುರ ಜೈಲಿನಿಂದ ಬಿಡುಗಡೆ | Chaitra Kundapura

    ಡಿಸೆಂಬರ್ 5, 2023

    Leave A Reply Cancel Reply

    ವಿಭಾಗಗಳು
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕ್ರೀಡೆ
    • ಚುನಾವಣೆ
    • ಚುನಾವಣೆ 2023
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ಶಿಕ್ಷಣ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಚೈನಾ ವೈರಸ್ ಬಗ್ಗೆ ಆತಂಕ ಬೇಡವಂತೆ | China Virus

    ವಿಜಯೇಂದ್ರ ಭಾವಮೈದ ಸೇರಿ ಹಲವು ಅಧಿಕಾರಿಗಳಿಗೆ ಲೋಕಾಯುಕ್ತ ಶಾಕ್ | Vijayendra

    ಚೈತ್ರಾ ಕುಂದಾಪುರ ಜೈಲಿನಿಂದ ಬಿಡುಗಡೆ | Chaitra Kundapura

    ಚಿಕನ್ ಇಲ್ಲದ ಬಿರಿಯಾನಿ ಕೊಟ್ಟ ತಪ್ಪಿಗೆ ಏನಾಯ್ತು ಗೊತ್ತಾ | Chicken Biryani

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Veronapxc ರಲ್ಲಿ Kailash Kher ಮೇಲೆ ನೀರಿನ ಬಾಟಲಿ ಎಸೆದ ಕಿಡಿಗೇಡಿಗಳು!
    • Prokat_gkEr ರಲ್ಲಿ ಅಣ್ಣಾಮಲೈ ಹತ್ತಿರ ಸಿಕ್ಕಿದ್ದು 2 ಜೊತೆ ಬಟ್ಟೆ 2 ಲೀಟರ್ ನೀರು | K Annamalai | BJP
    • Vikiwkj ರಲ್ಲಿ Kailash Kher ಮೇಲೆ ನೀರಿನ ಬಾಟಲಿ ಎಸೆದ ಕಿಡಿಗೇಡಿಗಳು!
    Latest Kannada News

    ಚೈನಾ ವೈರಸ್ ಬಗ್ಗೆ ಆತಂಕ ಬೇಡವಂತೆ | China Virus

    ಡಿಸೆಂಬರ್ 5, 2023

    ವಿಜಯೇಂದ್ರ ಭಾವಮೈದ ಸೇರಿ ಹಲವು ಅಧಿಕಾರಿಗಳಿಗೆ ಲೋಕಾಯುಕ್ತ ಶಾಕ್ | Vijayendra

    ಡಿಸೆಂಬರ್ 5, 2023

    ಚೈತ್ರಾ ಕುಂದಾಪುರ ಜೈಲಿನಿಂದ ಬಿಡುಗಡೆ | Chaitra Kundapura

    ಡಿಸೆಂಬರ್ 5, 2023
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2023
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.

    Vartha Chakra

    ಎಡಕ್ಕೂ ಇಲ್ಲ ಬಲಕ್ಕೂ ಇಲ್ಲ, ಬರಿ ನೇರ ನೇರ - ಅದೇ ವಾರ್ತಾಚಕ್ರ
    ಕನ್ನಡದ ಅನನ್ಯ ನ್ಯೂಸ್ ಚಾನಲ್
    ಸತ್ಯ ಶುದ್ದ ಶಿಷ್ಠ
    #Kannada #Kannadiga #Bangalore #Bengaluru #Kannadanews #Karnataka

    Vartha Chakra
    Did Kamal Nath cause the defeat of Congress in MP?
    ಕಮಲ್ ನಾಥ್ ಹೇಗೆ ಕಾಂಗ್ರೆಸ್ ಸೋಲಿಸಿದರು ಗೊತ್ತಾ? #kannada
    Subscribe