ಬೆಂಗಳೂರು, ಜ.1-
ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ಆಡಳಿತ ವ್ಯವಸ್ಥೆಯಲ್ಲಿ ದಕ್ಷತೆ ಮತ್ತು ಪಾರದರ್ಶಕತೆ ತರುವ ದೃಷ್ಟಿಯಿಂದ ಸಂಸ್ಥೆಯನ್ನು ವಿವಿಧ ನಿಗಮಗಳಾಗಿ ವಿಭಜಿಸಲಾಗಿದೆ. ಇದರ ಜೊತೆಯಲ್ಲಿ ಒಂದು ನಿಗಮದಲ್ಲಿ ಕೆಲಸ ಮಾಡುವ ಸಿಬ್ಬಂದಿ ಮತ್ತೊಂದು ನಿಗಮಕ್ಕೆ ವರ್ಗಾವಣೆ ಆಗಲು ಅವಕಾಶ ಇರಲಿಲ್ಲ.
ಇದು ಸಾರಿಗೆ ಸಂಸ್ಥೆಯ ವಿವಿಧ ನಿಗಮಗಳ ನೌಕರರ ಅಸಮಾಧಾನಕ್ಕೆ ಕಾರಣವಾಗಿತ್ತು ಹಲವಾರು ವರ್ಷಗಳಿಂದ ಅಂತರ ನಿಗಮ ವರ್ಗಾವಣೆಗೆ ಅವಕಾಶ ನೀಡಬೇಕು ಎಂದು ರಾಜ್ಯ ಸರ್ಕಾರಗಳಿಗೆ ಮನವಿ ಸಲ್ಲಿಸುತ್ತಾ ಬಂದಿದ್ದರು ಆದರೆ ಯಾವುದೇ ಸರ್ಕಾರ ಇವರ ಮನವಿಗೆ ಸ್ಪಂದಿಸಿರಲಿಲ್ಲ.
ಇದೀಗ ಕಾಂಗ್ರೆಸ್ ನೇತೃತ್ವದ ಸರ್ಕಾರ ಸಾರಿಗೆ ನಿಗಮಗಳ ಬಹುದಿನದ ಬೇಡಿಕೆಗೆ ಒಪ್ಪಿಗೆ ಸೂಚಿಸಿದೆ ಅದರಂತೆ ಹೊಸ ವರ್ಷದಿಂದ ಎಲ್ಲಾ ಸಾರಿಗೆ ನಿಗಮಗಳಲ್ಲಿ ನೌಕರರ ಅಂತರ ವರ್ಗಾವಣೆಗೆ ಅವಕಾಶ ಕಲ್ಪಿಸಲಾಗಿದೆ.
ಇಂದಿನಿಂದ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ, ಬೆಂಗಳೂರು ಮಹಾನಗರ ಸಾರಿಗೆ ನಿಗಮ, ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮ, ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ನಿಗಮಗಳ ದರ್ಜೆ-3ರ ಮೇಲ್ವಿಚಾರಕೇತರ ಮತ್ತು ದರ್ಜೆ-4ರ ನೌಕರರಿಗೆ ಅಂತರ ನಿಗಮ ವರ್ಗಾವಣೆಗೆ ಅವಕಾಶ ಕಲ್ಪಿಸಿದೆ.
2026ನೇ ಸಾಲಿನ ವರ್ಗಾವಣೆ ಪ್ರಕ್ರಿಯೆಯು ಇಂದು ಬೆಳಿಗ್ಗೆ 11 ಗಂಟೆಯಿಂದ ಪ್ರಾರಂಭವಾಗಿದ್ದು, ಜ.31ರ ಸಂಜೆ 5.30ರ ವರೆಗೆ ನಡೆಯಲಿದೆ. ವರ್ಗಾವಣೆಗೆ ಅರ್ಜಿ ಸಲ್ಲಿಸಲು ನೌಕರರಿಗೆ ಆನ್‌ಲೈನ್ ಮೂಲಕ ಅವಕಾಶ ನೀಡಲಾಗಿದೆ.
ಸಾಮಾನು ವರ್ಗಾವಣೆ, ಪತಿ-ಪತ್ನಿ/ ಶೇ.40ಕ್ಕಿಂತ ಹೆಚ್ಚಿನ ಅಂಗವಿಕಲತೆ ಹೊಂದಿರುವ ವಿಕಲ ಚೇತನ ನೌಕರರು/ತೀವ್ರ ತರಹದ ಅನಾರೋಗ್ಯ ಹೊಂದಿರುವ ನೌಕರರು ಮತ್ತು ಪರಸ್ಪರ ವರ್ಗಾವಣೇಗೆ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ.
ಸರ್ಕಾರದ ಈ ತೀರ್ಮಾನಕ್ಕೆ ಹೊಸ ವರ್ಷದಂದು ಸಾರಿಗೆ ಇಲಾಖೆಯ ಎಲ್ಲ ನಿಗಮಗಳ ನೌಕರರು ಅತೀವ ಹರ್ಷ ವ್ಯಕ್ತಪಡಿಸಿದ್ದಾರೆ.
Previous Articleಸಾವಿರದ ಸಂಭ್ರಮಕ್ಕೆ ಸಿದ್ದರಾಮಯ್ಯ ತಯಾರಿ!
Next Article ಜನವರಿ 26ಕ್ಕೆ ಬದಲಾವಣೆ ಮುನ್ಸೂಚನೆ ನೀಡಿದ ಪರಮೇಶ್ವರ್!


5 ಪ್ರತಿಕ್ರಿಯೆಗಳು
SteadyMeds pharmacy: safe reliable canadian pharmacy – SteadyMeds pharmacy
express scripts mail order pharmacy: FormuLine Pharmacy – medicine online
canadian pharmacy reviews: SteadyMeds – SteadyMeds pharmacy
AccessBridge: order antibiotics from mexico – AccessBridge
mexico online pharmacy: mail order pharmacies – AccessBridge