ಬೆಂಗಳೂರು,
ಮುಂಬರುವ ಶೈಕ್ಷಣಿಕ ವರ್ಷದಲ್ಲಿ ವೃತ್ತಿಪರ ಶಿಕ್ಷಣ ಪ್ರವೇಶ ಶುಲ್ಕ ಹೆಚ್ಚಳ ಸಂಬಂಧ ರಾಜ್ಯ ಸರ್ಕಾರ ಯಾವುದೇ ತೀರ್ಮಾನ ತೆಗೆದುಕೊಂಡಿಲ್ಲ ಈ ಬಗ್ಗೆ ಚರ್ಚೆಯು ನಡೆದಿಲ್ಲ ಎಂದು ವೈದ್ಯಕೀಯ ಶಿಕ್ಷಣ ಸಚಿವ ಶರಣಪ್ರಕಾಶ್ ಪಾಟೀಲ್ ತಿಳಿಸಿದ್ದಾರೆ.
ಉನ್ನತ ಶಿಕ್ಷಣ ಸಚಿವ ಸುಧಾಕರ್ ಅವರೊಂದಿಗೆ ಪ್ರಸಕ್ತ ಸಾಲಿನ ಸಿಇಟಿ ವೇಳಾಪಟ್ಟಿ ಮತ್ತು ಕೈಪಿಡಿ ಬಿಡುಗಡೆ ಮಾಡಿ ಮಾತನಾಡಿದ ಅವರು ವೈದ್ಯಕೀಯ ಮತ್ತು ಇಂಜಿನಿಯರಿಂಗ್ ಶುಲ್ಕ ಹೆಚ್ಚಳ ಕುರಿತಂತೆ ಯಾವುದೇ ತೀರ್ಮಾನ ತೆಗೆದುಕೊಂಡಿಲ್ಲ ಎಂದು ಸ್ಪಷ್ಟಪಡಿಸಿದರು.
ಮುಂದಿನ ಶೈಕ್ಷಣಿಕ ವರ್ಷದ ಇಂಜಿನಿಯರಿಂಗ್ ಫಾರ್ಮಸಿ ಕೃಷಿ ಮೊದಲಾದ ವೃತ್ತಿಪರ ಶಿಕ್ಷಣ ಕೋರ್ಸ್ಗಳ ಪ್ರವೇಶಕ್ಕಾಗಿ ಏಪ್ರಿಲ್ 23 ಮತ್ತು 24ರಂದು ಸಿಇಟಿ ಪರೀಕ್ಷೆ ನಡೆಯಲಿದೆ ಏಪ್ರಿಲ್ 23 ರಂದು ಭೌತ ಶಾಸ್ತ್ರ ,ರಸಾಯನಶಾಸ್ತ್ರ ಮತ್ತು ಏಪ್ರಿಲ್ 24ರಂದು ಗಣಿತ ಹಾಗೂ ಜೀವಶಾಸ್ತ್ರ ಪರೀಕ್ಷೆ ನಡೆಯಲಿದೆ ಎಂದು ಹೇಳಿದರು
ಇದೇ ಮೊದಲ ಬಾರಿಗೆ ಅರ್ಜಿ ಸಲ್ಲಿಸಲು ಮಾಹಿತಿಗಳನ್ನು ಒಳಗೊಂಡ ಕಿರು ಹೊತ್ತಿಗೆ ಸಿಇಟಿ ದಿಕ್ಸೂಚಿ ಹೊರಡಿಸಲಾಗಿದೆ ಇದರಿಂದ ಪರೀಕ್ಷೆಗೆ ಅರ್ಜಿ ಸಲ್ಲಿಸುವ ವಿದ್ಯಾರ್ಥಿಗಳು ಎಲ್ಲ ಮಾಹಿತಿಯನ್ನು ಗಮನಿಸಿ ಅರ್ಜಿ ಸಲ್ಲಿಸಬಹುದಾಗಿದೆ ಎಂದು ತಿಳಿಸಿದರು
Previous Articleಕಾಲೇಜುಗಳಲ್ಲಿ ಋತು ಚಕ್ರ ರಜೆ.?
Next Article ಪರಪ್ಪನ ಅಗ್ರಹಾರದಲ್ಲಿ ಉಗ್ರ ಚಟುವಟಿಕೆ
