ಬೆಂಗಳೂರು,ಜ.12
ವಿದ್ಯಾರ್ಥಿ ಜೀವನದ ಅತ್ಯಂತ ಮಹತ್ವದ ಘಟ್ಟ ಎಂದು ಬಣ್ಣಿಸಲಾಗಿರುವ ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ ಮಹತ್ವದ ಸುಧಾರಣೆಗಳನ್ನು ಮಾಡುತ್ತಿರುವ ರಾಜ್ಯ ಸರ್ಕಾರ ಮೂರು ಪರೀಕ್ಷೆ ವ್ಯವಸ್ಥೆ ಮಾಡಿದೆ.ಅಲ್ಲದೆ ಪ್ರಶ್ನೆ ಪತ್ರಿಕೆ ಸೋರಿಕೆ ತಡೆಗಟ್ಟಲು ಆನ್ ಲೈನ್ ಮೂಲಕ ಪ್ರಶ್ನೆ ಪತ್ರಿಕೆ ರವಾನಿಸುವ ವ್ಯವಸ್ಥೆ ಮಾಡಲಾಗಿದೆ.ಈ ವ್ಯವಸ್ಥೆ ಎಷ್ಟರಮಟ್ಟಿಗೆ ಸಮರ್ಪಕವಾಗಿ ಕೆಲಸ ಮಾಡಲಿದೆ ಎಂದು ಪರಿಶೀಲಿಸಲು ನೂತನ ವ್ಯವಸ್ಥೆ ಅಡಿಯಲ್ಲಿ ಪೂರ್ವಭಾವಿ ಪರೀಕ್ಷೆ ನಡೆಸುತ್ತಿದೆ.
ನೂತನ ವ್ಯವಸ್ಥೆಯಲ್ಲಿ ಪ್ರಶ್ನೆ ಪತ್ರಿಕೆ ಸೋರಿಕೆ ಅಸಾಧ್ಯ ಎಂದು ಭಾವಿಸಿರುವಾಗಲೇ ಪೂರ್ವಭಾವಿ ಪರೀಕ್ಷೆಯ ಪ್ರಶ್ನೆ ಪತ್ರಿಕೆ ಕೂಡ ಸೋರಿಕೆಯಾಗಿ ಸರ್ಕಾರಕ್ಕೆ ಸವಾಲು ಎದುರಾಗಿದೆ.ಇದನ್ನು ಗಂಭೀರವಾಗಿ ಪರಿಗಣಿಸಿದ ಶಿಕ್ಷಣ ಇಲಾಖೆ ಪೊಲೀಸರಿಗೆ ದೂರು ನೀಡಿತ್ತು.
ಇದರ ಆಧಾರದಲ್ಲಿ ತನಿಖೆ ನಡೆಸಿದ ಬೆಂಗಳೂರು ಉತ್ತರ ವಿಭಾಗದ ಸೆನ್ ಪೊಲೀಸರು ಈ ಸಂಬಂಧ 6 ಮಂದಿ ಶಿಕ್ಷಕರನ್ನು ಬಂಧಿಸಿದ್ದಾರೆ ಅಲ್ಲದೇ ಇಬ್ಬರು ವಿದ್ಯಾರ್ಥಿಗಳು ವಶಕ್ಕೆ ಪಡೆದು ತನಿಖೆಯನ್ನು ಕೈಗೊಂಡಿದ್ದಾರೆ.
ತುಮಕೂರಿನ ಶಾಲೆಯೊಂದರ ಮುಖ್ಯೋಪಾಧ್ಯಾಯ ವಿ.ಡಿ. ಗಿರೀಶ್, ರಾಮನಗರದ ಸಹ ಶಿಕ್ಷಕ ಅಮ್ಮದ್ ಖಾನ್, ಕಲಬುರಗಿ ಜಿಲ್ಲೆಯ ಮುಖ್ಯ ಶಿಕ್ಷಕಿ ಶಾಹಿದಾ ಬೇಗಂ, ಶಿಕ್ಷಕ ಮೊಹಮ್ಮದ್ ಸಿರಾಜುದ್ದೀನ್, ಸಹ ಶಿಕ್ಷಕಿ ಫಾಹ್ಮದಾ, ಶಿಕ್ಷಕಿ ಫರ್ಜಾನಾ ಬೇಗಂ ಬಂಧಿತ ಆರೋಪಿಗಳಾಗಿದ್ದಾರೆ.
ಇವರ ಜೊತೆಗೆ ಇಬ್ಬರು ಅಪ್ರಾಪ್ತ ವಿದ್ಯಾರ್ಥಿಗಳನ್ನೂ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿಸಿ ವಿಚಾರಣೆ ನಡೆಸಲಾಗುತ್ತಿದೆ.
ಪ್ರಶ್ನೆ ಪತ್ರಿಕೆ ಸೋರಿಕೆ ಮಾಡಿದ್ದು ಯಾರು ಗೊತ್ತಾ..?
Previous Articleರಾಹುಲ್ ಗಾಂಧಿ ಜೊತೆ ಸಿಎಂ ಮತ್ತು ಡಿಸಿಎಂ ಮೀಟಿಂಗ್ ಫಿಕ್ಸ್
Next Article ವಶೀಕರಣಕ್ಕಾಗಿ ಹಲ್ಲಿ ಜನನಾಂಗ ಕೊಡುವ ಮಾಂತ್ರಿಕ!

