ಬೆಂಗಳೂರು,ಜ. 28-
ಬೆಂಗಳೂರು ನಗರದಲ್ಲಿ ನಡೆದ ಕಳ್ಳತನ ಪ್ರಕರಣ ಸಂಬಂಧ ಅಮೆರಿಕಾ ರಾಯಭಾರ ಕಚೇರಿ ಮಧ್ಯಪ್ರವೇಶ ಮಾಡಿದೆ.ಅಲ್ಲಿಂದ ನೇರವಾಗಿ ರಾಜ್ಯ ಪೊಲೀಸ್ ಮಹಾನಿರ್ದೇಶಕರಿಗೆ ದೂರು ನೀಡಲಾಗಿದೆ.
ಈ ದೂರನ್ನು ಗಂಭೀರವಾಗಿ ಪರಿಣಮಿಸಿದ ಬೆಂಗಳೂರು ಪೊಲೀಸರು ಕಳ್ಳತನ ಮಾಡಿ ಪರಾರಿಯಾಗಿದ್ದ ಆರೋಪಿಯನ್ನು ಬಂಧಿಸಿ ಆತನಿಂದ ಕದ್ದ ವಸ್ತುಗಳನ್ನು ಜಪ್ತಿ ಮಾಡಿಕೊಂಡಿದ್ದಾರೆ
ಅಮೆರಿಕಾ ಮೂಲದ ದಂಪತಿ ಬೆಂಗಳೂರಿನಲ್ಲಿ ಕೆಲಸ ಮಾಡುತ್ತಿದ್ದು, ಬಾಡಿಗೆ ಮನೆಯಲ್ಲಿ ವಾಸವಾಗಿದ್ದರು. ಪಶ್ಚಿಮ ಬಂಗಾಳ ಮೂಲದ ವ್ಯಕ್ತಿ ಇವರ ಮನೆಯಲ್ಲಿ ಕೆಲಸ ಮಾಡಿಕೊಂಡಿದ್ದ ಆತನೇ ಇವರ ಮನೆಯಲ್ಲಿ ಕಳ್ಳತನ ನಡೆಸಿ ಪರಾರಿಯಾಗಿರುವುದು ಬೆಳಕಿಗೆ ಬಂದಿದೆ.
ಸಾಫ್ಟ್ ವೇರ್ ಉದ್ಯೋಗಿಗಳಾಗಿದ್ದ ಮೆರಿಯಲ್ ಮೊರೆನೋ ಮತ್ತು ಅವರ ಪತಿ ಟೊಮ್ಮೋ ಕನ್ಕನಿಯನ್ ಅಮೆರಿಕಾದ ಟೆಕ್ಸಾಸ್ ಮೂಲದವರು. ಇವರು ಬೆಂಗಳೂರಿನಲ್ಲೇ ನೆಲೆಸಿದ್ದಾರೆ ಈ ನಡುವೆ ಕೆಲಸದ ನಿಮಿತ್ತ ಪತಿ ಅಮೆರಿಕಾಗೆ ಹೋಗಿದ್ದರು.
ಮನೆಯಲ್ಲಿ ಅವರ ಪತ್ನಿ ಮಾತ್ರ ವಾಸವಿದ್ದು ಎಂದಿನಂತೆ ಜನವರಿ 21ರಂದು ಕೆಲಸಕ್ಕಾಗಿ ಕಚೇರಿಗೆ ತೆರಳಿದ್ದರು. ಕೆಲಸ ಮುಗಿಸಿಕೊಂಡುಮಹಿಳೆ ಮನೆಗೆ ಬಂದು ನೋಡಿದಾಗ ಮನೆಯಲ್ಲಿ ಕಳ್ಳತನ ನಡೆದಿರುವ ಬೆಳಕಿಗೆ ಬಂದಿತ್ತು.
ಆಕೆ ವಿಷಯವನ್ನು ಅಮೇರಿಕಾದಲ್ಲಿದ್ದ ತಮ್ಮ ಪತಿಯ ಗಮನಕ್ಕೆ ತಂದಿದ್ದಾರೆ.ಅಮೆರಿಕಾದಲ್ಲಿದ್ದ ಪತಿ ರಾಯಭಾರ ಕಚೇರಿಗೆ ಈ ಬಗ್ಗೆ ಮಾಹಿತಿ ನೀಡಿದ್ದರು. ರಾಯಭಾರ ಕಚೇರಿ ಈ ವಿಷಯವನ್ನು ರಾಜ್ಯ ಪೊಲೀಸ್ ಮಹಾನಿರ್ದೇಶಕರ ಗಮನಕ್ಕೆ ತಂದಿತ್ತು ಅವರು ನೀಡಿದ ಸೂಚನೆಯ ಮೇರೆಗೆ ಬೆಂಗಳೂರು ಪೊಲೀಸರು ಪ್ರಕರಣ ದಾಖಲಿಸಿಕೊಂಡು ತಣಿಕೆ ನಡೆಸಿದ್ದರು.
ಜೀವನ್ ಭೀಮಾನಗರ ಠಾಣಾ ವ್ಯಾಪ್ತಿಯಲ್ಲಿ ನಡೆದಿದ್ದ ಕಳ್ಳತನ ಸಂಬಂಧ ಕ್ಷೀಪ್ರ ಕಾರ್ಯಾಚರಣೆ ನಡೆಸಿ ಆರೋಪಿಯನ್ನು ಪೊಲೀಸರು ಬಂಧಿಸಿದ್ದು, ಕಳವು ಮಾಡಿದ್ದ ವಸ್ತುಗಳನ್ನು ಆತನಿಂದ ಜಪ್ತಿ ಮಾಡಿದ್ದಾರೆ
ಕಳೆದ ಒಂದು ವರ್ಷದ ಹಿಂದೆ ಕೆಲಸಕ್ಕೆ ಸೇರಿಕೊಂಡಿದ್ದ ಪಶ್ಚಿಮ ಬಂಗಾಳ ಮೂಲದ ಚಂದನ್ ರೌಲ್ ಎಂಬಾತ ಅವರ ವಿಶ್ವಾಸ ಗಳಿಸಿಕೊಂಡಿದ್ದ ಆತನನ್ನು ನಂಬಿ ಅವರು ಮನೆಯಲ್ಲಿ ಬಿಟ್ಟು ಹೋಗಿದ್ದ ವೇಳೆ ಒಂಚು ಹಾಕಿ ಆತ ಮನೆಯಲ್ಲಿದ್ದ ವಜ್ರ, ಚಿನ್ನಾಭರಣ ಸೇರಿ 600 ಅಮೆರಿಕನ್ ಡಾಲರ್ ಕದ್ದು ಏನು ತಿಳಿಯದಂತೆ ಕೆಲಸ ಮುಂದುವರಿಸಿಕೊಂಡು ಇದ್ದ.
ಪ್ರಕರಣ ದಾಖಲಿಸಿಕೊಂಡ ಪೊಲೀಸರು ಆತನ ಮೇಲೆ ಅನುಮಾನ ಬಂದು ವಿಚಾರಣೆ ನಡೆಸಿದಾಗ ಕಳ್ಳತನದ ವಿಚಾರವನ್ನು ಬಾಯಿಬಿಟ್ಟಿದ್ದಾನೆ.

