Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಸರ್ಕಾರದ ವಿರುದ್ಧ ಗುತ್ತಿಗೆದಾರರ ಸಮರ.
    ಕಾಮಗಾರಿ

    ಸರ್ಕಾರದ ವಿರುದ್ಧ ಗುತ್ತಿಗೆದಾರರ ಸಮರ.

    vartha chakraBy vartha chakraಜನವರಿ 29, 2026ಯಾವುದೇ ಟಿಪ್ಪಣಿಗಳಿಲ್ಲ2 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು,
    ಸರ್ಕಾರದ ವಿವಿಧ ಕಾಮಗಾರಿಗಳ ಗುತ್ತಿಗೆ ಪಡೆದಿರುವ ಗುತ್ತಿಗೆದಾರರು ಇದೀಗ ರಾಜ್ಯ ಸರ್ಕಾರದ ವಿರುದ್ಧ ಸಮರಕ್ಕೆ ಮುಂದಾಗಿದ್ದಾರೆ
    ಸರ್ಕಾರದ ವಿವಿಧ ಇಲಾಖೆಗಳಲ್ಲಿ ಕೈಗೊಂಡ ಕಾಮಗಾರಿಗಳ ಬಿಲ್ ಗಳ ಬಾಕಿ ಮೊತ್ತವನ್ನು ಮಾ.5ರೊಳಗೆ ಬಿಡುಗಡೆ ಮಾಡದಿದ್ದರೆ ರಾಜ್ಯಾದ್ಯಂತ ಕಾಮಗಾರಿಗಳನ್ನು ಸ್ಥಗಿತಗೊಳಿಸಿ ಹೋರಾಟ ನಡೆಸಲು ರಾಜ್ಯ ಗುತ್ತಿಗೆದಾರರ ಸಂಘ ತೀರ್ಮಾನಿಸಿದೆ.
    ಗುತ್ತಿಗೆದಾರರು ಬಾಕಿ ಇರುವ 38 ಸಾವಿರ ಕೋಟಿ ಬಾಕಿ ಬಿಲ್‌ ಮೊತ್ತವನ್ನು ನಿಗದಿತ ಸಮಯದೊಳಗೆ ಪಾವತಿ ಮಾಡಬೇಕು.ತಪ್ಪಿದಲ್ಲಿ ರಾಜ್ಯಪಾಲ ತಾವರ್‌ ಚಂದ್‌ ಗೆಹ್ಲೋಟ್‌, ಲೋಕಸಭೆಯ ವಿಪಕ್ಷ ನಾಯಕ ರಾಹುಲ್‌ ಗಾಂಧಿ ಹಾಗೂ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರಿಗೆ ಪತ್ರ ಬರೆಯಲಾಗುವುದು ಎಂದು ಗುತ್ತಿಗೆದಾರರ ಸಂಘದ ಅಧ್ಯಕ್ಷ ಮಂಜುನಾಥ ತಿಳಿಸಿದರು.
    ಸುದ್ದಿಗಾರರೊಂದಿಗೆ ಮಾತನಾಡಿದ ಅವರು
    ಕಳೆದ ಎರಡುವರೆ ವರ್ಷದಿಂದ ಸರ್ಕಾರ ಬಾಕಿ ಬಿಲ್‌ ಹಣ ಪಾವತಿಗೆ ಹಿಂದೇಟು ಹಾಕುತ್ತಿದೆ. ರಾಜ್ಯ ಗುತ್ತಿಗೆದಾರರಿಗೆ ಸುಮಾರು 38 ಸಾವಿರ ಕೋಟಿ ಬಾಕಿ ಹಣ ಉಳಿಸಿಕೊಂಡಿದೆ. ಇತ್ತ ಜಿಬಿಎ ವ್ಯಾಪ್ತಿಯ ಗುತ್ತಿಗೆದಾರರಿಗೆ ಸುಮಾರು 2.900 ಕೋಟಿ ಬಾಕಿ ಹಣ ಉಳಿಸಿಕೊಂಡಿದೆ. ಈಗಾಗಲೇ ಸರ್ಕಾರಕ್ಕೆ ಅನೇಕ ಬಾರಿ ಮನವಿ ಮಾಡಿದರೂ ಕೂಡ ಬಾಕಿ ಹಣ ಬಿಡುಗಡೆ ಮಾಡಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.
    ಸಿದ್ದರಾಮಯ್ಯನೇತೃತ್ವದ ಕಾಂಗ್ರೆಸ್‌‍ ಸರ್ಕಾರ ಅಸ್ತಿತ್ವಕ್ಕೆ ಬಂದು ಎರಡೂವರೆ ವರ್ಷ ಕಳೆದರೂ ಕರ್ನಾಟಕ ರಾಜ್ಯ ಗುತ್ತಿಗೆದಾರರ ಹಲವಾರು ಸಮಸ್ಯೆಗಳು ಇದುವರೆಗೂ ಕಾರ್ಯರೂಪಕ್ಕೆ ಬಂದಿಲ್ಲ. ಮುಖ್ಯಮಂತ್ರಿ ಮತ್ತು ಹಲವಾರು ಸಚಿವರನ್ನು ಭೇಟಿ ಮಾಡಿ, ಅವರ ಗಮನಕ್ಕೆ ತಂದಿದ್ದೇವೆ. ಆದರೆ ಇದುವರೆವಿಗೂ ಲೋಕೋಪಯೋಗಿ ಇಲಾಖೆ, ಬಿ.ಬಿ.ಎಂ.ಪಿ. ಮತ್ತು ಪಂಚಾಯತ್‌ರಾಜ್‌ ಇಂಜಿನಿಯರಿಂಗ್‌ ಇಲಾಖೆ ಹೊರತುಪಡಿಸಿ ಬೇರೆ ಇಲಾಖೆಗಳಲ್ಲೂ ಹಣವನ್ನು ಬಿಡುಗಡೆ ಮಾಡಿಲ್ಲ ಎಂದು ದೂರಿದರು.
    ಸರ್ಕಾರ ಗುತ್ತಿಗೆದಾರರನ್ನು ನಿರ್ಲಕ್ಷ್ಯ ಮಾಡುತ್ತಾ ಬಂದಿದೆ. ಮುಖ್ಯಮಂತ್ರಿಗಳು ಹಲವಾರು ಬಾರಿ ಸಂಘದ ಪದಾಧಿಕಾರಿಗಳ ಜೊತೆಗೆ ಸಭೆ ನಿಗದಿಪಡಿಸಿ ಯಾವುದೇ ಸ್ಪಷ್ಟ ಕಾರಣ ನೀಡದೆ ಮುಂದೂಡಿದ್ದಾರೆ. ಇದುವರೆಗೂ ಅಧಿಕೃತವಾಗಿ ಸಭೆ ಕರೆದು ಚರ್ಚೆ ನಡೆಸಲು ಸಿಎಂ ಹಿಂದೇಟು ಹಾಕುತ್ತಿದ್ದಾರೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.
    ಲೋಕೋಪಯೋಗಿ ಇಲಾಖೆ ಮತ್ತು ಬಿಬಿಎಂಪಿ ಹೊರತು ಪಡಿಸಿ ಬೇರೆ ಯಾವುದೇ ಇಲಾಖೆಯಲ್ಲಿ ಜೇಷ್ಠತೆಯನ್ನು ಪಾಲಿಸುತ್ತಿಲ್ಲ. ಉಪಮುಖ್ಯಮಂತ್ರಿ ಹಾಗೂ ಇಲಾಖೆಗಳ ಸಚಿವರನ್ನೂ ಎರಡೂರು ಬಾರಿ ಭೇಟಿ ಮಾಡಿ ಮನವಿ ಸಲ್ಲಿಸಿದ್ದರೂ ಗುತ್ತಿಗೆದಾರರ ಸಂಕಷ್ಟಗಳನ್ನು ಬಗೆ ಹರಿಸಲು ಸರ್ಕಾರಕ್ಕೆ ಸಾಧ್ಯವಾಗುತ್ತಿಲ್ಲ. ಜಿಎಸ್‌‍ಟಿ ಶೇ.12 ವ್ಯತ್ಯಾಸದ ಮೊತ್ತವನ್ನು ಸರ್ಕಾರವೇ ಭರಿಸಲು ತೀರ್ಮಾನ ಕೈಗೊಂಡಿತ್ತು. ಆದರೆ ಇದುವರೆಗೆ ಆರ್ಥಿಕ ಇಲಾಖೆ ಆದೇಶ ಮಾಡಿಲ್ಲ ಎಂದು ದೂರಿದರು.
    ನೆರೆಯ ತಮಿಳುನಾಡು, ಆಂಧ್ರಪ್ರದೇಶ, ಒರಿಸ್ಸಾ ಮತ್ತು ಮಹಾರಾಷ್ಟ್ರಗಳಲ್ಲಿ ಸುಮಾರು 5 ವರ್ಷಗಳ ಹಿಂದೆಯೇ ಜಾರಿಗೆ ಬಂದಿದೆ. ನಗಾರಭಿವೃದ್ಧಿ ಇಲಾಖೆಯಲ್ಲಿ ಮಧ್ಯವರ್ತಿಗಳದೇ ದರ್ಬಾರ್‌. ಟೆಂಡರ್‌ ಅನುಮೋದನೆಗೆ, ಟೆಂಡರ್‌ ಹಿಂಪಡೆಯಲು ಧಮ್ಕಿ ಹಾಕುತ್ತಿದ್ದಾರೆ ಎಂದರು.
    ಕಳೆದ ಸರ್ಕಾರಗಿಂತ ಈಗಿನ ಕಾಂಗ್ರೆಸ್‌‍ ಸರ್ಕಾರದಲ್ಲಿ ಕಮಿಷನ್‌ ದಂಧೆ ಹೆಚ್ಚಾಗಿದೆ. ರಾಜ್ಯದ ಎಲ್ಲಾ ಇಲಾಖೆಯಲ್ಲೂ ಕಮಿಷನ್‌ ಪಡೆದು ಬಾಕಿ ಬಿಲ್‌ ಪಾವತಿಗೆ ಅಧಿಕಾರಿಗಳು ಮುಂದಾಗಿದ್ದಾರೆ.
    ಚಿಕ್ಕಬಳ್ಳಾಪುರ ಜಿಲ್ಲೆಯ ಗುತ್ತಿಗೆದಾರರ ಮುನೇಗೌಡ ಆತಹತ್ಯೆಗೆ ಮುಂದಾಗಿದ್ದರು. ಅವರಿಗೆ 25 ಲಕ್ಷ ರೂ. ಬಾಕಿ ಬಿಲ್‌ ಹಣ ಪಾವತಿ ಅಗಬೇಕಿತ್ತು. ಇದುವರೆಗೆ ಪಾವತಿಯಾಗಿಲ್ಲ. ಸದ್ಯ ಅವರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಬಾಕಿ ಬಿಲ್‌ ಹಣ ಕೇಳೋದಕ್ಕೆ ಹೋದರೆ ಹಿಂದಿನ ಸರ್ಕಾರ ಮಾಡಿದ್ದು ಎಂದು ಅಧಿಕಾರಿಗಳು ಹಾರಿಕೆ ಉತ್ತರ ನೀಡುತ್ತಾರೆ ಎಂದು ಬೇಸರ ವ್ಯಕ್ತಪಡಿಸಿದರು.
    ಈ ಸಂಬಂಧ ಮುಖ್ಯಮಂತ್ರಿಗಳು ಗುತ್ತಿಗೆದಾರರ ಶೀಘ್ರ ಸಭೆ ಕರೆದು ಬಾಕಿ ಇರುವ ಬಿಲ್‌ಗಳನ್ನು ಪಾವತಿ ಮಾಡುವಂತೆ ಅವರು ಒತ್ತಾಯಿಸಿದರು.
    ಸಂಘದ ಗೌರವ ಅಧ್ಯಕ್ಷ ಜಗನ್ನಾಥ ಶೇಗಜಿ ಮಾತನಾಡಿ, ಕಲ್ಯಾಣ ಕರ್ನಾಟಕದ ಭಾಗದಲ್ಲಿ 5 ಸಾವಿರ ಕೋಟಿ ಅನುದಾನ ನೀಡಲಾಗಿದೆ. ಅದರೆ ಇದುವರೆಗೆ ಒಂದೇ ಒಂದು ಟೆಂಡರ್‌ ಕರೆದಿಲ್ಲ.ಕಲ್ಯಾಣ ಕರ್ನಾಟಕಕ್ಕೆ ಅನ್ಯಾಯ ಅಗಿದೆ..ಕಲ್ಯಾಣ ಕರ್ನಾಟಕದ ಶೇ.70ರಷ್ಟು ಶಾಸಕರಿಂದ ಅಭಿವೃದ್ಧಿ ಕಾಮಗಾರಿ ಗಳಿಗೆ ಅನ್ಯಾಯ ಮಾಡಿದ್ದಾರೆ. ಯಾವುದೇ ಟೆಂಡರ್‌ ಕರೆಯದೆ ದ್ರೋಹ ಬಗೆದಿದ್ದಾರೆ ಎಂದರು.

    Verbattle
    Verbattle
    Verbattle
    ಕರ್ನಾಟಕ ಕಾಂಗ್ರೆಸ್ ತಮಿಳುನಾಡು ನ್ಯಾಯ ಬೆಂಗಳೂರು ರಾಜ್ಯಪಾಲ ಸರ್ಕಾರ ಸಿದ್ದರಾಮಯ್ಯ ಸುದ್ದಿ
    Share. Facebook Twitter Pinterest LinkedIn Tumblr Email WhatsApp
    Previous Articleರಾಜ್ಯ ಪೊಲೀಸ್ ಸಿಬ್ಬಂದಿಗೆ ಭರ್ಜರಿ ಸಿಹಿಸುದ್ದಿ: ಹುಟ್ಟುಹಬ್ಬ, ವಿವಾಹ ವಾರ್ಷಿಕೋತ್ಸವಕ್ಕೆ ರಜೆ
    Next Article ರಣವೀರ್ ಸಿಂಗ್ ವಿರುದ್ಧ ಎಫ್ಐಆರ್
    vartha chakra
    • Website

    Related Posts

    ಆಟಕ್ಕುಂಟು ಲೆಕ್ಕಕ್ಕಿಲ್ಲದ ಬಿಜೆಪಿ ಸಂಸದರು: ಕೇಂದ್ರದ ವಿರುದ್ಧ ಡಿಸಿಎಂ ಡಿಕೆಶಿ ವಾಗ್ದಾಳಿ

    ಜನವರಿ 31, 2026

    ಸಾರಿಗೆ ನಿಗಮಗಳಿಗೆ ರಾಮಲಿಂಗಾರೆಡ್ಡಿ ಕಟ್ಟಾಜ್ಞೆ

    ಜನವರಿ 31, 2026

    ಕಾನ್ಫಿಡೆಂಟ್ ಗ್ರೂಪ್ ಮಾಲೀಕ ಡಾ. ಸಿ.ಜೆ ರಾಯ್ ದಾರುಣ ಅಂತ್ಯ

    ಜನವರಿ 30, 2026

    Leave A Reply Cancel Reply

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಆಟಕ್ಕುಂಟು ಲೆಕ್ಕಕ್ಕಿಲ್ಲದ ಬಿಜೆಪಿ ಸಂಸದರು: ಕೇಂದ್ರದ ವಿರುದ್ಧ ಡಿಸಿಎಂ ಡಿಕೆಶಿ ವಾಗ್ದಾಳಿ

    ಸಾರಿಗೆ ನಿಗಮಗಳಿಗೆ ರಾಮಲಿಂಗಾರೆಡ್ಡಿ ಕಟ್ಟಾಜ್ಞೆ

    ಕಾನ್ಫಿಡೆಂಟ್ ಗ್ರೂಪ್ ಮಾಲೀಕ ಡಾ. ಸಿ.ಜೆ ರಾಯ್ ದಾರುಣ ಅಂತ್ಯ

    ಕೊಲೆ ಮಾಡಿ ಮನೆಯಲ್ಲಿ ಹೂತು ಹಾಕಿದ ಪಾಪಿ

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Walterfak ರಲ್ಲಿ ಮೆಟ್ರೋದಲ್ಲಿ ಮೊಬೈಲ್ ಸ್ಪೀಕರ್ ಆನ್ ಮಾಡಿದರೆ ಅಷ್ಟೇ!
    • ShawnShows ರಲ್ಲಿ Boeing – ದೋಷಯುಕ್ತ ವಿಮಾನಗಳಿಂದಾಗಿ ಕುಖ್ಯಾತಿ!
    • Marcusreomb ರಲ್ಲಿ ಸಾರಿಗೆ ನಿಗಮದ ನೌಕರರಿಗೆ ಅತೀವ ಹರ್ಷ
    Latest Kannada News

    ಆಟಕ್ಕುಂಟು ಲೆಕ್ಕಕ್ಕಿಲ್ಲದ ಬಿಜೆಪಿ ಸಂಸದರು: ಕೇಂದ್ರದ ವಿರುದ್ಧ ಡಿಸಿಎಂ ಡಿಕೆಶಿ ವಾಗ್ದಾಳಿ

    ಜನವರಿ 31, 2026

    ಸಾರಿಗೆ ನಿಗಮಗಳಿಗೆ ರಾಮಲಿಂಗಾರೆಡ್ಡಿ ಕಟ್ಟಾಜ್ಞೆ

    ಜನವರಿ 31, 2026

    ಕಾನ್ಫಿಡೆಂಟ್ ಗ್ರೂಪ್ ಮಾಲೀಕ ಡಾ. ಸಿ.ಜೆ ರಾಯ್ ದಾರುಣ ಅಂತ್ಯ

    ಜನವರಿ 30, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.