ಸಂಗ್ರಹಗಳು
    • ಮಾರ್ಚ್ 2026
    • ಫೆಬ್ರವರಿ 2026
    • ಜನವರಿ 2026
    • ಡಿಸೆಂಬರ್ 2025
    • ನವೆಂಬರ್ 2025
    • ಅಕ್ಟೋಬರ್ 2025
    • ಸೆಪ್ಟೆಂಬರ್ 2025
    • ಆಗಷ್ಟ್ 2025
    • ಜುಲೈ 2025
    • ಜೂನ್ 2025
    • ಮೇ 2025
    • ಏಪ್ರಿಲ್ 2025
    • ಮಾರ್ಚ್ 2025
    • ಫೆಬ್ರವರಿ 2025
    • ಜನವರಿ 2025
    • ಡಿಸೆಂಬರ್ 2024
    • ನವೆಂಬರ್ 2024
    • ಅಕ್ಟೋಬರ್ 2024
    • ಸೆಪ್ಟೆಂಬರ್ 2024
    • ಆಗಷ್ಟ್ 2024
    • ಜುಲೈ 2024
    • ಜೂನ್ 2024
    • ಮೇ 2024
    • ಏಪ್ರಿಲ್ 2024
    • ಮಾರ್ಚ್ 2024
    • ಫೆಬ್ರವರಿ 2024
    • ಜನವರಿ 2024
    • ಡಿಸೆಂಬರ್ 2023
    • ನವೆಂಬರ್ 2023
    • ಅಕ್ಟೋಬರ್ 2023
    • ಸೆಪ್ಟೆಂಬರ್ 2023
    • ಆಗಷ್ಟ್ 2023
    • ಜುಲೈ 2023
    • ಜೂನ್ 2023
    • ಮೇ 2023
    • ಏಪ್ರಿಲ್ 2023
    • ಮಾರ್ಚ್ 2023
    • ಫೆಬ್ರವರಿ 2023
    • ಜನವರಿ 2023
    • ಡಿಸೆಂಬರ್ 2022
    • ನವೆಂಬರ್ 2022
    • ಅಕ್ಟೋಬರ್ 2022
    • ಸೆಪ್ಟೆಂಬರ್ 2022
    • ಆಗಷ್ಟ್ 2022
    • ಜುಲೈ 2022
    • ಜೂನ್ 2022
    • ಮೇ 2022
    • ಏಪ್ರಿಲ್ 2022
    Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » Karnataka ವಿಧಾನಸಭೆ Electionಗೆ ಮುಹೂರ್ತ ಫಿಕ್ಸ್.
    ರಾಜ್ಯ

    Karnataka ವಿಧಾನಸಭೆ Electionಗೆ ಮುಹೂರ್ತ ಫಿಕ್ಸ್.

    vartha chakraBy vartha chakraಜನವರಿ 24, 2023Updated:ಜನವರಿ 24, 2023ಯಾವುದೇ ಟಿಪ್ಪಣಿಗಳಿಲ್ಲ2 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು,ಜ.24-
    ರಾಜ್ಯದಲ್ಲಿ ಪ್ರಸಕ್ತ ವಿಧಾನಸಭೆಯ ಅವಧಿ ಬರುವ ಮೇ ಮಾಸಾಂತ್ಯಕ್ಕೆ ಮುಕ್ತಾಯವಾಗುತ್ತಿದೆ. ಈ ಅವಧಿಯೊಳಗೆ ನೂತನ ವಿಧಾನಸಭೆ ಅಸ್ತಿತ್ವಕ್ಕೆ ಬರಬೇಕಿದೆ. ಈ ಹಿನ್ನೆಲೆಯಲ್ಲಿ ಚುನಾವಣೆಯ ಪ್ರಕ್ರಿಯೆ ಆರಂಭಿಸಿರುವ ಚುನಾವಣಾ ಆಯೋಗ ಮತದಾರರ ಅಂತಿಮ ಪಟ್ಟಿಯನ್ನು ಪ್ರಕಟಿಸಿದೆ.
    ಚುನಾವಣೆಯ ವೇಳಾಪಟ್ಟಿಯನ್ನು ಪ್ರಕಟಿಸುವ ಸಂಬಂಧ ಶಾಲಾ- ಕಾಲೇಜುಗಳ ಪರೀಕ್ಷೆ ಮುಗಿಯುವ ಕುರಿತಂತೆ ಶಿಕ್ಷಣ ಇಲಾಖೆಯಿಂದ ವರದಿಯನ್ನು ಪಡೆದುಕೊಂಡಿದೆ. ಹಾಗೆಯೇ ಸಂಭವನೀಯ ಮುಂಗಾರು ಕುರಿತಂತೆಯೂ ಆಯೋಗವು ಹವಾಮಾನ ಇಲಾಖೆಯಿಂದ ವರದಿಯನ್ನು ಪಡೆದಿದೆ. ಹವಾಮಾನ ಇಲಾಖೆಯು ಪ್ರಸಕ್ತ ವರ್ಷದ ಮಾನ್ಸೂನ್ ಮಾರುತಗಳು ಮೇ ಕೊನೆಯ ವಾರದಲ್ಲಿ ಕೇರಳ ಪ್ರವೇಶಿಸಲಿದ್ದು, ಜೂನ್ ಮೊದಲ ವಾರದಲ್ಲಿ ಕರ್ನಾಟಕ ಪ್ರವೇಶಿಸಲಿವೆ, ಅದರೊಳಗೆ ಚುನಾವಣೆಯ ಪ್ರಕ್ರಿಯೆಯನ್ನು ಪೂರ್ಣಗೊಳಿಸುವಂತೆ ಹವಾಮಾನ ಇಲಾಖೆ ವರದಿ ನೀಡಿದೆ.

    ಅದೇ ರೀತಿ ಪ್ರಸಕ್ತ ಶೈಕ್ಷಣಿಕ ವರ್ಷದ ಪರೀಕ್ಷೆ ಸೇರಿದಂತೆ ಇತರೆ ಚಟುವಟಿಕೆಗಳು ಏಪ್ರಿಲ್‌ ಕೊನೆಯ ವಾರಕ್ಕೆ ಮುಕ್ತಾಯವಾಗಲಿವೆ. ಆನಂತರದಲ್ಲಿ ಶಾಲಾ ಕೊಠಡಿಗಳು ಹಾಗೂ ಶಿಕ್ಷಕರು, ಮತ್ತಿತರ ನೌಕರರು ಲಭ್ಯವಾಗಲಿದ್ದಾರೆ ಎಂದು ಹೇಳಿದೆ. ಈ ಎಲ್ಲಾ ವರದಿಗಳನ್ನು ಪಡೆದುಕೊಂಡಿರುವ ಆಯೋಗ, ರಾಜ್ಯ ಬಜೆಟ್ ಅಧಿವೇಶನದ ಬಗ್ಗೆ ಕಾಯುತ್ತಿದೆ. ಈ ಅಧಿವೇಶನವು ಫೆಬ್ರವರಿ ಅಂತ್ಯ ಇಲ್ಲವೇ ಮಾರ್ಚ್ ಮೊದಲ ವಾರಕ್ಕೆ ಮುಕ್ತಾಯವಾಗಲಿದೆ. ಆನಂತರದಲ್ಲಿ ವೇಳಾಪಟ್ಟಿಯನ್ನು ಪ್ರಕಟಿಸುವ ಸಾಧ್ಯತೆಯಿದೆ.
    ಚುನಾವಣಾ ಆಯೋಗದ ಉನ್ನತ ಮೂಲಗಳ ಪ್ರಕಾರ, ಮೇ ಎರಡನೇ ವಾರದಲ್ಲಿ ಚುನಾವಣೆ ನಡೆಯಲಿದೆ. ಎರಡು ಹಂತಗಳಲ್ಲಿ ಚುನಾವಣೆ ನಡೆಯಲಿದ್ದು,ಮೇ‌ 7 ಕ್ಕೆ ಮೊದಲ ಹಂತ, ಮೇ 14 ಕ್ಕೆ ಎರಡನೇ ಹಂತದ ಮತದಾನ ನಡೆಯಲಿದ್ದು, ಮೇ 21ಕ್ಕೆ ಮತಗಳ ಎಣಿಕೆ ನಡೆಯಲಿದೆ. ಒಟ್ಟಾರೆ ಮೇ.23 ಕ್ಕೆ ಸಂಪೂರ್ಣ ಪ್ರಕ್ರಿಯೆಯನ್ನು ಪೂರ್ಣಗೊಳಿಸಿ ನೂತನ ವಿಧಾನಸಭೆ ಅಸ್ತಿತ್ವಕ್ಕೆ ಬರಲಿದೆ.

    ಮತದಾನಕ್ಕೆ 45 ದಿನಗಳ ಮೊದಲು ವೇಳಾಪಟ್ಟಿಯನ್ನು ಪ್ರಕಟಿಸಬೇಕಿದ್ದು, ಇದಕ್ಕಾಗಿ ಆಯೋಗ ಎಲ್ಲಾ ಸಿದ್ದತೆಗಳನ್ನು ನಡೆಸಿದೆ.ವೇಳಾಪಟ್ಟಿ ಪ್ರಕಟವಾದ ತಕ್ಷಣವೇ ನೀತಿ ಸಂಹಿತೆ ಜಾರಿಗೆ ಬರಲಿದೆ. ಈ ಹಿನ್ನೆಲೆಯಲ್ಲಿ ಅಷ್ಟರೊಳಗೆ ನೂತನ ಕಾರ್ಯಕ್ರಮಗಳ ಚಾಲನೆ, ಉದ್ಘಾಟನೆ, ಶಂಕುಸ್ಥಾಪನೆ ‌ಸೇರಿ ಎಲ್ಲಾ ಸರ್ಕಾರದ ಕಾರ್ಯಕ್ರಮಗಳನ್ನೂ ಮುಗಿಸಲು ಸರ್ಕಾರ ‌ಮುಂದಾಗಿದೆ. ಇದರ ನೆಪದಲ್ಲಿ ಪ್ರಧಾನಿ ನರೇಂದ್ರ ಮೋದಿ, ಗೃಹ ಸಚಿವ ಅಮಿತ್ ಶಾ,ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯ ನಾಥ್ ನೇತೃತ್ವದಲ್ಲಿ ಹಲವು ಕಾರ್ಯಕ್ರಮಗಳನ್ನು ನಡೆಸಲು ಸರ್ಕಾರ ಮತ್ತು ಬಿಜೆಪಿ ಸಿದ್ಧತೆ ನಡೆಸಿವೆ.

    ಈ ಹಿನ್ನೆಲೆಯಲ್ಲಿ ಫೆಬ್ರವರಿಯಲ್ಲಿ ಮೋದಿಯವರು ಎರಡರಿಂದ ಮೂರು ಬಾರಿ ಭೇಟಿ ನೀಡುವ ಸಾಧ್ಯತೆಗಳಿವೆ ಎಂದು ಹೇಳಲಾಗುತ್ತಿದೆ. ಮಾಜಿ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಅವರ ಜನ್ಮದಿನವಾದ ಫೆಬ್ರವರಿ 27ರಂದು ಶಿವಮೊಗ್ಗದಲ್ಲಿ ವಿಮಾನ ನಿಲ್ದಾಣವನ್ನು ಮೋದಿಯವರು ಉದ್ಘಾಟನೆ ಮಾಡಲಿದ್ದಾರೆ.
    ಬಳ್ಳಾರಿ ಜಿಲ್ಲೆಯ ಸಂಡೂರಿನಲ್ಲಿ ಗಣಿಗಾರಿಕೆ ಶಾಲೆಯೊಂದರ ಶಂಕುಸ್ಥಾಪನೆಯನ್ನೂ ಇದೇ ವೇಳೆ ಮೋದಿಯವರು ನೆರವೇರಿಸುವ ನಿರೀಕ್ಷೆಯಿದೆ. ಮೋದಿಯವರು ಪಾಲ್ಗೊಳ್ಳುವ ನಿರೀಕ್ಷೆಯಿರುವ ದಾವಣಗೆರೆಯಲ್ಲಿ ಬೃಹತ್ ಸಮಾವೇಶ ನಡೆಸುವ ಯೋಜನೆ ಇದ್ದು, ಚಿಕ್ಕಬಳ್ಳಾಪುರದ ಸರ್ಕಾರಿ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆ ಕೂಡ ಲೋಕಾರ್ಪಣೆಗೊಳ್ಳಲು ಮೋದಿಯವರ ಸಮಯಕ್ಕಾಗಿ ಕಾಯುತ್ತಿದೆ ಎಂದು ತಿಳಿದುಬಂದಿದೆ. ಫೆಬ್ರವರಿ ತಿಂಗಳಿನಲ್ಲಿ ತುಮಕೂರಿನ ಗುಬ್ಬಿ ತಾಲೂಕಿನ ಹಿಂದೂಸ್ತಾನ್ ಏರೋನಾಟಿಕಲ್ಸ್ ಲಿಮಿಟೆಡ್ ನ ಹೆಲಿಕಾಪ್ಟರ್ ಸೌಲಭ್ಯಕ್ಕೆ ಮೋದಿಯವರು ಶಂಕುಸ್ಥಾಪನೆ ನೆರವೇರಿಸಲಿದ್ದಾರೆ. ಬಹುನಿರೀಕ್ಷಿತ ಬೆಂಗಳೂರು-ಮೈಸೂರು ಎಕ್ಸ್ ಪ್ರೆಸ್ ಹೈವೇ ಬಹುತೇಕ ಸಿದ್ಧವಾಗಿದ್ದು, ಮಾರ್ಚ್ ತಿಂಗಳಿನಲ್ಲಿ ಉದ್ಘಾಟಿಸುವ ನಿರೀಕ್ಷೆಯಿದೆ.

    Verbattle
    Verbattle
    Verbattle
    Election Government Karnataka ಕಾಲೇಜು ಚುನಾವಣೆ ರಾಜಕೀಯ ಶಾಲೆ ಶಿಕ್ಷಣ
    Share. Facebook Twitter Pinterest LinkedIn Tumblr Email WhatsApp
    Previous ArticleBJPಯವರು ಕಡಲೆಕಾಯಿ ತಿನ್ನುತ್ತಿದ್ದರಾ..?
    Next Article K R Market Flyover ಮೇಲಿಂದ ಹಣದ ಸುರಿಮಳೆ.
    vartha chakra
    • Website

    Related Posts

    ಇರಾನ್ ಸಂಘರ್ಷದ ಕರಿನೆರಳು: ಭಾರತದ ಎಲ್‌ಪಿಜಿ ಮಾರುಕಟ್ಟೆ ಮತ್ತು ಪೂರೈಕೆಯ ಮೇಲಾಗುವ ಪರಿಣಾಮಗಳು

    ಮಾರ್ಚ್ 10, 2026

    ಬಾಲೆನ್ ಶಾ: ರಾಪರ್‌ನಿಂದ ನೇಪಾಳದ ರಾಜಕೀಯ ಶಕ್ತಿಯಾಗಿ ಬೆಳೆದ ಅಚ್ಚರಿಯ ನಾಯಕ

    ಮಾರ್ಚ್ 8, 2026

    ರಾಜ್ಯ ಬಜೆಟ್-ಹೊಸ ದಾಖಲೆ

    ಮಾರ್ಚ್ 6, 2026

    Comments are closed.

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಇರಾನ್ ಸಂಘರ್ಷದ ಕರಿನೆರಳು: ಭಾರತದ ಎಲ್‌ಪಿಜಿ ಮಾರುಕಟ್ಟೆ ಮತ್ತು ಪೂರೈಕೆಯ ಮೇಲಾಗುವ ಪರಿಣಾಮಗಳು

    ವಿಶ್ವ ಕ್ರಿಕೆಟ್ ಸಾಮ್ರಾಜ್ಯದ ಅಧಿಪತಿಯಾಗಿ ಭಾರತದ ಐತಿಹಾಸಿಕ ದಿಗ್ವಿಜಯ!

    ಬಾಲೆನ್ ಶಾ: ರಾಪರ್‌ನಿಂದ ನೇಪಾಳದ ರಾಜಕೀಯ ಶಕ್ತಿಯಾಗಿ ಬೆಳೆದ ಅಚ್ಚರಿಯ ನಾಯಕ

    ಸ್ವಾತಂತ್ರ್ಯದ ಹಾದಿಯಲ್ಲಿ ಮತ್ತೆ ಎಡವಿದ ಪಾಪ್ ಸುಂದರಿ?

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • DonaldPak ರಲ್ಲಿ ದೆಹಲಿಯಲ್ಲಿ ಬಿಜೆಪಿ-ಜೆಡಿಎಸ್ ಮೀಟಿಂಗ್ | BJP-JDS
    • Robertram ರಲ್ಲಿ ಅಧಿಕಾರ ಹಂಚಿಕೆ ಒಪ್ಪಂದ ಆಗಿಲ್ಲವೇ..?
    • AaronheF ರಲ್ಲಿ ಜೆಡಿಎಸ್ ಗೆ ಚಕ್ರ ಬೇಕಂತೆ!
    Latest Kannada News

    ಇರಾನ್ ಸಂಘರ್ಷದ ಕರಿನೆರಳು: ಭಾರತದ ಎಲ್‌ಪಿಜಿ ಮಾರುಕಟ್ಟೆ ಮತ್ತು ಪೂರೈಕೆಯ ಮೇಲಾಗುವ ಪರಿಣಾಮಗಳು

    ಮಾರ್ಚ್ 10, 2026

    ವಿಶ್ವ ಕ್ರಿಕೆಟ್ ಸಾಮ್ರಾಜ್ಯದ ಅಧಿಪತಿಯಾಗಿ ಭಾರತದ ಐತಿಹಾಸಿಕ ದಿಗ್ವಿಜಯ!

    ಮಾರ್ಚ್ 8, 2026

    ಬಾಲೆನ್ ಶಾ: ರಾಪರ್‌ನಿಂದ ನೇಪಾಳದ ರಾಜಕೀಯ ಶಕ್ತಿಯಾಗಿ ಬೆಳೆದ ಅಚ್ಚರಿಯ ನಾಯಕ

    ಮಾರ್ಚ್ 8, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.