ವಿಕ್ರಾಂತ್ ರೋಣದ ನಿರ್ಮಾಪಕ ಜಾಕ್ ಮಂಜು ಆಸ್ಪತ್ರೆಗೆ ದಾಖಲಾಗಿದ್ದಾರೆ. ನಟ ಕಿಚ್ಚ ಸುದೀಪ್ ಆಪ್ತರಾದ ಮಂಜು , ಬನ್ನೇರುಘಟ್ಟ ಬಳಿ ಇರುವ ಅಪೋಲೋ ಆಸ್ಪತ್ರೆಗೆ ದಾಖಲಾಗಿರುವ ಬಗ್ಗೆ ತಿಳಿದು ಬಂದಿದೆ. ಕಾರ್ಯಕ್ರಮಕ್ಕೆ ಹೋದಾಗ ಎಡವಿ ಬಿದ್ದು ಕಾಲು ಮುರಿದುಕೊಂಡಿದ್ದ ನಿರ್ಮಾಪಕ ಜಾಕ್ ಮಂಜು ಎರಡು ದಿನದಿಂದ ಆಸ್ಪತ್ರೆಯಲ್ಲಿದ್ದಾರೆ ಎಂಬ ಮಾಹಿತಿ ಇದೆ. ಕಳೆದ ನಾಲ್ಕು ದಿನಗಳಿಂದ ಜಾಕ್ ಮಂಜು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ತಿಳಿದು ಬಂದಿದೆ.
ಮಂಜು ಕಳೆದ 20 ದಿನಗಳ ಹಿಂದೆಯೇ ಎಡವಿ ಬಿದ್ದು ಕಾಲು ಮುರಿದುಕೊಂಡಿದ್ದರು ಎನ್ನಲಾಗಿದೆ. ಅದಕ್ಕೆ ಚಿಕಿತ್ಸೆಯನ್ನು ಪಡೆಯುತ್ತಿದ್ದರು, ಆದರೆ ಕಾಲಿನಲ್ಲಿ ರಕ್ತ ಹೆಪ್ಪುಗಟ್ಟಿ ಊತ ಬಂದ ಪರಿಣಾಮ ಆಸ್ಪತ್ರೆಗೆ ದಾಖಲಾಗಿದ್ದಾರೆ. ಮಂಜು ಕಾಲಿಗೆ ಸರ್ಜರಿ ಮಾಡಲಾಗಿದೆ ವೈದ್ಯರು ಚಿಕಿತ್ಸೆ ನೀಡುತ್ತಿದ್ದಾರೆ. ಜಾಕ್ ಮಂಜು ಕಳೆದ ಕೆಲವು ದಿನಗಳಿಂದ ಬಹುನಿರೀಕ್ಷೆಯ ವಿಕ್ರಾಂತ್ ರೋಣ ಸಿನಿಮಾದ ಪ್ರಮೋಷನ್ನಲ್ಲಿ ಬ್ಯುಸಿಯಾಗಿದ್ದರು. ದೇಶದಾದ್ಯಂತ ಸಂಚರಿಸುತ್ತಿದ್ದರು. ಆದರೀಗ ದಿಢೀರ್ ಆಸ್ಪತ್ರೆ ದಾಖಲಾದ ವಿಚಾರ ಅಭಿಮಾನಿಗಳಲ್ಲಿ ಆತಂಕ ಮೂಡಿಸಿದೆ. ಮಂಜು ನಿರ್ಮಾಣದ ವಿಕ್ರಾಂತ್ ರೋಣ ಹಲವು ಭಾಷೆಗಳಲ್ಲಿ ರೆಡಿಯಾಗಿ ಬಿಡುಗಡೆ ಆಗುತ್ತಿದೆ. ಅಲ್ಲದೇ, 3 ಡಿ ತಂತ್ರಜ್ಞಾನದಲ್ಲೂ ಈ ಸಿನಿಮಾವನ್ನು ರಿಲೀಸ್ ಮಾಡಲಾಗುತ್ತಿದೆ. ಅನೂಪ್ ಭಂಡಾರಿ ನಿರ್ದೇಶನದ ಚಿತ್ರ ಅಪಾರ ನಿರೀಕ್ಷೆ ಮೂಡಿಸಿದೆ.
ಕಿಚ್ಚ ಸುದೀಪ್ ಆಪ್ತ, ನಿರ್ಮಾಪಕ ಜಾಕ್ ಮಂಜು ಆಸ್ಪತ್ರೆಗೆ ದಾಖಲು
Previous Articleರಥೋತ್ಸವದ ವೇಳೆ ರಥ ಮಗುಚಿ ಬಿದ್ದು ಇಬ್ಬರ ಸಾವು, ಹಲವರಿಗೆ ಗಾಯ
Next Article ಸಜೀವ ಸಮಾಧಿ!!