ಬೆಂಗಳೂರು – ರಾಜ್ಯದಲ್ಲಿ ಆಡಳಿತ ಚುಕ್ಕಾಣಿ ಹಿಡಿದ ಕಾಂಗ್ರೆಸ್ ಸರ್ಕಾರ ಈ ಹಿಂದಿನ ಬಿಜೆಪಿ ಸರ್ಕಾರ ಮಾಡಿದ ನಿಗಮ, ಮಂಡಳಿ, ಅಕಾಡೆಮಿ, ಆಯೋಗಗಳ ನೇಮಕಾತಿಯನ್ನು ರದ್ದುಪಡಿಸಿದೆ
ಇದೇ ಮಾನದಂಡವನ್ನು ಆಧರಿಸಿ, ಬಿಜೆಪಿ ಸರ್ಕಾರ ಮಾಡಿದ್ದ ರಾಜ್ಯ ವಕ್ಫ್ ಮಂಡಳಿ ಅಧ್ಯಕ್ಷ ಮತ್ತು ಸದಸ್ಯರ ನೇಮಕಾತಿಯನ್ನು ಕಾಂಗ್ರೆಸ್ ಸರ್ಕಾರ ರದ್ದುಪಡಿಸಿತ್ತು ಆದರೆ ಇದೀಗರಾಜ್ಯ ವಕ್ಫ್ ಮಂಡಳಿ ಅಧ್ಯಕ್ಷ ಶಾಫಿ ಸಅದಿ ಸೇರಿ ನಾಲ್ವರು ಸದಸ್ಯರ ನಾಮನಿರ್ದೇಶನ ರದ್ದು ಆದೇಶವನ್ನು ಸರ್ಕಾರ ಹಿಂಪಡೆದಿದೆ.
ರಾಜ್ಯ ವಕ್ಫ್ ಮಂಡಳಿ ಅಧ್ಯಕ್ಷ ಶಾಫಿ ಸಅದಿ ಸೇರಿದಂತೆ ಮೀರ್ ಅಝರ್ ಹುಸೈನ್, ಜಿ.ಯಾಕೂಬ್ ಹಾಗೂ ಐಎಎಸ್ ಅಧಿಕಾರಿ ಝೆಹೆರಾ ನಸೀಮ್ ಅವರ ನಾಮ ನಿರ್ದೇಶನವನ್ನು ರದ್ದುಗೊಳಿಸಿದ ಆದೇಶ ರದ್ದುಗೊಂಡಿದೆ ರಾಜ್ಯ ಸರ್ಕಾರದ ಈ ನಡೆ ಇದೀಗ ಹಲವು ಅನುಮಾನಗಳಿಗೆ ಕಾರಣವಾಗಿದೆ.
ನೂತನ ರಾಜ್ಯ ಸರ್ಕಾರದಲ್ಲಿ ಪ್ರಭಾವಿಯಾಗಿರುವ ಕೆಲವು ವ್ಯಕ್ತಿಗಳೊಂದಿಗೆ ತೆರೆಮರೆಯಲ್ಲಿ ರಾಜ್ಯ ವಕ್ಫ್ ಮಂಡಳಿ ಅಧ್ಯಕ್ಷ ಸೇರಿದಂತೆ ಕೆಲವರು ನಡೆಸಿದ ಮಾತುಕತೆ ಪರಿಣಾಮವಾಗಿ ಈ ಆದೇಶ ರದ್ದುಗೊಂಡಿದೆ ಎಂದು ಹೇಳಲಾಗುತ್ತಿದೆ ಒಟ್ಟಾರೆ ಈ ಮಾತುಕತೆಯ ಅಂಶವೇ ಇದೀಗ ಚರ್ಚೆಯ ವಸ್ತುವಾಗಿದೆ
ಆದರೆ ರಾಜ್ಯ ಸರ್ಕಾರದ ಪ್ರತಿನಿಧಿಗಳು ಹೇಳುವ ಸಮರ್ಪನೆ ಬೇರೆಯಾಗಿದೆ.ರಾಜ್ಯ ವಕ್ಫ್ ಬೋರ್ಡ್ ಸ್ವಾಯತ್ತ ಸಂಸ್ಥೆಯಾಗಿದ್ದು, ಸದಸ್ಯರ ಅಧಿಕಾರ ಅವಧಿಯು 5 ವರ್ಷಗಳಾಗಿರುತ್ತದೆ. ಈ ವಿಷಯವು ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಗಮನಕ್ಕೆ ಬಂದ ಹಿನ್ನೆಲೆಯಲ್ಲಿ ವಕ್ಫ್ ಬೋರ್ಡ್ ಸದಸ್ಯರ ನಾಮ ನಿರ್ದೇಶನ ರದ್ದುಗೊಳಿಸಿ ಹೊರಡಿಸಲಾಗಿದ್ದ ಅಧಿಸೂಚನೆಯನ್ನು ಹಿಂಪಡೆದು ಆದೇಶ ಹೊರಡಿಸಲಾಗಿದೆ. ಎಂದು ಹೇಳಲಾಗುತ್ತಿದೆ.