ಲಕ್ನೋ,ಜೂ.8- ಜ್ಞಾನವಾಪಿ ಮಸೀದಿ ಪ್ರಕರಣಕ್ಕೆ ಸಂಬಂಧಿಸಿದಂತೆ ಸಮೀಕ್ಷೆಗಾಗಿ ಆಯೋಗವನ್ನು ರಚಿಸಲು ಆದೇಶಿಸಿದ್ದ ವಾರಣಾಸಿಯ ನ್ಯಾಯಾಧೀಶರಿಗೆ ಜೀವ ಬೆದರಿಕೆ ಪತ್ರಗಳು ಬಂದಿದೆ.
ಜ್ಞಾನವಾಪಿ ಮಸೀದಿ ಆವರಣದಲ್ಲಿರುವ ಶೃಂಗಾರ ಗೌರಿ ಹಾಗೂ ಇತರ ದೇವತೆಗಳ ಆರಾಧನೆಗೆ ಮಹಿಳೆಯರು ಹಕ್ಕು ಚಲಾಯಿಸಿದ ಪ್ರಕರಣದಲ್ಲಿ ಸಿವಿಲ್ ನ್ಯಾಯಾಧೀಶ (ಹಿರಿಯ ವಿಭಾಗ) ರವಿಕುಮಾರ್ ದಿವಾಕರ್ ಸಮೀಕ್ಷೆಯ ಆಯೋಗಕ್ಕೆ ಆದೇಶಿಸಿದ್ದರು. ಈ ಹಿನ್ನೆಲೆಯಲ್ಲಿ ಸಿವಿಲ್ ನ್ಯಾಯಾಧೀಶರಿಗೆ ಇಸ್ಲಾಮಿಕ್ ಅಘಾಜ್ ಎಂಬ ಸಂಘಟನೆಯಿಂದ ಬೆದರಿಕೆ ಪತ್ರ ಬಂದಿದೆ.
ಕಳೆದ ಮೇ 20ರಂದು ಸುಪ್ರೀಂ ಕೋರ್ಟ್ ಜ್ಞಾನವಾಪಿ ಪ್ರಕರಣವನ್ನು ಸಿವಿಲ್ ನ್ಯಾಯಾಲಯದಿಂದ ವಾರಣಾಸಿಯ ಜಿಲ್ಲಾ ನ್ಯಾಯಾಲಯಕ್ಕೆ ವರ್ಗಾಯಿಸಿತ್ತು. ಈ ಹಿನ್ನೆಲೆಯಲ್ಲಿ ವಾರಣಾಸಿ ಜಿಲ್ಲಾ ನ್ಯಾಯಾಧೀಶರು ಜ್ಞಾನವ್ಯಾಪಿ ಮಸೀದಿಗೆ ಸಂಬಂಧಿಸಿ ಸಮೀಕ್ಷೆಯನ್ನು ಮಾಡಲು ಆಯೋಗವನ್ನು ರಚಿಸಲು ಆದೇಶಿಸಿದ್ದರು. ಈ ಬೆನ್ನಲ್ಲೇ ಸಿವಿಲ್ ನ್ಯಾಯಾಧೀಶರಿಗೆ ಬೆದರಿಕೆ ಕರೆಗಳು ಬಂದಿವೆ. ಈ ಹಿನ್ನೆಲೆಯಲ್ಲಿ ತಕ್ಷಣ ಅವರು ಪೊಲೀಸ್ ಮಹಾನಿರ್ದೇಶಕರು ಮತ್ತು ವಾರಣಾಸಿಯ ಪೊಲೀಸ್ ಆಯುಕ್ತರಿಗೆ ಮಾಹಿತಿ ನೀಡಿದ್ದಾರೆ.
ವಾರಣಾಸಿಯ ಪೊಲೀಸ್ ಕಮಿಷನರ್ ಎ. ಸತೀಶ್ ಗಣೇಶ್ ಈ ಬಗ್ಗೆ ಮಾಹಿತಿ ನೀಡಿ, ನ್ಯಾಯಾಧೀಶರಿಗೆ ಬೆದರಿಕೆ ಪತ್ರಗಳು ಬಂದ ಹಿನ್ನೆಲಯಲ್ಲಿ, ಈ ಬಗ್ಗೆ ತನಿಖೆ ನಡೆಸಲು ಪೊಲೀಸ್ ಉಪ ಆಯುಕ್ತರಿಗೆ ತಿಳಿಸಲಾಗಿದ್ದು, ಹೆಚ್ಚಿನ ಭದ್ರತೆಯನ್ನು ನಿಯೋಜಿಸಲಾಗಿದೆ.
ಸಂಗ್ರಹಗಳು
- ಮಾರ್ಚ್ 2026
- ಫೆಬ್ರವರಿ 2026
- ಜನವರಿ 2026
- ಡಿಸೆಂಬರ್ 2025
- ನವೆಂಬರ್ 2025
- ಅಕ್ಟೋಬರ್ 2025
- ಸೆಪ್ಟೆಂಬರ್ 2025
- ಆಗಷ್ಟ್ 2025
- ಜುಲೈ 2025
- ಜೂನ್ 2025
- ಮೇ 2025
- ಏಪ್ರಿಲ್ 2025
- ಮಾರ್ಚ್ 2025
- ಫೆಬ್ರವರಿ 2025
- ಜನವರಿ 2025
- ಡಿಸೆಂಬರ್ 2024
- ನವೆಂಬರ್ 2024
- ಅಕ್ಟೋಬರ್ 2024
- ಸೆಪ್ಟೆಂಬರ್ 2024
- ಆಗಷ್ಟ್ 2024
- ಜುಲೈ 2024
- ಜೂನ್ 2024
- ಮೇ 2024
- ಏಪ್ರಿಲ್ 2024
- ಮಾರ್ಚ್ 2024
- ಫೆಬ್ರವರಿ 2024
- ಜನವರಿ 2024
- ಡಿಸೆಂಬರ್ 2023
- ನವೆಂಬರ್ 2023
- ಅಕ್ಟೋಬರ್ 2023
- ಸೆಪ್ಟೆಂಬರ್ 2023
- ಆಗಷ್ಟ್ 2023
- ಜುಲೈ 2023
- ಜೂನ್ 2023
- ಮೇ 2023
- ಏಪ್ರಿಲ್ 2023
- ಮಾರ್ಚ್ 2023
- ಫೆಬ್ರವರಿ 2023
- ಜನವರಿ 2023
- ಡಿಸೆಂಬರ್ 2022
- ನವೆಂಬರ್ 2022
- ಅಕ್ಟೋಬರ್ 2022
- ಸೆಪ್ಟೆಂಬರ್ 2022
- ಆಗಷ್ಟ್ 2022
- ಜುಲೈ 2022
- ಜೂನ್ 2022
- ಮೇ 2022
- ಏಪ್ರಿಲ್ 2022

