Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಸತೀಶ್ ಅಣ್ಣ ಏನು ಹೇಳಿದ್ರೂ ಎಸ್ ಅಂತಾರಂತೆ ಲಕ್ಷ್ಮಿ | Lakshmi Hebbalkar
    Viral

    ಸತೀಶ್ ಅಣ್ಣ ಏನು ಹೇಳಿದ್ರೂ ಎಸ್ ಅಂತಾರಂತೆ ಲಕ್ಷ್ಮಿ | Lakshmi Hebbalkar

    vartha chakraBy vartha chakraಅಕ್ಟೋಬರ್ 19, 20231 ಟಿಪ್ಪಣಿ2 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp

    ಬೆಂಗಳೂರು,ಅ.19 – ರಾಜ್ಯ ರಾಜಕಾರಣದಲ್ಲಿ ಬೆಳಗಾವಿ ರಾಜಕಾರಣ ಮತ್ತೊಮ್ಮೆ ದೊಡ್ಡ ಪ್ರಮಾಣದಲ್ಲಿ ಸದ್ದು‌ ಮಾಡತೊಗಿದೆ. ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ (Lakshmi Hebbalkar) ಜಿಲ್ಲೆಯಲ್ಲಿ ಪ್ರಾಬಲ್ಯ ಸಾಧಿಸಲು ನಡೆಸುತ್ತಿರುವ ಚಟುವಟಿಕೆಗಳಿಂದ ಅಸಮಧಾನಗೊಂಡಿರು ಸತೀಶ್ ಜಾರಕಿಹೊಳಿ‌ ಆಪ್ತ ಶಾಸಕರ ಪ್ರವಾಸದೊಂದಿಗೆ ಸೆಡ್ಡು ಹೊಡೆಯಲು ಮಾಡಿದ ಪ್ರಯತ್ನ ಕುತೂಹಲ ಮೂಡಿಸಿದೆ.

    ಹೈಕಮಾಂಡ್ ಸೂಚನೆ ಮೇರೆಗೆ ಆಪ್ತ ಶಾಸಕರ ಜೊತೆಗಿನ ಪ್ರವಾಸ ಮುಂದೂಡಿರುವ ಅವರ ಮುಂದಿನ ನಡೆ, ಸರ್ಕಾರದ ಪ್ರಮುಖರನ್ನು ಇಕ್ಕಟ್ಟಿಗೆ ಸಿಲುಕಿಸಿದೆ. ಇದರ ಬೆನ್ನಲ್ಲೇ ಈ ಗೊಂದಲಕ್ಕೆ ತೆರೆ ಎಳೆಯಲು ಪ್ರಯತ್ನಿಸಿರುವ ಮಂತ್ರಿ ಲಕ್ಷ್ಮಿ ಹೆಬ್ಬಾಳ್ಕರ್ ನಮ್ಮಲ್ಲಿ ಯಾವುದೇ ಭಿನ್ನಾಭಿಪ್ರಾಯ ಇಲ್ಲ. ಸತೀಶ್ ಅಣ್ಣಾ ಹೇಳಿದ್ದಕ್ಕೆಲ್ಲಾ ನಾನು ಎಸ್ ಎನ್ನುತ್ತಿದ್ದೇನೆ ಎಂದು ಹೇಳಿದ್ದಾರೆ.ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ‌ ಹಾಗೂ ನನ್ನ ನಡುವೆ ಯಾವುದೇ ಭಿನ್ನಾಭಿಪ್ರಾಯ‌ ಇಲ್ಲ, ಜಿಲ್ಲೆಯಲ್ಲಿ ಪಕ್ಷದ ಎಲ್ಲಾ ಶಾಸಕರು ಒಗ್ಗಟ್ಟಾಗಿ ಕೆಲಸ ಮಾಡಿಕೊಂಡು ಹೋಗುತ್ತಿದ್ದೇವೆ ಎಂದು ಸ್ಪಷ್ಟಪಡಿಸಿದರು.

    ನನಗೆ ಬಹಳ ಒಳ್ಳೆ ಖಾತೆ ಕೊಟ್ಟಿದ್ದಾರೆ. ಉಡುಪಿ ಜಿಲ್ಲಾ ಉಸ್ತುವಾರಿ ವಹಿಸಿದ್ದಾರೆ. ಸತೀಶ ಜಾರಕಿಹೊಳಿ ಅವರು ಆರು ಬಾರಿ ಶಾಸಕರು, ನಾನು ಎರಡು ಬಾರಿ ಶಾಸಕಿಯಾಗಿ, ಮೊದಲ ಬಾರಿ ಸಚಿವೆ ಆಗಿರುವೆ, ಸತೀಶಣ್ಣ ಬಹಳ ಅನುಭವ ಇರುವವರು, ಅವರ ನೇತೃತ್ವದಲ್ಲಿ ನಾವೆಲ್ಲ ಒಂದಾಗಿ ಕೆಲಸ ಮಾಡುತ್ತಿದ್ದೇವೆ ಎಂದು ತಿಳಿಸಿದರು.
    ಜಿಲ್ಲೆಗೆ ಯಾವುದೇ ಅಧಿಕಾರಿಯನ್ನು ಸತೀಶ್ ಜಾರಕಿಹೊಳಿ ಅವರು ಹಾಕಿದಾಗ ನಾನು ಎಸ್ ಎನ್ನುತ್ತೇನೆ. ನಾನು ಯಾವುದೇ ಅಧಿಕಾರಿ ಹಾಕಿದಾಗ ಅವರು ಎಸ್ ಎನ್ನುತ್ತಾರೆ. ಅದೇ ಕಾಂಪ್ರಮೈಸ್ ಅಷ್ಟೇ ಎಂದು ಹೇಳಿದರು.
    ಸಹೋದರ ಚನ್ನರಾಜ್ ಹಟ್ಟಿಹೊಳಿ ಅವರ ಎಂಎಲ್ಸಿ ಚುನಾವಣೆಯಿಂದ ಹಿಡಿದು ಇಲ್ಲಿ ತನಕ ಒಂದೇ ಒಂದು ವಿಚಾರದಲ್ಲೂ ಸತೀಶ್ ಅವರ ಜೊತೆ ಭಿನ್ನಾಭಿಪ್ರಾಯಗಳು ಬಂದಿಲ್ಲ. ನಾನು ಗಟ್ಡಿ ಧ್ಚನಿಯಲ್ಲಿ ಸ್ಪಷ್ಟಪಡಿಸ್ತೇನೆ, ಒಂದೇ ಒಂದು ವಿಚಾರದಲ್ಲೂ ನನ್ನ ಸತೀಶಣ್ಣ ಮಧ್ಯೆ ಭಿನ್ನಾಭಿಪ್ರಾಯ ಇಲ್ಲ ಎಂದು ಪುನರುಚ್ಚರಿಸಿದರು.

    ನಾನು ಯಾವುದಾದರೂ ಹಸ್ತಕ್ಷೇಪ ಮಾಡಿದ್ದೀನಾ? ಜಿಲ್ಲಾಡಳಿತದಲ್ಲೇನಾದ್ರೂ ನನ್ನಿಂದ ತೊಂದರೆ ಆಗ್ತಿದೆಯಾ ಅಂತ ಮತ್ತೊಮ್ಮೆ ಸಚಿವರನ್ನೆ ಕೇಳಿ ಎಂದ ಅವರು, ಬೆಳಗಾವಿ ರಾಜಕೀಯ ವಿಷಯಕ್ಕೆ ಉಪ ಮುಖ್ಯಮಂತ್ರಿ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ರನ್ನು ಯಾಕೆ ಎಳೆದು ತರ್ತೀರಾ ಎಂದು ಪ್ರಶ್ನಿಸಿದರು.
    ನಿನ್ನೆ ಬೆಳಗಾವಿಯಲ್ಲಿ ಡಿ.ಕೆ.ಶಿವಕುಮಾರ್ ಅವರ ಸ್ವಾಗತಕ್ಕೆ ಜಿಲ್ಲೆಯ ಶಾಸಕರು ಹೋಗದ ವಿಚಾರಕ್ಕೆ ಪ್ರತಿಕ್ರಿಯಿಸಿದ ಅವರು, ಮುಜುಗರ ಅನ್ನೋ ಶಬ್ದ ರಾಜಕಾರಣದಲ್ಲಿ ಇಲ್ಲ. ಅದರ ಹೊರತಾಗಿ ನಾವು ರಾಜಕಾರಣ ಮಾಡಬೇಕಾಗುತ್ತದೆ. ಒಂದು ತಿಂಗಳು ಮೊದಲೇ ನನ್ನ ಮೊಮ್ಮಗಳ ನಾಮಕರಣ ನಿಗದಿಯಾಗಿತ್ತು. ಹೀಗಾಗಿ ನಾನು ಭದ್ರಾವತಿಗೆ ಹೋದೆ.

    ಉಸ್ತುವಾರಿ ಸಚಿವರೂ ಕೂಡ ಮೊದಲೇ ತಿಳಿಸಿದ್ದರು, ಅವರು ಬೆಂಗಳೂರಲ್ಲೇ ಇದ್ರು. ದಸರಾ ಹಬ್ಬ, ವಿವಿಧ ಕಾರಣಗಳಿಂದ ಇತರ ಶಾಸಕರು ಹೋಗಿರಲಿಲ್ಲ. ನಾನು ಅಧ್ಯಕ್ಷರಿಗೆ ಮುಂಚಿತವಾಗಿ ಗಮನಕ್ಕೆ ತಂದಿದ್ದೆ ಎಂದು ಸಚಿವರು ಹೇಳಿದರು. ‌
    ಡಿ ಕೆ ಶಿವಕುಮಾರ್ ವಿರುದ್ಧ ಸಿಬಿಐ ತನಿಖೆಗೆ ಕೋರ್ಟ್ ಅನುಮತಿ ನೀಡಿರುವ ಕುರಿತು ಪ್ರತಿಕ್ರಿಯಿಸಿದ ಸಚಿವರು, ಡಿ.ಕೆ.ಶಿವಕುಮಾರ್ ಸಮರ್ಥರಿದ್ದಾರೆ. ಯಾವುದೇ ಕಾನೂನು ಹೋರಾಟವಾದರೂ ಸಮರ್ಥವಾಗಿ ಎದುರಿಸುತ್ತಾರೆ.‌ ಎಲ್ಲವನ್ನೂ ನಿಭಾಯಿಸುತ್ತಾರೆ. ಸಂವಿಧಾನ ಕಾನೂನಿನ ಬಗ್ಗೆ ಗೌರವವಿದೆ. ಸಮರ್ಥವಾಗಿ ನಿಭಾಯಿಸಿ ಜಯಶಾಲಿಯಾಗಿ ಹೊರಬರ್ತಾರೆ ಎಂದು  ಹೇಳಿದರು.

    Lakshmi Hebbalkar m mi ಉಡುಪಿ ಕಾನೂನು ಚುನಾವಣೆ ರಾಜಕೀಯ
    Share. Facebook Twitter Pinterest LinkedIn Tumblr Email WhatsApp
    Previous ArticleMudpipe Cafe ದುರಂತ BBMP ಅಧಿಕಾರಿಗಳ ತಲೆದಂಡ
    Next Article ದಾರಿ ಕಾಣದಾದ ಸಿ.ಎಂ. ಇಬ್ರಾಹಿಂ | CM Ibrahim
    vartha chakra
    • Website

    Related Posts

    ಜಾತಿ ಸಮೀಕ್ಷೆ ಅವಧಿ ವಿಸ್ತರಣೆ.

    ಅಕ್ಟೋಬರ್ 7, 2025

    ಕಾಫ್ ಸಿರಪ್ ಬಗ್ಗೆ ಎಚ್ಚರಿಕೆ ಇರಲಿ.

    ಅಕ್ಟೋಬರ್ 7, 2025

    ಫೆಬ್ರುವರಿಯಲ್ಲಿ ರಶ್ಮಿಕಾ ಮದುವೆ.

    ಅಕ್ಟೋಬರ್ 4, 2025

    1 ಟಿಪ್ಪಣಿ

    1. Diplomi_oami on ನವೆಂಬರ್ 22, 2025 5:37 ಫೂರ್ವಾಹ್ನ

      вкладыш в диплом купить вкладыш в диплом купить .

      Reply

    Leave A Reply Cancel Reply

    ವಿಭಾಗಗಳು
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಜಾತಿ ಸಮೀಕ್ಷೆ ಅವಧಿ ವಿಸ್ತರಣೆ.

    ಕಾಫ್ ಸಿರಪ್ ಬಗ್ಗೆ ಎಚ್ಚರಿಕೆ ಇರಲಿ.

    ಫೆಬ್ರುವರಿಯಲ್ಲಿ ರಶ್ಮಿಕಾ ಮದುವೆ.

    ಹೈಕಮಾಂಡ್ ಮುಂದೆ ಶಿವಕುಮಾರ್ ಗರಂ.

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Diplomi_oumi ರಲ್ಲಿ ಕುಂಭಮೇಳದಲ್ಲಿ ಕಿನ್ನರ ಕಲರವ
    • australia cigerettes deliery ರಲ್ಲಿ ಬದಲಾವಣೆಯ ಬೌಂಡರಿ ಬಾರಿಸಲು ಮನ್ಸೂರ್ ಕರೆ | Mansoor Khan
    • Diplomi_ssmi ರಲ್ಲಿ ಮತದಾನಕ್ಕೆ ಹೇಗೆಲ್ಲಾ ವ್ಯವಸ್ಥೆ ಮಾಡಲಾಗಿದೆ ಗೊತ್ತಾ | Lok Sabha Elections 2024
    Latest Kannada News

    ಜಾತಿ ಸಮೀಕ್ಷೆ ಅವಧಿ ವಿಸ್ತರಣೆ.

    ಅಕ್ಟೋಬರ್ 7, 2025

    ಕಾಫ್ ಸಿರಪ್ ಬಗ್ಗೆ ಎಚ್ಚರಿಕೆ ಇರಲಿ.

    ಅಕ್ಟೋಬರ್ 7, 2025

    ಫೆಬ್ರುವರಿಯಲ್ಲಿ ರಶ್ಮಿಕಾ ಮದುವೆ.

    ಅಕ್ಟೋಬರ್ 4, 2025
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.

    Vartha Chakra

    ಎಡಕ್ಕೂ ಇಲ್ಲ ಬಲಕ್ಕೂ ಇಲ್ಲ, ಬರಿ ನೇರ ನೇರ - ಅದೇ ವಾರ್ತಾಚಕ್ರ
    ಕನ್ನಡದ ಅನನ್ಯ ನ್ಯೂಸ್ ಚಾನಲ್
    ಸತ್ಯ ಶುದ್ದ ಶಿಷ್ಠ
    #Kannada #Kannadiga #Bangalore #Bengaluru #Kannadanews #Karnataka

    Vartha Chakra
    Kannada Digital News Channel - Curated, Managed and Operated by Professional Journalists ಇನ್ನಷ್ಟು ನಂಬಲರ್ಹ ಸುದ್ದಿಗಳಿಗಾಗಿ ಭೇಟಿ ನೀಡಿ www.varthachakra.com
    ಮುಖ್ಯಮಂತ್ರಿಗೆ ಶುಭ ಕೋರಿದ ಡಿಸಿಎಂ #varthachakra #dkshivakumar #siddaramaiah #wishing #latestnews #facts
    Subscribe