ಬೆಂಗಳೂರು,ಅ.19 – ರಾಜ್ಯ ರಾಜಕಾರಣದಲ್ಲಿ ಬೆಳಗಾವಿ ರಾಜಕಾರಣ ಮತ್ತೊಮ್ಮೆ ದೊಡ್ಡ ಪ್ರಮಾಣದಲ್ಲಿ ಸದ್ದು ಮಾಡತೊಗಿದೆ. ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ (Lakshmi Hebbalkar) ಜಿಲ್ಲೆಯಲ್ಲಿ ಪ್ರಾಬಲ್ಯ ಸಾಧಿಸಲು ನಡೆಸುತ್ತಿರುವ ಚಟುವಟಿಕೆಗಳಿಂದ ಅಸಮಧಾನಗೊಂಡಿರು ಸತೀಶ್ ಜಾರಕಿಹೊಳಿ ಆಪ್ತ ಶಾಸಕರ ಪ್ರವಾಸದೊಂದಿಗೆ ಸೆಡ್ಡು ಹೊಡೆಯಲು ಮಾಡಿದ ಪ್ರಯತ್ನ ಕುತೂಹಲ ಮೂಡಿಸಿದೆ.
ಹೈಕಮಾಂಡ್ ಸೂಚನೆ ಮೇರೆಗೆ ಆಪ್ತ ಶಾಸಕರ ಜೊತೆಗಿನ ಪ್ರವಾಸ ಮುಂದೂಡಿರುವ ಅವರ ಮುಂದಿನ ನಡೆ, ಸರ್ಕಾರದ ಪ್ರಮುಖರನ್ನು ಇಕ್ಕಟ್ಟಿಗೆ ಸಿಲುಕಿಸಿದೆ. ಇದರ ಬೆನ್ನಲ್ಲೇ ಈ ಗೊಂದಲಕ್ಕೆ ತೆರೆ ಎಳೆಯಲು ಪ್ರಯತ್ನಿಸಿರುವ ಮಂತ್ರಿ ಲಕ್ಷ್ಮಿ ಹೆಬ್ಬಾಳ್ಕರ್ ನಮ್ಮಲ್ಲಿ ಯಾವುದೇ ಭಿನ್ನಾಭಿಪ್ರಾಯ ಇಲ್ಲ. ಸತೀಶ್ ಅಣ್ಣಾ ಹೇಳಿದ್ದಕ್ಕೆಲ್ಲಾ ನಾನು ಎಸ್ ಎನ್ನುತ್ತಿದ್ದೇನೆ ಎಂದು ಹೇಳಿದ್ದಾರೆ.ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಹಾಗೂ ನನ್ನ ನಡುವೆ ಯಾವುದೇ ಭಿನ್ನಾಭಿಪ್ರಾಯ ಇಲ್ಲ, ಜಿಲ್ಲೆಯಲ್ಲಿ ಪಕ್ಷದ ಎಲ್ಲಾ ಶಾಸಕರು ಒಗ್ಗಟ್ಟಾಗಿ ಕೆಲಸ ಮಾಡಿಕೊಂಡು ಹೋಗುತ್ತಿದ್ದೇವೆ ಎಂದು ಸ್ಪಷ್ಟಪಡಿಸಿದರು.
ನನಗೆ ಬಹಳ ಒಳ್ಳೆ ಖಾತೆ ಕೊಟ್ಟಿದ್ದಾರೆ. ಉಡುಪಿ ಜಿಲ್ಲಾ ಉಸ್ತುವಾರಿ ವಹಿಸಿದ್ದಾರೆ. ಸತೀಶ ಜಾರಕಿಹೊಳಿ ಅವರು ಆರು ಬಾರಿ ಶಾಸಕರು, ನಾನು ಎರಡು ಬಾರಿ ಶಾಸಕಿಯಾಗಿ, ಮೊದಲ ಬಾರಿ ಸಚಿವೆ ಆಗಿರುವೆ, ಸತೀಶಣ್ಣ ಬಹಳ ಅನುಭವ ಇರುವವರು, ಅವರ ನೇತೃತ್ವದಲ್ಲಿ ನಾವೆಲ್ಲ ಒಂದಾಗಿ ಕೆಲಸ ಮಾಡುತ್ತಿದ್ದೇವೆ ಎಂದು ತಿಳಿಸಿದರು.
ಜಿಲ್ಲೆಗೆ ಯಾವುದೇ ಅಧಿಕಾರಿಯನ್ನು ಸತೀಶ್ ಜಾರಕಿಹೊಳಿ ಅವರು ಹಾಕಿದಾಗ ನಾನು ಎಸ್ ಎನ್ನುತ್ತೇನೆ. ನಾನು ಯಾವುದೇ ಅಧಿಕಾರಿ ಹಾಕಿದಾಗ ಅವರು ಎಸ್ ಎನ್ನುತ್ತಾರೆ. ಅದೇ ಕಾಂಪ್ರಮೈಸ್ ಅಷ್ಟೇ ಎಂದು ಹೇಳಿದರು.
ಸಹೋದರ ಚನ್ನರಾಜ್ ಹಟ್ಟಿಹೊಳಿ ಅವರ ಎಂಎಲ್ಸಿ ಚುನಾವಣೆಯಿಂದ ಹಿಡಿದು ಇಲ್ಲಿ ತನಕ ಒಂದೇ ಒಂದು ವಿಚಾರದಲ್ಲೂ ಸತೀಶ್ ಅವರ ಜೊತೆ ಭಿನ್ನಾಭಿಪ್ರಾಯಗಳು ಬಂದಿಲ್ಲ. ನಾನು ಗಟ್ಡಿ ಧ್ಚನಿಯಲ್ಲಿ ಸ್ಪಷ್ಟಪಡಿಸ್ತೇನೆ, ಒಂದೇ ಒಂದು ವಿಚಾರದಲ್ಲೂ ನನ್ನ ಸತೀಶಣ್ಣ ಮಧ್ಯೆ ಭಿನ್ನಾಭಿಪ್ರಾಯ ಇಲ್ಲ ಎಂದು ಪುನರುಚ್ಚರಿಸಿದರು.
ನಾನು ಯಾವುದಾದರೂ ಹಸ್ತಕ್ಷೇಪ ಮಾಡಿದ್ದೀನಾ? ಜಿಲ್ಲಾಡಳಿತದಲ್ಲೇನಾದ್ರೂ ನನ್ನಿಂದ ತೊಂದರೆ ಆಗ್ತಿದೆಯಾ ಅಂತ ಮತ್ತೊಮ್ಮೆ ಸಚಿವರನ್ನೆ ಕೇಳಿ ಎಂದ ಅವರು, ಬೆಳಗಾವಿ ರಾಜಕೀಯ ವಿಷಯಕ್ಕೆ ಉಪ ಮುಖ್ಯಮಂತ್ರಿ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ರನ್ನು ಯಾಕೆ ಎಳೆದು ತರ್ತೀರಾ ಎಂದು ಪ್ರಶ್ನಿಸಿದರು.
ನಿನ್ನೆ ಬೆಳಗಾವಿಯಲ್ಲಿ ಡಿ.ಕೆ.ಶಿವಕುಮಾರ್ ಅವರ ಸ್ವಾಗತಕ್ಕೆ ಜಿಲ್ಲೆಯ ಶಾಸಕರು ಹೋಗದ ವಿಚಾರಕ್ಕೆ ಪ್ರತಿಕ್ರಿಯಿಸಿದ ಅವರು, ಮುಜುಗರ ಅನ್ನೋ ಶಬ್ದ ರಾಜಕಾರಣದಲ್ಲಿ ಇಲ್ಲ. ಅದರ ಹೊರತಾಗಿ ನಾವು ರಾಜಕಾರಣ ಮಾಡಬೇಕಾಗುತ್ತದೆ. ಒಂದು ತಿಂಗಳು ಮೊದಲೇ ನನ್ನ ಮೊಮ್ಮಗಳ ನಾಮಕರಣ ನಿಗದಿಯಾಗಿತ್ತು. ಹೀಗಾಗಿ ನಾನು ಭದ್ರಾವತಿಗೆ ಹೋದೆ.
ಉಸ್ತುವಾರಿ ಸಚಿವರೂ ಕೂಡ ಮೊದಲೇ ತಿಳಿಸಿದ್ದರು, ಅವರು ಬೆಂಗಳೂರಲ್ಲೇ ಇದ್ರು. ದಸರಾ ಹಬ್ಬ, ವಿವಿಧ ಕಾರಣಗಳಿಂದ ಇತರ ಶಾಸಕರು ಹೋಗಿರಲಿಲ್ಲ. ನಾನು ಅಧ್ಯಕ್ಷರಿಗೆ ಮುಂಚಿತವಾಗಿ ಗಮನಕ್ಕೆ ತಂದಿದ್ದೆ ಎಂದು ಸಚಿವರು ಹೇಳಿದರು.
ಡಿ ಕೆ ಶಿವಕುಮಾರ್ ವಿರುದ್ಧ ಸಿಬಿಐ ತನಿಖೆಗೆ ಕೋರ್ಟ್ ಅನುಮತಿ ನೀಡಿರುವ ಕುರಿತು ಪ್ರತಿಕ್ರಿಯಿಸಿದ ಸಚಿವರು, ಡಿ.ಕೆ.ಶಿವಕುಮಾರ್ ಸಮರ್ಥರಿದ್ದಾರೆ. ಯಾವುದೇ ಕಾನೂನು ಹೋರಾಟವಾದರೂ ಸಮರ್ಥವಾಗಿ ಎದುರಿಸುತ್ತಾರೆ. ಎಲ್ಲವನ್ನೂ ನಿಭಾಯಿಸುತ್ತಾರೆ. ಸಂವಿಧಾನ ಕಾನೂನಿನ ಬಗ್ಗೆ ಗೌರವವಿದೆ. ಸಮರ್ಥವಾಗಿ ನಿಭಾಯಿಸಿ ಜಯಶಾಲಿಯಾಗಿ ಹೊರಬರ್ತಾರೆ ಎಂದು ಹೇಳಿದರು.
6 ಪ್ರತಿಕ್ರಿಯೆಗಳು
i-tec.ru multimedijnyj-integrator.ru .
вывод из запоя https://vyvod-iz-zapoya-rostov11.ru/ .
вывод из запоя в стационаре анонимно вывод из запоя в стационаре анонимно .
вывод из запоя в санкт петербурге вывод из запоя в санкт петербурге .
снятие ломок http://www.snyatie-lomki-narkolog.ru/ .
недорогие семена интернет магазин semenaplus74.ru .