ಬೆಂಗಳೂರು,ಜ.19- ಕರ್ನಾಟಕದಲ್ಲಿರುವುದು ಕಾಂಗ್ರೆಸ್ ಸರ್ಕಾರವೇ ಅಥವಾ ಆರ್ ಎಸ್ ಎಸ್ ಸರ್ಕಾರವೇ..? ಹೇಗೆಂದು ಪ್ರಶ್ನಿಸಿರುವುದು ಕಾಂಗ್ರೆಸ್ ಹಿರಿಯ ನಾಯಕ ಬಿ.ಕೆ.ಹರಿಪ್ರಸಾದ್. ನಾನು ಯಾವ ಸರ್ಕಾರದಲ್ಲಿ ಇದ್ದೇನೆ ಎಂದು ಅರ್ಥವಾಗುತ್ತಿಲ್ಲ ಎಂದು ಕಿಡಿಕಾರಿರುವ ಅವರು, ಪ್ರಚೋದನಕಾರಿ ಹೇಳಿಕೆ ನೀಡಿರುವ ಕಲ್ಲಡ್ಕ ಪ್ರಭಾಕರ್ ಭಟ್, ಬಿಜೆಪಿ ಸಂಸದ ಅನಂತಕುಮಾರ್ ಹೆಗಡೆ ವಿರುದ್ಧ ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ಆಪಾದಿಸಿದ್ದಾರೆ.
ಕುಮಾರಕೃಪಾ ಅತಿಥಿ ಗೃಹದಲ್ಲಿ ಅವರು ತಂಗಿರುವ ಕುರಿತಂತೆ ಮಾಹಿತಿ ಪಡೆದ ಬೆಂಗಳೂರು ಸಿಸಿಬಿ ಪೊಲೀಸರು,ಅವರ ಹೇಳಿಕೆ ದಾಖಲಿಸಲು ಮುಂದಾದರು.
ಅಯೋಧ್ಯೆಯ ರಾಮ ಮಂದಿರ ಉದ್ಘಾಟನೆ ವೇಳೆ ಗೋಧ್ರಾ ರೀತಿಯ ಘಟನೆ ಸಂಭವಿಸುವ ಸಾಧ್ಯತೆ ಇದೆ ಎಂದು ಅವರು ನೀಡಿದ್ದ ಹೇಳಿಕೆ ಬಗ್ಗೆ ಸಿಸಿಬಿ ಪೊಲೀಸರು ವಿಚಾರಣೆ ನಡೆಸಲು ಮುಂದಾದ ಪೊಲೀಸರು,ಸಿಸಿಬಿ ಕಚೇರಿಗೆ ಬರುವಂತೆ ಕರೆದರು.
ಇದರ ವಿರುದ್ಧ ಆಕ್ರೋಶಗೊಂಡ ಹರಿಪ್ರಸಾದ್ ರಾಜ್ಯದ ಜನರ ಸುರಕ್ಷತೆ ದೃಷ್ಟಿಯಿಂದ ಹೇಳಿಕೆ ನೀಡಿದ್ದೆ. ಈಗ ನನಗೆ ವಿವಿಐಪಿ ಆತಿಥ್ಯ ಬೇಕಿಲ್ಲ. ಪ್ರಕರಣ ದಾಖಲಿಸಿ, ವಾರೆಂಟ್ ತಂದು ಠಾಣೆಗೆ ಕರೆದೊಯ್ಯಿರಿ. ಅಲ್ಲಿಯೇ ವಿವರಣೆ ನೀಡುತ್ತೇನೆ’ ಎಂದರು.
ನಾನು ಠಾಣೆಗೆ ಬರುವೆ, ಆದರೆ, ನನ್ನ ಜೊತೆಗೆ ಬಿಜೆಪಿ ರಾಜ್ಯಾಧ್ಯಕ್ಷರಾಗಿರುವ ಬಿ.ವೈ ವಿಜಯೇಂದ್ರ ಅವರನ್ನು ಕೂಡಾ ಕರೆಸಬೇಕು ಎಂದು ಪೊಲೀಸರಿಗೆ ತಿಳಿಸಿದರು.ಹೀಗಾಗಿ ಪೊಲೀಸರು ಬಂದ ದಾರಿಗೆ ಸುಂಕವಿಲ್ಲ ಎಂಬಂತೆ ಹಿಂತಿರುಗಿದರು.
ಇದಾದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ರಾಜ್ಯ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದರು. ಇದು ಕಾಂಗ್ರೆಸ್ ಸರ್ಕಾರವೇ ಅಥವಾ ಆರ್ಎಸ್ಎಸ್ ಸರ್ಕಾರವೇ ಎಂದು ಪ್ರಶ್ನಿಸಿದರು. ನಾನು ಯಾವ ಸರ್ಕಾರದಲ್ಲಿ ಇದ್ದೇನೆ ಎಂದು ಅರ್ಥವಾಗುತ್ತಿಲ್ಲ. ಬೇಕಿದ್ದರೆ ನನ್ನನ್ನು ಮಂಪರು ಪರೀಕ್ಷೆ ಮಾಡಿ ಎಂದು ಪೊಲೀಸರಿಗೆ ಹೇಳಿದ್ದೇನೆ. ಸ್ಟೇಷನ್ಗೆ ಕರೆದುಕೊಂಡು ಹೋಗಿ ವಿಚಾರಣೆ ನಡೆಸಲಿ. ನನ್ನ ಜತೆಗೆ ವಿಜಯೇಂದ್ರ ಅವರನ್ನು ಕೂಡ ಮಂಪರು ಪರೀಕ್ಷೆಗೆ ಒಳಪಡಿಸಲಿ. ನನ್ನ ಪರಿಸ್ಥಿತಿಯೇ ಹೀಗಾದರೆ ಕಾಂಗ್ರೆಸ್ ಕಾರ್ಯಕರ್ತರ ಕಥೆ ಏನು ಎಂದು ಪ್ರಶ್ನಿಸಿದರು.
ಪ್ರಚೋದನಕಾರಿ ಹೇಳಿಕೆ ನೀಡಿರುವ ಕಲ್ಲಡ್ಕ ಪ್ರಭಾಕರ್ ಭಟ್ ಬಿಜೆಪಿ ಸಂಸದ ಅನಂತಕುಮಾರ್ ಹೆಗಡೆ ವಿರುದ್ಧ ಯಾವುದೇ ಕ್ರಮ ಆಗಿಲ್ಲ ಎಂದು ಆಕ್ಷೇಪಿಸಿದ ಅವರು ಇವರ ಬೆದರಿಕೆಗಳಿಗೆಲ್ಲ ನಾನು ಜಗ್ಗಲ್ಲ. ಅಂದು ಕೊಟ್ಟ ಹೇಳಿಕೆಗೆ ನಾನು ಬದ್ಧನಾಗಿದ್ದೇನೆ. ರಾಮ ಮಂದಿರಕ್ಕೆ ಹೋಗುವವರಿಗೆ ಸೂಕ್ತ ರಕ್ಷಣೆ ನೀಡಬೇಕು ಎಂದು ಹೇಳಿದರು.
ನನ್ನ ಪರಿಸ್ಥಿತಿ ಈ ರೀತಿಯಾದರೆ, ಸಾಮಾನ್ಯ ಕಾರ್ಯಕರ್ತನ ಪರಿಸ್ಥಿತಿ ಹೇಗೆ ಎನ್ನುವ ಚಿಂತೆ ಶುರುವಾಗಿದೆ. ನಾನು ಯಾರ ಜತೆ ಸಹ ಈ ಬಗ್ಗೆ ಚರ್ಚೆ ಮಾಡಿಲ್ಲ ಎಂದರು.


6 ಪ್ರತಿಕ್ರಿಯೆಗಳು
casino betmgm betmgm-play betmgm login
Feel the energy of live streams and interactive sessions. In crown coins casino online, community events foster fun competitions. Register for your share of the prizes!
Sweet Bonanza is the ultimate treat for slot fans: colorful, volatile, and wildly rewarding. Free spins play sweet bonanza turn small bets into huge hauls. Your sugar rush starts here!
Chumba Casino: free coins, huge excitement, real prizes. Claim your welcome macumba bonus and discover why everyone’s talking about us. Join today!
Join DraftKings casino promo Casino and level up your game. Wager $5 to unlock 500 bonus spins on Cash Eruption, with up to $1K credits covering first-day net losses. The action never stops!
Prestante preplacet! Generika za super ceny > opravdovalekarna.cz
Xenical genericky