ಬೆಂಗಳೂರು:ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (ಮುಡಾ) ಅಕ್ರಮ ಪ್ರಕರಣದ ಜಾರಿ ನಿರ್ದೇಶನಾಲಯ(ಇಡಿ) ತನಿಖೆಯು ತೀವ್ರಗೊಂಡ ಬೆನ್ನಲ್ಲೇ, 50:50 ಅನುಪಾತದಲ್ಲಿ ಅಕ್ರಮವಾಗಿ ಹಂಚಿಕೆ ಮಾಡಿರುವ ಸುಮಾರು 1,500ಕ್ಕೂ ಹೆಚ್ಚು ನಿವೇಶನಗಳನ್ನು ಜಪ್ತಿ ಮಾಡಲು ರಾಜ್ಯ ಸರ್ಕಾರ ಮುಂದಾಗಿದೆ.
50:50 ಅನುಪಾತದಲ್ಲಿ ಅಕ್ರಮವಾಗಿ ಹಂಚಿಕೆಯಾಗಿರುವ ಎಲ್ಲಾ ಸೈಟ್‌ಗಳನ್ನು ಹಿಂದಕ್ಕೆ ಪಡೆಯುವ ಬಗ್ಗೆ ಅಗತ್ಯ ಕ್ರಮ ಕೈಗೊಳ್ಳುವಂತೆ ನಗರಾಭಿವೃದ್ಧಿ ಕಾರ್ಯದರ್ಶಿಗಳಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸೂಚನೆ ನೀಡಿದ್ದಾರೆ.
ಮೈಸೂರು ನಗರದ ಬಿಜೆಪಿ ಶಾಸಕ ಟಿ.ಎಸ್.ಶ್ರೀವತ್ಸ ಅವರು ಬರೆದ ಪತ್ರದಲ್ಲಿ ಸೈಟು ವಾಪಸ್ ಪಡೆಯುವ ಕ್ರಮಕ್ಕೆ ಸರ್ಕಾರ ಮುಂದಾಗಿದೆ. ಖುದ್ದು ಮುಖ್ಯಮಂತ್ರಿಗಳೇ ಕ್ರಮಕ್ಕೆ ಲಿಖಿತ ಸೂಚನೆ.
2020 ರಿಂದ 2024 ರ ಅವಧಿಯಲ್ಲಿ 50:50 ಅನುಪಾತದಲ್ಲಿ ಸುಮಾರು 1,500ಕ್ಕೂ ಹೆಚ್ಚು ಸೈಟುಗಳು ಹಂಚಿಕೆಯಾಗಿವೆ, ಮುಖ್ಯಮಂತ್ರಿಗಳೇ ಖುದ್ದು ಕ್ರಮಕ್ಕೆ ಲಿಖಿತ ಸೂಚನೆ ನೀಡಿದ್ದಾರೆ. ಯಾವುದೇ ಅಕ್ರಮವಾಗಿ ಹಂಚಿಕೆಯಾಗಿರುವ ಎಲ್ಲಾ ಸೈಟ್‌ಗಳು ಶೀಘ್ರದಲ್ಲೇ ಜಪ್ತಿಯಾಗುತ್ತಾ? ಎಂದು ಕಾದುನೋಡಬೇಕಿ ದೆ.