ಬೆಂಗಳೂರು ಗ್ರಾಮಾಂತರ (Bengaluru Rural) ಲೋಕಸಭಾ ಕ್ಷೇತ್ರ ದೇಶದಲ್ಲೇ ಅತ್ಯಂತ ದೊಡ್ಡ ಕ್ಷೇತ್ರ ಮಾತ್ರವಲ್ಲದೆ ಜಿದ್ದಾಜಿದ್ದಿನ ಪೈಪೋಟಿಗೂ ಹೆಸರುವಾಸಿಯಾಗಿದೆ.ಅದರಲ್ಲೂ ಮಾಜಿ ಪ್ರಧಾನಿ ದೇವೇಗೌಡ ಮತ್ತು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಈ ಕ್ಷೇತ್ರದಲ್ಲಿ ಸಾಂಪ್ರದಾಯಿಕ ಎದುರಾಳಿಗಳು.
ಈಗ ಮತ್ತೊಮ್ಮೆ ಜೆಡಿಎಸ್ ನಾಯಕ ಎಚ್.ಡಿ. ದೇವೇಗೌಡ ಮತ್ತು ಕಾಂಗ್ರೆಸ್ ನಾಯಕ ಡಿ.ಕೆ. ಶಿವಕುಮಾರ್ ಕುಟುಂಬದ ನಡುವಣ ಪ್ರತಿಷ್ಠಿತ ಕಣವಾಗಿ ಮಾರ್ಪಟ್ಟಿದೆ.
ಈ ಬಾರಿ ದೇವೇಗೌಡರ ಅಳಿಯ, ಜಯದೇವ ಹೃದ್ರೋಗ ಆಸ್ಪತ್ರೆಯ ನಿವೃತ್ತ ನಿರ್ದೇಶಕ ಡಾ. ಸಿ.ಎನ್. ಮಂಜುನಾಥ್ ಬಿಜೆಪಿ ಟಿಕೆಟ್‌ನೊಂದಿಗೆ ರಾಜಕೀಯ ಇನ್ನಿಂಗ್ಸ್ ಶುರು ಮಾಡಿದ್ದಾರೆ. ಇವರಿಗೆ ಎದುರಾಳಿಯಾಗಿ ಉಪ ಮುಖ್ಯಮಂತ್ರಿ ಶಿವಕುಮಾರ್ ಅವರ ಸಹೋದರ ಹಾಲಿ ಸಂಸದ ಡಿ.ಕೆ. ಸುರೇಶ್ ಕಣದಲ್ಲಿದ್ದಾರೆ.
ನಾಲ್ಕನೇ ಸಲ ಕಣಕ್ಕಿಳಿದಿರುವ ಸುರೇಶ್ ಇದೇ ಮೊದಲ ಬಾರಿಗೆ ಪ್ರಬಲ ಪೈಪೋಟಿ ಎದುರಿಸುತ್ತಿದ್ದಾರೆ.
ಕ್ಷೇತ್ರದಲ್ಲಿ ಒಟ್ಟು 27 ಲಕ್ಷದ 63 ಸಾವಿರದ 910 ಮತದಾರರಿದ್ದಾರೆ.ಇದರಲ್ಲಿ ಒಕ್ಕಲಿಗ ಸಮುದಾಯದ ಮತದಾರರ ಸಂಖ್ಯೆ 7ಲಕ್ಷದ 10 ಲಕ್ಷ ಸಾವಿರವಿದ್ದರೆ, ನಂತರದಲ್ಲಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಕ್ಕೆ ಸೇರಿದ 5.20 ಲಕ್ಷ ಮತದಾರರಿದ್ದಾರೆ. ಕುರುಬ,ತಿಗಳ,ದೇವಾಂಗ ಸೇರಿದಂತೆ ಇತರೆ ಹಿಂದುಳಿದ ವರ್ಗಗಳ 5ಲಕ್ಷ, ಲಿಂಗಾಯತರು – 2.6 ಲಕ್ಷ ಮತ್ತು ಮುಸ್ಲಿಂ ಸಮುದಾಯದ 2.5 ಲಕ್ಷ ಮತದಾರರಿದ್ದಾರೆ.ಇಬ್ಬರೂ ಪ್ರಬಲ ಒಕ್ಕಲಿಗ ಸಮುದಾಯಕ್ಕೆ ಸೇರಿದವರಾಗಿದ್ದು ತಮ್ಮ ಸಮುದಾಯದ ಮತಗಳ ಮೇಲೆ ಗಮನ ಕೇಂದ್ರೀಕರಿಸಿದ್ದಾರೆ.
ಇಲ್ಲೊಂದು ವಿಶೇಷವೆಂದರೆ ದೇವೇಗೌಡರ ಕುಟುಂಬ ಸದಸ್ಯರಾದ ಡಾ. ಮಂಜುನಾಥ್ ಬಿಜೆಪಿ ಅಭ್ಯರ್ಥಿಯಾಗಿ ಕಣದಲ್ಲಿದ್ದಾರೆ. ದೇವೇಗೌಡರು ಜೆಡಿಎಸ್‌ನ ರಾಷ್ಟ್ರೀಯ ಅಧ್ಯಕ್ಷರಾದರೆ, ಪುತ್ರ ಎಚ್.ಡಿ. ಕುಮಾರಸ್ವಾಮಿ ರಾಜ್ಯ ಘಟಕದ ಅಧ್ಯಕ್ಷ.
ಮತ್ತೊಂದೆಡೆ ಕಾಂಗ್ರೆಸ್ ಅಭ್ಯರ್ಥಿ ಡಿ.ಕೆ.ಸುರೇಶ್ ಅವರ ಸೋದರ ಉಪ ಮುಖ್ಯಮಂತ್ರಿ ಶಿವಕುಮಾರ್ ಕಾಂಗ್ರೆಸ್ ರಾಜ್ಯ ಘಟಕದ ಅಧ್ಯಕ್ಷ.
ಇದರಿಂದಾಗಿ ಕ್ಷೇತ್ರವು ಹೈ ವೋಲ್ಟೇಜ್ ಆಗಿದೆ.
ಇನ್ನೂ ಕಳೆದ ಮೂರು ದಶಕಗಳಿಂದ ಇಲ್ಲಿನ ರಾಜಕಾರಣ ಈ ಎರಡೂ ಕುಟುಂಬಗಳ ನಡುವೆ ನಡೆದಿದೆ.ಒಂದು ಬಾರಿ ಅದು 2019ರಲ್ಲಿ ನಡೆದ ಲೋಕಸಭಾ ಚುನಾವಣೆಯನ್ನು ಹೊರತುಪಡಿಸಿ ಬೇರೆಲ್ಲಾ ಚುನಾವಣೆಯಲ್ಲಿ ಈ ಎರಡೂ ಕುಟುಂಬಗಳೇ ಎದುರಾಳಿ 2019ರಲ್ಲಿ ನಡೆದ ಲೋಕಸಭಾ ಚುನಾವಣೆ ಸಮಯದಲ್ಲಿ ರಾಜ್ಯದಲ್ಲಿ ಕಾಂಗ್ರೆಸ್ ಮತ್ತು ಜೆಡಿಎಸ್ ಮೈತ್ರಿ ಸರ್ಕಾರವಿತ್ತು.ಹೀಗಾಗಿ ಅಂದಿನ ಚುನಾವಣೆಯನ್ನು ಕಾಂಗ್ರೆಸ್ ಮತ್ತು ಜೆಡಿಎಸ್ ಒಟ್ಟಾಗಿ ಎದುರಿಸಿದ್ದವು.ಆಗ ಗೆದ್ದಿದ್ದ ಸುರೇಶ್, ರಾಜ್ಯದಿಂದ ಆಯ್ಕೆಯಾಗಿದ್ದ ಏಕೈಕ ಕಾಂಗ್ರೆಸ್ ಸಂಸದರಾಗಿದ್ದರು. ನಂತರ ಸರ್ಕಾರ ಪತನಗೊಂಡು ಬಿಜೆಪಿ ಅಧಿಕಾರಕ್ಕೇರುತ್ತಿದ್ದಂತೆ, ಎರಡೂ ಕುಟುಂಬಗಳು ಮತ್ತೆ ಎದುರಾಳಿಯಾಗಿವೆ.
ದೇಶದ ಅತಿದೊಡ್ಡ ಲೋಕಸಭಾ ಕ್ಷೇತ್ರಗಳ ಪೈಕಿ ಕನಕಪುರ ಲೋಕಸಭಾ ಕ್ಷೇತ್ರ ಕೂಡ ಒಂದಾಗಿತ್ತು. ಆದ್ರೆ ಕ್ಷೇತ್ರ ಪುನರ್ ವಿಂಗಡನೆಯಾದ ನಂತರ ಕನಕಪುರ ಲೋಕಸಭಾ ಕ್ಷೇತ್ರ ಹೋಗಿ ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರವಾಗಿದೆ. ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರ ಒಟ್ಟು 8 ವಿಧಾನಸಭಾ ಕ್ಷೇತ್ರಗಳನ್ನು ಒಳಗೊಂಡಿದೆ. ರಾಮನಗರ ಜಿಲ್ಲೆಯ ನಾಲ್ಕು ವಿಧಾನಸಭಾ ಕ್ಷೇತ್ರಗಳಾದ ರಾಮನಗರ, ಕನಕಪುರ, ಮಾಗಡಿ ಹಾಗೂ ಚನ್ನಪಟ್ಟಣ ಇವುಗಳ ಜೊತೆಗೆ ತುಮಕೂರಿನ ಕುಣಿಗಲ್ ಕ್ಷೇತ್ರ, ಬೆಂಗಳೂರು ದಕ್ಷಿಣ, ರಾಜರಾಜೇಶ್ವರಿ ನಗರ ಹಾಗೂ ಆನೇಕಲ್ ಕ್ಷೇತ್ರಗಳನ್ನು ಒಳಗೊಂಡಿದೆ.
ಪ್ರಸ್ತುತ ಬೆಂಗಳೂರು ದಕ್ಷಿಣ, ರಾಜರಾಜೇಶ್ವರಿ ನಗರ ವಿಧಾನಸಭೆ ಕ್ಷೇತ್ರದಲ್ಲಿ ಬಿಜೆಪಿ ಶಾಸಕರಿದ್ದರೆ, ಜೆಡಿಎಸ್ ನಾಯಕ ಕುಮಾರಸ್ವಾಮಿ ಚನ್ನಪಟ್ಟಣ ಕ್ಷೇತ್ರದ ಶಾಸಕ.ಉಳಿದೆಲ್ಲಾ ಕ್ಷೇತ್ರಗಳು ಕೈವಶದಲ್ಲಿವೆ.
ಹೀಗಾಗಿ ಮೇಲ್ನೋಟಕ್ಕೆ ಇಲ್ಲಿ ಕಾಂಗ್ರೆಸ್ ಹೆಚ್ಚು ಶಕ್ತಿ ಹೊಂದಿದೆ ಎಂಬಂತೆ ಕಂಡುಬರುತ್ತಿದೆ. ಜೊತೆಗೆ ರಾಜ್ಯ ಸರ್ಕಾರ ಜಾರಿಗೊಳಿಸಿರುವ ಗ್ಯಾರಂಟಿ ಯೋಜನೆಗಳ ಅತಿ ಹೆಚ್ಚಿನ ಸಂಖ್ಯೆಯ ಫಲಾನುಭವಿಗಳು ಇಲ್ಲಿದ್ದಾರೆ. ಇವರೆಲ್ಲರೂ ಕಾಂಗ್ರೆಸ್ ಪರವಾಗಿ ಮತ ಚಲಾಯಿಸಲಿದ್ದಾರೆ ಎಂಬ ವಿಶ್ವಾಸ ಹೊಂದಲಾಗಿದೆ. ಅಷ್ಟೇ ಅಲ್ಲ ಸಂಸದರಾಗಿ ಡಿಕೆ ಸುರೇಶ್ ಅವರು ಕ್ಷೇತ್ರದಲ್ಲಿ ಕೈಗೊಂಡಿರುವ ಹಲವಾರು ಅಭಿವೃದ್ಧಿ ಯೋಜನೆಗಳು ಜನಸಾಮಾನ್ಯರ ಸಂಕಷ್ಟಕ್ಕೆ ತಕ್ಷಣವೇ ಸ್ಪಂದಿಸುವ ಗುಣ ಕೈ ಹಿಡಿಯಲಿದೆ ಎಂಬ ಖಚಿತ ವಿಶ್ವಾಸದಲ್ಲಿದ್ದಾರೆ.
ಇದಕ್ಕೆ ಪ್ರತಿಯಾಗಿ ಕ್ಷೇತ್ರದಲ್ಲಿ ಜೆಡಿಎಸ್ ಸಾಕಷ್ಟು ಪ್ರಭಾವ ಹೊಂದಿದೆ. ಚನ್ನಪಟ್ಟಣ ರಾಮನಗರ ಮಾಗಡಿ ಕುಣಿಗಲ್ ಕ್ಷೇತ್ರಗಳಲ್ಲಿ ಜೆಡಿಎಸ್ ಅತ್ಯಧಿಕ ಸಂಖ್ಯೆಯ ಮತ ಪಡೆಯುವ ಸಾಧ್ಯತೆ ಇದೆ ಇದರ ಜೊತೆಗೆ ಬೆಂಗಳೂರು ದಕ್ಷಿಣ ಮತ್ತು ರಾಜರಾಜೇಶ್ವರಿ ನಗರ ಬಿಜೆಪಿಯ ಭದ್ರಕೋಟೆಯಾಗಿದೆ. ಹೀಗಾಗಿ ಬಿಜೆಪಿ ಅಭ್ಯರ್ಥಿಯಾಗಿರುವ ಜೆಡಿಎಸ್ ನ ದೊಡ್ಡ ಕುಟುಂಬದ ಸದಸ್ಯ ಮಂಜುನಾಥ್ ಅವರಿಗೆ ಅನುಕೂಲಕರವಾದ ವಾತಾವರಣ ಇದೆ ಎಂದು ಹೇಳಲಾಗುತ್ತಿದೆ.
ಜಯದೇವ ಆಸ್ಪತ್ರೆಯ ಮುಖ್ಯಸ್ಥರಾಗಿ ಡಾ. ಮಂಜುನಾಥ್ ಅವರು ರೋಗಿಗಳಿಗೆ ಸ್ಪಂದಿಸಿರುವ ವೈಖರಿ ಹಾಗೂ ಅವರ ಜನಪ್ರಿಯತೆ ಮತಗಳಾಗಿ ಪರಿವರ್ತನೆಯಾಗಲಿದೆ ಇದರ ಜೊತೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಪರವಾದ ಅಲೆ ಕಾಣಿಸುತ್ತಿತ್ತು ಅದು ಕೂಡ ತಮ್ಮ ಗೆಲುವಿಗೆ ಸಹಕಾರಿಯಾಗಲಿದೆ ಎಂಬ ವಿಶ್ವಾಸದಲ್ಲಿದ್ದಾರೆ ಜೆಡಿಎಸ್ ನಾಯಕರು.
ಸತತ ಮೂರು ಅವಧಿಗೆ ಸಂಸದರಾಗಿರುವ ಡಿ.ಕೆ. ಸುರೇಶ್ ಅವರಿಗೆ ಸಹಜವಾಗಿಯೇ ಆಡಳಿತ ವಿರೋಧಿ ಅಲೆ ಎದುರಾಗಿದೆ ಇದರ ಜೊತೆಯಲ್ಲಿ ಅವರ ಸೋದರ ಹಾಗೂ ಉಪಮುಖ್ಯಮಂತ್ರಿಯಾಗಿರುವ ಡಿಕೆ ಶಿವಕುಮಾರ್ ಅವರ ಬಗ್ಗೆ ಕ್ಷೇತ್ರದಲ್ಲಿ ಒಂದು ರೀತಿಯಾದ ಅಸಹನೆ ಕೇಳಿಬರುತ್ತದೆ ಕ್ಷೇತ್ರದಲ್ಲಿನ ಶಾಸಕರು ಕೂಡ ಆಡಳಿತ ವಿರೋಧಿ ಅಲೆಯ ಅನುಭವ ಎದುರಿಸುತ್ತಿದ್ದಾರೆ ಈ ಎಲ್ಲವೂ ಕಾಂಗ್ರೆಸ್ ವಿರೋಧಿ ಮತಗಳಾಗಿ ಪರಿವರ್ತನೆಯಾಗಿ ಡಾ. ಮಂಜುನಾಥ್ ಅವರನ್ನು ಗೆಲುವಿನ ದಡ ಸೇರಿಸಲಿದೆ ಎಂದು ವ್ಯಾಖ್ಯಾನಿಸಲಾಗುತ್ತಿದೆ.
ಈ ಎಲ್ಲಾ ವ್ಯಾಖ್ಯಾನಗಳು ಲೆಕ್ಕಾಚಾರಗಳು ಹೊಂದಾಣಿಕೆ ಏನೇ ಇದ್ದರೂ ಕ್ಷೇತ್ರದಲ್ಲಿನ ಮತದಾರ ಮಾತ್ರ ಅತ್ಯಂತ ಪ್ರಜ್ಞಾವಂತ ಮತ್ತು ಆಶ್ಚರ್ಯ ಫಲಿತಾಂಶಕ್ಕೆ ಹೆಸರುವಾಸಿಯಾಗಿದ್ದಾನೆ ಕ್ಷೇತ್ರದ ಇತಿಹಾಸ ಗಮನಿಸಿದಾಗ ಎಂದಿಗೂ ಕೂಡ ರಾಜಕೀಯ ಪಕ್ಷಗಳ ಲೆಕ್ಕಾಚಾರಗಳು ಸರಿಯಾಗಿಲ್ಲ ಮತದಾರನ ಅಭಿಪ್ರಾಯ ಎಲ್ಲವನ್ನು ತಲೆಕೆಳಗು ಮಾಡಿದೆ ಹೀಗಾಗಿ ಈ ಬಾರಿ ಯಾರು ಗೆಲುವಿನ ದಡ ಸೇರಲಿದ್ದಾರೆ ಎನ್ನುವುದು ಕುತೂಹಲ ಮೂಡಿಸಿದೆ.
2 ಪ್ರತಿಕ್ರಿಯೆಗಳು
электрокарнизы цена http://www.elektrokarniz1.ru/ .
интересные идеи для бизнеса интересные идеи для бизнеса .