ಬೆಂಗಳೂರು, ಫೆ. 22-
‘ಶಾಸಕನಾಗಿ ಇದು ತಮ್ಮ ಕೊನೆಯ ಅಧಿವೇಶನ. ಇನ್ನು ಮುಂದೆ ಶಾಸಕನಾಗಿ ವಿಧಾನಸಭೆ ಪ್ರವೇಶಿಸುವುದಿಲ್ಲ’ ಎಂದು BJP ಹಿರಿಯ ನಾಯಕ ಯಡಿಯೂರಪ್ಪ (BS Yediyurappa) ಘೋಷಿಸಿದ್ದಾರೆ. ‘ಮುಂಬರುವ ಚುನಾವಣೆಗೆ ಸ್ಪರ್ಧಿಸುವುದಿಲ್ಲ. ಹೀಗಾಗಿ ನಾನು ಮತ್ತೆ ಈ ಸದನಕ್ಕೆ ಬರುವುದಿಲ್ಲ. ಆದರೆ ರಾಜ್ಯಾದ್ಯಂತ ಪ್ರವಾಸ ಮಾಡಿ BJP ನೇತೃತ್ವದ ಸರ್ಕಾರವನ್ನು ಮತ್ತೆ ಅಧಿಕಾರಕ್ಕೆ ತರುತ್ತೇನೆ’ ಎಂದು ಹೇಳಿದರು.
ಪ್ರಸಕ್ತ ಸಾಲಿನ ಬಜೆಟ್ ಮೇಲಿನ ಚರ್ಚೆಯಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ‘ನಾನು ಮತ್ತೆ ಈ ಸದನಕ್ಕೆ ಬರುವುದಿಲ್ಲ. ಈಗಾಗಲೇ ನಾನು ಚುನಾವಣೆಗೆ ನಿಲ್ಲೋದಿಲ್ಲ ಎಂದು ಹೇಳಿದ್ದೇನೆ’ ಎಂದು ಹೇಳುವಾಗ ಗದ್ಗದಿತರಾಗಿ ಭಾವುಕರಾದರು. ನಂತರ ಮಾತು ಮುಂದುವರೆಸಿದ ಅವರು, ‘ವರಿಷ್ಠರು ನನ್ನನ್ನು ಎಂದೂ ಕಡೆಗಣಿಸಿಲ್ಲ. ಯಡಿಯೂರಪ್ಪನಿಗೆ ಎಲ್ಲ ಗೌರವ ಸ್ಥಾನಮಾನ ಕೊಟ್ಟರು. ಪ್ರಧಾನಿ ನರೇಂದ್ರ ಮೋದಿ (Narendra Modi) ಮತ್ತು ಪಕ್ಷ ಅವಕಾಶ ಕೊಟ್ಟಿದ್ದಕ್ಕೆ ನಾನು ನಾಲ್ಕು ಬಾರಿ ಮುಖ್ಯಮಂತ್ರಿಯಾದೆ. ಪಕ್ಷ ನನಗೆ ಕೊಟ್ಟ ಅವಕಾಶ ಯಾರಿಗೂ ಕೊಟ್ಟಿಲ್ಲ’ ಎಂದು ಹೇಳಿದರು.
‘ಚುನಾವಣೆಗೆ ನಿಲ್ಲಲ್ಲ ಎಂದಾಕ್ಷಣ ಯಡಿಯೂರಪ್ಪ ಸುಮ್ಮನೆ ಕೂರಲ್ಲ. ರಾಜ್ಯಾದ್ಯಂತ ಪ್ರವಾಸ ಮಾಡುತ್ತೇನೆ. ಪಕ್ಷವನ್ನು ಅಧಿಕಾರಕ್ಕೆ ತರುತ್ತೇನೆ. ನಾವು ಮತ್ತೆ ಅಧಿಕಾರಕ್ಕೆ ಬರುವುದು ಸೂರ್ಯ ಚಂದ್ರ ಇರುವಷ್ಟೇ ಸತ್ಯ’ ಎಂದರು. ರಾಜ್ಯದಲ್ಲಿ BJP ಗಾಳಿ ಬೀಸುವುದನ್ನು ಆ ಕಡೆ ಕೂತಿರುವ ವಿಪಕ್ಷದವರು ನೋಡುತ್ತಾರೆ. Congress ಮತ್ತೆ ವಿಪಕ್ಷ ಸ್ಥಾನದಲ್ಲಿ ಕೂರಬೇಕಾಗುತ್ತದೆ. ನೂರಕ್ಕೆ ನೂರರಷ್ಟು ನಾವೇ ಅಧಿಕಾರಕ್ಕೆ ಬರುತ್ತೇವೆ’ ಎಂದು ಪುನರುಚ್ಚರಿಸಿದರು.
ಈ ವೇಳೆ ಎದ್ದುನಿಂತ ಕಾಂಗ್ರೆಸ್‌ನ ಪ್ರಿಯಾಂಕ ಖರ್ಗೆ (Priyank Kharge), JDS ನ ಶಿವಲಿಂಗೇಗೌಡ (Shivalinge Gowda) ಸೇರಿದಂತೆ ಹಲವು ಸದಸ್ಯರು ನೀವು ಮತ್ತೆ ಚುನಾವಣೆಗೆ ನಿಲ್ಲಬೇಕು ಎಂದು ಹೇಳಿದರು. ಅದಕ್ಕೆ ಯಾವುದೇ ಪ್ರತಿಕ್ರಿಯೆ ನೀಡದೆ ಮಾತು ಮುಂದುವರೆಸಿದ ಅವರು ‘ಸಿದ್ದರಾಮಯ್ಯ (Siddaramaiah) ನವರು ಬಾದಾಮಿ ಕ್ಷೇತ್ರದಿಂದ ಗೆದ್ದು ಬಂದಿದ್ದಾರೆ. ಅಲ್ಲಿಯೇ ಸ್ಪರ್ಧೆ ಮಾಡಬೇಕು. ನೀವು ಗೆದ್ದ ಕ್ಷೇತ್ರದಲ್ಲಿ ನಿಲ್ಲಲ್ಲ ಎಂದರೆ ಜನ ಹೇಗೆ ನಂಬುತ್ತಾರೆ. ನೀವು ಗೆದ್ದ ಕ್ಷೇತ್ರದಲ್ಲಿ ನಿಲ್ಲಿ’ ಎಂದು ಕಿವಿಮಾತು ಹೇಳಿದರು.
ರಾಜ್ಯದ budget ಎಲ್ಲ ವರ್ಗದ ಜನರನ್ನು ತಲುಪುವ ಬಜೆಟ್ ಆಗಿದೆ. ಪ್ರಾದೇಶಿಕ ಅಸಮಾನತೆ ನಿವಾರಣೆ ಮಾಡುವ ಪ್ರಯತ್ನಗಳು ಬಜೆಟ್‌ನಲ್ಲಿ ಆಗಿವೆ. ಡಬಲ್ ಇಂಜಿನ್ ಸರ್ಕಾರದ ಬಗ್ಗೆ ಸಿದ್ದರಾಮಯ್ಯ ಮಾತನಾಡಿದ್ದಾರೆ. ಮೋದಿಯವರು ಇದ್ದಿದ್ದಕ್ಕೆ ದೇಶ ಸದೃಢವಾಗಿದೆ. ಮೋದಿ ವಿಶ್ವಗುರು ಆಗಿದ್ದಾರೆ ಎಂದರು. ‘ರಾಜ್ಯದ BJP ಸರ್ಕಾರ ಉತ್ತಮ ಆಡಳಿತ ಕೊಟ್ಟಿದೆ. ನಮ್ಮ ಆಡಳಿತದಲ್ಲಿ ರಾಜ್ಯ ವಿಕಾಸ ಹೊಂದಿದೆ’ ಎಂದು ಪ್ರಶಂಸಿಸಿದರು.


2 ಪ್ರತಿಕ್ರಿಯೆಗಳು
Doświadcz luksusowego grania w Betano https://betanogame.org/pl/. Nowi gracze otrzymują hojny bonus powitalny 100% do €500 + darmowe spiny. Kręć bębnami najnowszych slotów lub dołącz do stołów live z prawdziwymi krupierami. Betano sprawia, że każdy moment jest niezapomniany.
Mostbet – o cassino que entende o que o jogador brasileiro quer – https://mostbetpt.pro/ , Mostbet: o cassino que combina emoГ§ГЈo intensa com as melhores condiГ§Гµes .