ನವದೆಹಲಿ,ಅ.27- ಅಚ್ಚರಿಯ ಹಾಗೂ ಮಹತ್ವದ ಬೆಳವಣಿಗೆಯೊಂದರಲ್ಲಿ ಮುಖ್ಯಮಂತ್ರಿ ಹಾಗೂ ಬಿಜೆಪಿ ಹಿರಿಯ ನಾಯಕ ಯಡಿಯೂರಪ್ಪ (Yediyurappa) ಅವರಿಗೆ ಕೇಂದ್ರ ಗೃಹ ಇಲಾಖೆ ಝಡ್ ಕೆಟಗರಿ ಭದ್ರತೆ ಒದಗಿಸಿದೆ. ಸದ್ಯ ರಾಜ್ಯದಲ್ಲಿ ಇಂತಹ ಭದ್ರತಾ ವ್ಯವಸ್ಥೆ ಪಡೆಯುತ್ತಿರುವರಲ್ಲಿ ಇವರೊಬ್ಬರೆ.
ಕೇಂದ್ರ ಗುಪ್ತಚರ ಇಲಾಖೆ ನೀಡಿದ ವರದಿಯನ್ನಾಧರಿಸಿ,ಅವರಿಗೆ ಝೆಡ್ ಕೆಟಗರಿ ಭದ್ರತೆಯನ್ನು ಒದಗಿಸಲಾಗಿದೆ.
ಗೃಹ ಇಲಾಖೆ ನಿರ್ದೇಶನದಂತೆ ಯಡಿಯೂರಪ್ಪ ಅವರಿಗೆ ಭದ್ರತೆ ಹೆಚ್ಚಿಸಲಾಗಿದ್ದು, ಕೇಂದ್ರ ಮೀಸಲು ಪೊಲೀಸ್ ಪಡೆ ಕಮಾಂಡೋಗಳು ಭದ್ರತೆ ಒದಗಿಸುತ್ತಾರೆ.
ಯಡಿಯೂರಪ್ಪ ಅವರ ಭದ್ರತೆಗೆ ಒಟ್ಟು 33 ಝಡ್ ಕೆಟಗರಿ ಭದ್ರತಾ ಸಿಬ್ಬಂದಿಯನ್ನು ನಿಯೋಜಿಸಲಾಗಿದೆ. ಹೆಚ್ಚುವರಿಯಾಗಿ 10 ಶಸ್ತ್ರಸಜ್ಜಿತ ಸ್ಟ್ಯಾಟಿಕ್ ಗಾರ್ಡ್‍ಗಳನ್ನು ಅವರ ನಿವಾಸದಲ್ಲಿ ಇರಿಸಲಾಗುವುದು, ಅವರಿಗೆ ಪೂರಕವಾಗಿ ಆರು ವೈಯಕ್ತಿಕ ಭದ್ರತಾ ಅಧಿಕಾರಿಗಳು ದಿನದ 24 ಗಂಟೆ ಕಾಯುತ್ತಿರುತ್ತಾರೆ.
ಸಂಭಾವ್ಯ ಬೆದರಿಕೆಗಳ ವಿರುದ್ಧ ನಿರಂತರ ಜಾಗ್ರತೆ ವಹಿಸಲು 12 ಸಶಸ್ತ್ರ ಬೆಂಗಾವಲು ಕಮಾಂಡೋಗಳನ್ನು ಮೂರು ಪಾಳಿಗಳಲ್ಲಿ ನಿಯೋಜಿಸಲಾಗುತ್ತಿದೆ. ನಿರಂತರ ಕಣ್ಗಾವಲು ಕಾಯ್ದುಕೊಳ್ಳಲು, ಇಬ್ಬರು ವೀಕ್ಷಕರನ್ನು ಶಿಫ್ಟ್‍ಗಳಲ್ಲಿ ನಿಯೋಜಿಸಲಾಗುವುದು, ಒಟ್ಟಾರೆ ಭದ್ರತಾ ಚೌಕಟ್ಟನ್ನು ಇನ್ನಷ್ಟು ಹೆಚ್ಚಿಸಲಾಗುತ್ತದೆ.