ಬೆಂಗಳೂರು, ಮಾ.22- ಲೋಕಸಭೆ ಚುನಾವಣೆಯಲ್ಲಿ ಅಭ್ಯರ್ಥಿಗಳ ಆಯ್ಕೆ ವಿಚಾರದಲ್ಲಿ ರಾಜ್ಯ ಬಿಜೆಪಿಯಲ್ಲಿ ತಲೆದೋರಿರುವ ಭಿನ್ನಮತ ಶಮನ ನಮ್ಮಿಂದ ಸಾಧ್ಯವಿಲ್ಲ. ನೀವೆ ಏನಾದರೂ ಮಾಡಿ..ಇದು ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಅವರು ಹೈಕಮಾಂಡ್ ಗೆ ಮಾಡಿರುವ ಮನವಿ.
ಪಕ್ಷದಲ್ಲಿ ಇತ್ತೀಚೆಗೆ ಕಾಣಿಸಿಕೊಂಡ ಬಿಕ್ಕಟ್ಟು ಶಮನಕ್ಕೆ ಪ್ರಯತ್ನಿಸುವಂತೆ ಹೈಕಮಾಂಡ್ ಯಡಿಯೂರಪ್ಪ ಮತ್ತು ರಾಜ್ಯ ಬಿಜೆಪಿ ಅಧ್ಯಕ್ಷ ವಿಜಯೇಂದ್ರ ಅವರಿಗೆ ಸೂಚನೆ ನೀಡಿತ್ತು. ಈ ಹಿನ್ನೆಲೆಯಲ್ಲಿ ಇಬ್ಬರೂ ಹಲವಾರು ಆಯಾಮಗಳ ಮೂಲಕ ಬಿಕ್ಕಟ್ಟು ಶಮನಕ್ಕೆ ಮಾಡಿದ ಎಲ್ಲಾ ಪ್ರಯತ್ನಗಳು ವಿಫಲವಾಗಿವೆ.
ಪ್ರಮುಖವಾಗಿ ಯಡಿಯೂರಪ್ಪ ಅವರ ತವರು ಶಿವಮೊಗ್ಗದಲ್ಲಿ ಕಾಣಿಸಿಕೊಂಡ ಭಿನ್ನಮತ ಶಮನ ಯಡಿಯೂರಪ್ಪ ಅವರಿಗೆ ಸವಾಲಾಗಿದೆ. ತಮ್ಮ ಪುತ್ರನ ವಿರುದ್ಧ ಕಣಕ್ಕಿಳಿಯಲು ಸಜ್ಜಾಗಿರುವ ಹಿರಿಯ ನಾಯಕ ಈಶ್ವರಪ್ಪ ಅವರ ಮನವೊಲಿಸಲು ಯಡಿಯೂರಪ್ಪ ಮಾಡಿದ ಎಲ್ಲಾ ಪ್ರಯತ್ನಗಳು ವಿಫಲವಾಗಿವೆ. ಈಶ್ವರಪ್ಪ ಅವರು ಯಡಿಯೂರಪ್ಪ ಅವರ ಜೊತೆ ಮಾತನಾಡಲು ಸಿದ್ಧವಿಲ್ಲ ನಾನು ಅವರ ವಿರುದ್ಧವೇ ಹೋರಾಟಕ್ಕೆ ಧುಮುಕಿದ್ದೇನೆ. ಹೀಗಾಗಿ ಅವರ ಜೊತೆ ಮಾತನಾಡುವ ಪ್ರಶ್ನೆಯೇ ಇಲ್ಲ ಎಂದು ಸಂಧಾನಕಾರರಿಗೆ ತಿಳಿಸಿರುವುದಾಗಿ ಗೊತ್ತಾಗಿದೆ.
ಅದೇ ರೀತಿಯಲ್ಲಿ ತುಮಕೂರು ಲೋಕಸಭಾ ಕ್ಷೇತ್ರದಿಂದ ಸ್ಪರ್ಧಿಸಿರುವ ಮಾಜಿ ಸಚಿವ ಸೋಮಣ್ಣ ವಿರುದ್ಧ ಬಂಡಾಯ ಸಾರಿರುವ ಮಾಜಿ ಸಚಿವ ಮಾಧುಸ್ವಾಮಿ ಅವರ ಮನವೊಲಿಸಲು ಯಡಿಯೂರಪ್ಪ ನಡೆಸಿದ ಪ್ರಯತ್ನ ವಿಫಲವಾಗಿದೆ ಯಡಿಯೂರಪ್ಪ ಮತ್ತು ಅವರ ಪುತ್ರ ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಜೊತೆಗೆ ಮಾತನಾಡಲು ಮಾಧುಸ್ವಾಮಿ ಅವರು ನಿರಾಕರಿಸಿದ್ದಾರೆ.
ದಾವಣಗೆರೆಯಲ್ಲಿ ಅಧಿಕೃತ ಅಭ್ಯರ್ಥಿ ವಿರುದ್ಧ ಬಂಡೆದ್ದಿರುವ ಯಡಿಯೂರಪ್ಪ ಅವರ ಆಪ್ತ ರೇಣುಕಾಚಾರ್ಯ ಅವರ ಮನವರಿಸಲು ಯಡಿಯೂರಪ್ಪ ಅವರ ನಡೆಸಿದ ಯತ್ನ ವಿಫಲವಾಗಿದೆ. ಬೆಳಗಾವಿಯಲ್ಲಿ ಭಿನ್ನಮತದ ಕಹಳೆ ಊದುತ್ತಿರುವ ಸಂಜಯ್ ಪಾಟೀಲ್, ಪ್ರಭಾಕರ ಕೋರೆ, ಮಹಾಂತೇಶ ಕವಟಗಿಮಠ, ಅಭಯ ಪಾಟೀಲ್ ಮತ್ತು ಈರಣ್ಣ ಕಡಾಡಿ ಅವರು ಸಂಧಾನದ ಎಲ್ಲಾ ಪ್ರಸ್ತಾಪಗಳನ್ನು ತಿರಸ್ಕರಿಸಿದ್ದಾರೆ ಎಂದು ಗೊತ್ತಾಗಿದೆ.
ಶಿವಮೊಗ್ಗ, ದಾವಣಗೆರೆ, ಕೊಪ್ಪಳ, ಬೆಳಗಾವಿ, ಬೀದರ್ ಸೇರಿದಂತೆ ಅನೇಕ ಕ್ಷೇತ್ರಗಳಲ್ಲಿ ಭಿನ್ನಮತ ತಾರಕಕ್ಕೇರಿದೆ. ಟಿಕೆಟ್ ಸಿಗದವರು ಅತೃಪ್ತಿ ವ್ಯಕ್ತಪಡಿಸಿದ್ದರೆ, ಇನ್ನು ಕೆಲವರು ಟಿಕೆಟ್ ಕೊಟ್ಟವರ ಬಗ್ಗೆ ಅಸಮಾಧಾನ ಹೊರಹಾಕಿದ್ದಾರೆ.
ಯಡಿಯೂರಪ್ಪ ಅವರ ಸೂಚನೆ ಮೇರೆಗೆ ರಾಜ್ಯ ಬಿಜೆಪಿ ಘಟಕದ ಎಲ್ಲ ನಾಯಕರು ಬಂಡಾಯ ಸಾರಿರುವ ನಾಯಕರ ಜೊತೆ ಸಂಪರ್ಕ ಸಾಧಿಸಲು ಯತ್ನಿಸಿದ ಎಲ್ಲಾ ಪ್ರಯತ್ನಗಳು ವಿಫಲವಾಗಿವೆ. ಇದರಿಂದಾಗಿ ರಾಜ್ಯ ನಾಯಕತ್ವ ಆತಂಕಕ್ಕೆ ಸಿಲುಕಿದೆ. ಒಂದು ವೇಳೆ ಭಿನ್ನಮತೀಯರು ಸ್ಪರ್ಧೆ ಮಾಡಿದರೆ ಅಧಿಕೃತ ಅಭ್ಯರ್ಥಿಗೆ ಹಿನ್ನಡೆಯಾಗಬಹುದು. ಹೀಗಾಗಿ ತುರ್ತಾಗಿ ಮಧ್ಯಪ್ರವೇಶಿಸುವಂತೆ ಕೋರಿಕೊಂಡಿದ್ದಾರೆ ಎಂದು ಉನ್ನತ ಮೂಲಗಳು ತಿಳಿಸಿವೆ.
5 ಪ್ರತಿಕ್ರಿಯೆಗಳು
Интеграция мультимедийных систем Интеграция мультимедийных систем .
лечение наркозависимости в стационаре лечение наркозависимости в стационаре .
спб нарколог вывод из запоя vyvod-iz-zapoya-v-sankt-peterburge.ru .
снятие ломки снятие ломки .
семена почтой недорого semenaplus74.ru .