ಬೆಂಗಳೂರು,ಮಾ.1- ರಾಜ್ಯದಲ್ಲಿ ಮತ್ತೆ ಅಧಿಕಾರ ಚುಕ್ಕಾಣಿ ಹಿಡಿಯಬೇಕೆಂದು ತಂತ್ರ ಮಾಡಿರುವ ಬಿಜೆಪಿ ಹೈಕಮಾಂಡ್ ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಅವರನ್ನು ಉತ್ಸವಮೂರ್ತಿ ಮಾಡಿದ್ದು, ಚುನಾವಣೆ ಮುಗಿಯುತ್ತಿದ್ದಂತೆ ಉತ್ಸವ ಮೂರ್ತಿಯನ್ನು ವಿಸರ್ಜಿಸಲಿದೆ ಎಂದು ಕಾಂಗ್ರೆಸ್ ಹೇಳಿದೆ
ಚುನಾವಣೆ ಸಮೀಪಿಸುತ್ತಿದ್ದಂತೆ ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಅವರ ಕೈ ಕಾಲು ಹಿಡಿಯುತ್ತಿರುವ ಬಿಜೆಪಿ, ಈ ಮೊದಲು ಅದೇ ಯಡಿಯೂರಪ್ಪರ ಕಣ್ಣಲ್ಲಿ ನೀರು ಹಾಕಿಸಿ, ಅಧಿಕಾರದಿಂದ ಇಳಿಸಿದ್ದೇಕೆ ಕಾಂಗ್ರೆಸ್ ಪ್ರಶ್ನಿಸಿದೆ.
ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ, ಬಿಜೆಪಿ ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಬಿ.ಎಲ್.ಸಂತೋಷರ ಮುಖ ತೋರಿಸಿದರೆ ನಾಲ್ಕು ಮತಗಳು ಸಿಗುವುದಿಲ್ಲ ಎಂಬ ವಾಸ್ತವ ಸಂಗತಿ ಅರಿವಾಗುತ್ತಲೇ ಯಡಿಯೂರಪ್ಪ ಅವರನ್ನು ಉತ್ಸವ ಮೂರ್ತಿ ಮಾಡಲು ಬಿಜೆಪಿ ಹೊರಟಿದೆ ಎಂದು ಕಿಡಿಕಾರಿದೆ.
ಬಿಜೆಪಿ ಹಿಂದೆ ಯಡಿಯೂರಪ್ಪ ಅವರನ್ನು ಹೇಗೆಲ್ಲಾ ನಡೆಸಿಕೊಂಡಿತ್ತು ಎಂಬುದನ್ನು ಜನತೆ ನೋಡಿದ್ದಾರೆ. ಮುಖ್ಯಮಂತ್ರಿಯಾಗಿದ್ದಾಗ ದೆಹಲಿಗೆ ಹೋಗಿ ವರಿಷ್ಠರನ್ನು ಭೇಟಿ ಮಾಡಲು ಸಮಯ ಕೇಳಿದರೆ, ಕನಿಷ್ಠ ಭೇಟಿಗೂ ಅವಕಾಶ ನೀಡದೆ ಅವಮಾನ ಮಾಡಲಾಗಿತ್ತು. ಈಗ ಚುನಾವಣೆ ಬರುತ್ತಿದ್ದಂತೆ ಹಾಡಿ ಹೊಗಳಲಾಗುತ್ತಿದೆ ಎಂದು ಹೇಳಿದೆ
ಚುನಾವಣೆ ಮುಗಿಯುತ್ತಿದ್ದಂತೆಯೇ ಯಡಿಯೂರಪ್ಪ ಎಂಬ ಉತ್ಸವ ಮೂರ್ತಿಯನ್ನ ಬಿಜೆಪಿ ವಿಸರ್ಜನೆ ಮಾಡಲಿದೆ ಇಂದು ಯಡಿಯೂರಪ್ಪ ಅವರ ಕಾಲು ಹಿಡಿಯುತ್ತಿರುವ ಬಿಜೆಪಿ, ಹಿಂದೆ ಕಣ್ಣೀರು ಹಾಕಿಸಿ ಯಡಿಯೂರಪ್ಪನವರ ಅಧಿಕಾರ ಕಿತ್ತುಕೊಂಡಿದ್ದೇಕೆ ಎಂಬುದನ್ನು ಉತ್ತರಿಸಲಿ.
ಅವಧಿ ಪೂರೈಸುತ್ತೇನೆ ಎನ್ನುತ್ತಿದ್ದ ಯಡಿಯೂರಪ್ಪ ಇದ್ದಕ್ಕಿದ್ದಂತೆ ದೆಹಲಿಗೆ ಹೋಗಿ ಬಂದು ರಾಜೀನಾಮೆ ಕೊಟ್ಟಿದ್ದೇಕೆ? ಕಣ್ಣೀರು ಹಾಕಿ ಗೋಳಾಡಿದ್ದೇಕೆ? ಇಂದಿಗೂ ಸಿಗದ ಉತ್ತರ ಸಿಗದ ಈ ಪ್ರಶ್ನೆಗಳಿಗೆ ಬಿಜೆಪಿ ಉತ್ತರಿಸಲಿ ಎಂದು ಸವಾಲು ಎಸೆದಿದೆ
Previous ArticleBJP ವಿಜಯಸಂಕಲ್ಪ ರಥ ಯಾತ್ರೆಗೆ ಚಾಲನೆ #vijayasankalpa
Next Article ಪೊರಕೆ ಬಿಟ್ಟು ಕಮಲ ಹಿಡಿದ ಭಾಸ್ಕರ್ ರಾವ್


1 ಟಿಪ್ಪಣಿ
The casino dreams in your brand colors now – https://gpdifluca.com/starburst-slot-review-2026/ , The jackpot is hiding — make it regret that .