ಜೂನ್ 21 ರಂದು ವಿಶ್ವಯೋಗ ದಿನಾಚಾರಣೆಯಲ್ಲಿ ಪಾಲ್ಗೊಳ್ಳಲು ಸಾಂಸ್ಕೃತಿಕ ನಗರಿ ಮೈಸೂರಿಗೆ ಪ್ರಧಾನಿ ನರೇಂದ್ರ ಮೋದಿ ಆಗಮಿಸುವ ಹಿನ್ನೆಲೆಯಲ್ಲಿ ಭದ್ರತಾ ಕಾರ್ಯಾಚರಣೆ ಚುರುಕುಗೊಂಡಿದ್ದು ಪ್ರಧಾನಿ ಮೋದಿ ಸಂಚರಿಸುವ ಪ್ರಮುಖ ರಸ್ತೆಗಳಿಗೆ ಬ್ಯಾರಿಕೇಡ್ ನಿರ್ಮಾಣ ಮಾಡಲಾಗುತ್ತಿದೆ.
ಮರದ ಪೋಲ್ ಗಳ ಮೂಲಕ ನಗರದ 100 ಅಡಿ ರಸ್ತೆ, ಏರ್ ಪೋರ್ಟ್ ರಸ್ತೆ, ಅರಮನೆ ಮುಂಭಾಗ, ಚಾಮುಂಡಿ ಬೆಟ್ಟದ ರಸ್ತೆಗಳಲ್ಲಿ ಸುಮಾರು 30 ಕಿ.ಮೀ ಬ್ಯಾರಿಕೇಡ್ ನಿರ್ಮಾಣ ಮಾಡಲಾಗುತ್ತಿದೆ. ಪ್ರಧಾನಿ ಮೋದಿ ಸಂಚರಿಸುವ ವೇಳೆ ಈ ರಸ್ತೆಗಳು ಸಂಪೂರ್ಣ ಬಂದ್ ಆಗಲಿವೆ.
ಇನ್ನು ರ್ಯಾಡಿಸನ್ ಬ್ಲೂ ಹೋಟೆಲ್ ನಲ್ಲಿ ಪ್ರಧಾನಿ ಮೋದಿ ವಾಸ್ತವ್ಯ ಹೂಡಲಿರುವ ಹಿನ್ನೆಲೆಯಲ್ಲಿ ಹೋಟೆಲ್ ಗೆ ಭದ್ರತಾ ಕಾರ್ಯಾಚರಣೆ ಚುರುಕುಗೊಂಡಿದ್ದು, ಹೋಟೆಲ್ ಮುಂಭಾಗಕ್ಕೆ ಡಾಗ್ ಹಾಗು ಬಾಂಬ್ ಸ್ಕ್ವಾಡ್ ದಳ ಬಂದಿಳಿದಿದ್ದು, ಇಡೀ ಕಟ್ಟಡದ ಹೊರ ಭಾಗದಲ್ಲಿ ಭದ್ರತಾ ತಪಾಸಣೆ ನಡೆಸಲಾಗುತ್ತಿದೆ. 6 ತಂಡಗಳ ಸುಮಾರು 50 ಸಿಬ್ಬಂದಿಗಳು ತಪಾಸಣೆ ಕಾರ್ಯದಲ್ಲಿ ತೊಡಗಿದ್ದು, ಕಟ್ಟಡದ ಸುತ್ತ, ರಸ್ತೆ ಬದಿಗಳು ಹಾಗು ಪುಟ್ ಪಾತ್ ನಲ್ಲಿ ತಪಾಸಣೆ ನಡೆಸಲಾಗುತ್ತಿದೆ.
ಮೈಸೂರಿಗೆ ಮೋದಿ ಆಗಮನ ಹಿನ್ನೆಲೆ ಹೈ ಅಲರ್ಟ್..!
Previous Articleರೋಹಿತ್ ಚಕ್ರತಿರ್ಥರನ್ನ ಬಂಧಿಸುವಂತೆ ಪ್ರತಿಭಟನೆ
Next Article ಸೈಕಲ್ ನಿಂದ ಕೆಳಗೆ ಬಿದ್ದ ಅಮೆರಿಕಾ ಅಧ್ಯಕ್ಷ