ನವದೆಹಲಿ: ವಿವಾದಿತ ಹೇಳಿಕೆ ನೀಡಿರುವ ಬಿಜೆಪಿ ಮಾಜಿ ನಾಯಕಿ ನೂಪುರ್ ಶರ್ಮಾ ಅವರನ್ನು ಸುಪ್ರೀಂ ಕೋರ್ಟ್ ತೀವ್ರವಾಗಿ ತರಾಟೆಗೆ ತೆಗೆದುಕೊಂಡಿದೆ. ನೂಪುರ್ ಶರ್ಮಾ ಸಲ್ಲಿಸಿದ ಅರ್ಜಿ ವಿಚಾರಣೆ ವೇಳೆ ಸುಪ್ರೀಂ ಕೋರ್ಟ್ ಈ ಅಭಿಪ್ರಾಯ ವ್ಯಕ್ತಪಡಿಸಿದೆ.
ನಿಮ್ಮ ಬೇಜವಾಬ್ದಾರಿ ಹೇಳಿಕೆಯಿಂದ ದೇಶದಲ್ಲಿ ಅಶಾಂತಿ ಸೃಷ್ಟಿಯಾಗಿದೆ. ಇದಕ್ಕೆ ನೀವು ಹೊಣೆ ಎಂದು ಸುಪ್ರೀಂ ಕೋರ್ಟ್ ಹೇಳಿದೆ. ಎಫ್ ಐ ಆರ್ ದಾಖಲಾಗಿದ್ದರೂ ನೂಪುರ್ ಶರ್ಮಾ ವಿರುದ್ದ ಯಾಕೆ ಕ್ರಮ ಕೈಗೊಂಡಿಲ್ಲ ಎಂದು ಸರ್ವೋಚ್ಚ ನ್ಯಾಯಾಲಯ ದೆಹಲಿ ಪೊಲೀಸರನ್ನು ಪ್ರಶ್ನಿಸಿದೆ.
ದೇಶದ ವಿವಿಧ ರಾಜ್ಯಗಳಲ್ಲಿ ದಾಖಲಾಗಿರುವ ಪ್ರಕರಣಗಳನ್ನು ದೆಹಲಿಗೆ ವರ್ಗಾಯಿಸಬೇಕು ಎಂದು ನೂಪುರ್ ಶರ್ಮಾ ಮಾಡಿರುವ ಮನವಿಯನ್ನು ಸರ್ವೋಚ್ಚ ನ್ಯಾಯಾಲಯ ತಳ್ಳಿಹಾಕಿದೆ.