ಬೆಂಗಳೂರು, ಏ.1: ಲೋಕಸಭೆ ಚುನಾವಣೆಯಲ್ಲಿ ಬೆಂಗಳೂರು ಕೇಂದ್ರ ಕ್ಷೇತ್ರಕ್ಕೆ ಈ ಬಾರಿ ಅತ್ಯಂತ ಅರ್ಹ ಅಭ್ಯರ್ಥಿಯನ್ನು ಕಾಂಗ್ರೆಸ್ ಪಕ್ಷ ಕಣಕ್ಕಿಳಿಸಿದೆ ಇದನ್ನು ಮನಗಂಡು ಪಕ್ಷದ ಎಲ್ಲಾ ಶಾಸಕರು ಮಾಜಿ ಶಾಸಕರು ಮತ್ತು ಪರಾಜಿತ ಅಭ್ಯರ್ಥಿಗಳು ಕಾಂಗ್ರೆಸ್ ಅಭ್ಯರ್ಥಿಯನ್ನು ಗೆಲ್ಲಿಸಲೇಬೇಕು ಎಂದು ವಸತಿ ಸಚಿವ ಜಮೀರ್ ಅಹ್ಮದ್ ಖಾನ್ ಮನವಿ ಮಾಡಿದ್ದಾರೆ.
ಲೋಕಸಭಾ ಕ್ಷೇತ್ರ ವ್ಯಾಪ್ತಿಯ ಹಲವು ಬಡಾವಣೆಗಳಲ್ಲಿ ಪಕ್ಷದ ಅಭ್ಯರ್ಥಿ ಮನ್ಸೂರ್ ಅಲಿಖಾನ್ ಪರವಾಗಿ ಪ್ರಚಾರ ನಡೆಸಿದ ಅವರು ಪಕ್ಷದ ಹಿರಿಯ ನಾಯಕರು ಮತ್ತು ಶಾಸಕರ ಸಭೆ ನಡೆಸಿದರು.
ಮನ್ಸೂರ್ ಅಲಿ ಖಾನ್ (Mansoor Ali Khan) ಅವರನ್ನು ಗೆಲ್ಲಿಸುವುದು ಕೆ ಕಾಂಗ್ರೆಸ್ ಪಕ್ಷದ ಎಲ್ಲರ ಜವಾಬ್ದಾರಿಯಾಗಿದೆ ಬೆಂಗಳೂರು ಕೇಂದ್ರ ಲೋಕಸಭಾ ಕ್ಷೇತ್ರ ಕೆಂದ್ರ ಲೋಕಸಭಾ ಕ್ಷೇತ್ರ ಕಾಂಗ್ರೆಸಿನ ಕ್ಷೇತ್ರ. ಆದರೆ ನಮ್ಮ ಪಕ್ಷದ ಕಾರ್ಯಕರ್ತರ ಗೊಂದಲ ಹಾಗೂ ಒಗ್ಗಟ್ಟಿನ ಕೊರತೆಯಿಂದಾಗಿ ಬಿಜೆಪಿ ಅಭ್ಯರ್ಥಿ ಗೆಲುವು ಸಾಧಿಸುತ್ತಿದ್ದಾರೆ ಈ ಬಾರಿ ಇದು ನಡೆಯಲೇ ಬಾರದು ಎಂದು ಹೇಳಿದರು.
ಕ್ಷೇತ್ರದ ವ್ಯಾಪ್ತಿಯ 8 ವಿಧಾನಸಭೆ ಕ್ಷೇತ್ರಗಳ ಪೈಕಿ ಐದರಲ್ಲಿ ಕಾಂಗ್ರೆಸ್ ಶಾಸಕರು ಇದ್ದಾರೆ ಸೋತಿರುವ ಮೂರು ಕ್ಷೇತ್ರಗಳಲ್ಲೂ ಕಾಂಗ್ರೆಸ್ ಅಭ್ಯರ್ಥಿಗಳು ಕೆಲವೇ ಮತಗಳ ಅಂತರದಲ್ಲಿ ಸೋತಿದ್ದಾರೆ ಇದನ್ನೆಲ್ಲ ಗಮನಿಸಿದರೆ ಮನ್ಸೂರ್ ಅಲಿಖಾನ್ ಗೆಲ್ಲುವುದು ಕಷ್ಟವೇನಿಲ್ಲ ಆದರೆ ನಮ್ಮ ನಾಯಕರೆಲ್ಲ ಒಗ್ಗಟ್ಟಾಗಿ ಕೆಲಸ ಮಾಡಬೇಕಿದೆ ಎಂದು ತಿಳಿಸಿದರು.
ರಾಜ್ಯದಲ್ಲಿ ಕಾಂಗ್ರೆಸ್ ನೇತೃತ್ವದ ಸರ್ಕಾರ ಜಾರಿಗೆ ತಂದಿರುವ ಗ್ಯಾರಂಟಿ ಯೋಜನೆಗಳು ಈ ಕ್ಷೇತ್ರದಲ್ಲಿ ಅತಿ ಹೆಚ್ಚಿನ ಸಂಖ್ಯೆಯ ಫಲಾನುಭವಿಗಳನ್ನು ತಲುಪಿದೆ ತಾವು ವಸತಿ ಸಚಿವರಾಗಿ ಹಲವಾರು ಯೋಜನೆಗಳನ್ನು ನೀಡಿದ್ದು ಅವುಗಳ ಬಗ್ಗೆ ಜನ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ ಅದೇ ರೀತಿಯಲ್ಲಿ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಅವರು ಮಾಡುತ್ತಿರುವ ಕೆಲಸಗಳು ಜನರ ಪ್ರೀತಿಗೆ ಪಾತ್ರವಾಗಿದೆ ಇಂತಹ ಎಲ್ಲಾ ಅನುಕೂಲಕರ ಅಂಶಗಳನ್ನು ನಮ್ಮ ಮತಗಳಾಗಿ ಪರಿವರ್ತನೆ ಮಾಡಿ ಮನ್ಸೂರ್ ಅಲಿ ಖಾನ್ ಅವರನ್ನು ಗೆಲ್ಲಿಸಬೇಕು ಎಂದು ಮನವಿ ಮಾಡಿದರು.
ಈ ವೇಳೆ ಸಚಿವರಾದ ದಿನೇಶ್ ಗುಂಡೂರಾವ್ ಬಿಡಿಎ ಅಧ್ಯಕ್ಷ ಎನ್ ಎ ಹ್ಯಾರಿಸ್ ಶಾಸಕರಾದ ರಿಜ್ವಾನ್ ಅರ್ಷದ್, ಮಾಜಿ ಮೇಯರ್ ಸಂಪತ್ ರಾಜ್ ಮಹದೇವಪುರ ಪರಾಜಿತ ಅಭ್ಯರ್ಥಿ ನಾಗೇಶ್ ಸೇರಿದಂತೆ ಹಲವಾರು ಮುಖಂಡರು ಉಪಸ್ಥಿತರಿದ್ದರು.