ಬೆಂಗಳೂರು, ಅ.14,:
ಕುಸುಮ್ ಸಿ ಯೋಜನೆಯ ಮೊದಲ ಹಂತದಲ್ಲಿ ಸ್ಥಾಪಿಸುತ್ತಿರುವ ಫೀಡರ್ ಮಟ್ಟದ ಸೋಲಾರ್ ವಿದ್ಯುತ್ ಘಟಕಗಳನ್ನು ಡಿಸೆಂಬರ್ ಅಂತ್ಯದೊಳಗೆ ಪೂರ್ಣಗೊಳಿಸುವಂತೆ ಇಂಧನ ಸಚಿವ ಕೆ.ಜೆ.ಜಾರ್ಜ್ ಅವರು ಇಲಾಖೆ ಅಧಿಕಾರಿಗಳಿಗೆ ನಿರ್ದೇಶಿಸಿದ್ದಾರೆ.
ಕುಸುಮ್ ಯೋಜನೆಗಳ ಪ್ರಗತಿ ಪರಿಶೀಲನಾ ಸಭೆಯಲ್ಲಿ ಪಾಲ್ಗೊಂಡ ಅವರು,”ಮುಂದಿನ ವರ್ಷ ಜನವರಿಯಿಂದಲೇ ವಿದ್ಯುತ್ ಬೇಡಿಕೆ ಹೆಚ್ಚಾಗುವ ನಿರೀಕ್ಷೆ ಇದ್ದು, ಅದಕ್ಕೆ ಪೂರಕವಾಗಿ ಕುಸುಮ್ ಸಿ ಅಡಿ ಪ್ರಗತಿಯಲ್ಲಿರುವ ಸೋಲಾರ್ ವಿದ್ಯುತ್ ಉತ್ಪಾದನಾ ಘಟಕಗಳನ್ನು ಆದಷ್ಟು ಬೇಗ ಪೂರ್ಣಗೊಳಿಸಿ, ಫೀಡರ್‌ಗಳಿಗೆ ವಿದ್ಯುಚ್ಛಕ್ತಿ ಒದಗಿಸಲು ಕ್ರಮ ಕೈಗೊಳ್ಳಬೇಕು,”ಎಂದು ಸೂಚಿಸಿದರು.
ಕುಸುಮ್ ಸಿ ಯೋಜನೆಯಡಿ ಮೊದಲ ಹಂತದ ಅನುಷ್ಠಾನವನ್ನು ತ್ವರಿತಗೊಳಿಸುವ ಜತೆಗೆ, ಎರಡನೇ ಹಂತದ ಯೋಜನೆಗೆ ಟೆಂಡರ್ ಪ್ರಕ್ರಿಯೆಯನ್ನ ತ್ವರಿತವಾಗಿ ಆರಂಭಿಸಬೇಕು. ಅಲ್ಲದೇ, ಎಷ್ಟು ಫೀಡರ್‌ಗಳಿಗೆ ಯಾವ ಪ್ರಮಾಣದಲ್ಲಿ ವಿದ್ಯುತ್ ಪೂರೈಸಲಾಗುತ್ತದೆ ಎಂಬ ಬಗ್ಗೆ ಕೆಪಿಟಿಸಿಎಲ್‌ಗೆ ಮಾಹಿತಿ ನೀಡಬೇಕು. ಅದರನ್ವಯ, ಅಗತ್ಯಕ್ಕೆ ತಕ್ಕಂತೆ ಸಬ್‌ಸ್ಟೇಷನ್‌ಗಳ ಉನ್ನತೀಕರಣಕ್ಕೆ ಕ್ರಮ ವಹಿಸಲಾಗುತ್ತದೆ,”ಎಂದು ಹೇಳಿದರು.
“ಕುಸುಮ್ ಬಿ ಯೋಜನೆಯಡಿ ರಾಜ್ಯಕ್ಕೆ 40,000 ಸೋಲಾರ್ ಪಂಪ್‌ಸೆಟ್‌ಗಳು ಮಂಜೂರಾಗಿವೆ.ಈ ಗುರಿ ತಲುಪಲು ಫೀಡರ್‌ಗಳಿಂದ 500 ಮೀಟರ್‌ಗೂ ಹೆಚ್ಚು ದೂರವಿರುವ ಅಕ್ರಮ ಪಂಪ್‌ಸೆಟ್‌ಗಳ ಸಮೀಕ್ಷೆಯನ್ನು ತ್ವರಿತವಾಗಿ ಪೂರ್ಣಗೊಳಿಸಿ, ಅರ್ಜಿ ಸಲ್ಲಿಸಿದವರಿಗೆ ಆದ್ಯತೆ ಮೇರೆಗೆ ಸೋಲಾರ್ ಪಂಪ್‌ಸೆಟ್ ಅಳವಡಿಸಲು ಕ್ರಮ ಕೈಗೊಳ್ಳಬೇಕು ಎಂದು ಹೇಳಿದರು.
ಅಕ್ರಮ ಪಂಪ್‌ಸೆಟ್‌ಗಳನ್ನು ಹೊಂದಿರುವ 10,151 ಅರ್ಜಿಗಳು ಕುಸುಮ್ ಬಿ ಅಡಿ ನೋಂದಣಿಯಾಗಿವೆ. ಅದೇ ರೀತಿ ಹೊಸದಾಗಿ, 27820 ಅರ್ಜಿಗಳು ಬಂದಿದ್ದು, ಒಟ್ಟು 37,971 ಅರ್ಜಿಗಳಿಗೆ ಸಂಬಂಧಿಸಿದಂತೆ ಸೋಲಾರ್ ಪಂಪ್‌ಸೆಟ್‌ಗಳನ್ನು ಕಾಲಮಿತಿಯಲ್ಲಿ ಅಳವಡಿಸಲು ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚಿಸಿದರು.
“ಕೃಷಿ ಪಂಪ್ ಸೆಟ್‌ಗಳು ಸೇರಿದಂತೆ ಗ್ರಾಮೀಣ ಪ್ರದೇಶಗಳಲ್ಲಿ ಸಮರ್ಪಕ ವಿದ್ಯುತ್ ಪೂರೈಸುವಲ್ಲಿ ಕುಸುಮ್ ಬಿ ಮತ್ತು ಕುಸುಮ್ ಸಿ ಯೋಜನೆಗಳು ಪರಿಣಾಮಕಾರಿಯಾಗಿವೆ. ಹೀಗಾಗಿ ಈ ಯೋಜನೆಗಳ ಅನುಷ್ಠಾನ ಕುರಿತು ಆಯಾ ಜಿಲ್ಲಾ ಮಟ್ಟದಲ್ಲಿರುವ ಜಿಲ್ಲಾ ಉಸ್ತುವಾರಿ ಸಚಿವರ ನೇತೃತ್ವದ ವಿದ್ಯುತ್ ಪೂರೈಕೆ ಸಮಿತಿಯ ಸಭೆಯಲ್ಲಿ ಚರ್ಚಿಸಿ ಸೂಕ್ತ ಕ್ರಮ ಕೈಗೊಳ್ಳಬೇಕು. ಸಮಿತಿಯ ಸಲಹೆಗಳನ್ನು ಪಡೆದು ಯೋಜನೆಯನ್ನು ಇನ್ನಷ್ಟು ತ್ವರಿತವಾಗಿ ನಿರ್ವಹಣೆ ಮಾಡಬೇಕು”, ಎಂದು ತಿಳಿಸಿದರು.


1 ಟಿಪ್ಪಣಿ
Нужен трафик и лиды? сайт студии avigroup SEO-оптимизация, продвижение сайтов и реклама в Яндекс Директ: приводим целевой трафик и заявки. Аудит, семантика, контент, техническое SEO, настройка и ведение рекламы. Работаем на результат — рост лидов, продаж и позиций.