ಬೆಂಗಳೂರು.
ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆಯ ಅನ್ನಭಾಗ್ಯ ಯೋಜನೆಯ ಸ್ವರೂಪದಲ್ಲಿ ಸಾಕಷ್ಟು ಬದಲಾವಣೆ ಮಾಡಲು ತೀರ್ಮಾನಿಸಲಾಗಿದೆ. ಬರುವ ಅಕ್ಟೋಬರ್ ಒಂದರಿಂದ ಈ ಯೋಜನೆಯ ಫಲಾನುಭವಿಗಳಿಗೆ ಅಕ್ಕಿ ಜೊತೆಗೆ ಫುಡ್ ಕಿಟ್ ದೊರಕಲಿದೆ.
ಅನ್ನಭಾಗ್ಯ’ದ ಗ್ಯಾರಂಟಿಯಡಿ ಬಿಪಿಎಲ್ ಕುಟುಂಬದ ಪ್ರತಿ ಸದಸ್ಯರಿಗೆ 10 ಕೆ.ಜಿ ಅಕ್ಕಿ ನೀಡುವುದಾಗಿ ಕಾಂಗ್ರೆಸ್ ಪಕ್ಷ ವಿಧಾನಸಭೆ ಚುನಾವಣೆ ಪೂರ್ವದಲ್ಲಿ ಘೋಷಿಸಿತ್ತು
ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಬಳಿಕ, ಯೋಜನೆ ಜಾರಿಗೆ ಅಗತ್ಯವಿದ್ದ ಹೆಚ್ಚುವರಿ ಅಕ್ಕಿ ಒದಗಿಸುವಂತೆ ಕೇಂದ್ರ ಸರ್ಕಾರಕ್ಕೆ ಮನವಿ ಮಾಡಿತ್ತು. ಅಕ್ಕಿಯನ್ನು ಪ್ರತಿ ಕೆ.ಜಿ.ಗೆ 34 ನೀಡಿ ಖರೀದಿಸಲು ಸಿದ್ಧವಿರುವುದಾಗಿ ರಾಜ್ಯ ಸರ್ಕಾರ ಹೇಳಿತ್ತು. ಆದರೂ ಕೇಂದ್ರ ನೀಡಿರಲಿಲ್ಲ. ಪ್ರತಿ ವ್ಯಕ್ತಿಗೆ ನೀಡುತ್ತಿದ್ದ ಐದು ಕೆ.ಜಿ ಹೊರತುಪಡಿಸಿ ಹೆಚ್ಚುವರಿ ಅಕ್ಕಿ ಸರಬರಾಜು ಮಾಡಲು ಸಾಧ್ಯವಿಲ್ಲ ಎಂದು ತಿಳಿಸಿತ್ತು.
ಹೀಗಾಗಿ ರಾಜ್ಯ ಸರ್ಕಾರ ಮುಕ್ತ ಮಾರುಕಟ್ಟೆ ಮತ್ತು ನೆರೆ ರಾಜ್ಯಗಳಲ್ಲಿ ಅಕ್ಕಿ ಖರೀದಿ ಮಾಡಲು ನಡೆಸಿದ ಎಲ್ಲ ಪ್ರಯತ್ನ ವಿಫಲವಾಗಿತ್ತು.
ಬಿಪಿಎಲ್ ಕುಟುಂಬದ ಪ್ರತಿ ಸದಸ್ಯರಿಗೆ ಅನ್ನಭಾಗ್ಯದಡಿ ಅಕ್ಕಿ ಹೊಂದಿಸಲು ಸಾಧ್ಯವಾಗದೇ ಹೋದಾಗ ತಲಾ 5 ಕೆ.ಜಿ ಅಕ್ಕಿ ಹಾಗೂ ಪ್ರತಿ ಕೆ.ಜಿ ಅಕ್ಕಿಗೆ 34 ರೂಪಾಯಿಯಂತೆ ಲೆಕ್ಕಹಾಕಿ ಪ್ರತಿ ಫಲಾನುಭವಿ ಖಾತೆಗೆ 170 ರೂಪಾಯಿ ನೇರ ಜಮಾ ಮಾಡಲು ಸರ್ಕಾರ ತೀರ್ಮಾನಿಸಿತು.
ಅದರಂತೆ ಪ್ರತಿ ಫಲಾನುಭವಿಗೆ 5 ಕೆ.ಜಿ ಅಕ್ಕಿಯ ಜೊತೆಗೆ ನಗದು ನೀಡುವ ಯೋಜನೆಗೆ 2023ರ ಜುಲೈ 10ರಿಂದ ಅಧಿಕೃತ ಚಾಲನೆ ನೀಡಲಾಗಿತ್ತು.
ಈ ಯೋಜನೆ ಜಾರಿಗೊಂಡು ಒಂದು ವರ್ಷದ ನಂತರ ಅದರ ಸ್ವರೂಪ ಬದಲಾವಣೆಗೆ ಆಹಾರ ಇಲಾಖೆ ಮುಂದಾಗಿದೆ ಈಗ ಅಕ್ಕಿಯ ಜೊತೆಗೆ
ನಗದು ನೀಡುವ ಬದಲು ದಿನಸಿ ನೀಡುವ ಯೋಜನೆ ಜಾರಿಗೆ ಬರಲಿದೆ.
ಪ್ರತಿ ಫಲಾನುಭವಿ ಗೆ 5 ಕೆಜಿ ಅಕ್ಕಿ ಜೊತೆಗೆ ನಗದು ಬದಲಾಗಿ ಅಡುಗೆ ಎಣ್ಣೆ, ಬೇಳೆ, ಸಕ್ಕರೆ, ಉಪ್ಪು ದಿನಸಿ ಕಿಟ್‌ನಲ್ಲಿ ಇರಲಿದೆ. ಈ ಕುರಿತು ಆಹಾರ ಇಲಾಖೆಯು ಆರ್ಥಿಕ ಇಲಾಖೆಗೆ ಪ್ರಸ್ತಾವ ಸಲ್ಲಿಸಿದ್ದು, ಅಕ್ಟೋಬರ್ 1ರಿಂದ ಜಾರಿಗೊಳಿಸಲು ಸಿದ್ಧತೆ ನಡೆದಿದೆ.
ಸಂಗ್ರಹಗಳು
- ಏಪ್ರಿಲ್ 2026
- ಮಾರ್ಚ್ 2026
- ಫೆಬ್ರವರಿ 2026
- ಜನವರಿ 2026
- ಡಿಸೆಂಬರ್ 2025
- ನವೆಂಬರ್ 2025
- ಅಕ್ಟೋಬರ್ 2025
- ಸೆಪ್ಟೆಂಬರ್ 2025
- ಆಗಷ್ಟ್ 2025
- ಜುಲೈ 2025
- ಜೂನ್ 2025
- ಮೇ 2025
- ಏಪ್ರಿಲ್ 2025
- ಮಾರ್ಚ್ 2025
- ಫೆಬ್ರವರಿ 2025
- ಜನವರಿ 2025
- ಡಿಸೆಂಬರ್ 2024
- ನವೆಂಬರ್ 2024
- ಅಕ್ಟೋಬರ್ 2024
- ಸೆಪ್ಟೆಂಬರ್ 2024
- ಆಗಷ್ಟ್ 2024
- ಜುಲೈ 2024
- ಜೂನ್ 2024
- ಮೇ 2024
- ಏಪ್ರಿಲ್ 2024
- ಮಾರ್ಚ್ 2024
- ಫೆಬ್ರವರಿ 2024
- ಜನವರಿ 2024
- ಡಿಸೆಂಬರ್ 2023
- ನವೆಂಬರ್ 2023
- ಅಕ್ಟೋಬರ್ 2023
- ಸೆಪ್ಟೆಂಬರ್ 2023
- ಆಗಷ್ಟ್ 2023
- ಜುಲೈ 2023
- ಜೂನ್ 2023
- ಮೇ 2023
- ಏಪ್ರಿಲ್ 2023
- ಮಾರ್ಚ್ 2023
- ಫೆಬ್ರವರಿ 2023
- ಜನವರಿ 2023
- ಡಿಸೆಂಬರ್ 2022
- ನವೆಂಬರ್ 2022
- ಅಕ್ಟೋಬರ್ 2022
- ಸೆಪ್ಟೆಂಬರ್ 2022
- ಆಗಷ್ಟ್ 2022
- ಜುಲೈ 2022
- ಜೂನ್ 2022
- ಮೇ 2022
- ಏಪ್ರಿಲ್ 2022
