ಬೆಂಗಳೂರು,ಜ.1-
ಕನ್ನಡ ಸಿನಿಮಾ ರಂಗದ ಸೆಂಚುರಿ ಸ್ಟಾರ್ ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ತಮ್ಮನ್ನು ಕಾಡುತ್ತಿದ್ದ ಕ್ಯಾನ್ಸರ್ ಗೆ ಚಿಕಿತ್ಸೆ ಪಡೆಯುತ್ತಿದ್ದಾರೆ. ಅಮೇರಿಕಾದಲ್ಲಿ ಶಸ್ತ್ರ ಚಿಕಿತ್ಸೆ ಮಾಡಿಸಿಕೊಂಡು ಗುಣಮುಖರಾಗುತ್ತಿರುವ ಅವರು ಎಲ್ಲರಿಗೂ ಅಭಿನಂದನೆ ಸಲ್ಲಿಸಿದ್ದಾರೆ.
ಚಿಕಿತ್ಸೆಯ ನಂತರ ಮೊದಲ ಬಾರಿಗೆ ಪತ್ನಿ ಗೀತಾ ಶಿವರಾಜ್ ಕುಮಾರ್ ಅವರೊಂದಿಗೆ ವಿಡಿಯೋ ಸಂದೇಶ ರವಾನಿಸಿದ್ದಾರೆ
ವಿಡಿಯೋನಲ್ಲಿ ಮೊದಲು ಮಾತನಾಡಿರುವ ಗೀತಾ ಶಿವರಾಜ್ ಕುಮಾರ್ ಅವರು, ಶಿವರಾಜ್ ಕುಮಾರ್ ಅವರ ಆರೋಗ್ಯಕ್ಕಾಗಿ ಪ್ರಾರ್ಥಿಸಿದ ಎಲ್ಲರಿಗೂ ಧನ್ಯವಾದ ಹೇಳಿದ್ದಾರೆ.
ಶಿವರಾಜ್ ಕುಮಾರ್ ಅವರ ಶಸ್ತ್ರಚಿಕಿತ್ಸೆ ಯಶಸ್ವಿಯಾಗಿ ನಡೆದಿದ್ದು, ಎಲ್ಲ ವರದಿಗಳು ನೆಗೆಟಿವ್ ಬಂದಿದೆ. ಫೆತಾಲಜಿ ರಿಪೋರ್ಟ್ ಬರುವವರೆಗೆ ಸ್ವಲ್ಪ ಆತಂಕ ಇತ್ತು, ಆದರೆ ಈಗ ಆ ವರದಿಯೂ ಬಂದಿದ್ದು ಎಲ್ಲವೂ ನೆಗೆಟಿವ್ ಆಗಿವೆ ಎಂದು ತಿಳಿಸಿದ್ದಾರೆ
ನೀವುಗಳು ಮಾಡಿರುವ ಪ್ರಾರ್ಥನೆ ತೋರಿದ ಪ್ರೀತಿ ಮತ್ತು ಬೆಂಬಲವನ್ನು ಜೀವನ ಇರುವವರೆಗೆ ಮರೆಯುವುದಿಲ್ಲ ಎಂದು ಸ್ಮರಿಸಿದ್ದಾರೆ
ಬಳಿಕ ಮಾತನಾಡಿದ ಶಿವರಾಜ್ ಕುಮಾರ್ ಎಲ್ಲರಿಗೂ ಹೊಸ ವರ್ಷದ ಶುಭಾಶಯಗಳನ್ನು ಕೋರಿದ್ದಾರೆ ಅನಾರೋಗ್ಯದ ನಡುವೆಯೂ ಯಾವುದೋ ಜೋಶ್ ನಲ್ಲಿ ಶೂಟಿಂಗ್ ನಲ್ಲಿ ಭಾಗವಹಿಸಿಬಿಟ್ಟಿದ್ದೆ ಎಲ್ಲರೂ ಜೊತೆಗೆ ಇದ್ದರು ಕೀಮೋ ಮಾಡಿಸುತ್ತಿರಬೇಕಾದರೆ ‘45’ ಸಿನಿಮಾದ ಫೈಟ್ ಸೀನ್ ನಲ್ಲಿ ಭಾಗವಹಿಸಿದ್ದೆ, ಅದರ ಶ್ರೇಯ ರವಿವರ್ಮಗೆ ಸಲ್ಲಬೇಕು ಎಂದು ಹೇಳಿದ್ದಾರೆ
ಆದರೆ ಶಸ್ತ್ರಚಿಕಿತ್ಸೆ ದಿನ ಹತ್ತಿರ ಬಂದಂತೆ ತುಸು ಆತಂಕ ಇತ್ತು. ಆದರೆ ಅಭಿಮಾನಿಗಳು, ಗೆಳೆಯರು, ಸಹ ನಟರು, ಬಾಲ್ಯದ ಗೆಳೆಯರು ನೀಡಿದ ಬೆಂಬಲ ಧೈರ್ಯ ತುಂಬಿತು ಇಲ್ಲಿನ ವೈದ್ಯರು, ನರ್ಸ್ ಗಳು ಬಹಳ ಚೆನ್ನಾಗಿ ಕಾಳಜಿ ಮಾಡಿದರು’ ಎಂದು ಪ್ರಶಂಸೆ ವ್ಯಕ್ತಪಡಿಸಿದ್ದಾರೆ
ಹಲವರ ಹೆಸರು ಹೇಳಿ ಧನ್ಯವಾದಗಳನ್ನು ಹೇಳಿರುವ ಅವರು ಪತ್ನಿ ಗೀತಾ ಬಗ್ಗೆ ನೀಡಿದ ಬೆಂಬಲವನ್ನು ವಿಶೇಷವಾಗಿ ಕೊಂಡಾಡಿದ್ದಾರೆ
ಕ್ಯಾನ್ಸರ್ ನಿಂದು ಬಳಲುತ್ತಿದ್ದ ಅವರು ಚಿಕಿತ್ಸೆಗಾಗಿ ಕೆಲ ದಿನಗಳ ಹಿಂದೆ ಅಮೆರಿಕಕ್ಕೆ ತೆರಳಿದ್ದರು. ಕೆಲ ದಿನಗಳ ಹಿಂದೆ ಅವರಿಗೆ ಶಸ್ತ್ರಚಿಕಿತ್ಸೆ ಸಹ ನಡೆಯಿತು. ಆ ದಿನ ರಾಜ್ಯದಾದ್ಯಂತ ಅಭಿಮಾನಿಗಳು ಶಿವರಾಜ ಕುಮಾರ್ ಹೆಸರಲ್ಲಿ ವಿಶೇಷ ಪೂಜೆ, ಮೃತ್ಯುಂಜಯ ಹೋಮ, ಅನ್ನಸಂತರ್ಪಣೆಗಳನ್ನು ಮಾಡಿದ್ದರು.
Previous Articleಪ್ರಿಯಾಂಕ ಖರ್ಗೆ ಬೆಂಬಲಕ್ಕೆ ನಿಂತ ಸಿದ್ದರಾಮಯ್ಯ
Next Article ಸೌತೆ ಕಾಯಿ ತಿನ್ನಿಸಿದ್ದಕ್ಕೆ ಹೀಗಾ ಮಾಡೋದು
