Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಆಂಡ್ರ್ಯೂ ಸೈಮಂಡ್ಸ್ ಇನ್ನಿಲ್ಲ…
    ಸುದ್ದಿ

    ಆಂಡ್ರ್ಯೂ ಸೈಮಂಡ್ಸ್ ಇನ್ನಿಲ್ಲ…

    vartha chakraBy vartha chakraಮೇ 15, 2022Updated:ಮೇ 15, 2022ಯಾವುದೇ ಟಿಪ್ಪಣಿಗಳಿಲ್ಲ1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಆಸ್ಟ್ರೇಲಿಯಾದ ಮಾಜಿ ಕ್ರಿಕೆಟಿಗ ಆಂಡ್ರ್ಯೂ ಸೈಮಂಡ್ಸ್ ಕಾರು ಅಪಘಾತದಲ್ಲಿ ಸಾವನ್ನಪ್ಪಿದ್ದಾರೆ. ಆಂಡ್ರ್ಯೂ ಸೈಮಂಡ್ಸ್ ರಸ್ತೆ ಅಪಘಾತದಲ್ಲಿ ಸಾವನ್ನಪ್ಪಿದ್ದು, ಕಾಂಗರೋ ನಾಡಿಗೆ ಬರಸಿಡಿಲು ಬಡಿದಂತಾಗಿದೆ. ಕಳೆದ ಮಾರ್ಚ್‌ನಲ್ಲಿ ಕ್ರಿಕೆಟ್‌ ದಂತಕಥೆ ಶೇನ್‌ ವಾರ್ನ್‌ ಹಾಗು ರಾಡ್‌ ಮಾರ್ಷ್‌ ನಿಧನದ ನಂತರ ಆಸೀಸ್‌ ಕ್ರಿಕೆಟ್‌ಗಿದು ಮತ್ತೊಂದು ಬೇಸರದ ಸುದ್ದಿಯಾಗಿದೆ.
    ಆ್ಯಂಡ್ರೋ ಸೈಮಂಡ್ಸ್ ಕ್ರಿಕೆಟ್​​ನಲ್ಲಿ ಇತಿಹಾಸ ಸೃಷ್ಠಿಸಿದ್ದರು.46 ವರ್ಷದ ಕ್ರಿಕೆಟಿಗ ಸೈಮಂಡ್ಸ್‌ 26 ಟೆಸ್ಟ್‌, 198 ಏಕದಿನ ಅಂತರರಾಷ್ಟ್ರೀಯ ಕ್ರಿಕೆಟ್‌ ಪಂದ್ಯಗಳನ್ನು ಆಡಿದ್ದಾರೆ. ಆಸ್ಟ್ರೇಲಿಯಾ ಕ್ರಿಕೆಟ್‌ನಲ್ಲಿ ಅತ್ಯಂತ ಕೌಶಲ ಹೊಂದಿದ ಆಲ್‌ರೌಂಡರ್‌ ಎಂಬ ಹಿರಿಮೆಗೆ ಪಾತ್ರರಾಗಿದ್ದರು. 2003 ರಿಂದ 2007ರವರೆಗೆ ಆಸ್ಟ್ರೇಲಿಯಾ ಗೆದ್ದಿರುವ ಸತತ ಎರಡು ಏಕದಿನ ವಿಶ್ವಕಪ್‌ ತಂಡದ ಭಾಗವಾಗಿದ್ದರು. 1999 ಮತ್ತು 2007ರ ನಡುವೆ ವಿಶ್ವದಲ್ಲೇ ಹೆಚ್ಚು ಪ್ರಾಬಲ್ಯ ಸಾಧಿಸಿದ ಆಸ್ಟ್ರೇಲಿಯಾದ ವೈಟ್-ಬಾಲ್ ತಂಡಗಳ ಅವಿಭಾಜ್ಯ ಅಂಗವಾಗಿದ್ದರು.
    ಮೂಲಗಳ ಪ್ರಕಾರ, ದುರಂತದ ವೇಳೆ ಸೈಮಂಡ್ಸ್‌ ಒಬ್ಬರೇ ಕಾರಿನಲ್ಲಿದ್ದರು. ದುರ್ಘಟನೆ ನಡೆದ ತಕ್ಷಣ ತುರ್ತು ಸಿಬ್ಬಂದಿ ಸ್ಥಳಕ್ಕೆ ಧಾವಿಸಿದರೂ ಅವರು ಗಂಭೀರವಾಗಿ ಗಾಯಗೊಂಡ ಪರಿಣಾಮ ಕೊನೆಯುಸಿರೆಳೆದರು ಎಂದು ಅಲ್ಲಿನ ಪೊಲೀಸರು ಮಾಹಿತಿ ನೀಡಿದ್ದಾರೆ.
    ಸೈಮಂಡ್ಸ್ ನಿಧನಕ್ಕೆ ಭಾರತೀಯರು ಸೇರಿದಂತೆ ವಿಶ್ವದ ಕ್ರಿಕೆಟಿಗರು ಕಂಬನಿ ಮಿಡಿದಿದ್ದಾರೆ. ಆಂಡ್ರ್ಯೂ ಸೈಮಂಡ್ಸ್ 46ನೇ ವಯಸ್ಸಿನಲ್ಲಿ ದುರಂತವಾಗಿ ನಿಧನರಾದ ಪ್ರೀತಿಯ ಕ್ವೀನ್ಸ್‌ಲ್ಯಾಂಡರ್‌ನ ನಷ್ಟದಿಂದ ನಾವು ಆಘಾತಕ್ಕೊಳಗಾಗಿದ್ದೇವೆ ಮತ್ತು ದುಃಖಿತರಾಗಿದ್ದೇವೆ ಎಂದು ಕ್ರಿಕೆಟ್ ಆಸ್ಟ್ರೇಲಿಯ ಟ್ವೀಟ್ ಮೂಲಕ ಸಂತಾಪ ವ್ಯಕ್ತಪಡಿಸಿದೆ. ‘ಇದು ಅಂತ್ಯಂತ ದಿಗಿಲು ಹುಟ್ಟಿಸುವ ಸುದ್ದಿ, ನಾವು ನಿಮ್ಮನ್ನು ತುಂಬಾ ಮಿಸ್‌ ಮಾಡಿಕೊಳ್ಳುತ್ತೇವೆ’ ಎಂದು ಆಸೀಸ್ ಮಾಜಿ ಕ್ರಿಕೆಟಿಗ ಜೇಸನ್‌ ಗಿಲ್ಲೆಸ್ಪಿ ಬೇಸರ ವ್ಯಕ್ತಪಡಿಸಿದ್ದಾರೆ. ‘ಈ ಸುದ್ದಿ ನಿಜವಾಗಿಯೂ ಅತೀವ ಬೇಸರ ಹುಟ್ಟಿಸುತ್ತದೆ’ ಎಂದು ಆಸೀಸ್‌ ಹಿರಿಯ ಕ್ರಿಕೆಟಿಗ ಆ್ಯಡಂ ಗಿಲ್‌ಕ್ರಿಸ್ಟ್‌ ತಿಳಿಸಿದ್ದಾರೆ.
    ವಿವಾದ: ಆಂಡ್ರ್ಯೂ ಸೈಮಂಡ್ಸ್‌ ಕ್ರಿಕೆಟ್‌ನಲ್ಲಿ ಪ್ರಖ್ಯಾತಿ ಗಳಿಸಿದಷ್ಟೇ ವಿವಾದಗಳಿಂದಲೂ ಗಮನ ಸೆಳೆದಿದ್ದರು. ಅದಕ್ಕೊಂದು ಉದಾಹರಣೆ ಮಂಕಿಗೇಟ್‌ ಹಗರಣ. 2008ರ ಹೊಸ ವರ್ಷದ ಹೊಸ್ತಿಲಲ್ಲಿ ಸಿಡ್ನಿಯಲ್ಲಿ ಭಾರತ ಮತ್ತು ಆಸೀಸ್‌ ನಡುವೆ ಟೆಸ್ಟ್‌ ಪಂದ್ಯ ನಡೆಯುತ್ತಿದ್ದ ವೇಳೆ ಹರ್ಭಜನ್‌ ಸಿಂಗ್ ಅವರನ್ನು ಮಂಕಿ (ಮಂಗ) ಎಂದು ಕರೆದಿದ್ದರು.

    Verbattle
    Verbattle
    Verbattle
    News
    Share. Facebook Twitter Pinterest LinkedIn Tumblr Email WhatsApp
    Previous Articleಪೊಲೀಸರ ಮೇಲೆ‌ ವಾಹನ‌ ಹರಿಸಲು ಯತ್ನ…
    Next Article Strike ಅಂದ್ರೆ ಇದಪ್ಪ!!!
    vartha chakra
    • Website

    Related Posts

    ಅತ್ತೆಯ ಸಾವಿಗೆ ದೇವರ ಮೊರೆ ಹೋದ ಸೊಸೆ! ಹುಂಡಿಯಲ್ಲಿ ಸಿಕ್ಕ ಪತ್ರ ವೈರಲ್!!

    ಫೆಬ್ರವರಿ 24, 2026

    ನಾಯಿ ಕಚ್ಚಿದ್ದಕ್ಕೆ ಹೀಗಾ ಮಾಡಿಕೊಳ್ಳೋದು..?!

    ಫೆಬ್ರವರಿ 24, 2026

    ಬಿಜೆಪಿಯ ಅಂತಿಮ ದಿನಗಳು ಹತ್ತಿರವಾಗಿವೆ: ಚಿಕ್ಕಬಳ್ಳಾಪುರದಲ್ಲಿ ಡಿಸಿಎಂ ಡಿ.ಕೆ. ಶಿವಕುಮಾರ್ ವಾಗ್ದಾಳಿ

    ಫೆಬ್ರವರಿ 23, 2026

    Comments are closed.

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಗ್ಯಾರಂಟಿ ಯೋಜನೆಗಳ ಭರ್ಜರಿ ಯಶಸ್ಸು: ರಾಜ್ಯದಲ್ಲಿ ಗಣನೀಯವಾಗಿ ಇಳಿಕೆಯಾದ ರೈತರ ಆತ್ಮಹತ್ಯೆ ಪ್ರಕರಣ!

    ಅಮೆರಿಕದಲ್ಲಿ ಹಿಂದೂಗಳೇ ಅತ್ಯಂತ ಹೆಚ್ಚು ಸುಶಿಕ್ಷಿತರು: ಪ್ಯೂ ಸಂಶೋಧನಾ ಸಂಸ್ಥೆಯ ವರದಿಯಲ್ಲಿ ಬಹಿರಂಗ

    ಹಿಂದುಳಿದ ವರ್ಗಗಳ ಬೇಡಿಕೆ ಗೊತ್ತಾ..?

    ಅತ್ತೆಯ ಸಾವಿಗೆ ದೇವರ ಮೊರೆ ಹೋದ ಸೊಸೆ! ಹುಂಡಿಯಲ್ಲಿ ಸಿಕ್ಕ ಪತ್ರ ವೈರಲ್!!

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Xosqma ರಲ್ಲಿ ಸರ್ಕಾರದ ಉತ್ತರಕ್ಕೆ ರಾಜ್ಯಪಾಲರು ಸಮಾಧಾನ.?
    • Edwardwromi ರಲ್ಲಿ ವಿಬಿಜಿ ರಾಮ್ ಜಿ ಗೆ ವಿಶೇಷ ಅಧಿವೇಶನ
    • Diegotup ರಲ್ಲಿ ಖಾಸಗಿ ಸಂಸ್ಥೆಗಳಲ್ಲಿ ಕನ್ನಡಿಗರಿಗೇ ಉದ್ಯೋಗ
    Latest Kannada News

    ಗ್ಯಾರಂಟಿ ಯೋಜನೆಗಳ ಭರ್ಜರಿ ಯಶಸ್ಸು: ರಾಜ್ಯದಲ್ಲಿ ಗಣನೀಯವಾಗಿ ಇಳಿಕೆಯಾದ ರೈತರ ಆತ್ಮಹತ್ಯೆ ಪ್ರಕರಣ!

    ಫೆಬ್ರವರಿ 24, 2026

    ಅಮೆರಿಕದಲ್ಲಿ ಹಿಂದೂಗಳೇ ಅತ್ಯಂತ ಹೆಚ್ಚು ಸುಶಿಕ್ಷಿತರು: ಪ್ಯೂ ಸಂಶೋಧನಾ ಸಂಸ್ಥೆಯ ವರದಿಯಲ್ಲಿ ಬಹಿರಂಗ

    ಫೆಬ್ರವರಿ 24, 2026

    ಹಿಂದುಳಿದ ವರ್ಗಗಳ ಬೇಡಿಕೆ ಗೊತ್ತಾ..?

    ಫೆಬ್ರವರಿ 24, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.