Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಆಲ್ ಖೈದಾ ಲೇಡಿಯ ಭಯಾನಕ ನಂಟು.
    ಸುದ್ದಿ

    ಆಲ್ ಖೈದಾ ಲೇಡಿಯ ಭಯಾನಕ ನಂಟು.

    vartha chakraBy vartha chakraಜುಲೈ 31, 2025ಯಾವುದೇ ಟಿಪ್ಪಣಿಗಳಿಲ್ಲ2 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು,ಜು.31- ಸಾಮಾಜಿಕ ಜಾಲತಾಣಗಳಲ್ಲಿ ಅಲ್‌ಖೈದಾ ಪರ ಪ್ರಚಾರ ಹಾಗೂ ಉಗ್ರರ ಸಂಘಟನೆಗಳ ಮುಖಂಡರ ಪ್ರಚೋದನಕಾರಿ ಭಾಷಣಗಳನ್ನು ಹಂಚಿಕೊಂಡು ಗುಜರಾತ್‌ ಭಯೋತ್ಪಾದನಾ ನಿಗ್ರಹ ದಳದ(ಎಟಿಎಸ್)ಅಧಿಕಾರಿಗಳಿಗೆ ನಗರದಲ್ಲಿ ಸಿಕ್ಕಿಬಿದ್ದಿರುವ ಜಾರ್ಖಂಡ್‌ನ ಶಮಾ ಪರ್ವೀನ್ 10 ಸಾವಿರಕ್ಕೂ ಹಿಂಬಾಲಕರನ್ನು ಹೊಂದಿರುವುದು ತನಿಖೆಯಲ್ಲಿ ಬೆಳಕಿಗೆ ಬಂದಿದೆ.
    ಆರ್‌ಟಿ ನಗರದಲ್ಲಿ ತಾಯಿ, ಸಹೋದರರ ಜೊತೆ ವಾಸವಿದ್ದ ಶಮಾ ಪರ್ವೀನ್ ಆನ್ ಲೈನ್ ಮೂಲಕ ಜಿಹಾದಿ ಚಟುವಟಿಕೆಗಳನ್ನು ನಡೆಸುತ್ತಿದ್ದಳು. ಪ್ರಚೋದನಾಕಾರಿ ಸಂದೇಶಗಳನ್ನು ಹಂಚುತ್ತಿದ್ದಳು ಎನ್ನುವುದು ವಿಚಾರಣೆಯಲ್ಲಿ ಪತ್ತೆಯಾಗಿದೆ.
    ಆರೋಪಿ ಶಮಾ ಪರ್ವೀನ್ ಅನ್ಸಾರಿ ಭಾರತ ಸರ್ಕಾರದ ವಿರುದ್ಧ ‘ಸಶಸ್ತ್ರ ಕ್ರಾಂತಿ ಅಥವಾ ಜಿಹಾದ್‌’ಗೆ ಕರೆ ನೀಡುವ ವಿಷಯವನ್ನು ಪ್ರಸಾರ ಮಾಡಲು ಡಿಜಿಟಲ್ ವೇದಿಕೆಗಳನ್ನು ಬಳಸುತ್ತಿದ್ದಳು. ಆಕೆಯ ಚಟುವಟಿಕೆಗಳು ಕೇವಲ ಸೈದ್ಧಾಂತಿಕ ಪ್ರಚಾರಕ್ಕಷ್ಟೇ ಸೀಮಿತವಾಗಿರಲಿಲ್ಲ. ಧಾರ್ಮಿಕ ಭಿನ್ನಾಭಿಪ್ರಾಯವನ್ನು ಸೃಷ್ಟಿಸಲು ಮತ್ತು ಹಿಂಸಾಚಾರವನ್ನು ಪ್ರಚೋದಿಸಲು ಪ್ರಚೋದನಕಾರಿ ಸಂದೇಶಗಳನ್ನು ಹರಡಲು ಆಕೆ ಸಾಮಾಜಿಕ ಮಾಧ್ಯಮವನ್ನು ಸಕ್ರಿಯವಾಗಿ ಬಳಸುತ್ತಿದ್ದಳು ಎಂದು ಎಟಿಎಸ್ ಅಧಿಕಾರಿಗಳು ಹೇಳಿದ್ದಾರೆ.
    ಶಮಾ ಪರ್ವೀನ್ ಅನ್ಸಾರಿ ಎರಡು ಫೇಸ್‌ಬುಕ್ ಪುಟಗಳನ್ನು ಹೊಂದಿ ಇನ್‌ಸ್ಟಾಗ್ರಾಮ್ ಖಾತೆಯೊಂದನ್ನು ನಿರ್ವಹಿಸುತ್ತಿದ್ದಳು.
    ಇವುಗಳಿಂದ 10 ಸಾವಿರಕ್ಕೂ ಹೆಚ್ಚು ಫಾಲೋವರ್ಸ್ ಹೊಂದಿದ್ದಳು. ಈ ವೇದಿಕೆಗಳ ಮೂಲಕ, ಅಲ್ ಕೈದಾ ಮತ್ತು ಇತರ ಮೂಲಭೂತವಾದಿ ಪ್ರಚಾರಕರಿಗೆ ಸಂಬಂಧಿಸಿದ ವಿಷಯವನ್ನು ಹಂಚಿಕೊಂಡಿದ್ದಳು.
    ಎಕ್ಯೂಐಎಸ್ (ಅಲ್ ಕೈದಾ ಇಂಡಿಯನ್ ಸಬ್ ಕಂಟಿನೆಂಟ್) ನಾಯಕಿ ಮೌಲಾನಾ ಅಸಿಮ್ ಉಮರ್, ಹತ್ಯೆಗೀಡಾದ ಅಲ್-ಕೈದಾ ಉಗ್ರ ಅನ್ವರ್ ಅಲ್-ಅವ್ಹಾಕಿ ಮತ್ತು ಲಾಹೋರ್‌ನ ಲಾಲ್ ಮಸೀದಿಯ ಮೌಲಾನಾ ಅಬ್ದುಲ್ ಅಜೀಜ್ ಭಾಷಣಗಳು ಮತ್ತು ವೀಡಿಯೊಗಳನ್ನು ಪರ್ವೀನ್ ಸಾಮಾಜಿಕ ಮಾಧ್ಯಮಗಳಲ್ಲಿ ಹಂಚಿಕೊಳ್ಳುತ್ತಿದ್ದಳು. ಘಜ್ವಾ-ಎ-ಹಿಂದ್‌ನಂತಹ ವಿಷಯಗಳನ್ನು ಪ್ರಚಾರ ಮಾಡಿದ್ದಳು. ‘ಕಾಫಿರ್‌’ಗಳ ಮೇಲೆ ದಾಳಿಗೆ ಕರೆ ನೀಡಿ ಮತ್ತು ಭಾರತ ಸರ್ಕಾರವನ್ನು ಉರುಳಿಸಲು ಪ್ರತಿಪಾದಿಸಿದ ಸಂದೇಶಗಳನ್ನೂ ಹಂಚಿಕೊಂಡಿದ್ದಳು.
    ಶಮಾ ಪರ್ವೀನ್ ಅನ್ಸಾರಿ ಪಾಕಿಸ್ತಾನಿ ಸಂಸ್ಥೆಗಳೊಂದಿಗೆ ಫೋನ್ ಮತ್ತು ಇಮೇಲ್ ಮೂಲಕ ನಿರಂತರ ಸಂಪರ್ಕದಲ್ಲಿರುವುದು ತನಿಖೆಯಿಂದ ಗೊತ್ತಾಗಿದೆ ಎಂದು ತನಿಖಾಧಿಕಾರಿಗಳು ತಿಳಿಸಿದ್ದಾರೆ. ಜುಲೈ ಆರಂಭದಲ್ಲಿ ಎಟಿಎಸ್‌ ನಡೆಸಿದ ಪ್ರತ್ಯೇಕ ಕಾರ್ಯಾಚರಣೆಯ ಸಂದರ್ಭದಲ್ಲಿ ಈಕೆಯ ಸಂಚುಗಳ ಬಗ್ಗೆ ತಿಳಿದುಬಂದಿತ್ತು.
    ಗುಜರಾತ್ ಎಟಿಎಸ್ ಜುಲೈ 23 ರಂದು ದೆಹಲಿ, ನೋಯ್ಡಾ, ಅಹಮದಾಬಾದ್ ಮತ್ತು ಮೋಡಸಾದ ನಾಲ್ವರನ್ನು ಎಕ್ಯೂಐಎಸ್‌ ಪರ ಸಾಮಾಜಿಕ ಮಾಧ್ಯಮ ಖಾತೆಗಳಲ್ಲಿ ಮೂಲಭೂತವಾದಿ ಮತ್ತು ಜಿಹಾದಿ ಪ್ರಚಾರದ ವೀಡಿಯೊಗಳನ್ನು ಹಂಚಿಕೊಂಡ ಆರೋಪದ ಮೇಲೆ ಬಂಧಿಸಿತ್ತು. ಈ ವೀಡಿಯೊಗಳು ಭಾರತೀಯ ಮುಸ್ಲಿಂ ಯುವಕರನ್ನು ದೇಶದ ಪ್ರಜಾಪ್ರಭುತ್ವ ವ್ಯವಸ್ಥೆಯನ್ನು ತಿರಸ್ಕರಿಸಲು ಮತ್ತು ಸಶಸ್ತ್ರ ದಂಗೆಯ ಮೂಲಕ ಷರಿಯಾ (ಇಸ್ಲಾಮಿಕ್ ಕಾನೂನು) ಹೇರಲು ಪ್ರಚೋದಿಸುವ ಗುರಿಯನ್ನು ಹೊಂದಿವೆ ಎಂದು ಎಟಿಎಸ್ ಹೇಳಿದೆ.

    Verbattle
    Verbattle
    Verbattle
    ಆನ್ ಲೈನ್ ಉಗ್ರ ಕಾನೂನು ಧಾರ್ಮಿಕ ಬೆಂಗಳೂರು ಸರ್ಕಾರ
    Share. Facebook Twitter Pinterest LinkedIn Tumblr Email WhatsApp
    Previous Articleಧರ್ಮಸ್ಥಳದಲ್ಲಿ ಎರಡು ಅಸ್ತಿ ಪಂಜರ ಪತ್ತೆ !
    Next Article ಬೆಂಗಳೂರಿನಲ್ಲಿ ಅಡಗಿದ್ದ ಆಲ್ ಖೈದಾ ನಾಯಕಿ
    vartha chakra
    • Website

    Related Posts

    ಸಿಎಂ ಸಿದ್ದರಾಮಯ್ಯ ಟ್ವೀಟ್ – ಪ್ರಿಯಾಂಕ್ ಖರ್ಗೆ ಏನಂದ್ರು ಗೊತ್ತಾ..?

    ಫೆಬ್ರವರಿ 21, 2026

    ನಿರ್ಣಾಯಕ ಘಟ್ಟ ತಲುಪಿದ ನಾಯಕತ್ವ ಬಿಕ್ಕಟ್ಟು

    ಫೆಬ್ರವರಿ 21, 2026

    ಕಮೀಷನ್ ಸ್ವೀಕರಿಸುವಾಗ ಸಿಕ್ಕಿ ಬಿದ್ದ ಬಿಜೆಪಿ ಶಾಸಕ

    ಫೆಬ್ರವರಿ 21, 2026

    Leave A Reply Cancel Reply

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಸಿಎಂ ಸಿದ್ದರಾಮಯ್ಯ ಟ್ವೀಟ್ – ಪ್ರಿಯಾಂಕ್ ಖರ್ಗೆ ಏನಂದ್ರು ಗೊತ್ತಾ..?

    ನಿರ್ಣಾಯಕ ಘಟ್ಟ ತಲುಪಿದ ನಾಯಕತ್ವ ಬಿಕ್ಕಟ್ಟು

    ಕಮೀಷನ್ ಸ್ವೀಕರಿಸುವಾಗ ಸಿಕ್ಕಿ ಬಿದ್ದ ಬಿಜೆಪಿ ಶಾಸಕ

    ದ್ವೇಷ ಬಿತ್ತುವ ಸಿನಿಮಾ ನಮಗೆ ಬೇಡ: ‘ದಿ ಕೇರಳ ಸ್ಟೋರಿ-2’ ಬಹಿಷ್ಕರಿಸಲು ಕೇರಳ ಮುಖ್ಯಮಂತ್ರಿ ಖಡಕ್ ಸೂಚನೆ!

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • 1aceOnlinecasino_dv8 ರಲ್ಲಿ ಇನ್ನು ಮುಂದೆ ಜಾಲತಾಣ Koo ಇರುವುದಿಲ್ಲ.
    • Neiroset dlya ychebi_ifsl ರಲ್ಲಿ ಧರ್ಮಸ್ಥಳ ಪ್ರಕರಣಕ್ಕೆ ಹಠಾತ್ ತಿರುವು.
    • ShawnLic ರಲ್ಲಿ ಅಗಲಿದ “ಕಲಾ ತಪಸ್ವಿ”
    Latest Kannada News

    ಸಿಎಂ ಸಿದ್ದರಾಮಯ್ಯ ಟ್ವೀಟ್ – ಪ್ರಿಯಾಂಕ್ ಖರ್ಗೆ ಏನಂದ್ರು ಗೊತ್ತಾ..?

    ಫೆಬ್ರವರಿ 21, 2026

    ನಿರ್ಣಾಯಕ ಘಟ್ಟ ತಲುಪಿದ ನಾಯಕತ್ವ ಬಿಕ್ಕಟ್ಟು

    ಫೆಬ್ರವರಿ 21, 2026

    ಕಮೀಷನ್ ಸ್ವೀಕರಿಸುವಾಗ ಸಿಕ್ಕಿ ಬಿದ್ದ ಬಿಜೆಪಿ ಶಾಸಕ

    ಫೆಬ್ರವರಿ 21, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.