ದಾವಣಗೆರೆ,ಏ.6: ಕಳ್ಳತನ ಸೇರಿದಂತೆ ಅಸಭ್ಯ ವರ್ತನೆ ಮಾಡಿದ್ದಾರೆ ಎಂದು ಆರೋಪಿಸಿ ಇಬ್ಬರು ಬಾಲಕರನ್ನು ಹಿಡಿದು ಅಡಿಕೆ ಮರಕ್ಕೆ ಕಟ್ಟಿ ಹಲ್ಲೆ ಮಾಡಿದ್ದಾರೆ ಜೊತೆಗೆ ಗುಪ್ತಾಂಗಗಳಿಗೆ ಕೆಂಪು ಇರುವೆ ಬಿಟ್ಟು ಚಿತ್ರಹಿಂಸೆ ನೀಡಿರುವ ಅಮಾನವೀಯ ಘಟನೆ ಜಿಲ್ಲೆಯ ಚನ್ನಗಿರಿ ತಾಲೂಕಿನ ನಲ್ಲೂರ ಬಳಿಯ ಅಸ್ತಾಪನಹಳ್ಳಿಯಲ್ಲಿ ನಡೆದಿದ್ದು ತಡವಾಗಿ ಬೆಳಕಿಗೆ ಬಂದಿದೆ.
ಚಿತ್ರಹಿಂಸೆ ನೀಡಿರುವ ವಿಡಿಯೋ ಕೂಡ ವೈರಲ್ ಆಗಿದೆ.ಕೂಡಲೇ ಎಚ್ಚೆತ್ತ ಪೊಲೀಸರು 9 ಜನರ ವಿರುದ್ಧ ಎಫ್ಐಆರ್ ದಾಖಲಿಸಿ ಪ್ರಮುಖ ಆರೋಪಿ ಸುಭಾಷ್ ನನ್ನು ವಶಕ್ಕೆ ಪಡೆದುಕೊಂಡಿದ್ದು ಉಳಿದವರಿಗಾಗಿ ಹುಡುಕಾಟ ನಡೆಸಿದ್ದಾರೆ.
ಕಳ್ಳತನ ಮಾಡಿದ್ದಾರೆ ಎಂದು ಆರೋಪಿಸಿ ಹಕ್ಕಿ- ಪಿಕ್ಕಿ ಜನಾಂಗದ ಬಾಲಕರ ಮೇಲೆ ಅದೇ ಜನಾಂಗದ ಹತ್ತು ಯುವಕರಿಂದ ಹಲ್ಲೆ ಮಾಡಲಾಗಿದೆ.
ಹಲ್ಲೆ ಮಾಡಿದ ಹತ್ತು ಜನರ ಪೈಕಿ ನಾಲ್ವರು ಅಪ್ರಾಪ್ತರು.ಉಳಿದವರಾದ ಸುಭಾಷ್ (23), ಲಕ್ಕಿ(21), ದರ್ಶನ್ (22), ಪರಶು (25), ಶಿವದರ್ಶನ್ (23), ಹರೀಶ್ (25), ಪಟ್ಟಿ ರಾಜು(20), ಭೂಣಿ (18), ಸುಧನ್ ಅಲಿಯಾಸ್ ಮಧುಸೂಧನ್ ವಿರುದ್ದ ಕೇಸ್ ದಾಖಲಾಗಿದೆ.
ಗಿಡ ಮೂಲಿಕೆ ಮಾರಾಟ ಮಾಡಿ ಹಕ್ಕಿ ಪಿಕ್ಕಿ ಜನಾಂಗದ ಜನ ಜೀವನ ನಡೆಸುತ್ತಾರೆ. ಇದು ಕೆಲ ತಿಂಗಳ ಹಿಂದೆ ನಡೆದ ಘಟನೆ ಎನ್ನಲಾಗಿದ್ದು, ಇದೀಗ ವಿಡಿಯೋ ವೈರಲ್ ಆಗಿರುವ ಸಾದ್ಯತೆ ಎಂಬುದು ಸ್ಥಳೀಯರ ಮಾತಾಗಿದೆ.
Previous Articleಗನ್ ಹಿಡಿದು ರೀಲ್ಸ್ ಮಾಡಿದ
Next Article ನಿರ್ಲಕ್ಷ್ಯ ಕ್ಕೆ ಬಲಿಯಾದವರೆಷ್ಟು ಗೊತ್ತೇನು

1 ಟಿಪ್ಪಣಿ
Feel alive with every spin, every card, every win – https://getverapamil.com , Your hot streak already reserved the VIP section .