ಮಂಗಳೂರು,ಆ.22-
ಕಾಂಗ್ರೆಸ್ ಮುಖಂಡ ಹಾಗೂ ವಿಧಾನಪರಿಷತ್ ಸದಸ್ಯ ಐವನ್ ಡಿಸೋಜಾ ಇದೀಗ ಹಲವರ ಕೆಂಗಣ್ಣಿಗೆ ಗುರಿಯಾಗಿದ್ದಾರೆ.
ಕಳೆದ ರಾತ್ರಿ ಅವರ ಮನೆಯ ಮೇಲೆ ಕಿಡಿಗೇಡಿಗಳು ಕಲ್ಲು ತೂರಾಟ ನಡೆಸಿದ್ದಾರೆ.ಇದರಿಂದ ಅವರ ಮನೆಯ ಕಿಟಕಿ, ಬಾಗಿಲು ಗಾಜು ಪುಡಿ ಪುಡಿಯಾಗಿವೆ.
ರಾಜ್ಯಪಾಲರು ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ದ ಪ್ರಾಸಿಕ್ಯೂಷನ್ಗೆ ಅನುಮತಿ ನೀಡಿದ್ದನ್ನು ಖಂಡಿಸಿ ನಡೆದ ನಡೆದ ಪ್ರತಿಭಟನೆಯಲ್ಲಿ ಕಾಂಗ್ರೆಸ್ ಪಾಲ್ಗೊಂಡ ಐವನ್ ಡಿಸೋಜಾ ಬಾಂಗ್ಲಾ ಪ್ರಧಾನಿಗಾದ ಪರಿಸ್ಥಿತಿ ರಾಜ್ಯದ
ರಾಜ್ಯಪಾಲರಿಗೂ ಬರಬಹುದು ಎಂದು ಹೇಳಿದ್ದರು.
ಇದು ಬಿಜೆಪಿ ಕಾರ್ಯಕರ್ತರ
ಆಕ್ರೋಶಕ್ಕೆ ಕಾರಣವಾಗಿತ್ತು.
ಅಷ್ಟೇ ಅಲ್ಲದೆ ಅವರ ವಿರುದ್ಧ ಕ್ರಮಕ್ಕೆ ಒತ್ತಾಯಿಸಿ ದೂರು ನೀಡಲಾಗಿತ್ತು.ಇದರ ಬೆನ್ನಲ್ಲೇ ಈ ಘಟನೆ ನಡೆದಿದೆ.
ಐದಾರು ಮಂದಿಯ ಗುಂಪು ರಾತ್ರಿ 11ರ ಸುಮಾರಿಗೆ ಮಂಗಳೂರಿನ ವೆಲೆನ್ಸಿಯದಲ್ಲಿರುವ ಐವನ್ ಡಿಸೋಜಾ ಅವರ ಮನೆ ಮೇಲೆ ಕಲ್ಲು ತೂರಾಟ ನಡೆಸಿ ಘೋಷಣೆಗಳನ್ನು ಕೂಗಿ ಬಳಿಕ ಪರಾರಿಯಾಗಿದೆ.ಎಂದು ಪೊಲೀಸರು ತಿಳಿಸಿದ್ದಾರೆ ಸ್ಥಳಕ್ಕೆ ಹಿರಿಯ ಪೊಲೀಸ್ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
Previous Articleನಷ್ಟದಲ್ಲಿದೆಯಾ ವಿ ಆರ್ ಎಲ್ ಸಂಸ್ಥೆ.
Next Article ಎಂತಹ ಕಷ್ಟ ಬಂತಪ್ಪ ನಟ ದರ್ಶನ್ ಗೆ