Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಕರಾವಳಿ, ಮಳೆನಾಡಿಗೆ ವಿಶೇಷ ಕಾರ್ಯಪಡೆ.
    ಸುದ್ದಿ

    ಕರಾವಳಿ, ಮಳೆನಾಡಿಗೆ ವಿಶೇಷ ಕಾರ್ಯಪಡೆ.

    vartha chakraBy vartha chakraಜೂನ್ 13, 2025ಯಾವುದೇ ಟಿಪ್ಪಣಿಗಳಿಲ್ಲ3 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಮಂಗಳೂರು,ಜೂ.13-
    ರಾಜ್ಯ ಸರ್ಕಾರಕ್ಕೆ ಸವಾಲಾಗಿ ಪರಿಣಮಿಸಿರುವ ಕರಾವಳಿ ಮತ್ತು ಮಲೆನಾಡು ಜಿಲ್ಲೆಗಳಲ್ಲಿನ ಕೋಮು ಹಿಂಸಾಚಾರವನ್ನು ಹತ್ತಿಕ್ಕಲು ದೇಶದಲ್ಲೇ ಮೊದಲ ಬಾರಿಗೆ ಕೋಮು ಹಿಂಸೆ ನಿಗ್ರಹ ವಿಶೇಷ ಕಾರ್ಯಪಡೆ ಅಸ್ತಿತ್ವಕ್ಕೆ ಬಂದಿದೆ.
    ಕರಾವಳಿ ಹಾಗೂ ಮಲೆನಾಡಿನ ಮೂರು ಜಿಲ್ಲೆಗಳಿಗೆ ಸೀಮಿತವಾಗಿ ರಚನೆಯಾಗಿರುವ ಈ ಕಾರ್ಯಪಡೆಯನ್ನು ಮುಂದಿನ ದಿನಗಳಲ್ಲಿ ಅಗತ್ಯವೇನೆಂದರೆ ಇಡೀ ರಾಜ್ಯಕ್ಕೆ ವಿಸ್ತರಿಸಲು ಸರ್ಕಾರ ಚಿಂತನೆ ನಡೆಸಿದೆ.
    ಇಲ್ಲಿಯವರೆಗೆ ನಕ್ಸಲ್ ನಿಗ್ರಹ ಪಡೆಯಲ್ಲಿ ಕೆಲಸ ಮಾಡುತ್ತಿದ್ದ 656 ಸಿಬ್ಬಂದಿ ಪೈಕಿ 248 ಮಂದಿಯನ್ನು ಈ ಕಾರ್ಯಪಡೆಗೆ ನಿಯೋಜಿಸಲಾಗಿದೆ. ಡಿಐಜಿ, ಡಿವೈಎಸ್ಪಿ, ಸಹಾಯಕ ಕಮಾಂಡೆಂಟ್, 4 ಇನ್ಸ್ ಸ್ಪೆಕ್ಟರ್, 16 ಪಿಎಸ್ಐ ಸೇರಿದಂತೆ ಒಟ್ಟು 248 ಸಿಬ್ಬಂದಿ ತಂಡದಲ್ಲಿದ್ದಾರೆ.
    ಈ ತಂಡ ಸಂಭಾವ್ಯ ಕೋಮು ಹಿಂಸಾಚಾರ, ಕೋಮು ಗಲಭೆಯ ಸಂಚು, ಮೂಲಭೂತವಾದಿ ಚಟುವಟಿಕೆ ನಿಗ್ರಹ ಸೇರಿದಂತೆ ಗುಪ್ತ ಮಾಹಿತಿ ಸಂಗ್ರಹಿಸಿ ಕಾರ್ಯಾಚರಣೆ ನಡೆಸಲಿದೆ. ಆ ಮೂಲಕ ಕೋಮು ಸೂಕ್ಷ್ಮ ಪ್ರದೇಶಗಳಲ್ಲಿ ನಡೆಯುವ ಚಟುವಟುಕೆಗಳ ಮೇಲೂ ನಿಗಾ ವಹಿಸಲಿದೆ.
    ಶಾಂತಿಯ ಸಂಕೇತವಾದ ಪಾರಿವಾಳದ ಚಿಹ್ನೆಯನ್ನೊಳಗೊಂಡ ವಿಶೇಷ ಕಾರ್ಯಪಡೆ ಲಾಂಛನ ಹಾಗೂ ಕೈಪಿಡಿ ಬಿಡುಗಡೆಗೊಳಿಸುವ ಮೂಲಕ ಗೃಹ ಸಚಿವ ಡಾ.ಪರಮೇಶ್ವರ್‌‌ ಕಾರ್ಯಪಡೆಗೆ ಚಾಲನೆ ನೀಡಿದರು.
    ಈ ವೇಳೆ ಮಾತನಾಡಿದ ಅವರು,ಆರು ತಿಂಗಳ ಹಿಂದೆ ಮಂಗಳೂರಿನಲ್ಲಿ ಒಂದು ಕೊಲೆಯಾಗಿತ್ತು. ಇದರಿಂದ ಸ್ವಾಭಾವಿಕವಾಗಿ ಆತಂಕ, ಭಯದ ವಾತಾವರಣ ನಿರ್ಮಾಣವಾಗಿತ್ತು.‌ಆದರೆ‌, ಆ ವೇಳೆ ಶಾಂತಿ ಸಹಬಾಳ್ವೆಯ ಪರಿಸ್ಥಿತಿಯನ್ನು ನಾನು ನೋಡಲೇ ಇಲ್ಲ ಎಂದು ಆತಂಕ ವ್ಯಕ್ತಪಡಿಸಿದರು
    ರಾಜ್ಯದಲ್ಲಿ ಕಲೆ, ಸಂಸ್ಕೃತಿ, ಸಾಹಿತ್ಯ ಉಳಿದಿದ್ದರೆ ಅದಕ್ಕೆ ಕರಾವಳಿ ಜಿಲ್ಲೆಗಳ ಕೊಡುಗೆ ಅಪಾರವಾಗಿದೆ. ರಾಜ್ಯದಲ್ಲೇ ಮೊದಲ ಖಾಸಗಿ ವೈದ್ಯಕೀಯ ಕಾಲೇಜುಗಳು ಮಂಗಳೂರಿನಲ್ಲಿ ಆರಂಭಿಸಲಾಗಿತ್ತು ನಾಡಿನ ಅಭಿವೃದ್ಧಿಯಲ್ಲೂ ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಯ ಕೊಡುಗೆ ಅಪಾರವಾಗಿದೆ‌. ಆದರೆ ಕೋಮು ಸಂಘರ್ಷದ ಮೂಲಕ ಈ ಖ್ಯಾತಿಗೆ ಚ್ಯುತಿ ಬಂದಿದೆ ಎಂದು ವಿಷಾದಿಸಿದರು
    ಈ ಹಿಂದೆ ಮಂಗಳೂರಿನಲ್ಲಿ ಕೊಲೆಯಾಗಿದ್ದಾಗ ಇರುವ ಸಿಬ್ಬಂದಿಗಳನ್ನೇ ಬಳಸಿಕೊಂಡು ಆಗಿನ ಪೊಲಿಸ್‌‍ ಆಯುಕ್ತರು ವಿಶೇಷ ಕಾರ್ಯಪಡೆ ರಚನೆ ಮಾಡಿದ್ದರು. ಇದರಿಂದ ಸ್ಪೂರ್ತಿ ಪಡೆದು ಈಗ ಹೊಸದಾಗಿ ಸುಸಜ್ಜಿತ ಕಾರ್ಯಪಡೆ ರಚನೆ ಮಾಡಲಾಗಿದೆ ಎಂದು ತಿಳಿಸಿದರು.
    ಮಂಗಳೂರಿನಲ್ಲಿ ಸಾಮರಸ್ಯ ಹಾಳಾಗಿದೆ. ಇದನ್ನು ಬಾಯಿ ಮಾತಿನಲ್ಲಿ ಸರಿಪಡಿಸಲು ಸಾಧ್ಯವಿಲ್ಲ ಎಂಬ ಕಾರಣಕ್ಕೆ ವಿಶೇಷ ಕಾರ್ಯಪಡೆ ರಚಿಸುವ ನಿರ್ಧಾರ ತೆಗೆದುಕೊಳ್ಳಬೇಕಾಯಿತು.ರಾಜ್ಯದಲ್ಲಿ ನಕ್ಸಲ್‌ ಚಟುವಟಿಕೆ ನಿಂತು ಹೋಗಿವೆ. ಹೀಗಾಗಿ ಅದಕ್ಕಾಗಿ ರಚನೆಯಾಗಿದ್ದ ವಿಶೇಷ ಕಾರ್ಯಪಡೆ ರದ್ದುಗೊಳಿಸಲು ಚರ್ಚೆಯಾಗುತ್ತಿತ್ತು. ಆ ಪಡೆಯಲ್ಲಿ ಕೆಲಸ ಮಾಡಿದವರಿಗೆ ಯುದ್ಧ ಕೌಶಲ್ಯ ಹಾಗೂ ಮಾಹಿತಿ ಸಂಗ್ರಹ ಸೇರಿದಂತೆ ಹಲವು ರೀತಿಯ ತರಬೇತಿಗಳನ್ನು ನೀಡಲಾಗಿತ್ತು. ಅದನ್ನು ಬಳಸಿಕೊಂಡು ಕೋಮು ಹಿಂಸೆ ನಿಗ್ರಹ ಪಡೆ ರಚಿಸಲು ನಿರ್ಧರಿಸಲಾಯಿತು. ಇದು ದೇಶದಲ್ಲೇ ಮೊದಲ ಉಪಕ್ರಮ ಎಂದರು.
    ಕೋಮುವಾದ ವಿಚಾರಧಾರೆಗಳನ್ನು ಪ್ರಚೋದಿಸುವುದು, ದ್ವೇಷದ ಭಾಷಣ ಮಾಡಿ ಸಮಾಜದಲ್ಲಿ ಸಾಮರಸ್ಯ ಹಾಳು ಮಾಡುವುದು, ಕಲುಷಿತ ವಾತಾವರಣ ನಿರ್ಮಿಸಿ ಸಹೋದರತ್ವ ಹಾಳು ಮಾಡುವ ವ್ಯಕ್ತಿಗಳು ಹಾಗೂ ಸಂಘಟನೆಗಳನ್ನು ಹತ್ತಿಕ್ಕುವ ಅಧಿಕಾರವನ್ನು ವಿಶೇಷ ಪಡೆಗೆ ನೀಡಲಾಗುವುದು. ಇವರಿಗೆ ಬೇರೆ ಯಾವುದೇ ಕೆಲಸ ಇಲ್ಲ. ಶಾಂತಿ ಕಾಪಾಡುವುದು ಪ್ರಮುಖ ಧ್ಯೇಯ ಎಂದರು.
    ಈ ಕಾರ್ಯಪಡೆ ಯಶಸ್ವಿಯಾಗಲಿದೆ ಎಂಬ ವಿಶ್ವಾಸ ತಮಗಿದೆ. ಈವರೆಗೂ ಒಳ್ಳೊಳ್ಳೆಯ ಮಾತುಗಳನ್ನಾಡಿ ಮೃದು ಧೋರಣೆಯಲ್ಲಿ ತಿಳಿ ಹೇಳುವ ಪ್ರಯತ್ನ ಮಾಡಿದ್ದೆವು. ಅದು ಅವರಿಗೆ ಮನವರಿಕೆಯಾಗಿಲ್ಲ. ಹೀಗಾಗಿ ಬಲಪ್ರಯೋಗ ಅನಿವಾರ್ಯವಾಗಿದೆ. ಮಂಗಳೂರಿನ ಜನ ಈ ಪಡೆಗೆ ಹೆಚ್ಚಿನ ಕೆಲಸ ಕೊಡದಂತೆ ಸ್ವಯಂ ಪ್ರೇರಿತವಾಗಿ ಸೌಹಾರ್ದತೆ ಕಾಪಾಡಿಕೊಳ್ಳಿ ಎಂದು ಸಲಹೆ ನೀಡಿದರು.
    ಒಂದು ವೇಳೆ ನಿಮ್ಮ ಪ್ರವೃತ್ತಿಯನ್ನು ಮುಂದುವರೆಸಿದರೆ ಕಾರ್ಯಪಡೆಯ ಕೆಲಸದೊತ್ತಡ ಹೆಚ್ಚಾಗುತ್ತದೆ. ಶಾಂತಿ ಮರುಸ್ಥಾಪನೆಗೆ ಎಲ್ಲರ ಸಹಕಾರ ಬೇಕು. 2023 ರ ವಿಧಾನಸಭೆ ಚುನಾವಣೆಗೆ ಪ್ರಣಾಳಿಕೆ ಸಿದ್ಧಗೊಳಿಸುವಾಗ ತಾವು ಮಂಗಳೂರಿಗೆ ಬಂದು ವಿವಿಧ ಸಂಘಟನೆಗಳ ಜೊತೆ ಚರ್ಚೆ ನಡೆಸಿದ್ದು, ಕಾನೂನು ಸುವ್ಯವಸ್ಥೆ ಕಾರಣಕ್ಕೆ ಬಂಡವಾಳ ಹೂಡಿಕೆ ಮಾಡಲು ಹಿಂದೇಟು ಹಾಕುವಂತಹ ವಾತಾವರಣವಿದೆ. ಮಕ್ಕಳನ್ನು ಇಲ್ಲಿ ಓದಿಸಲಾಗುತ್ತಿಲ್ಲ. ಬೆಂಗಳೂರಿಗೆ ಕಳುಹಿಸಬೇಕಾದ ಪರಿಸ್ಥಿತಿಯಿದೆ. ಇಲ್ಲಿ ಶಾಂತಿಪಾಲನೆಗೆ ಆದ್ಯತೆ ನೀಡಿ ಎಂದು ಜನ ಮನವಿ ಮಾಡಿದರು ಎಂದು ಸ್ಮರಿಸಿದರು
    ಈ ಪಡೆಯ ಬಗ್ಗೆ ಅನೇಕ ಜನ ಟೀಕೆ ಮಾಡುತ್ತಾರೆ. ಪಡೆಯ ಅಗತ್ಯವಿತ್ತು. ಕರಾವಳಿಯಲ್ಲಿ ಶಾಂತಿ ನೆಲೆಸಿದರೆ ರಾಜ್ಯದಲ್ಲೂ ಶಾಂತಿಯ ವಾತಾವರಣ ಇರುತ್ತದೆ. ಅಗತ್ಯಬಿದ್ದರೆ ವಿಶೇಷಪಡೆಯ ಸಂಖ್ಯೆಯನ್ನು ಹೆಚ್ಚು ಮಾಡಲಾಗುವುದು ಎಂದು ತಿಳಿಸಿದರು. ಧರ್ಮ ಹಾಗೂ ಜಾತಿಯ ಹೆಸರಿನಲ್ಲಿ ಬೇದಭಾವ ಹಾಗೂ ಹಿಂಸೆ ಮಾಡುವವರು ಸಂವಿಧಾನ ವಿರೋಧಿಗಳು. ಇದನ್ನು ತಮ ಸರ್ಕಾರ ಸಹಿಸುವುದಿಲ್ಲ. ಅಗತ್ಯಬಿದ್ದರೆ ಈ ಕಾರ್ಯಪಡೆಯನ್ನು ರಾಜ್ಯಾದ್ಯಂತ ವಿಸ್ತರಿಸಲು ತಮ್ಮ ಸರ್ಕಾರ ಸಿದ್ಧವಿದೆ ಎಂದು ಇದೇ ವೇಳೆ ಪ್ರಕಟಿಸಿದರು.

    Verbattle
    Verbattle
    Verbattle
    ಉಡುಪಿ ಕಲೆ ಕಾನೂನು ಕಾಲೇಜು ಕೊಲೆ ಚುನಾವಣೆ ಧರ್ಮ ಸರ್ಕಾರ ಸಾಹಿತ್ಯ
    Share. Facebook Twitter Pinterest LinkedIn Tumblr Email WhatsApp
    Previous Articleಕಾಂಗ್ರೆಸ್ ಶಾಸಕ ವಿನಯ್ ಕುಲಕರ್ಣಿ ಸಿಬಿಐ ವಶಕ್ಕೆ
    Next Article ಇದು ಮಂತ್ರಿ ಎಂ.ಬಿ.ಪಾಟೀಲ್‌ ಕನಸು.
    vartha chakra
    • Website

    Related Posts

    ಕೇಂದ್ರದ ಅನುಮತಿ ಸಿಕ್ಕರೆ ಮೇಕೆದಾಟು, ಯುಕೆಪಿ ಯೋಜನೆ ಜಾರಿ: ಡಿಸಿಎಂ ಡಿ.ಕೆ. ಶಿವಕುಮಾರ್

    ಫೆಬ್ರವರಿ 13, 2026

    ಶಾಸಕರೇ ಬಾಯಿ ಮುಚ್ಚಿಕೊಂಡಿರಿ.

    ಫೆಬ್ರವರಿ 13, 2026

    ಐಷಾರಾಮಿ ಬಸ್ಸುಗಳಲ್ಲಿ ಇವು ಇರಲೇಬೇಕು

    ಫೆಬ್ರವರಿ 13, 2026

    Leave A Reply Cancel Reply

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಕೇಂದ್ರದ ಅನುಮತಿ ಸಿಕ್ಕರೆ ಮೇಕೆದಾಟು, ಯುಕೆಪಿ ಯೋಜನೆ ಜಾರಿ: ಡಿಸಿಎಂ ಡಿ.ಕೆ. ಶಿವಕುಮಾರ್

    ಶಾಸಕರೇ ಬಾಯಿ ಮುಚ್ಚಿಕೊಂಡಿರಿ.

    ಐಷಾರಾಮಿ ಬಸ್ಸುಗಳಲ್ಲಿ ಇವು ಇರಲೇಬೇಕು

    ಪಿ.ಜಿ.ಗಳಿಗೆ ಬೀಳುತ್ತೇ‌ ಬೀಗ!

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Tracymix ರಲ್ಲಿ ಮಕ್ಕಳ ಮಾರಾಟ ಜಾಲ ಪತ್ತೆ.
    • LinwoodGah ರಲ್ಲಿ ಪರಪ್ಪನ ಅಗ್ರಹಾರ ಜೈಲಿನಲ್ಲಿ ರೌಡಿ ಹುಟ್ಟುಹಬ್ಬ.
    • LinwoodGah ರಲ್ಲಿ ಧರೆಗುರುಳಿದ ಭಾರೀ ಗಾತ್ರದ ತೇರು | Anekal
    Latest Kannada News

    ಕೇಂದ್ರದ ಅನುಮತಿ ಸಿಕ್ಕರೆ ಮೇಕೆದಾಟು, ಯುಕೆಪಿ ಯೋಜನೆ ಜಾರಿ: ಡಿಸಿಎಂ ಡಿ.ಕೆ. ಶಿವಕುಮಾರ್

    ಫೆಬ್ರವರಿ 13, 2026

    ಶಾಸಕರೇ ಬಾಯಿ ಮುಚ್ಚಿಕೊಂಡಿರಿ.

    ಫೆಬ್ರವರಿ 13, 2026

    ಐಷಾರಾಮಿ ಬಸ್ಸುಗಳಲ್ಲಿ ಇವು ಇರಲೇಬೇಕು

    ಫೆಬ್ರವರಿ 13, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.