ಬೆಂಗಳೂರು,ಜೂ.13:
ಕಾಂಗ್ರೆಸ್ ನ ಪ್ರಭಾವಿ ಶಾಸಕ ಹಾಗೂ ಮಾಜಿ ಸಚಿವ ವಿನಯ್ ಕುಲಕರ್ಣಿ ಅವರನ್ನು ಸಿಬಿಐ ಪೊಲೀಸರು ತಮ್ಮ ವಶಕ್ಕೆ ಪಡೆದುಕೊಂಡಿದ್ದಾರೆ.
ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯರಾಗಿದ್ದ ಯೋಗೇಶ್ ಗೌಡ ಹತ್ಯೆ ಪ್ರಕರಣದಲ್ಲಿ ವಿನಯ್ ಕುಲಕರ್ಣಿ ಪ್ರಮುಖ ಆರೋಪಿಯಾಗಿದ್ದಾರೆ.
ಒಂಬತ್ತು ವರ್ಷಗಳ ಹಿಂದೆ ಅಂದರೆ 2016ರಲ್ಲಿ ನಡೆದ ಜಿಲ್ಲಾ ಪಂಚಾಯಿತಿ ಸದಸ್ಯ ಯೋಗೀಶ್ ಗೌಡ ಕೊಲೆ ಪ್ರಕರಣದಲ್ಲಿ ಆರೋಪಿಯಾಗಿರುವ ಧಾರವಾಡ ಗ್ರಾಮೀಣ ಶಾಸಕ ವಿನಯ ಕುಲಕರ್ಣಿ ಅವರಿಗೆ ಈ ಪ್ರಕರಣದಲ್ಲಿ ಜಾಮೀನು ಸಿಕ್ಕಿತು ಈ ಹಿನ್ನೆಲೆಯಲ್ಲಿ ಅವರು ಬಿಡುಗಡೆಯಾಗಿದ್ದರು.
ಅವರ ಜಮೀನು ಆದೇಶ ಪ್ರಶ್ನಿಸಿ ಪೊಲೀಸರು ಸಲ್ಲಿಸಿದ್ದ ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್ ಇವರ ಜಾಮೀನು ಆದೇಶ ರದ್ದು ಪಡಿಸಿತ್ತು.
ಈ ಹಿನ್ನೆಲೆಯಲ್ಲಿ ಅವರು ಶುಕ್ರವಾರ ಬೆಂಗಳೂರಿನ ಜನಪ್ರತಿನಿಧಿಗಳ ನ್ಯಾಯಾಲಯಕ್ಕೆ ಶರಣಾಗಲು ಬಂದಿದ್ದರು. ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ಕೋರ್ಟ್ಗೆ ಶರಣಾಗುತ್ತಿದ್ದಂತೆಯೇ ಸಿಬಿಐ ಅವರನ್ನು ವಶಕ್ಕೆ ಪಡೆದಿದೆ. ಪ್ರಕರಣದಲ್ಲಿ ಇನ್ನೂ ಅವರನ್ನು ವಿಚಾರಣೆಗೆ ಒಳಪಡಿಸುವ ಅವರನ್ನು ವಶಕ್ಕೆ ಪಡೆಯಲಾಗಿದೆ ಎಂದು ಹೇಳಲಾಗಿದೆ
Previous Articleಅಹಮದಾಬಾದ್ ನಲ್ಲಿ ವಿಮಾನ ದುರಂತ.
Next Article ಕರಾವಳಿ, ಮಳೆನಾಡಿಗೆ ವಿಶೇಷ ಕಾರ್ಯಪಡೆ.
