Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಕಾಂಗ್ರೆಸ್ ಶಾಸಕರ ಬಾಯಿಗೆ ಬೀಗ
    ರಾಜಕೀಯ

    ಕಾಂಗ್ರೆಸ್ ಶಾಸಕರ ಬಾಯಿಗೆ ಬೀಗ

    vartha chakraBy vartha chakraಜೂನ್ 25, 20251 ಟಿಪ್ಪಣಿ2 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು,ಜೂ.25-
    ರಾಜ್ಯ ಸರ್ಕಾರದ ಕಾರ್ಯವೈಖರಿ ಸೇರಿದಂತೆ ಇತರೆ ವಿಚಾರಗಳ ಬಗ್ಗೆ ವಿವಾದಾತ್ಮಕ ಹೇಳಿಕೆ ನೀಡುತ್ತಿರುವ ಶಾಸಕರು ಹಾಗೂ ಮುಖಂಡರ ಬಾಯಿಗೆ ಹಾಕುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಕಾಂಗ್ರೆಸ್ ಹೈಕಮಾಂಡ್ ಸೂಚನೆ ನೀಡಿದೆ.
    ದೆಹಲಿ ಪ್ರವಾಸದಲ್ಲಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಪಕ್ಷದ ಸಂಘಟನಾ ಕಾರ್ಯದರ್ಶಿ ವೇಣುಗೋಪಾಲ್ ಮತ್ತು ರಾಜ್ಯ ಕಾಂಗ್ರೆಸ್ ಉಸ್ತುವಾರಿ ನಾಯಕ ರಣದೀಪ್ ಸಿಂಗ್ ಸುರ್ಜೇವಾಲ ಅವರೊಂದಿಗೆ ಮಾತುಕತೆ ನಡೆಸಿದರು.
    ಈ ವೇಳೆ ಶಾಸಕರಾದ ಬಿ.ಆರ್.ಪಾಟೀಲ್,ರಾಜು ಕಾಗೆ ಸೇರಿದಂತೆ ಹಲವರು ಮಾತನಾಡುತ್ತಿರುವ ಬಗ್ಗೆ ಪ್ರಸ್ತಾಪಿಸಿದ ಖರ್ಗೆ ಅವರು ಇವರ ಹೇಳಿಕೆಯಿಂದ ಪಕ್ಷ ಮತ್ತು ಸರ್ಕಾರಕ್ಕೆ ದೊಡ್ಡ ಮಟ್ಟದಲ್ಲಿ ಮುಜುಗರ ಉಂಟಾಗುತ್ತಿದೆ ಇವರ ಹೇಳಿಕೆಗಳು ಪ್ರತಿಪಕ್ಷಗಳಿಗೆ ದೊಡ್ಡ ಅಸ್ತ್ರವಾಗುತ್ತಿದೆ ಎಂದು ಬೇಸರ ವ್ಯಕ್ತಪಡಿಸಿದ್ದಾರೆ.
    ಬಿ ಆರ್ ಪಾಟೀಲ್ ಅವರಂತೂ ಹಲವು ಬಾರಿ ಈ ರೀತಿಯ ಹೇಳಿಕೆಗಳನ್ನು ನೀಡಿ ಗೊಂದಲ ಸೃಷ್ಟಿಸುತ್ತಿದ್ದಾರೆ ಅವರು ನಿಮಗೆ ಆತ್ಮೀಯರು ಯಾಕೆ ಈ ರೀತಿ ಹೇಳಿಕೆ ನೀಡುತ್ತಿದ್ದಾರೆ ಎನ್ನುವುದು ತಿಳಿಯುತ್ತಿಲ್ಲ ಹೀಗಾಗಿ ತಕ್ಷಣವೇ ಎಲ್ಲರನ್ನೂ ಕರೆದು ಮಾತುಕತೆ ನಡೆಸಬೇಕು ಇನ್ನು ಮುಂದೆ ಯಾರೂ ಕೂಡ ಈ ರೀತಿಯಾಗಿ ಹೇಳಿಕೆ ನೀಡಿದಂತೆ ನೋಡಿಕೊಳ್ಳಬೇಕು ಎಂದು ಸಲಹೆ ಮಾಡಿದ್ದಾರೆ.
    ಇದಾದ ಬಳಿಕ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸುರ್ಜೇ ವಾಲ ಅವರೊಂದಿಗೆ ಮಾತುಕತೆ ನಡೆಸಿದ್ದು ಅವರು ಕೂಡ ಶಾಸಕರ ಹೇಳಿಕೆಗಳ ಕುರಿತಂತೆ ಅಸಮಾಧಾನ ವ್ಯಕ್ತಪಡಿಸಿದ್ದಾರೆ ಅಲ್ಲದೆ ತಕ್ಷಣವೇ ಎಲ್ಲ ಶಾಸಕರ ಸಭೆ ಎಂದು ಗೊತ್ತಾಗಿದೆ.
    ಮುಂದಿನ ವಾರ ತಾವು ಬೆಂಗಳೂರಿಗೆ ಆಗಮಿಸುತ್ತಿದ್ದು ಆ ವೇಳೆ, ಪಕ್ಷದ ಪದಾಧಿಕಾರಿಗಳ ಸಭೆ ನಡೆಯಲಿದೆ ಇದೇ ಸಮಯದಲ್ಲಿ ಶಾಸಕರ ಸಭೆಯನ್ನು ಕರೆಯುವಂತೆ ಸೂಚಿಸಿದ್ದಾರೆ ಈ ಸಭೆಯಲ್ಲಿ ಶಾಸಕರ ಅಹವಾಲು ಆಲಿಸಲಾಗುವುದು ಅದಕ್ಕೆ ವ್ಯವಸ್ಥೆ ಮಾಡುವಂತೆ ಹೇಳಿದರು ಎಂದು ಉನ್ನತ ಮೂಲಗಳು ತಿಳಿಸಿವೆ.
    ಖಂಡ್ರೆ ಪರ ಬ್ಯಾಟಿಂಗ್:
    ಬೆಳಗ್ಗೆ ಪಕ್ಷದ ಸಂಘಟನಾ ಕಾರ್ಯದರ್ಶಿ ವೇಣುಗೋಪಾಲ್ ಅವರನ್ನು ಭೇಟಿ ಮಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರದೇಶ ಕಾಂಗ್ರೆಸ್ ಅಧ್ಯಕ್ಷರ ಬದಲಾವಣೆ ಮತ್ತು ವಿಧಾನ ಪರಿಷತ್ ನಾಮಕರಣ ಸದಸ್ಯರ ನೇಮಕ ಕುರಿತಂತೆ ಚರ್ಚೆ ನಡೆಸಿದ್ದಾರೆ.
    ಜಿಲ್ಲಾ ಮತ್ತು ತಾಲೂಕು ಪಂಚಾಯಿತಿ ಚುನಾವಣೆಗೆ ಮುನ್ನ ಪಕ್ಷದ ರಾಜ್ಯಾಧ್ಯಕ್ಷರನ್ನು ಬದಲಾವಣೆ ಮಾಡಿ ಸಂಘಟನೆಯ ಕಡೆ ಗಮನಹರಿಸಬೇಕಾಗಿದೆ ಈಗಾಗಲೇ ಕಾರ್ಯಾಧ್ಯಕ್ಷರಾಗಿ ಕೆಲಸ ಮಾಡಿ ಅನುಭವವಿರುವ ಈಶ್ವರ ಖಂಡ್ರೆ ಪಕ್ಷದ ಜವಾಬ್ದಾರಿ ವಹಿಸಿಕೊಳ್ಳಲು ಸಿದ್ದರಿದ್ದಾರೆ ಅದಕ್ಕೆ ಅವಕಾಶ ಮಾಡಿಕೊಡುವಂತೆ ಮನವಿ ಮಾಡಿದ್ದಾರೆ.
    ಖಂಡ್ರೆ ಅವರು ಮಂತ್ರಿ ಸ್ಥಾನಕ್ಕೆ ರಾಜಿನಾಮೆ ನೀಡಿ ಸಂಘಟನೆಯಲ್ಲಿ ತೊಡಗಿಕೊಳ್ಳಲಿದ್ದಾರೆ ಇದರೊಂದಿಗೆ ಸಂಪುಟದಲ್ಲಿ ಎರಡು ಹುದ್ದೆಗಳು ಖಾಲಿಯಾಗಲಿದ್ದು ಎಂದು ಅದರ ಭರ್ತಿಗೆ ಅವಕಾಶ ಮಾಡಿಕೊಡಬೇಕು ಇದರಲ್ಲಿ ಒಂದು ಹುದ್ದೆಯನ್ನು ರಾಜೀನಾಮೆ ನೀಡಿರುವ ನಾಗೇಂದ್ರ ಅವರಿಗೆ ಮತ್ತೊಂದು ಹುದ್ದೆಯನ್ನು ಹಿರಿಯ ನಾಯಕ ಹರಿಪ್ರಸಾದ್ ಅವರಿಗೆ ನೀಡಲು ಚಿಂತನೆ ನಡೆಸಿದ್ದು ಇದಕ್ಕೆ ಅವಕಾಶ ಮಾಡಿಕೊಡಿ ಎಂದು ಮನವಿ ಮಾಡಿರುವುದಾಗಿ ಉನ್ನತ ಮೂಲಗಳು ತಿಳಿಸಿವೆ.
    ವಿಧಾನ ಪರಿಷತ್ತಿನ ನಾಲ್ಕು ಸ್ಥಾನಗಳ ನಾಮಕರಣ ಕುರಿತಾಗಿ ಅನಗತ್ಯ ಗೊಂದಲ ಉಂಟಾಗಿದೆ ಈಗ ಅಂತಿಮಗೊಳಿಸಿರುವ ಪಟ್ಟಿಯನ್ನು ಬದಲಾವಣೆ ಮಾಡಿದರೆ ಮತ್ತಷ್ಟು ಗೊಂದಲ ಸೃಷ್ಟಿಯಾಗಲಿದೆ ಹೀಗಾಗಿ ಇದಕ್ಕೆ ಅವಕಾಶ ನೀಡಬಾರದು ನಾಮಕರಣ ಸದಸ್ಯರನ್ನು ನೇಮಿಸುವಾಗ ಪಕ್ಷದ ಕಾರ್ಯಕರ್ತರಿಗಿಂತ ಪಕ್ಷದ ಪರ ಒಲವಿರುವ ವ್ಯಕ್ತಿಗಳನ್ನು ಆಯ್ಕೆ ಮಾಡಲಾಗುತ್ತದೆ ಈಗ ಮಾಡಿರುವ ನಾಲ್ವರಲ್ಲಿ ಇಬ್ಬರು ಪಕ್ಷದ ಕಾರ್ಯಕರ್ತರಾದರೆ, ಇನ್ನಿಬ್ಬರು ಪಕ್ಷದ ಪರ ಒಲವು ಇರುವ ನಾಯಕರಾಗಿದ್ದಾರೆ ಹೀಗಾಗಿ ಇವರುಗಳನ್ನು ನೇಮಿಸಲು ಅವಕಾಶ ನೀಡಬೇಕು ಎಂದು ತಿಳಿಸಿರುವುದಾಗಿ ಗೊತ್ತಾಗಿದೆ.

    Verbattle
    Verbattle
    Verbattle
    ಕಾಂಗ್ರೆಸ್ ಚುನಾವಣೆ ಬೆಂಗಳೂರು ಸರ್ಕಾರ ಸಿದ್ದರಾಮಯ್ಯ
    Share. Facebook Twitter Pinterest LinkedIn Tumblr Email WhatsApp
    Previous Articleನಟ ಶ್ರೀಕಾಂತ್ ಮೇಲೆ ಎಷ್ಟೊಂದು ಕೇಸ್ ಗೊತ್ತಾ?
    Next Article ನಕ್ಷೆ ಇಲ್ಲದೆ ಮನೆ ಕಟ್ಟಿದರೆ ಏನಾಗುತ್ತೆ ಗೊತ್ತಾ ?
    vartha chakra
    • Website

    Related Posts

    ಗ್ಯಾರಂಟಿ ಯೋಜನೆಗಳ ಭರ್ಜರಿ ಯಶಸ್ಸು: ರಾಜ್ಯದಲ್ಲಿ ಗಣನೀಯವಾಗಿ ಇಳಿಕೆಯಾದ ರೈತರ ಆತ್ಮಹತ್ಯೆ ಪ್ರಕರಣ!

    ಫೆಬ್ರವರಿ 24, 2026

    ಹಿಂದುಳಿದ ವರ್ಗಗಳ ಬೇಡಿಕೆ ಗೊತ್ತಾ..?

    ಫೆಬ್ರವರಿ 24, 2026

    ಬಿಜೆಪಿಯ ಅಂತಿಮ ದಿನಗಳು ಹತ್ತಿರವಾಗಿವೆ: ಚಿಕ್ಕಬಳ್ಳಾಪುರದಲ್ಲಿ ಡಿಸಿಎಂ ಡಿ.ಕೆ. ಶಿವಕುಮಾರ್ ವಾಗ್ದಾಳಿ

    ಫೆಬ್ರವರಿ 23, 2026

    Leave A Reply Cancel Reply

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಗ್ಯಾರಂಟಿ ಯೋಜನೆಗಳ ಭರ್ಜರಿ ಯಶಸ್ಸು: ರಾಜ್ಯದಲ್ಲಿ ಗಣನೀಯವಾಗಿ ಇಳಿಕೆಯಾದ ರೈತರ ಆತ್ಮಹತ್ಯೆ ಪ್ರಕರಣ!

    ಅಮೆರಿಕದಲ್ಲಿ ಹಿಂದೂಗಳೇ ಅತ್ಯಂತ ಹೆಚ್ಚು ಸುಶಿಕ್ಷಿತರು: ಪ್ಯೂ ಸಂಶೋಧನಾ ಸಂಸ್ಥೆಯ ವರದಿಯಲ್ಲಿ ಬಹಿರಂಗ

    ಹಿಂದುಳಿದ ವರ್ಗಗಳ ಬೇಡಿಕೆ ಗೊತ್ತಾ..?

    ಅತ್ತೆಯ ಸಾವಿಗೆ ದೇವರ ಮೊರೆ ಹೋದ ಸೊಸೆ! ಹುಂಡಿಯಲ್ಲಿ ಸಿಕ್ಕ ಪತ್ರ ವೈರಲ್!!

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Diegotup ರಲ್ಲಿ ಮಗನನ್ನು ಕೊಂದ ತಾಯಿ ಮಾನಸಿಕ ರೋಗಿ ಅಲ್ಲ| Suchana Seth
    • Bdwxii ರಲ್ಲಿ ಕುಮಾರಸ್ವಾಮಿಗೆ ಶಿವಕುಮಾರ್ ಕೊಟ್ಟ ಉತ್ತರ ನೋಡಿ.
    • Lfbwpe ರಲ್ಲಿ Times Group ವಿಭಜನೆ!
    Latest Kannada News

    ಗ್ಯಾರಂಟಿ ಯೋಜನೆಗಳ ಭರ್ಜರಿ ಯಶಸ್ಸು: ರಾಜ್ಯದಲ್ಲಿ ಗಣನೀಯವಾಗಿ ಇಳಿಕೆಯಾದ ರೈತರ ಆತ್ಮಹತ್ಯೆ ಪ್ರಕರಣ!

    ಫೆಬ್ರವರಿ 24, 2026

    ಅಮೆರಿಕದಲ್ಲಿ ಹಿಂದೂಗಳೇ ಅತ್ಯಂತ ಹೆಚ್ಚು ಸುಶಿಕ್ಷಿತರು: ಪ್ಯೂ ಸಂಶೋಧನಾ ಸಂಸ್ಥೆಯ ವರದಿಯಲ್ಲಿ ಬಹಿರಂಗ

    ಫೆಬ್ರವರಿ 24, 2026

    ಹಿಂದುಳಿದ ವರ್ಗಗಳ ಬೇಡಿಕೆ ಗೊತ್ತಾ..?

    ಫೆಬ್ರವರಿ 24, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.