Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಕಾಡುಗಳ್ಳ ವೀರಪ್ಪನ್ ಅಡಗುದಾಣ ನೋಡಬೇಕಾ..
    ಮಾಹಿತಿ

    ಕಾಡುಗಳ್ಳ ವೀರಪ್ಪನ್ ಅಡಗುದಾಣ ನೋಡಬೇಕಾ..

    vartha chakraBy vartha chakraಜನವರಿ 7, 20251 ಟಿಪ್ಪಣಿ2 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು:
    ತಮಿಳುನಾಡು ಮತ್ತು ಕರ್ನಾಟಕ ಅರಣ್ಯ ಇಲಾಖೆ ಹಾಗೂ ಪೊಲೀಸರಿಗೆ ಸವಾಲಾಗಿದ್ದ ಕಾಡುಗಳ್ಳ, ದಂತಚೋರ ವೀರಪ್ಪನ್ ಅಡಗುದಾಣವಾಗಿದ್ದ ಕಾಡು ಇದೀಗ ಪ್ರವಾಸೋದ್ಯಮ ಕೇಂದ್ರವಾಗಲಿದೆ
    ವರನಟ ಡಾ. ರಾಜ್ಕುಮಾರ್ ಅವರನ್ನು ಅಪಹರಣ‌ ಮಾಡಿದ ವೀರಪ್ಪನ್ ಅವರನ್ನು ನಾಗರಹೊಳೆ ಅಭಯಾರಣ್ಯದ ಕರ್ನಾಟಕ‌ಕ್ಕೆ ಸೇರಿದ ಪ್ರದೇಶದಲ್ಲೇ ಸುತ್ತಾಡಿಸಿದ್ದ.ಇದೀಗ‌ ಆ ಕಾಡಿನಲ್ಲಿ ಸಫಾರಿ ಆರಂಭಿಸುವ ಮೂಲಕ ಪ್ರವಾಸೋದ್ಯಮಕ್ಕೆ ಉತ್ತೇಜನ ನೀಡಲು ರಾಜ್ಯ ಸರ್ಕಾರ ಮುಂದಾಗಿದೆ.
    ಶೀಘ್ರದಲ್ಲೇ ತಮಿಳುನಾಡು-ಕರ್ನಾಟಕ ಗಡಿಯಲ್ಲಿರುವ ಹೊಗೇನಕಲ್ ಜಲಪಾತದಿಂದ ಸಫಾರಿ ಆರಂಭಿಸಲು ಕರ್ನಾಟಕ ಅರಣ್ಯ ಇಲಾಖೆ ಉತ್ಸುಕವಾಗಿದೆ.
    ತಮಿಳುನಾಡು ವೀರಪ್ಪನ್‌ನ ಹುಟ್ಟೂರಾದ ಗೋಪಿನಾಥನ್‌ನಿಂದ ಆರಂಭಿಸಿರುವ ಸಫಾರಿಗೆ ಪ್ರವಾಸಿಗರಿಂದ ಹೆಚ್ಚಿನ ಬೇಡಿಕೆ ಇರುವುದನ್ನು ಗಮನಿಸಿ ಕರ್ನಾಟಕ ಅರಣ್ಯ ಇಲಾಖೆ ಸಹ ಹೊಗೇನಕಲ್ನಲ್ಲಿ ಸಫಾರಿ ಆರಂಭಿಸಲು ಪ್ರಕ್ರಿಯೆ ಆರಂಭಿಸಿದೆ.
    ಉದ್ದೇಶಿತ ಸಫಾರಿಯು 22 ಕಿಲೋಮೀಟರ್ ಅರಣ್ಯ ವ್ಯಾಪ್ತಿಯನ್ನು ಒಳಗೊಂಡಿರಲಿದೆ. ವಿಶೇಷವಾಗಿ, ಕಾವೇರಿ ವನ್ಯಜೀವಿ ಅಭಯಾರಣ್ಯದಲ್ಲಿನ ವೀರಪ್ಪನ್ ಅಡಗುತಾಣಗಳನ್ನು ಒಳಗೊಂಡಿರಲಿವೆ, ಈ ಪ್ರದೇಶವು ಆನೆಗಳು, ಜಿಂಕೆಗಳು, ಕರಡಿಗಳು ಮತ್ತು ಇತರ ವನ್ಯಜೀವಿಗಳ ಹೆಚ್ಚಿನ ಇರುವಿಕೆಯನ್ನು ಹೊಂದಿವೆ ಎಂದು ವರದಿ ಉಲ್ಲೇಖಿಸಿದೆ.
    ಕಾವೇರಿ ವನ್ಯಜೀವಿ ಅಭಯಾರಣ್ಯದ ಅಧಿಕಾರಿಗಳು ಹೊಗೇನಕಲ್ನಿಂದಲೇ ಸಫಾರಿಯನ್ನು ಪ್ರಾರಂಭಿಸಲು ಬಯಸಿದ್ದಾರೆ. ಯಾಕೆಂದರೆ ಇದು ಗಡಿಯ ಎರಡೂ ಬದಿಗಳಲ್ಲಿ ಪ್ರವಾಸಿಗರ ನೆಚ್ಚಿನ ತಾಣವಾಗಿದೆ. ವಿಶೇಷವಾಗಿ ಕಾವೇರಿ ನದಿಯಲ್ಲಿ ದೋಣಿ ವಿಹಾರ ಮತ್ತು ಮೀನಿನ ಸಾಂಪ್ರದಾಯಿಕ ಭಕ್ಷ್ಯಗಳಿಂದ ಪ್ರಸಿದ್ಧವಾಗಿದೆ. ಹೀಗಾಗಿ ಈ ಭಾಗದಲ್ಲಿ ಆರಂಭಿಸಿದರೆ ಹೆಚ್ಚಿನ ಪ್ರವಾಸಿಗರನ್ನು ಸೆಳೆಯಬಹುದು ಎಂಬುದು ಅಧಿಕಾರಿಗಳ ಲೆಕ್ಕಾಚಾರವಾಗಿದೆ.
    ಅರಣ್ಯ ಇಲಾಖೆಯು ಬೆಳಿಗ್ಗೆ ಎರಡು ಮತ್ತು ಸಂಜೆ ಎರಡರಂತೆ ನಾಲ್ಕು ಟ್ರಿಪ್‌ಗಳ ಸಫಾರಿಗೆ ಚಿಂತನೆ ನಡೆಸಿದೆ. 25 ಮಂದಿಯನ್ನು ಸಾಗಿಸುವ ಸಾಮರ್ಥ್ಯವುಳ್ಳ 2 ವಾಹನಗಳನ್ನು ಬಳಸಿಕೊಳ್ಳಲು ಉದ್ದೇಶಿಸಿದೆ. ದಟ್ಟಾರಣ್ಯದಲ್ಲಿ ಪ್ರವಾಸಿಗರನ್ನು ಸುರಕ್ಷಿತವಾಗಿ ಕರೆದೊಯ್ಯಬಲ್ಲ ಹೊಸ ಸಫಾರಿ ವಾಹನಗಳಿಗೆ ಅರಣ್ಯ ಇಲಾಖೆ ಅಧಿಕಾರಿಗಳು ಈಗಾಗಲೇ ಆರ್ಡರ್ ಮಾಡಿದ್ದಾರೆ ಎಂದೂ ವರದಿ ಉಲ್ಲೇಖಿಸಿದೆ.
    ಹೊಗೇನಕಲ್ ಜಲಪಾತಕ್ಕೆ 2024 ರ ಜನವರಿಯಲ್ಲಿ 3500 ಪ್ರವಾಸಿಗರು ಭೇಟಿ ನೀಡಿದ್ದರೆ, ಮಾರ್ಚ್‌ನಲ್ಲಿ 9,381 ಪ್ರವಾಸಿಗರು ಭೇಟಿ ನೀಡಿದ್ದರು. ಸುಮಾರು 1,400 ವಿದೇಶಿ ಪ್ರವಾಸಿಗರು ಜಿಲ್ಲೆಯ ಪ್ರಮುಖ ಪ್ರವಾಸಿ ತಾಣಗಳಿಗೆ ಭೇಟಿ ನೀಡಿದ್ದಾರೆ. ಈ ಜಾಗದಲ್ಲಿ ಸಫಾರಿಯನ್ನೂ ಆರಂಭಿಸುವುದರಿಂದ ಸ್ಥಳೀಯ ಆರ್ಥಿಕತೆಗೆ ಉತ್ತೇಜನ ದೊರೆಯಲಿದೆ. ನೇರ ಮತ್ತು ಪರೋಕ್ಷ ಉದ್ಯೋಗ ಸೃಷ್ಟಿಯಾಗಲಿದೆ ಎಂದು ಅಧಿಕಾರಿಗಳ ಲೆಕ್ಕಾಚಾರವಾಗಿದೆ.

    Verbattle
    Verbattle
    Verbattle
    ಕರ್ನಾಟಕ ತಮಿಳುನಾಡು ಬೆಂಗಳೂರು ಸರ್ಕಾರ
    Share. Facebook Twitter Pinterest LinkedIn Tumblr Email WhatsApp
    Previous Articleಕರ್ನಾಟಕಕ್ಕೆ ಸಿದ್ದರಾಮಯ್ಯ ಹೆಸರಿಡಬೇಕಂತ
    Next Article ರಾಜ್ಯ ಕಾಂಗ್ರೆಸ್ಸಿನಲ್ಲಿ ಏನಾಗುತ್ತಿದೆ ಗೊತ್ತಾ
    vartha chakra
    • Website

    Related Posts

    ಕೇಂದ್ರದ ಅನುಮತಿ ಸಿಕ್ಕರೆ ಮೇಕೆದಾಟು, ಯುಕೆಪಿ ಯೋಜನೆ ಜಾರಿ: ಡಿಸಿಎಂ ಡಿ.ಕೆ. ಶಿವಕುಮಾರ್

    ಫೆಬ್ರವರಿ 13, 2026

    ಶಾಸಕರೇ ಬಾಯಿ ಮುಚ್ಚಿಕೊಂಡಿರಿ.

    ಫೆಬ್ರವರಿ 13, 2026

    ಐಷಾರಾಮಿ ಬಸ್ಸುಗಳಲ್ಲಿ ಇವು ಇರಲೇಬೇಕು

    ಫೆಬ್ರವರಿ 13, 2026

    Leave A Reply Cancel Reply

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಕೇಂದ್ರದ ಅನುಮತಿ ಸಿಕ್ಕರೆ ಮೇಕೆದಾಟು, ಯುಕೆಪಿ ಯೋಜನೆ ಜಾರಿ: ಡಿಸಿಎಂ ಡಿ.ಕೆ. ಶಿವಕುಮಾರ್

    ಶಾಸಕರೇ ಬಾಯಿ ಮುಚ್ಚಿಕೊಂಡಿರಿ.

    ಐಷಾರಾಮಿ ಬಸ್ಸುಗಳಲ್ಲಿ ಇವು ಇರಲೇಬೇಕು

    ಪಿ.ಜಿ.ಗಳಿಗೆ ಬೀಳುತ್ತೇ‌ ಬೀಗ!

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • LinwoodGah ರಲ್ಲಿ ಅಧಿಕಾರ ಹಂಚಿಕೆ ಒಪ್ಪಂದ ಆಗಿಲ್ಲವೇ..?
    • LinwoodGah ರಲ್ಲಿ ಚೈತ್ರಾ ಕುಂದಾಪುರ ಮತ್ತವರ ಪತಿ ಕಳ್ಳರಂತೆ
    • LinwoodGah ರಲ್ಲಿ ಡ್ರಗ್ಸ್ ದಂಧೆ – ಪೊಲೀಸರೇ ಎಚ್ಚರ!
    Latest Kannada News

    ಕೇಂದ್ರದ ಅನುಮತಿ ಸಿಕ್ಕರೆ ಮೇಕೆದಾಟು, ಯುಕೆಪಿ ಯೋಜನೆ ಜಾರಿ: ಡಿಸಿಎಂ ಡಿ.ಕೆ. ಶಿವಕುಮಾರ್

    ಫೆಬ್ರವರಿ 13, 2026

    ಶಾಸಕರೇ ಬಾಯಿ ಮುಚ್ಚಿಕೊಂಡಿರಿ.

    ಫೆಬ್ರವರಿ 13, 2026

    ಐಷಾರಾಮಿ ಬಸ್ಸುಗಳಲ್ಲಿ ಇವು ಇರಲೇಬೇಕು

    ಫೆಬ್ರವರಿ 13, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.