ಬೆಂಗಳೂರು, ಸೆ. 28:
ಗೃಹಲಕ್ಷ್ಮಿ ಯೋಜನೆಯ ಫಲಾನುಭವಿಗಳಿಗೆ ಗುಡ್‌ನ್ಯೂಸ್ ಸಿಕ್ಕಿದೆ .ಇನ್ನು ಕೆಲವೇ ದಿನಗಳಲ್ಲಿ ಅವರ ಬ್ಯಾಂಕ್ ಖಾತೆಗೆ ಎರಡು ತಿಂಗಳ ಹಣ ಜಮೆಯಾಗಲಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಮಾಹಿತಿ ನೀಡಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜುಲೈ ತಿಂಗಳ ಕಂತಿನ ಹಣ ಬಿಡುಗಡೆಗೆ ಪ್ರಕ್ರಿಯೆ ನಡೆಯುತ್ತಿದ್ದು, ಅದಾದ ಬಳಿಕ ಆಗಸ್ಟ್ ತಿಂಗಳ ಕಂತಿನ ಹಣವೂ ಜಮೆಯಾಗಲಿದೆ ಎಂದು ತಿಳಿಸಿದರು
ಯಾವುದೇ ಕಾರಣಕ್ಕೂ ಪಂಚ ಗ್ಯಾರಂಟಿ ಯೋಜನೆಗಳನ್ನು ಕಾಂಗ್ರೆಸ್ ಸರ್ಕಾರ ನಿಲ್ಲಿಸಲ್ಲ. ಯಾವುದೇ ವದಂತಿಗಳಿಗೆ ಕಿವಿಗೊಡಬೇಡಿ. ಗೃಹಲಕ್ಷ್ಮೀ ಹಣ ಎಲ್ಲಾ ಫಲಾನುಭವಿಗಳಿಗೂ ಬಂದೇ ಬರುತ್ತದೆ. ಯಾರೂ ಆತಂಕ ಪಡುವ ಅಗತ್ಯವಿಲ್ಲ ಎಂದು ಹೇಳಿದರು.
ಇನ್ನು ಮುಂದುವರಿದು ಮಾತನಾಡಿದ ಅವರು, ನಮ್ಮ ಸರ್ಕಾರ ಬಡವರ ಪರ ಇದ್ದು, ಎಲ್ಲರಿಗೂ ಅನುಕೂಲ ಮಾಡಿಕೊಟ್ಟಿದೆ. ಯಾರೂ ಆತಂಕ ಪಡುವ ಅಗತ್ಯವಿಲ್ಲ. ಹಾಗಾಗಿ ಎಲ್ಲರಿಗೂ ಎರಡು ತಿಂಗಳ ಗೃಹಲಕ್ಷ್ಮೀ ಹಣ ಬಂದೇ ಬರುತ್ತದೆ ಎಂದು ಸ್ಪಷ್ಟನೆ ನೀಡಿದರು.
ಮುಂದುವರೆದು ಹೆಬ್ಬಾಳ್ಕರ್ ರವರು ನಾನು ಎಂದಿಗೂ ಪಂಚಮಸಾಲಿ ಮೀಸಲಾತಿ ಪರವಾಗಿದ್ದೇನೆ. 2ಎ ಮೀಸಲಾತಿಗಾಗಿ ನಡೆಯುತ್ತಿರುವ ಹೋರಾಟಕ್ಕೆ ಸದಾ ನನ್ನ ಬೆಂಬಲ ಇರುತ್ತದೆ ಎಂದಿದ್ದು, ಮಾಜಿ ಮುರುಗೇಶ್ ನಿರಾಣಿ ಅವರು ಅಧಿಕಾರದಲ್ಲಿದ್ದಾಗ ಪಂಚಮಸಾಲಿ ಸಮುದಾಯದ ಬಗ್ಗೆ ಯೋಚಿಸಲಿಲ್ಲ. ಈಗ ಸುಖಾಸುಮನೆ ನನ್ನ ಮೇಲೆ ಇಲ್ಲಸಲ್ಲದ ಆರೋಪಗಳನ್ನು ಮಾಡುತ್ತಿದ್ದಾರೆ. ಬೇರೆ ಸಮಾಜಕ್ಕೆ ಯಾವುದೇ ತೊಂದರೆಯಾಗದಂತೆ ಮೀಸಲಾತಿ ನೀಡಲಿ ಎಂಬುದೇ ನಮ್ಮ ಆಗ್ರಹವಾಗಿದೆ ಎಂದರು.
ಬೆಳಗಾವಿ ಜಿಲ್ಲೆಯನ್ನು ಮೂರು ವಿಭಾಗಗಳನ್ನಾಗಿ ಮಾಡಬಹುದು. ಜಿಲ್ಲೆ ವಿಭಜನೆ ಗೊಂಡರೆ ಅಭಿವೃದ್ಧಿಗೆ ಮತ್ತಷ್ಟು ಒತ್ತು ನೀಡಬಹುದು. ಈ ಕುರಿತು ದಸರಾ ಹಬ್ಬ ಮುಕ್ತಾಯಗೊಂಡ ಬಳಿಕ ಜಿಲ್ಲಾ ಉಸ್ತುವಾರಿ ಸಚಿವರ ಅಧ್ಯಕ್ಷತೆಯಲ್ಲಿ ಸಭೆ ನಡೆಸಲಾಗುವುದು ಎಂದು ತಿಳಿಸಿದರು.
ಸಂಗ್ರಹಗಳು
- ಮಾರ್ಚ್ 2026
- ಫೆಬ್ರವರಿ 2026
- ಜನವರಿ 2026
- ಡಿಸೆಂಬರ್ 2025
- ನವೆಂಬರ್ 2025
- ಅಕ್ಟೋಬರ್ 2025
- ಸೆಪ್ಟೆಂಬರ್ 2025
- ಆಗಷ್ಟ್ 2025
- ಜುಲೈ 2025
- ಜೂನ್ 2025
- ಮೇ 2025
- ಏಪ್ರಿಲ್ 2025
- ಮಾರ್ಚ್ 2025
- ಫೆಬ್ರವರಿ 2025
- ಜನವರಿ 2025
- ಡಿಸೆಂಬರ್ 2024
- ನವೆಂಬರ್ 2024
- ಅಕ್ಟೋಬರ್ 2024
- ಸೆಪ್ಟೆಂಬರ್ 2024
- ಆಗಷ್ಟ್ 2024
- ಜುಲೈ 2024
- ಜೂನ್ 2024
- ಮೇ 2024
- ಏಪ್ರಿಲ್ 2024
- ಮಾರ್ಚ್ 2024
- ಫೆಬ್ರವರಿ 2024
- ಜನವರಿ 2024
- ಡಿಸೆಂಬರ್ 2023
- ನವೆಂಬರ್ 2023
- ಅಕ್ಟೋಬರ್ 2023
- ಸೆಪ್ಟೆಂಬರ್ 2023
- ಆಗಷ್ಟ್ 2023
- ಜುಲೈ 2023
- ಜೂನ್ 2023
- ಮೇ 2023
- ಏಪ್ರಿಲ್ 2023
- ಮಾರ್ಚ್ 2023
- ಫೆಬ್ರವರಿ 2023
- ಜನವರಿ 2023
- ಡಿಸೆಂಬರ್ 2022
- ನವೆಂಬರ್ 2022
- ಅಕ್ಟೋಬರ್ 2022
- ಸೆಪ್ಟೆಂಬರ್ 2022
- ಆಗಷ್ಟ್ 2022
- ಜುಲೈ 2022
- ಜೂನ್ 2022
- ಮೇ 2022
- ಏಪ್ರಿಲ್ 2022

1 ಟಿಪ್ಪಣಿ
Betano liefert https://betanogame.org/de/ den ultimativen Kick. Neue Spieler erhalten 100% bis zu €500 plus Freispiele. Drehe Megaways-Slots oder wette live auf deine Lieblingsteams. Jetzt mitmachen.