Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಗ್ರಾಮೀಣ ಪ್ರದೇಶದಲ್ಲೂ ಸ್ಮಾರ್ಟ್ ಮೀಟರ್ ಕಡ್ಡಾಯ.
    ಸುದ್ದಿ

    ಗ್ರಾಮೀಣ ಪ್ರದೇಶದಲ್ಲೂ ಸ್ಮಾರ್ಟ್ ಮೀಟರ್ ಕಡ್ಡಾಯ.

    vartha chakraBy vartha chakraಜೂನ್ 27, 2025ಯಾವುದೇ ಟಿಪ್ಪಣಿಗಳಿಲ್ಲ1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು, ಜೂ. 27:
    ಕರ್ನಾಟಕ ವಿದ್ಯುಚ್ಛಕ್ತಿ ನಿಯಂತ್ರಣ ಆಯೋಗದ ಆದೇಶದಂತೆ ಬೆಸ್ಕಾಂ ವ್ಯಾಪ್ತಿಯ ಗ್ರಾಮಾಂತರ ಪ್ರದೇಶಗಳಲ್ಲಿ 2025ರ ಜುಲೈ 1 ರಿಂದ ಹೊಸ ಮತ್ತು ತಾತ್ಕಾಲಿಕ ವಿದ್ಯುತ್ ಸಂಪರ್ಕ ಪಡೆಯುವ ಗ್ರಾಹಕರು ಸ್ಮಾರ್ಟ್ ಮೀಟರ್ ಅಳವಡಿಸಬೇಕಿದೆ.
    ಗ್ರಾಮೀಣ ಪ್ರದೇಶಗಳಲ್ಲಿ ಹೊಸ ಹಾಗೂ ತಾತ್ಕಾಲಿಕ ವಿದ್ಯುತ್ ಸಂಪರ್ಕಗಳಿಗೆ ಸ್ಮಾರ್ಟ್ ಮೀಟರ್ ಅಳವಡಿಕೆ ಕಡ್ಡಾಯಗೊಳಿಸಿ ಬೆಸ್ಕಾಂ ಆದೇಶ ಹೊರಡಿಸಿದೆ.
    ಬೆಸ್ಕಾಂ ವ್ಯಾಪ್ತಿಯ ಬೆಂಗಳೂರು ನಗರ ಸೇರಿದಂತೆ ಎಲ್ಲಾ ನಗರ ಪ್ರದೇಶಗಳಲ್ಲಿ 2025ರ ಫೆಬ್ರವರಿ 15ರಿಂದ ಸ್ಮಾರ್ಟ್ ಮೀಟರ್ ಅಳವಡಿಕೆ ಆರಂಭಗೊಂಡಿದ್ದು, ಈಗ ಬೆಸ್ಕಾಂ ವ್ಯಾಪ್ತಿಯ ಗ್ರಾಮೀಣ ಪ್ರದೇಶಗಳಿಗು ಕೂಡಾ ಯೋಜನೆ ವಿಸ್ತರಿಸಲಾಗಿದೆ.
    ಹೊಸ ಹಾಗೂ ತಾತ್ಕಾಲಿಕ ವಿದ್ಯುತ್ ಸಂಪರ್ಕಗಳಿಗೆ ಗ್ರಾಹಕರು ಅರ್ಜಿ ಸಲ್ಲಿಸಿ, ಬೆಸ್ಕಾಂನ ನೋಂದಾಯಿತ ಮಳಿಗೆಗಳಿಂದ ಸ್ಮಾರ್ಟ್ ಮೀಟರ್‌ಗಳನ್ನು ಖರೀದಿಸಿ ವಿದ್ಯುತ್ ಸಂಪರ್ಕ ಪಡೆಯಬಹುದು ಎಂದು ಬೆಸ್ಕಾಂ ಪ್ರಕಟಣೆ ತಿಳಿಸಿದೆ.
    ಸ್ಮಾರ್ಟ್ ಮೀಟರ್ ಅಳವಡಿಕೆ ಕುರಿತು 2024ರ ಮಾರ್ಚ್ 06 ರಂದು ಕರ್ನಾಟಕ ವಿದ್ಯುಚ್ಛಕ್ತಿ ನಿಯಂತ್ರಣ ಆಯೋಗ ಮಾರ್ಗಸೂಚಿ ಹೊರಡಿಸಿತ್ತು. ಅದರಂತೆ, ಹಂತ ಹಂತವಾಗಿ ಸ್ಮಾರ್ಟ್ ಮೀಟರ್ ಅಳವಡಿಕೆ ಹಾಗೂ ಬದಲಾವಣೆ ಕಾರ್ಯ ಕೈಗೊಳ್ಳಲಾಗಿದೆ ಎಂದು ಪ್ರಕಟಣೆಯಲ್ಲಿ ತಿಳಿಸಿದೆ.
    ಹಳೆಯ ಮಾದರಿಯ ಮೀಟರ್‌ಗಳಿಗಿಂತ ವಿಶಿಷ್ಟವಾಗಿರುವ ಸ್ಮಾರ್ಟ್‌ ಮೀಟರ್‌ಗಳು ಜಿಪಿಆರ್‌ಎಸ್‌/ ಆರ್ ಎಫ್ ಆಧಾರಿತ ಸಂವಹನ ಡೇಟಾ ಸಂಗ್ರಹಣೆಗೆ ಸರ್ವರ್ ಹಾಗೂ ಕ್ಲೌಡ್ ಸಂಪರ್ಕ ಹೊಂದಿರುತ್ತದೆ. ಅಡ್ವಾನ್ಸ್‌ಡ್ ಮೀಟರಿಂಗ್ ಇನ್ಫ್ರಾಸ್ಟ್ರಕ್ಚರ್ (ಎಎಂಐ) ತಂತ್ರಜ್ಞಾನದ ಸ್ಮಾರ್ಟ್‌ ಮೀಟರ್‌ಗಳು ವಿದ್ಯುತ್ ಬಳಕೆ ಮಾಹಿತಿಯನ್ನು ಸಂಗ್ರಹಿಸುವ ಮೂಲಕ ಗ್ರಾಹಕರು ಹಾಗೂ ಬೆಸ್ಕಾಂ ನಡುವೆ ನೇರ ಸಂಪರ್ಕ ಕಲ್ಪಿಸಲಿದೆ. ಮೊಬೈಲ್ ಅಪ್ಲಿಕೇಶನ್ ಮೂಲಕ ನೈಜ ಸಮಯದ ವಿದ್ಯುತ್ ಬಳಕೆ, ವೊಲ್ಟೇಜ್, ಪವರ್ ಫ್ಯಾಕ್ಟರ್ ಮಾಹಿತಿ ಹಾಗೂ ರೀಚಾರ್ಜ್ ಸೌಲಭ್ಯ ಪಡೆಯಬಹುದಾಗಿದೆ. ಮುಂಚಿತವಾಗಿ ಹಣ ಪಾವತಿಸಿ ತಮ್ಮ ಆಯ್ಕೆಯ ದಿನಗಳ ಅವಧಿಗೆ ರಿಜಾರ್ಜ್‌ ಮಾಡಿಕೊಳ್ಳಬಹುದು. ಒಂದು ವೇಳೆ ವಿದ್ಯುತ್ ಕಡಿತಗೊಂಡರೆ ಗ್ರಾಹಕರು ಬಿಲ್ ಪಾವತಿಸಿದ ತಕ್ಷಣ ವಿದ್ಯುತ್ ಸಂಪರ್ಕ ಪಡೆದುಕೊಳ್ಳಬಹುದಾಗಿದೆ.

    Verbattle
    Verbattle
    Verbattle
    ಕರ್ನಾಟಕ ತಂತ್ರಜ್ಞಾನ ಬೆಂಗಳೂರು
    Share. Facebook Twitter Pinterest LinkedIn Tumblr Email WhatsApp
    Previous Articleವಿಷಪ್ರಾಶನದಿಂದ ಹುಲಿಗಳ ಸಾವು.
    Next Article ಮನೆ, ಮನೆಗೆ ಪೊಲೀಸ್.
    vartha chakra
    • Website

    Related Posts

    ಮಹಾಶಿವರಾತ್ರಿ ವಿಶೇಷ: ‘ಶಿವ’ ಎಂದರೆ ಶೂನ್ಯವೂ ಹೌದು, ಅನಂತವೂ ಹೌದು!

    ಫೆಬ್ರವರಿ 15, 2026

    ಸತ್ತವಳು ಎದ್ದು ಬಂದಾಗ!

    ಫೆಬ್ರವರಿ 15, 2026

    ಕಪ್ಪೆ ವಿಷದಿಂದ ಪ್ರತಿಪಕ್ಷ ನಾಯಕನ ಹತ್ಯೆ!

    ಫೆಬ್ರವರಿ 15, 2026

    Leave A Reply Cancel Reply

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಮಹಾಶಿವರಾತ್ರಿ ವಿಶೇಷ: ‘ಶಿವ’ ಎಂದರೆ ಶೂನ್ಯವೂ ಹೌದು, ಅನಂತವೂ ಹೌದು!

    ಸತ್ತವಳು ಎದ್ದು ಬಂದಾಗ!

    ಕಪ್ಪೆ ವಿಷದಿಂದ ಪ್ರತಿಪಕ್ಷ ನಾಯಕನ ಹತ್ಯೆ!

    ಬೆಂಗಳೂರಿನಲ್ಲಿ ಬಡ ವಿದ್ಯಾರ್ಥಿಗಳ ಹಾಸ್ಟೆಲ್‌ಗೆ ಜಾಗ ಮಂಜೂರು: ಡಿಸಿಎಂ ಡಿ.ಕೆ. ಶಿವಕುಮಾರ್ ಭರವಸೆ

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • LinwoodGah ರಲ್ಲಿ ನಿರ್ಮಲಾ ಸೀತರಾಮನ್ ಆಪ್ತನ ಹೆಸರಲ್ಲಿ ಧೋನಿ ಮ್ಯಾನೇಜರ್ ಗೆ ವಂಚನೆ
    • Tracymix ರಲ್ಲಿ ಪರಪ್ಪನ ಅಗ್ರಹಾರ ಜೈಲಿನಲ್ಲಿ ರೌಡಿ ಹುಟ್ಟುಹಬ್ಬ.
    • LinwoodGah ರಲ್ಲಿ ಕಾಲೇಜುಗಳಲ್ಲಿ ಋತು ಚಕ್ರ ರಜೆ.?
    Latest Kannada News

    ಮಹಾಶಿವರಾತ್ರಿ ವಿಶೇಷ: ‘ಶಿವ’ ಎಂದರೆ ಶೂನ್ಯವೂ ಹೌದು, ಅನಂತವೂ ಹೌದು!

    ಫೆಬ್ರವರಿ 15, 2026

    ಸತ್ತವಳು ಎದ್ದು ಬಂದಾಗ!

    ಫೆಬ್ರವರಿ 15, 2026

    ಕಪ್ಪೆ ವಿಷದಿಂದ ಪ್ರತಿಪಕ್ಷ ನಾಯಕನ ಹತ್ಯೆ!

    ಫೆಬ್ರವರಿ 15, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.