ಬೆಂಗಳೂರು,ಅ.3-
ತಮ್ಮ ಗೆಳತಿಗೆ ಅಶ್ಲೀಲ ಮೆಸೇಜ್ ಕಳಿಸಿದರು ಎಂಬ ಕಾರಣಕ್ಕೆ ಚಿತ್ರದುರ್ಗದ ರೇಣುಕಾಸ್ವಾಮಿ ಎಂಬುವರನ್ನು ಕೊಲೆ ಮಾಡಿದ ಪ್ರಕರಣದಲ್ಲಿ ಬಂಧಿತರಾಗಿರುವ ನಟ ದರ್ಶನ್ ಅವರಿಗೆ ಬಳ್ಳಾರಿ ಸೆಂಟ್ರಲ್ ಜೈಲಿನಲ್ಲಿ ಹಲವಾರು ಸಮಸ್ಯೆಗಳು ಉಂಟಾಗಿವೆ.
ಸುಡು ಬಿಸಿಲ ನಾಡಿನ ಈ ಜೈಲಿನ ವಾತಾವರಣ ಸರಿಹೊಂದದೇ ದರ್ಶನ್ ನಿರಂತರವಾಗಿ ಸೊರಗುತ್ತಾ ಸಾಕಷ್ಟು ನೋವು ಅನುಭವಿಸಿದ್ದಾರೆ. ಜೈಲಿನ ನಿಯಮಗಳ ಕಾರಣದಿಂದಾಗಿ ಇದೀಗ ಅವರಿಗೆ ಬೆನ್ನು ನೋವಿನ ಸಮಸ್ಯೆ ಕಾಡುತ್ತಿದೆ. ಇದರಿಂದ ಅವರು ಸಾಕಷ್ಟು ತೊಂದರೆ ಅನುಭವಿಸುತ್ತಿದ್ದಾರೆ.
ಬೆನ್ನು ನೋವು ಹೆಚ್ಚಾಗಿರುವುದರಿಂದ ವಿಮ್ಸ್ ಆಸ್ಪತ್ರೆಯ ವೈದ್ಯರು ಜೈಲಿನಲ್ಲೇ ದರ್ಶನ್ ಆರೋಗ್ಯ ತಪಾಸಣೆ ನಡೆಸಿದ್ದಾರೆ.
ಈಗಾಗಲೇ ಬೆನ್ನಿನ ಹಿಂಭಾಗದಲ್ಲಿ ಊತ ಬಂದಿರುವ ಸಾಧ್ಯತೆ ಇದೆ. ಅವರಿಗೆ ಸರ್ಜರಿ ಮಾಡಿಸಲೇಬೇಕಾದ ಅಗತ್ಯತೆ ಇದೆ ಎಂದು ಹೇಳಲಾಗುತ್ತಿದೆ. ಹೀಗಾಗಿ ದರ್ಶನ್ಗೆ ಸ್ಕ್ಯಾನ್ ಮಾಡಿಸಲು ವೈದ್ಯರು ಸೂಚನೆ ನೀಡಿದ್ದಾರೆ.
ಆದರೆ, ದರ್ಶನ್ ಅವರು ಸ್ಕ್ಯಾನ್ ಮಾಡಿಸುವುದಕ್ಕೆ ಸಿದ್ದರಿಲ್ಲ. ‘ನಾನು ಬೆಂಗಳೂರಿಗೆ ಹೋದ ಬಳಿಕ ಸ್ಕ್ಯಾನ್ ಮಾಡಿಸಿಕೊಳ್ಳುವೆ. ಸದ್ಯಕ್ಕೆ ನೋವು ನಿವಾರಕ ಮಾತ್ರೆ ಕೊಡಿ ಸಾಕು’ ಎಂದು ದರ್ಶನ್ ಕೋರಿಕೊಂಡಿದ್ದಾರೆ.
ಜಾಮೀನು:
ದರ್ಶನ್ ಅವರು ಸಲ್ಲಿಸಿರುವ ಜಾಮೀನು ನಾಳೆ ಅರ್ಜಿ ವಿಚಾರಣೆ ನಡೆಯಲಿದೆ. ದರ್ಶನ್ ಅವರು ಜಾಮೀನು ಸಿಗಲಿದೆ ಎನ್ನುವ ಭರವಸೆಯಲ್ಲಿದ್ದಾರೆ. ಈ ವಿಚಾರದಲ್ಲಿ ಕೋರ್ಟ್ ಯಾವ ರೀತಿಯ ಆದೇಶ ಹೊರಡಿಸುತ್ತದೆ ಎಂದು ಕಾದು ನೋಡಬೇಕಿದೆ.
ಜಾಮೀನು ಅರ್ಜಿ ವಿಚಾರಣೆ ಈಗಾಗಲೇ ಎರಡು ಬಾರಿ ಮುಂದಕ್ಕೆ ಹೋಗಿದೆ. ದರ್ಶನ್ ಪರ ವಕೀಲರು ವಾದ ಮಂಡನೆಗೆ ಹೆಚ್ಚಿನ ಸಮಯ ಕೇಳುತ್ತಿದ್ದಾರೆ. ಈ ಕಾರಣದಿಂದ ಅರ್ಜಿ ವಿಚಾರಣೆ ಮುಂದಕ್ಕೆ ಹೋಗುತ್ತಿದೆ.
ಇತ್ತೀಚೆಗೆ ‘ಡೆವಿಲ್’ ಸಿನಿಮಾ ನಿರ್ಮಾಪಕರು ದರ್ಶನ್ ಅವರನ್ನು ಭೇಟಿ ಮಾಡಿ ಬಂದಿದ್ದಾರೆ. ಸಿನಿಮಾಗೆ ಸಂಬಂಧಿಸಿದ ಕೆಲವು ವಿಚಾರಗಳ ಕುರಿತು ಚರ್ಚೆ ನಡೆದಿದೆ ಎಂದು ಹೇಳಲಾಗುತ್ತಿದೆ. ದರ್ಶನ್ ಜೈಲಿನಲ್ಲಿ ಇರುವುದರಿಂದ ಸಿನಿಮಾದ ಕೆಲಸ ನಡೆಯುತ್ತಿಲ್ಲ.
ಜೈಲಿನಲ್ಲಿ ಚಾಲೆಂಜಿಂಗ್ ಸ್ಟಾರ್ ದರ್ಶನ್ ಗೆ ನಾನಾ ಸಮಸ್ಯೆ.
Previous Articleಗೆಲುವಿನ ವಿಶ್ವಾಸದಲ್ಲಿ ಕಾಂಗ್ರೆಸ್.
Next Article ಅಧಿಕಾರ ತ್ಯಜಿಸುವ ಮಾತನಾಡಿದ ಸಿದ್ದರಾಮಯ್ಯ.

2 ಪ್ರತಿಕ್ರಿಯೆಗಳು
It’s actually a nice and helpful piece of information. I’m satisfied that you simply shared this useful information with us.
Please stay us up to date like this. Thank you for sharing.
my web-site :: ultimateshop
Mostbet – o cassino que entende o que o jogador brasileiro quer – https://mostbetpt.pro/ , Mostbet – qualidade premium e bГґnus que realmente fazem diferenГ§a .