ಬೆಂಗಳೂರು,ಜೂ.14-ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್ ಹೆಸರು ಹೇಳದಿರಲು ಡೀಲ್ ಮಾಡಲಾಗಿದ್ದ 30 ಲಕ್ಷ ರೂಗಳನ್ನು ಪೊಲೀಸರು ಜಪ್ತಿ ಮಾಡಿದ್ದಾರೆ.
ದರ್ಶನ್ ಆಪ್ತನೊಬ್ಬನ ಮನೆ ಮೇಲೆ ದಾಳಿ ನಡೆಸಿದ ಪೊಲೀಸರು ಹಣವನ್ನು ವಶಕ್ಕೆ ಪಡೆದು ಹೆಚ್ಚಿನ ತನಿಖೆಯನ್ನು ಕೈಗೊಂಡಿದ್ದಾರೆ.
ದರ್ಶನ್ ಕೊಟ್ಟಿದ್ದ 30 ಲಕ್ಷ ಹಣವನ್ನು ಆಪ್ತನೊಬ್ಬನ ಮನೆಯಲ್ಲಿ ಇಟ್ಟಿರುವ ಬಗ್ಗೆ ವಿಚಾರಣೆ ವೇಳೆ ಆರೋಪಿಗಳು ಬಾಯ್ಬಿಟ್ಟಿದ್ದಾರೆ.
ತಕ್ಷಣವೇ ಕಾರ್ಯಚರಣೆ ಕೈಗೊಂಡು. ಹಣವನ್ನು ವಶಕ್ಕೆ ಪಡೆದು ತನಿಖೆ ಮುಂದುವರಿಸಿದ್ದಾರೆ.
ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣವನ್ನು ಒಪ್ಪಿಕೊಳ್ಳಲು, ಮೃತದೇಹ ಸಾಗಿಸಲು ಮತ್ತು ನಟ ದರ್ಶನ್ ಹೆಸರನ್ನು ಬಾಯಿಬಿಡದಿರಲು ಬಂಧಿತರ ಪೈಕಿ ಐವರಿಗೆ 30 ಲಕ್ಷಕ್ಕೆ ಸುಪಾರಿ ನೀಡಲಾಗಿತ್ತು.
ಮೃತದೇಹ ಯಾರಿಗೂ ಸಿಗದಂತೆ ಸಾಗಿಸಲು ಮೂವರು ಆರೋಪಿಗಳಿಗೆ ಮುಂಗಡವಾಗಿ ಒಟ್ಟು 5 ಲಕ್ಷ ಸಂದಾಯ ಮಾಡಲಾಗಿತ್ತು. ಉಳಿದ ಇಬ್ಬರು ಆರೋಪಿಗಳು ಜೈಲಿಗೆ ಹೋದ ಮೇಲೆ ಅವರ ಮನೆಯವರಿಗೆ ಹಣ ತಲುಪಿಸುವುದಾಗಿ ಹೇಳಲಾಗಿತ್ತು. ಈ ವಿಚಾರವನ್ನು ಆರೋಪಿಗಳು ಪೊಲೀಸರ ಮುಂದೆ ಬಾಯ್ಬಿಟ್ಟಿದ್ದಾರೆ.
ಕಳೆದ ಜೂ.9 ರಂದು ಸುಮನಹಳ್ಳಿ ಸತ್ವ ಅನುಗ್ರಹ ಅಪಾರ್ಟ್‌ಮೆಂಟ್ ಸಮೀಪದ ಮೋರಿ ಬಳಿ ಸಿಕ್ಕಿದ ರೇಣುಕಾಸ್ವಾಮಿ ಮೃತದೇಹ ಪ್ರಕರಣದ ತನಿಖೆ ನಡೆಸುತ್ತಿರುವ ಪೊಲೀಸರು ಹಲವು ಮಹತ್ವದ ಸಾಕ್ಷ್ಯಗಳನ್ನು ಸಂಗ್ರಹಿಸಿದ್ದಾರೆ.
Previous Articleಏಳು ವರ್ಷ ಕಳೆದರೂ ಪತ್ತೆಯಾಗದ ನಟ ದರ್ಶನ್ P.A.
Next Article ಕಾಂಗ್ರೆಸ್ ದ್ವೇಷದ ರಾಜಕಾರಣ ಮಾಡುವುದಿಲ್ಲವಂತೆ.