Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ದರ್ಶನ್ ಯಾವ ಜೈಲಿಗೆ ಹೋಗ್ತಾರೆ ಗೊತ್ತಾ?
    ಕಾನೂನು

    ದರ್ಶನ್ ಯಾವ ಜೈಲಿಗೆ ಹೋಗ್ತಾರೆ ಗೊತ್ತಾ?

    vartha chakraBy vartha chakraಆಗಷ್ಟ್ 16, 2025Updated:ಆಗಷ್ಟ್ 16, 2025ಯಾವುದೇ ಟಿಪ್ಪಣಿಗಳಿಲ್ಲ1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು,ಆ.17-ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಬಂಧಿತ ನಟ ದರ್ಶನ್ ಮತ್ತು ಸಹ ಆರೋಪಿಗಳನ್ನು ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಿಂದ ರಾಜ್ಯದ ಬೇರೆ ಬೇರೆ ಜೈಲುಗಳಿಗೆ ಸ್ಥಳಾಂತರಿಸಲು ಜೈಲು ಅಧಿಕಾರಿಗಳು ಮುಂದಾಗಿದ್ದಾರೆ.
    ನಟ ದರ್ಶನ್ ಮತ್ತು ಸಹ ಆರೋಪಿಗಳನ್ನು ಭದ್ರತೆ ಮತ್ತು ಆಡಳಿತಾತ್ಮಕ ಕಾರಣಗಳಿಂದ ಬೇರೆ ಬೇರೆ ಜೈಲುಗಳಿಗೆ ಸ್ಥಳಾಂತರಿಸಲು ನಿರ್ಧಾರ ಕೈಗೊಂಡು ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಲಾಗಿದೆ.
    ಜೈಲು ಅಧಿಕಾರಿಗಳು ಆರೋಪಿಗಳನ್ನು ಬೇರೆ ಜೈಲುಗಳಿಗೆ ವರ್ಗಾಯಿಸುವಂತೆ ಕೋರಿ 64ನೇ ಸೆಷನ್ಸ್ ಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದರು. ಆದರೆ, ನ್ಯಾಯಾಲಯವು ಜೈಲು ಅಧಿಕಾರಿಗಳಿಂದ ನೇರವಾಗಿ ಅರ್ಜಿಯನ್ನು ಸ್ವೀಕರಿಸಲು ನಿರಾಕರಿಸಿದೆ. ಬದಲಾಗಿ, ಪ್ರಕರಣದ ವಿಶೇಷ ಪಬ್ಲಿಕ್ ಪ್ರಾಸಿಕ್ಯೂಟರ್ (ಎಸ್ ಪಿಪಿ) ಮೂಲಕವೇ ಅರ್ಜಿಯನ್ನು ಸಲ್ಲಿಸುವಂತೆ ಸೂಚಿಸಿದೆ. ನ್ಯಾಯಾಲಯದ ಈ ಸೂಚನೆಯ ಮೇರೆಗೆ, ಜೈಲು ಸೂಪರಿಂಟೆಂಡೆಂಟ್ ಅವರು ಎಸ್ಪಿಪಿ ಅವರನ್ನು ಭೇಟಿ ಮಾಡಿ, ಇಂದು ಮಧ್ಯಾಹ್ನ ಅಥವಾ ಆ.18ರಂದು ಅರ್ಜಿ ಸಲ್ಲಿಸುವ ಸಾಧ್ಯತೆ ಇದೆ.
    ಭದ್ರತೆಗೆ ಕಾರಣಗಳೇನು?
    ಆರೋಪಿಗಳ ರಾಜಾತಿಥ್ಯ ಮತ್ತು ಜೈಲು ಅಧಿಕಾರಿಗಳ ಸುರಕ್ಷತೆಯ ದೃಷ್ಟಿಯಿಂದ ಈ ನಿರ್ಧಾರ ಕೈಗೊಳ್ಳಲಾಗಿದೆ. ಕಳೆದ ಬಾರಿಯ ರಾಜಾತಿಥ್ಯ ಪ್ರಕರಣವನ್ನು ಉಲ್ಲೇಖಿಸಿ, ಭದ್ರತಾ ಹಿತದೃಷ್ಟಿಯಿಂದ ಆರೋಪಿಗಳ ಸ್ಥಳಾಂತರ ಅತ್ಯಗತ್ಯ ಎಂದು ಮನವಿ ಮಾಡಲಾಗಿದೆ. ದರ್ಶನ್ ಅವರ ಜಾಮೀನು ರದ್ದು ಆದೇಶದ ಸಮಯದಲ್ಲಿ ಸುಪ್ರೀಂ ಕೋರ್ಟ್ ಜೈಲು ಅಧಿಕಾರಿಗಳ ಕಾರ್ಯನಿರ್ವಹಣೆಯನ್ನು ಕಟುವಾಗಿ ಟೀಕಿಸಿತ್ತು. ನ್ಯಾಯಾಲಯದ ಈ ಖಂಡನೆಯಿಂದಾಗಿ, ಜೈಲು ಅಧಿಕಾರಿಗಳು ಯಾವುದೇ ಹೆಚ್ಚಿನ ವಿವಾದಗಳಿಗೆ ಅವಕಾಶ ನೀಡದಂತೆ ಆರೋಪಿಗಳನ್ನು ಬೇರೆಡೆಗೆ ವರ್ಗಾಯಿಸಲು ನಿರ್ಧರಿಸಿದ್ದಾರೆ.
    ಸ್ಥಳಾಂತರದ ನಿರ್ಧಾರವು ಪ್ರಭಾವಿ ವ್ಯಕ್ತಿಗಳು ಬಂಧಿತರಾದಾಗ ಜೈಲುಗಳಲ್ಲಿ ಎದುರಾಗುವ ಭದ್ರತಾ ಸವಾಲುಗಳನ್ನು ಎದುರಿಸುವಲ್ಲಿ ಹೊಸ ದಿಕ್ಕನ್ನು ಸೂಚಿಸುತ್ತದೆ. ನ್ಯಾಯಾಲಯದ ಅಂತಿಮ ತೀರ್ಪು ಬಂದ ನಂತರವೇ ಈ ಸ್ಥಳಾಂತರ ಪ್ರಕ್ರಿಯೆ ನಡೆಯಲಿದೆ.
    ಯಾರನ್ನು ಎಲ್ಲಿಗೆ ಶಿಫ್ಟ್
    ದರ್ಶನ್: ಬಳ್ಳಾರಿ ಜೈಲು
    ಜಗದೀಶ್, ಲಕ್ಷ್ಮಣ್: ಶಿವಮೊಗ್ಗ ಜೈಲು
    ನಾಗರಾಜ್: ಗುಲ್ಬರ್ಗಾ ಜೈಲು
    ಪ್ರದೋಷ್: ಬೆಳಗಾವಿ ಜೈಲು
    ಪವಿತ್ರಾ ಗೌಡ, ಅನುಕುಮಾರ್: ಹಿಂದೆಯೂ ಪರಪ್ಪನ ಅಗ್ರಹಾರ ಜೈಲಿನಲ್ಲೇ ಇದ್ದರು.

    Verbattle
    Verbattle
    Verbattle
    ಕೊಲೆ ದರ್ಶನ್ ನ್ಯಾಯ ಬೆಂಗಳೂರು
    Share. Facebook Twitter Pinterest LinkedIn Tumblr Email WhatsApp
    Previous Articleಮಲಗಿದ್ದಲ್ಲೇ ಸುಟ್ಟು ಕರಕಲಾದರು
    Next Article ಸ್ಯಾಂಡಲ್ ವುಡ್ ನಟನ ಕುಟುಂಬದಲ್ಲಿ ಬಿರುಗಾಳಿ
    vartha chakra
    • Website

    Related Posts

    ಬೆಂಗಳೂರಿನಲ್ಲಿ ಬಡ ವಿದ್ಯಾರ್ಥಿಗಳ ಹಾಸ್ಟೆಲ್‌ಗೆ ಜಾಗ ಮಂಜೂರು: ಡಿಸಿಎಂ ಡಿ.ಕೆ. ಶಿವಕುಮಾರ್ ಭರವಸೆ

    ಫೆಬ್ರವರಿ 14, 2026

    ಕೇಂದ್ರದ ಅನುಮತಿ ಸಿಕ್ಕರೆ ಮೇಕೆದಾಟು, ಯುಕೆಪಿ ಯೋಜನೆ ಜಾರಿ: ಡಿಸಿಎಂ ಡಿ.ಕೆ. ಶಿವಕುಮಾರ್

    ಫೆಬ್ರವರಿ 13, 2026

    ಶಾಸಕರೇ ಬಾಯಿ ಮುಚ್ಚಿಕೊಂಡಿರಿ.

    ಫೆಬ್ರವರಿ 13, 2026

    Leave A Reply Cancel Reply

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಬೆಂಗಳೂರಿನಲ್ಲಿ ಬಡ ವಿದ್ಯಾರ್ಥಿಗಳ ಹಾಸ್ಟೆಲ್‌ಗೆ ಜಾಗ ಮಂಜೂರು: ಡಿಸಿಎಂ ಡಿ.ಕೆ. ಶಿವಕುಮಾರ್ ಭರವಸೆ

    ಆಕಾಶದ ಅಧಿಪತಿ ದಸ್ಸೋಲ್ ರಫಾಲೆ: ಯುಪಿಎ ಟೆಂಡರ್‌ನಿಂದ ಎನ್‌ಡಿಎ ಮೆಗಾ ಡೀಲ್‌ ವರೆಗೆ..!

    ಡ್ರಾಪ್‌ಔಟ್‌ನಿಂದ ದೈತ್ಯ ಉದ್ಯಮಿಯವರೆಗೆ: ಅದಾನಿ ಸಾಮ್ರಾಜ್ಯದ ಯಶೋಗಾಥೆ!

    ಕೇಂದ್ರದ ಅನುಮತಿ ಸಿಕ್ಕರೆ ಮೇಕೆದಾಟು, ಯುಕೆಪಿ ಯೋಜನೆ ಜಾರಿ: ಡಿಸಿಎಂ ಡಿ.ಕೆ. ಶಿವಕುಮಾರ್

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • LinwoodGah ರಲ್ಲಿ ಪರಪ್ಪನ ಅಗ್ರಹಾರದಲ್ಲಿ ಉಗ್ರ ಚಟುವಟಿಕೆ
    • Tracymix ರಲ್ಲಿ ಅಕ್ಕನ ಮನೆಗೆ ಕನ್ನ ಹಾಕಿದ ತಂಗಿ
    • ру тор форум ರಲ್ಲಿ CM ಮತ್ತು DCM ಬದಲಾವಣೆ ಚರ್ಚೆಯಲ್ಲಿ ಇವರಿಲ್ಲವಂತೆ.
    Latest Kannada News

    ಬೆಂಗಳೂರಿನಲ್ಲಿ ಬಡ ವಿದ್ಯಾರ್ಥಿಗಳ ಹಾಸ್ಟೆಲ್‌ಗೆ ಜಾಗ ಮಂಜೂರು: ಡಿಸಿಎಂ ಡಿ.ಕೆ. ಶಿವಕುಮಾರ್ ಭರವಸೆ

    ಫೆಬ್ರವರಿ 14, 2026

    ಆಕಾಶದ ಅಧಿಪತಿ ದಸ್ಸೋಲ್ ರಫಾಲೆ: ಯುಪಿಎ ಟೆಂಡರ್‌ನಿಂದ ಎನ್‌ಡಿಎ ಮೆಗಾ ಡೀಲ್‌ ವರೆಗೆ..!

    ಫೆಬ್ರವರಿ 14, 2026

    ಡ್ರಾಪ್‌ಔಟ್‌ನಿಂದ ದೈತ್ಯ ಉದ್ಯಮಿಯವರೆಗೆ: ಅದಾನಿ ಸಾಮ್ರಾಜ್ಯದ ಯಶೋಗಾಥೆ!

    ಫೆಬ್ರವರಿ 14, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.