ಮಂಡ್ಯ, ಸೆ.18-
ಗಣೇಶಮೂರ್ತಿ ವಿಸರ್ಜನೆಯ ಮೆರವಣಿಗೆ ವೇಳೆ ಮಂಡ್ಯ ಜಿಲ್ಲೆಯ ನಾಗಮಂಗಲದಲ್ಲಿ ಸಂಭವಿಸಿದ ಗಲಭೆಯಲ್ಲಿ ಕಿಡಿಗೇಡಿಗಳು ಹಚ್ಚಿದ ಬೆಂಕಿ ಮತ್ತು ಪೆಟ್ರೋಲ್ ಬಾಂಬ್ ದಾಳಿಯಿಂದ ಹಲವು ಅಂಗಡಿಗಳು ಸುಟ್ಟು ಭಸ್ಮವಾಗಿವೆ.
ಈ ಗಲಭೆಯಿಂದಾಗಿ ನಾಗಮಂಗಲದಲ್ಲಿ ಅಪಾರ ಮೌಲ್ಯದ ಆಸ್ತಿ-ಪಾಸ್ತಿ ನಾಶವಾಗಿದೆ ಎಂಬ ದೂರುಗಳ ಹಿನ್ನೆಲೆಯಲ್ಲಿ ಆಸ್ತಿ ನಷ್ಟದ ಅಂದಾಜು ಮಾಡಲಾಗಿದೆ
ಗಲಭೆಯ ಸಮಯದಲ್ಲಿ ನಾಗಮಂಗಲ ಪಟ್ಟಣದಾದ್ಯಂತ 26 ಅಂಗಡಿಗಳಿಗೆ ಕಿಡಿಗೇಡಿಗಳು ಬೆಂಕಿ ಹಚ್ಚಿದ್ದಾರೆ. ಇದರಿಂದ ಕಟ್ಟಡಗಳಿಗೆ ಆದ ಹಾನಿಯ ಮೌಲ್ಯ 1 ಕೋಟಿ 47 ಲಕ್ಷ ರೂಪಾಯಿ ಎಂದು ಅಂದಾಜಿಸಲಾಗಿದೆ.
ಅದೇ ರೀತಿಯಲ್ಲಿ ಕಟ್ಟಡಗಳಲ್ಲಿದ್ದ 1 ಕೋಟಿ 18 ಲಕ್ಷ ಮೌಲ್ಯದ ಸರಕು ಬೆಂಕಿ ಕೆನ್ನಾಲಿಗೆಯಲ್ಲಿ ಸುಟ್ಟು ಕರಕಲಾಗಿದೆ ಎಂದು ಮೌಲ್ಯ ಮಾಪನ ಮಾಡಲಾಗಿದೆ.ಒಟ್ಟಾರೆ, ಈ ಗಲಭೆಯಿಂದಾಗಿ ಒಟ್ಟು 2.66 ಕೋಟಿ ಮೌಲ್ಯದ ಆಸ್ತಿ ನಾಶವಾಗಿದೆ.ಗಲಭೆ ನಷ್ಟದ ವರದಿ ತಯಾರು ಮಾಡಲು ಎಸಿ ನೇತೃತ್ವದಲ್ಲಿ ಏಳು ಅಧಿಕಾರ ತಂಡ ರಚನೆ ಮಾಡಲಾಗಿತ್ತು.ಈ ಸಮಿತಿ ನಷ್ಟದ ಮೌಲ್ಯಮಾಪನ ಮಾಡಿ ವರದಿ ಸಿದ್ಧಪಡಿಸಿದೆ.ಇದನ್ನು ಸರ್ಕಾರಕ್ಕೆ ಸಲ್ಲಿಕೆ ಮಾಡಿದ್ದೇವೆ ಎಂದು ಮಂಡ್ಯ ಜಿಲ್ಲಾಧಿಕಾರಿ ಡಾ. ಕುಮಾರ ಮಾಹಿತಿ ನೀಡಿದರು.
ಇನ್ನು ಎಫ್ಐಆರ್ನಲ್ಲಿ 4.5 ಕೋಟಿಯಷ್ಟು ನಷ್ಟವಾಗಿದೆ ಎಂದು ಉಲ್ಲೇಖಿಸಲಾಗಿದೆ. ದುಷ್ಕರ್ಮಿಗಳ ಕ್ರೌರ್ಯದಿಂದ, ವ್ಯಾಪಾರಸ್ಥರ ಬದುಕು ಬೀದಿ ಪಾಲಾಗಿದೆ.
ಸಂಗ್ರಹಗಳು
- ಮಾರ್ಚ್ 2026
- ಫೆಬ್ರವರಿ 2026
- ಜನವರಿ 2026
- ಡಿಸೆಂಬರ್ 2025
- ನವೆಂಬರ್ 2025
- ಅಕ್ಟೋಬರ್ 2025
- ಸೆಪ್ಟೆಂಬರ್ 2025
- ಆಗಷ್ಟ್ 2025
- ಜುಲೈ 2025
- ಜೂನ್ 2025
- ಮೇ 2025
- ಏಪ್ರಿಲ್ 2025
- ಮಾರ್ಚ್ 2025
- ಫೆಬ್ರವರಿ 2025
- ಜನವರಿ 2025
- ಡಿಸೆಂಬರ್ 2024
- ನವೆಂಬರ್ 2024
- ಅಕ್ಟೋಬರ್ 2024
- ಸೆಪ್ಟೆಂಬರ್ 2024
- ಆಗಷ್ಟ್ 2024
- ಜುಲೈ 2024
- ಜೂನ್ 2024
- ಮೇ 2024
- ಏಪ್ರಿಲ್ 2024
- ಮಾರ್ಚ್ 2024
- ಫೆಬ್ರವರಿ 2024
- ಜನವರಿ 2024
- ಡಿಸೆಂಬರ್ 2023
- ನವೆಂಬರ್ 2023
- ಅಕ್ಟೋಬರ್ 2023
- ಸೆಪ್ಟೆಂಬರ್ 2023
- ಆಗಷ್ಟ್ 2023
- ಜುಲೈ 2023
- ಜೂನ್ 2023
- ಮೇ 2023
- ಏಪ್ರಿಲ್ 2023
- ಮಾರ್ಚ್ 2023
- ಫೆಬ್ರವರಿ 2023
- ಜನವರಿ 2023
- ಡಿಸೆಂಬರ್ 2022
- ನವೆಂಬರ್ 2022
- ಅಕ್ಟೋಬರ್ 2022
- ಸೆಪ್ಟೆಂಬರ್ 2022
- ಆಗಷ್ಟ್ 2022
- ಜುಲೈ 2022
- ಜೂನ್ 2022
- ಮೇ 2022
- ಏಪ್ರಿಲ್ 2022
