Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ನಾಗಾ ಸಾಧುಗಳು ಉಂಗುರ ದೋಚಿದ ಕತೆ.
    ಸುದ್ದಿ

    ನಾಗಾ ಸಾಧುಗಳು ಉಂಗುರ ದೋಚಿದ ಕತೆ.

    vartha chakraBy vartha chakraಆಗಷ್ಟ್ 7, 2025ಯಾವುದೇ ಟಿಪ್ಪಣಿಗಳಿಲ್ಲ1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು:ಸಾಧು ವೇಷ ಧರಿಸಿ ಆಶೀರ್ವಾದದ ನೆಪದಲ್ಲಿ ವೃದ್ಧರೊಬ್ಬರಿಗೆ ವಿಭೂತಿ ನೀಡಿದ ನಕಲಿ ಸಾಧುಗಳು, ಚಿನ್ನದ ಉಂಗುರ ದೋಚಿ ಪರಾರಿಯಾಗಿರುವ ಘಟನೆ ಸದಾಶಿವನಗರದಲ್ಲಿ ನಡೆದಿದೆ.
    ಈ ಸಂಬಂಧ ದಾಸರಹಳ್ಳಿ ಮಂಜುನಾಥ್‌ (64) ನೀಡಿದ ದೂರಿನ ಅನ್ವಯ ಪ್ರಕರಣ ದಾಖಲಿಸಿರುವ ಸದಾಶಿವನಗರ ಪೊಲೀಸರು ನಕಲಿ ಸಾಧುಗಳ ಬಂಧನಕ್ಕೆ ಕಾರ್ಯಾಚರಣೆ ಕೈಗೊಂಡಿದ್ದಾರೆ.
    ಕೆಲ ದಿನಗಳ ಹಿಂದೆ ಕೆಲಸದ ನಿಮಿತ್ತ ಶಿವಾಜಿನಗರಕ್ಕೆ ತೆರಳಿದ್ದ ಮಂಜುನಾಥ್‌ ಅವರು ರಾತ್ರಿ 7.15ರ ಸುಮಾರಿಗೆ ಬಿಎಂಟಿಸಿ ಬಸ್‌ನಲ್ಲಿ ವಾಪಸ್‌ ಬಂದು ಮೇಖ್ರಿ ವೃತ್ತ ಬಸ್‌ ನಿಲ್ದಾಣದಲ್ಲಿ ಇಳಿದಿದ್ದರು. ಅದೇ ಬಸ್‌ನಲ್ಲಿದ್ದ ನಾಲ್ವರು ನಾಗಾ ಸಾಧುಗಳ ವೇಷದಲ್ಲಿದ್ದವರು ಇಳಿದುಕೊಂಡಿದ್ದರು. ದುರಾದೃಷ್ಟಕ್ಕೆ ಬಸ್‌ ನಿಲ್ದಾಣದಲ್ಲಿ ಬೇರೆ ಯಾರೂ ಪ್ರಯಾಣಿಕರು ಇರಲಿಲ್ಲ.ಈ ಸಂದರ್ಭವನ್ನು ದುರುಪಯೋಗ ಮಾಡಿಕೊಂಡ ಸಾಧುಗಳು ‘ಚಿಕ್ಕಬಳ್ಳಾಪುರಕ್ಕೆ ತೆರಳಲು ಯಾವ ಬಸ್‌ನಲ್ಲಿ ಪ್ರಯಾಣಿಸಬೇಕು’ ಎಂದು ಮಾತುಕತೆ ಆರಂಭಿಸಿದ್ದರು. ಬಳಿಕ ಊಟ ಮಾಡಲು ಏನಾದರೂ ಸಹಾಯ ಮಾಡಿ ಎಂದಿದ್ದರು. ಇದನ್ನು ಕೇಳಿದ ಬಳಿಕ ಮಂಜುನಾಥ್‌, ಉದಾರತೆಯಿಂದ ತಮ್ಮ ಪರ್ಸ್‌ನಲ್ಲಿದ್ದ 50 ರೂ.ನೀಡಿದ್ದರು.ಹಣ ಪಡೆದ ಬಳಿಕ ಆಶೀರ್ವಾದ ತೆಗೆದುಕೊಳ್ಳಿ ಎಂದ ನಾಗಾ ಸಾಧುಗಳು, 50 ರೂ.ನೋಟಿಗೆ ವಿಭೂತಿ ಹಾಕಿ ವಾಪಸ್‌ ನೀಡಿದ್ದರು. ಬಳಿಕ ಹಣೆಗೆ ವಿಭೂತಿ ಹಚ್ಚಿ ಪರ್ಸ್‌ ತೆಗೆಯುವಂತೆ ಸೂಚಿಸಿದ್ದರು. ಪರ್ಸ್‌ನಲ್ಲಿದ್ದ ಹಣಕ್ಕೂ ವಿಭೂತಿ ಹಾಕಿ ವಾಪಸ್‌ ನೀಡಿದ್ದರು. ಕಡೆಯದಾಗಿ ಕೈ ಬೆರಳಲ್ಲಿದ್ದ ಉಂಗುರ ತೆಗೆಯುವಂತೆ ಹೇಳಿದ್ದರು. ವಾಪಸ್‌ ಕೊಡಲಿದ್ದಾರೆ ಎಂದುಕೊಂಡಿದ್ದ ಮಂಜುನಾಥ್‌, ಉಂಗುರ ತೆಗೆದುಕೊಟ್ಟಿದ್ದರು. ಆದರೆ, ಉಂಗುರಕ್ಕೆ ವಿಭೂತಿ ಹಾಕಿ ಮಂತ್ರಿಸುವ ನೆಪದಲ್ಲಿ ಬಾಯೊಳಗೆ ಹಾಕಿಕೊಂಡು ಅಲ್ಲಿಂದ ಹೊರಟುಹೋಗಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ.
    ಮಂಜುನಾಥ್‌ಗೆ ಪ್ರಜ್ಞೆತಪ್ಪಿದಂತಾಗಿ ಏನು ನಡೆಯುತ್ತಿದೆ ಎಂಬುದರ ಅರಿವಾಗುವಷ್ಟರಲ್ಲಿ ನಕಲಿ ಸಾಧುಗಳು ಉಂಗುರವನ್ನು ಬಾಯಿಗೆ ಹಾಕಿಕೊಂಡು ಹೊರಟು ಹೋಗಿದ್ದರು. ಸಾಧುಗಳು ಅಲ್ಲಿಂದ ತೆರಳಿದ ಕೆಲ ನಿಮಿಷಗಳ ಬಳಿಕ ಮಂಜುನಾಥ್‌ ಎಚ್ಚರಗೊಂಡು, ಠಾಣೆಗೆ ಬಂದು ದೂರು ನೀಡಿದ್ದರು.

    Verbattle
    Verbattle
    Verbattle
    ಚಿನ್ನ ಬೆಂಗಳೂರು
    Share. Facebook Twitter Pinterest LinkedIn Tumblr Email WhatsApp
    Previous Articleಮದರಸಾದ ಮೌಲ್ವಿಗಳಿಗೆ ಕನ್ನಡ ಕಲಿಕೆ
    Next Article ಡೆತ್ ನೋಟ್ ನಲ್ಲಿ ಸಂಸದ ಡಾ.ಸುಧಾಕರ್ ಹೆಸರು !
    vartha chakra
    • Website

    Related Posts

    ದರೋಡೆಯಾದ 400 ಕೋಟಿ ಎಲ್ಲಿಗೆ ಹೋಯಿತು..?

    ಫೆಬ್ರವರಿ 17, 2026

    ಕಾಂಗ್ರೆಸ್ ಶಾಸಕ ಅನರ್ಹ

    ಫೆಬ್ರವರಿ 17, 2026

    CID ಪೊಲೀಸ್ ಮುಂದೆ ಬೈರತಿ ಬಸವರಾಜ್ ನರಳಾಟ

    ಫೆಬ್ರವರಿ 16, 2026

    Leave A Reply Cancel Reply

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಅಮೆರಿಕಾದಲ್ಲಿ ಕನ್ನಡಿಗ ವಿದ್ಯಾರ್ಥಿಯ ಸಾವಿಗೆ ಒತ್ತಡವೇ ಕಾರಣವಾಯಿತೇ?

    ದರೋಡೆಯಾದ 400 ಕೋಟಿ ಎಲ್ಲಿಗೆ ಹೋಯಿತು..?

    ಕಾಂಗ್ರೆಸ್ ಶಾಸಕ ಅನರ್ಹ

    CID ಪೊಲೀಸ್ ಮುಂದೆ ಬೈರತಿ ಬಸವರಾಜ್ ನರಳಾಟ

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Tracymix ರಲ್ಲಿ ಭಾರತೀಯರು ದೇಶ ಬಿಟ್ಟು ಹೋಗುತ್ತಿದ್ದಾರೆ!
    • LinwoodGah ರಲ್ಲಿ ಬೆಂಗಳೂರಿನಲ್ಲಿ ಡ್ರಗ್ಸ್ ಕಾರ್ಖಾನೆಗಳು!
    • LinwoodGah ರಲ್ಲಿ Boeing – ದೋಷಯುಕ್ತ ವಿಮಾನಗಳಿಂದಾಗಿ ಕುಖ್ಯಾತಿ!
    Latest Kannada News

    ಅಮೆರಿಕಾದಲ್ಲಿ ಕನ್ನಡಿಗ ವಿದ್ಯಾರ್ಥಿಯ ಸಾವಿಗೆ ಒತ್ತಡವೇ ಕಾರಣವಾಯಿತೇ?

    ಫೆಬ್ರವರಿ 17, 2026

    ದರೋಡೆಯಾದ 400 ಕೋಟಿ ಎಲ್ಲಿಗೆ ಹೋಯಿತು..?

    ಫೆಬ್ರವರಿ 17, 2026

    ಕಾಂಗ್ರೆಸ್ ಶಾಸಕ ಅನರ್ಹ

    ಫೆಬ್ರವರಿ 17, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.