ಬೆಂಗಳೂರು, ಜು. 24:
ಕೇಂದ್ರ ಸರ್ಕಾರದ ಬಳಿ ನೀತಿಯೇ ಇಲ್ಲದಿರುವಾಗ, ನೀತಿ ಆಯೋಗದ ಸಭೆಗೆ ಹೋಗಿ ಏನು ಪ್ರಯೋಜನ” ಎಂದು ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಪ್ರಶ್ನಿಸಿದ್ದಾರೆ.
ಕೇಂದ್ರ ಬಜೆಟ್ ನಲ್ಲಿ ರಾಜ್ಯದ ಯಾವುದೇ ಮನವಿಗೆ ಪುರಸ್ಕಾರ ದೊರಕದ ಹಿನ್ನೆಲೆಯಲ್ಲಿ ಶನಿವಾರ ನಡೆಯುತ್ತಿರುವ ನೀತಿ ಆಯೋಗದ ಸಭೆಯನ್ನು ಬಹಿಷ್ಕರಿಸಲು ರಾಜ್ಯ ಸರ್ಕಾರ ನಿರ್ಧರಿಸಿರುವ ಬಗ್ಗೆ
ಪ್ರತಿಕ್ರಿಯಿಸಿದರು.
ಕೇಂದ್ರ ಸರ್ಕಾರದ ಬಜೆಟ್ ನಲ್ಲಿ ಕರ್ನಾಟಕಕ್ಕೆ ನ್ಯಾಯ ಸಿಕ್ಕಿಲ್ಲ. ಇಲ್ಲಿ ನೀತಿಯೇ ಇಲ್ಲ. ರಾಜ್ಯಕ್ಕೆ ಯಾವುದೇ ಯೋಜನೆ ಸಿಕ್ಕಿಲ್ಲ. ರಾಜ್ಯಕ್ಕೆ ಬಜೆಟ್ ನಲ್ಲಿ ಸರಿಯಾದ ಪ್ರಾತಿನಿದ್ಯ ಸಿಕ್ಕಿಲ್ಲದ ಕಾರಣ, ಪಕ್ಷದ ನಾಯಕರು ಸಭೆಯನ್ನು ಬಹಿಷ್ಕರಿಸಿ ಪ್ರತಿಭಟನೆ ಮಾಡಲು ತೀರ್ಮಾನಿಸಿದ್ದಾರೆ” ಎಂದು ತಿಳಿಸಿದರು.
ಗ್ರೇಟರ್ ಬೆಂಗಳೂರು ವಿಧೇಯಕಕ್ಕೆ ವಿಚಾರದಲ್ಲಿ ಅವರು ರಾಜಕೀಯ ಮಾಡುತ್ತಿದ್ದಾರೆ. ನಾನು ಯಾವುದನ್ನೂ ಆತುರದಲ್ಲಿ ಮಾಡುವುದಿಲ್ಲ. ನಾನು ವಿಧೇಯಕ ಮಂಡನೆ ಮಾಡಿದ್ದೇನೆ. ಅವರು ಅದನ್ನು ಸಂಪೂರ್ಣವಾಗಿ ಪರಾಮರ್ಶಿಸಿ ಚರ್ಚೆ ಮಾಡಲಿ ಎಂದು ಹೇಳಿದರು.
ಬೆಂಗಳೂರು ಅನಿಯಂತ್ರಿತವಾಗಿ ಬೆಳೆಯುತ್ತಿದ್ದು, 1.40 ಕೋಟಿ ಜನಸಂಖ್ಯೆ ಇದೆ. ಉತ್ತಮ ಆಡಳಿತದ ಅಗತ್ಯವಿದೆ. ಇಲ್ಲಿ 7 ಸಿಎಂಸಿಗಳಿವೆ. ಮೂಲಸೌಕರ್ಯ ಹಾಗೂ ಆರ್ಥಿಕ ವ್ಯವಸ್ಥೆ ನೋಡಿಕೊಂಡು ತೀರ್ಮಾನ ಮಾಡಬೇಕು. ಈ ಬಗ್ಗೆ ವಿರೋಧ ಪಕ್ಷಗಳು ಚರ್ಚೆ ಮಾಡಲಿ. ಅದಕ್ಕೆ ನಮ್ಮ ಯಾವುದೇ ಅಭ್ಯಂತರವಿಲ್ಲ” ಎಂದು ತಿಳಿಸಿದರು.
Previous Articleಕೇಂದ್ರ ಬಜೆಟ್ ಗೆ ಡಿಸಿಎಂ ಏನಂದ್ರು ಗೊತ್ತಾ..
Next Article ಅಂಗನವಾಡಿ ಕಾರ್ಯಕರ್ತೆಯರ ವೇತನ ಹೆಚ್ಚಳ.


2 ಪ್ರತಿಕ್ರಿಯೆಗಳು
Mostbet traz para vocГЄ o cassino com as ofertas mais quentes do momento – https://mostbetpt.pro/ , Mostbet te espera com portas abertas e bГґnus de cair o queixo .
Where risk meets reward and legends are made – https://plmotiliu.com/mostbet-casino-222/ , This casino remembers winners — become unforgettable .