ಬೆಂಗಳೂರು,ಜು.1– ನಗರದಲ್ಲಿ ಮಾದಕವಸ್ತು ಗಾಂಜಾ ಮಾರಾಟ ಮಾಡುತ್ತಿದ್ದ ಆರೋಪಿಯನ್ನು ಬ್ಯಾಡರಹಳ್ಳಿ ಪೊಲೀಸರು ಬಂಧಿಸಿದ್ದಾರೆ.
ಬ್ಯಾಡರಹಳ್ಳಿಯ ಧನುಷ್(18) ಬಂಧಿತ ಆರೋಪಿಯಾಗಿದ್ದಾನೆ ಎಂದು ಡಿಸಿಪಿ ಲಕ್ಷ್ಮಣ ನಿಂಬರಗಿ ಅವರು ತಿಳಿಸಿದ್ದಾರೆ.
ವಾಟರ್ ಕ್ಯಾನ್ ಸಪ್ಲೈ ಮಾಡುತ್ತಿದ್ದ ಧನುಷ್ ಈ ವೇಳೆ ಗ್ರಾಹಕರನ್ನು ಪರಿಚಯ ಮಾಡಿಕೊಂಡು ಗಾಂಜಾ ಮಾರಾಟ ಮಾಡುತ್ತಿದ್ದ.
ಬಂಧಿತ ಆರೋಪಿಯಿಂದ 930 ಗ್ರಾಂ ಗಾಂಜಾವನ್ನು ವಶಕ್ಕೆ ಪಡೆದು ಹೆಚ್ಚಿನ ತನಿಖೆಯನ್ನು ಕೈಗೊಳ್ಳಲಾಗಿದೆ ಎಂದರು.