ನೊಯಿಡಾ(ಉತ್ತರ ಪ್ರದೇಶ),ಮೇ.12- ಗ್ರೇಟರ್ ನೊಯಿಡಾದಲ್ಲಿರುವ ಯಮುನಾ ಎಕ್ಸ್‌ಪ್ರೆಸ್‌ವೇನಲ್ಲಿ ಇಂದು ಬೆಳಿಗ್ಗೆ ಮಹೀಂದ್ರ ಬೊಲೆರೊ ಹಾಗು ಟ್ರಕ್ ನಡುವೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಕರ್ನಾಟಕದ ಒಬ್ಬರು ಮಹಾರಾಷ್ಟ್ರದ ನಾಲ್ವರು ಸೇರಿ ಐವರು ಮೃತಪಟ್ಟಿದ್ದಾರೆ ‘ಏಳು ಜನರಿದ್ದ ಮಹೀಂದ್ರ ಬೊಲೆರೊ ಆಗ್ರಾದಿಂದ ನೋಯಿಡಾದತ್ತ ತೆರಳುತ್ತಿತ್ತು. ಈ ವೇಳೆ ಎದುರಿನಿಂದ ಬರುತ್ತಿದ್ದ ಟ್ರಕ್‌ವೊಂದಕ್ಕೆ ಜೆವರಾ ಟೋಲ್ ಬಳಿ ಡಿಕ್ಕಿ ಹೊಡೆದು ಈ ದುರ್ಘಟನೆ ಸಂಭವಿಸಿದೆ.
ಅಪಘಾತದಲ್ಲಿ ಗಾಯಗೊಂಡಿದ್ದ ಇಬ್ಬರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಹೇಳಿದ್ದಾರೆ.
ಯಮುನಾ ಎಕ್ಸ್‌ಪ್ರೆಸ್‌ವೇನಲ್ಲಿ ಸಂಭವಿಸಿದ ಅಪಘಾತದಿಂದ ಉಂಟಾದ ಪ್ರಾಣಹಾನಿಯ ಬಗ್ಗೆ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ ಅವರು ಶೋಕ ವ್ಯಕ್ತಪಡಿಸಿದ್ದಾರೆ. ಮೃತರ ಆತ್ಮಗಳಿಗೆ ಶಾಂತಿ ಸಿಗಲಿ ಎಂದು ಪ್ರಾರ್ಥಿಸಿರುವ ಅವರು, ಮೃತರ ‘ಕುಟುಂಬದವರಿಗಾಗಿ ಸಂತಾಪ ಸೂಚಿಸಿದ್ದಾರೆ’ ಎಂದು ಉತ್ತರ ಪ್ರದೇಶ ಮುಖ್ಯಮಂತ್ರಿ ಕಚೇರಿ ಟ್ವೀಟ್ ಮಾಡಿದೆ.