ಬೆಂಗಳೂರು, ಆ.7:
ಮೈಸೂರು ನಗರ ಅಭಿವೃದ್ಧಿ ಪ್ರಾಧಿಕಾರದಲ್ಲಿ ನಡೆದ ಅಕ್ರಮ ನಿವೇಶನ ಹಂಚಿಕೆ ಕರ್ಮಕಾಂಡ ಆರೋಪದ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜೀನಾಮೆಗೆ ಆಗ್ರಹಿಸಿ ಬಿಜೆಪಿ ಮತ್ತು ಜೆಡಿಎಸ್ ನಡೆಸುತ್ತಿರುವ ಪಾದಯಾತ್ರೆಯಲ್ಲಿ ಉಭಯ ಪಕ್ಷಗಳ ಕಾರ್ಯಕರ್ತರು ಜಟಾಪಟಿಗೆ ಇಳಿದಿದ್ದಾರೆ.
ಬಿಜೆಪಿ ಮುಖಂಡ ಹಾಗೂ ಹಾಸನ ಕ್ಷೇತ್ರದ ಮಾಜಿ ಶಾಸಕ ಪ್ರೀತಂ ಗೌಡ ಅವರು ಇಂದು ಪಾದಯಾತ್ರೆಯಲ್ಲಿ ಪಾಲ್ಗೊಂಡಿದ್ದು ಜೆಡಿಎಸ್ ಕಾರ್ಯಕರ್ತರನ್ನು ಕೆರಳುವಂತೆ ಮಾಡಿತು. ಆದರೆ ಬಿಜೆಪಿ ಕಾರ್ಯಕರ್ತರು ಸಂಭ್ರಮಿಸಿದರು.
ಪ್ರೀತಂಗೌಡ ಅವರನ್ನು ಹೆಗಲ ಮೇಲೆ ಹೊತ್ತು ಕೊಂಡು ಕುಣಿಯುವ ಮೂಲಕ ತಮ್ಮ ಸಂಭ್ರಮವನ್ನು ಹೊರಹಾಕಿದರು.
ಪಾದಯಾತ್ರೆ ಸಾಗುವ ದಾರಿ ಯುದ್ಧಕ್ಕೂ ಪ್ರೀತಂ ಗೌಡ ಪರವಾಗಿ ಘೋಷಣೆಗಳು ಮೊಳಗಿದವು. ಇದರಿಂದ ಜೆಡಿಎಸ್ ಕಾರ್ಯಕರ್ತರು ಕೆರಳಿ ಪ್ರೀತಂ ಗೌಡ ಪರ ಘೋಷಣೆ ಕೂಗುತ್ತಿದ್ದವರ ಜೊತೆ ವಾಗ್ವಾದಕ್ಕಿಳಿದರು ಇದರ ಜೊತೆಗೆ ಕೈ ಕೈ ಮಿಲಾಯಿಸಿ ಪರಸ್ಪರ ಹಲ್ಲೆ ಮಾಡಿಕೊಂಡರು ಕೂಡಲೇ ಹಿರಿಯ ನಾಯಕರು ಮಧ್ಯಪ್ರವೇಶಿಸಿ ಕಾರ್ಯಕರ್ತರ ಗಲಾಟೆ ಬಿಡಿಸಿದರು. ಪೊಲೀಸರು ಕೂಡ ಮಧ್ಯಪ್ರವೇಶಿಸಿ ಪ್ರೀತಂ ಗೌಡ ಅವರನ್ನು ಆ ಸ್ಥಳದಿಂದ ಹೊರಗೆ ಕರೆದುಕೊಂಡು ಹೋದರು.
ಕುಮಾರಸ್ವಾಮಿ ಮನವಿ:
ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಕೇಂದ್ರ ಸಚಿವ ಕುಮಾರಸ್ವಾಮಿ ಒಂದಷ್ಟು ಕಿಡಿಗೇಡಿಗಳು ಬಿಜೆಪಿ ಜೆಡಿಎಸ್ ಸಂಬಂಧ ಹಾಳು ಮಾಡುವ ಕೆಲಸ ಮಾಡುತ್ತಿದ್ದಾರೆ.ಬಿಜೆಪಿ ಮತ್ತು ಜೆಡಿಎಸ್ ಕಾರ್ಯಕರ್ತರು ಗೊಂದಲ ಮಾಡಿಕೊಳ್ಳಬೇಡಿ. ನಾವು ಮತ್ತು ಬಿಜೆಪಿ ಒಟ್ಟಾಗಿದ್ದೇವೆ. ವಿಜಯೇಂದ್ರ ಮತ್ತು ನಿಖಿಲ್ ಒಂದೇ ತಾಯಿ ಮಕ್ಕಳಂತೆ ಹೋರಾಟ ಮಾಡುತ್ತಿದ್ದಾರೆ. ನಮ್ಮ ಸಂಬಂಧಕ್ಕೆ ಯಾರೂ ಹುಳಿ ಹಿಂಡಲು ಆಗಲ್ಲ. ಜನರು ನಮ್ಮ ಮೇಲಿಟ್ಟಿರುವ ಪ್ರೀತಿಗೆ ಬೆಲೆ ಕಟ್ಟಲು ಆಗಲ್ಲ ಎಂದು ಹೇಳಿದರು.
ಪಾದಯಾತ್ರೆಯಲ್ಲಿ ಬಿಜೆಪಿ- ಜೆಡಿಎಸ್ ಕಾರ್ಯಕರ್ತರ ಹೊಡೆದಾಟ.
Previous Articleಸರ್ಕಾರದ ಉತ್ತರಕ್ಕೆ ರಾಜ್ಯಪಾಲರು ಸಮಾಧಾನ.?
Next Article ಮಹತ್ವ ಕಳೆದುಕೊಂಡ ಪಾದಯಾತ್ರೆ.