ಬೆಂಗಳೂರು,ಮೇ.7-
ಹಾಸನ ಸಂಸದ ಪ್ರಜ್ವಲ್ ರೇವಣ್ಣ ಅವರ ಲೈಂಗಿಕ ಕಿರುಕುಳ ಆರೋಪದ ಪೆನ್ ಡ್ರೈವ್ ಬಹಿರಂಗ ರಾಜ್ಯ ರಾಜಕಾರಣದಲ್ಲಿ ಕೋಲಾಹಲ ತಟ್ಟಿಸಿರುವ ಬೆನ್ನಲ್ಲೇ ಅಂತಹುದೇ ಸಿಡಿ ಪ್ರಕರಣವೊಂದು ಸಧ್ಯದಲ್ಲೇ ಬಹಿರಂಗಗೊಳ್ಳಲಿದೆ ಎಂದು ಬಿಜೆಪಿ ಹಿರಿಯ ನಾಯಕ ಬಸನಗೌಡ ಪಾಟೀಲ್ ಯತ್ನಾಳ್ ಹೇಳಿದ್ದಾರೆ.
ಲೋಕಸಭಾ ಚುನಾವಣೆಯಲ್ಲಿ ಮತದಾನ ಮಾಡಿದ ನಂತರ ಮಾತನಾಡಿದ ಅವರು ರಾಜ್ಯದಲ್ಲಿ ಸಕ್ರಿಯವಾಗಿರುವ ಸಿಡಿ ಕಾರ್ಖಾನೆಯೊಂದು ಅವಕಾಶಕ್ಕಾಗಿ ಕಾಯುತ್ತಿದೆ ಈಗ ಲೋಕಸಭೆ ಚುನಾವಣೆ ಮುಕ್ತಾಯಗೊಂಡಿದ್ದು ಯಾವುದೇ ಕ್ಷಣದಲ್ಲಿ ಅದು ಬಹಿರಂಗವಾಗಲಿದೆ ಎಂದು ತಿಳಿಸಿದರು.
ಈಗ ಬಹಿರಂಗವಾಗಲಿರುವ ಸಿಡಿ ರಾಜ್ಯ ರಾಜಕಾರಣದಲ್ಲಿ ಅಲ್ಲೋಲಕಲ್ಲೋಲ ಉಂಟುಮಾಡಲಿದೆ. ಹಲವಾರು ರಹಸ್ಯಗಳು ಇದರಿಂದ ಬಹಿರಂಗವಾಗಲಿವೆ ಎಂದು ಭವಿಷ್ಯ ನುಡಿದರು
ನಾನು ಯಾವುದನ್ನು ಬಾಯಿ ಚಪಲಕ್ಕೆ ಇಲ್ಲವೇ ಪ್ರಚಾರಕ್ಕೆ ಹೇಳುವುದಿಲ್ಲ. ಹಿಂದೆಯೇ ನಾನು ಸಿ.ಡಿ ಸ್ಫೋಟಗೊಳ್ಳಲಿದೆ ಎಂದು ಹೇಳಿದ್ದೆ. ಆದರೆ ಯಾರದ್ದು ಎಂದು ಹೇಳಿರಲಿಲ್ಲ. ನನ್ನ ಮಾತು ಈಗ ನಿಜವಾಗಿದೆ ಎಂದು ತಮ್ಮ ಹೇಳಿಕೆಯನ್ನು ಬಲವಾಗಿ ಸಮರ್ಥಿಸಿಕೊಂಡರು.
ಪ್ರಜ್ವಲ್ ಅಶ್ಲೀಲ ವಿಡಿಯೋ ಬಹಿರಂಗವಾಗಿದ್ದರ ಹಿಂದೆ ಡಿಸಿಎಂ ಡಿ.ಕೆ ಶಿವಕುಮಾರ್ ಕೈವಾಡವಿದೆ ಎಂದು ಆರೋಪಿಸಿದ ಅವರು, ವಕೀಲ, ಬಿಜೆಪಿ ನಾಯಕ ದೇವೇರಾಜೇ ಗೌಡರು ಆರೋಪಿಸಿದಂತೆ ಪ್ರಕರಣದಲ್ಲಿ ಉಪಮುಖ್ಯಮಂತ್ರಿ ಶಿವಕುಮಾರ್ ಅವರ ಕೈವಾಡ ಇರುವುದು ಸ್ಪಷ್ಟ ಎಂದರು.
ಪ್ರಜ್ವಲ್ ರೇವಣ್ಣ ಪ್ರಕರಣದ ತನಿಖೆ ನಡೆಸುತ್ತಿರುವ
ಎಸ್‌ಐಟಿಯು ಡಿ.ಕೆ.ಶಿವಕುಮಾರ್ ವಶದಲ್ಲಿದೆ. ಅದು ಅವರ ಆಣತಿಯಂತೆ ಕೆಲಸ ಮಾಡುತ್ತದೆ ಎಂದು ಯತ್ನಾಳ್ ದೂರಿದರು.
ಪ್ರಜ್ವಲ್ ಪ್ರಕರಣ ಉತ್ತರ ಕರ್ನಾಟಕ ಭಾಗದ ಚುನಾವಣೆಯಲ್ಲಿ ಬಿಜೆಪಿ ಮೇಲೆ ಪರಿಣಾಮ ಬೀರುವುದಿಲ್ಲ. ಉತ್ತರ ಕರ್ನಾಟಕ ಭಾಗದಲ್ಲಿ 2019ರ ಚುನಾವಣೆಯಲ್ಲಿಯೂ ನಾವು ಉತ್ತಮ ಸಾಧನೆ ಮಾಡಿದ್ದೆವು. ಈ ಭಾಗದಲ್ಲಿ ಜೆಡಿಎಸ್ ಅಷ್ಟು ಪ್ರಬಲವಾಗಿಲ್ಲ. ಈ ಎಲ್ಲ ಕಾರಣಗಳಿಂದ ಪ್ರಜ್ವಲ್ ಪ್ರಕರಣದಿಂದ ಈ ಭಾಗದಲ್ಲಿ ಬಿಜೆಪಿಗೆ ಹಿನ್ನಡೆಯಾಗುವುದಿಲ್ಲ ಎಂದು ಹೇಳಿದರು.

4 ಪ್ರತಿಕ್ರಿಯೆಗಳು
best mail order pharmacy: indian pharmacy – medicine online order
AccessBridge: mexican drug store – online pharmacy mexico
online pharmacies: indian pharmacy – international pharmacy
AccessBridge: AccessBridge – AccessBridge Pharmacy